Breaking News

Uncategorized

ಟಾಟಾ ಏಸ್ ​- ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸಾವು, ಒಬ್ಬನಿಗೆ ಗಾಯ

ರಾಯಚೂರು: ಟಾಟಾ ಏಸ್​ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ.   ಇಸ್ಮಾಯಿಲ್ ರಷೀದ್ (25), ರವಿ ರಾಜಪ್ಪ (20), ರಮೇಶ ನಿಂಗಪ್ಪ ಕಣೇಕಲ್ಲೂರು (28), ಅಂಬರೀಶ್​ ಸೂಗಪ್ಪ ಕಣೇಕಲ್ಲೂರು (28) ಮೃತದುರ್ದೈವಿಗಳು ಎಂದು ಗುರುತಿಸಲಾಗಿದೆ. ಸದ್ಯ ಮೃತ ದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ …

Read More »

ತೃತೀಯ ಲಿಂಗಿಗಳು, ಮಾಜಿ ದೇವದಾಸಿಯರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಶ್ರೀ ಕೃಷ್ಣದೇವರಾಯ ವಿವಿ

ಬಳ್ಳಾರಿ: ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ತೃತೀಯ ಲಿಂಗಿಗಳಿಗೆ ಹಾಗೂ ಮಾಜಿ ದೇವದಾಸಿಯರ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಸಮಾಜದಲ್ಲಿ ತೃತೀಯ ಲಿಂಗಿಗಳು ಗೌರವದ ಜೀವನ ನಡೆಸಲು ಸರಿಯಾದ ಸೌಕರ್ಯ ಸಿಗುತ್ತಿಲ್ಲ, ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಮನಗಂಡು ವಿಶ್ವವಿದ್ಯಾಲಯದ ಆಡಳಿತವರ್ಗ ಮುಂದಿನ ಶೈಕ್ಷಣಿಕ ವರ್ಷದಿಂದ ಅವರಿಗೆ ಉಚಿತ ಶಿಕ್ಷಣ ನೀಡಲು …

Read More »

ಧಾರವಾಡ ಜಿಲ್ಲೆಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಮಂಜೂರು

ಧಾರವಾಡ: ಜಿಲ್ಲೆಯ 63,566 ಜನ ರೈತರಿಗೆ 50.298 ಕೋಟಿ ರೂ.ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗರುದತ್ತ ಹೆಗಡೆ ತಿಳಿಸಿದ್ದಾರೆ. 2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಧಾರವಾಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೋಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ. ಅಳ್ನಾವರ ತಾಲೂಕಿನ 3,052 …

Read More »

ಕಾಂಗ್ರೆಸ್ ಪಕ್ಷ​ ಅಧಿಕಾರಕ್ಕೆ ಬಂದಾಗಲೆಲ್ಲ ಗೂಂಡಾ ಪ್ರವೃತ್ತಿ ತೋರಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ

ಬೆಳಗಾವಿ: “ಕಾಂಗ್ರೆಸ್​ ಗೂಂಡಾ ಸಂಸ್ಕೃತಿಯನ್ನು ಹೊಂದಿದೆ. ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳ ಮೇಲೆ ದೌರ್ಜನ್ಯ ನಡೆದಿದೆ” ಎಂದು ವಿಪಕ್ಷ ನಾಯಕ ಆರ್​.ಅಶೋಕ್ ಆರೋಪಿಸಿದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಈ ಹಿಂದೆ 2013ರಿಂದ 2018ರವರೆಗೆ ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಸುಮಾರು 25ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಕೊಲೆಯಾಗಿತ್ತು” ಎಂದರು. ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ ಆರ್​. …

Read More »

ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣ -ಚೈತ್ರಾ ಗ್ಯಾಂಗ್‌ ಮೇಲೆ ಜೈಲಿನಲ್ಲಿನ ಹಲ್ಲೆ!

ಬೆಂಗಳೂರು : ಬಿಜೆಪಿ (BJP) ಟಿಕೆಟ್ ನೀಡುವುದಾಗಿ ಆಮಿಷ ತೋರಿ ಕೋಟ್ಯಂತರ ರೂ. ವಂಚನೆ ನಡೆಸಿದ್ದ ಚೈತ್ರಾ (Chaitra) ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಆರೋಪಿಯ ಮೇಲೆ ಸಹಕೈದಿಗಳು ಹಲ್ಲೆ (Assault) ನಡೆಸಿದ್ದಾರೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಚನ್ನಾ ನಾಯ್ಕ್ (Chenna naik) ಮೇಲೆ ಸಹ ಕೈದಿಗಳು ಹಲ್ಲೆ ಮಾಡಿದ್ದು, ಪರಪ್ಪನ ಅಗ್ರಹಾರ ಠಾಣೆಯಲ್ಲಿ (Parappana agrahara police station) ಪ್ರಕರಣ ದಾಖಲಾಗಿದೆ.   ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ …

Read More »

ನಕಲಿ ದಾಖಲೆ ಸೃಷ್ಟಿಸಿ 12 ಕೋಟಿ ರೂ. ಸಾಲ – ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಸಿಬಿಐ ಎಫ್‌ಐಆರ್‌

ಬೆಂಗಳೂರು : ನಕಲಿ ದಾಖಲೆಗಳನ್ನು ಸಲ್ಲಿಸಿ ಕೋಟ್ಯಾಂತರ ರೂ. ಸಾಲ (Bank loan) ಪಡೆದು ವಂಚಿಸಿರುವ ಆರೋಪದ ಮೇಲೆ ಮಾಜಿ ಸಂಸದ ಶಿವರಾಮೇಗೌಡ (L R Shivaramegowda) ವಿರುದ್ಧ ಸಿಬಿಐ (CBI) ಎಫ್‌ಐಆರ್‌ (FIR) ದಾಖಲಿಸಿಕೊಂಡಿದೆ. ಶಿವರಾಮೇಗೌಡರ ಪತ್ನಿ ಸೇರಿದಂತೆ ಏಳು ಮಂದಿ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.   ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (Punjab National bank) ನಿಂದ 12.48 ಕೋಟಿ ರೂ. ಸಾಲ ಪಡೆದಿದ್ದ ಶಿವರಾಮೇಗೌಡ ಮತ್ತು ಅವರ ಕುಟುಂಬ …

Read More »

ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

ಬೆಂಗಳೂರು: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ. 4) ಅಧಿವೇಶನ (Belagavi Winter Session) ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ವಿಪಕ್ಷಗಳಿಂದ ನಿಲುವಳಿ ನೋಟಿಸ್ (Adjournment notice) ಜಾರಿಯಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಜಂಟಿ ನೋಟಿಸ್ ನೀಡಿದ್ದು, ಸದನದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ರಾಜ್ಯ ಸರ್ಕಾರದ (Congress Government) ವೈಫಲ್ಯ ಚರ್ಚಿಸಲು ಆಗ್ರಹಿಸಿವೆ.   ರಾಜ್ಯವು ಬರಗಾಲಕ್ಕೆ ತುತ್ತಾಗುವ ಸ್ಪಷ್ಟ ಸೂಚನೆ ಇದ್ದರೂ ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾಗಿದ್ದ ಮುಂಜಾಗ್ರತೆ …

Read More »

ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ ಕೇಸ್: ಹನೂರಿನ ರಾಮಪುರದಲ್ಲಿ ಕಾರು ಪತ್ತೆ

ಚಾಮರಾಜನಗರ: ಚನ್ನಪಟ್ಟಣ ತಾಲೂಕಿನ ಚಕ್ಕರೆ ಗ್ರಾಮದ ತೋಟದ ಮನೆಯಿಂದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಸಂಬಂಧಿಯ ಕಾರು ಹನೂರು ತಾಲೂಕಿನ ರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ದೊರೆತಿದೆ. ಯೋಗೇಶ್ವರ್ ಅವರ ಭಾವ ಚಕ್ಕರೆ ಗ್ರಾಮದ ಮಹದೇವಯ್ಯ ಮೂರು ದಿನಗಳ ಹಿಂದೆ ಬಿಳಿ ಬಣ್ಣದ ಬ್ರಿಜಾ ಕಾರುಸಮೇತ (KA-42 N0012) ಕಾಣೆಯಾಗಿದ್ದರು. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ …

Read More »

2024ರ ಲೋಕಸಭೆಯ ಹ್ಯಾಟ್ರಿಕ್ ಗೆಲುವಿಗೆ ಗ್ಯಾರಂಟಿ ಸಿಕ್ಕಿದೆ : ಪ್ರಧಾನಿ ಮೋದಿ ವಿಶ್ವಾಸ

ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದರು. ಬಳಿಕ ಚುನಾವಣಾ ಫಲಿತಾಂಶ ಮತ್ತು ಇದಕ್ಕಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ವಿಧಾನಸಭೆ ಚುನಾವಣೆಯ ಗೆಲುವು ಐತಿಹಾಸಿಕ ಮತ್ತು ಅಭೂತಪೂರ್ವ ಗೆಲುವು. ಸಬ್ಕಾ ಸಾಥ್​ ಸಬ್ಕಾ ವಿಕಾಸ್​ ಎಂಬ ಭಾವನೆ ಇಂದು ಗೆದ್ದಿದೆ. ಈ ಗೆಲುವು ಸ್ವಾವಲಂಬಿ …

Read More »

ಛಲವಿದ್ದರೆ ಏನೆಲ್ಲ ಸಾಧಿಸಬಹುದು’ ಎನ್ನುವುದಕ್ಕೆ ಮೂಡಲಗಿ ರೈತ ಹೊನ್ನಪ್ಪ ಸಾವಳಗೆಪ್ಪ ಬೂದಿಹಾಳ ಮಾದರಿ

ಮೂಡಲಗಿ: ‘ಮನಸ್ಸಿದ್ದರೆ ಏನೆಲ್ಲ ಮಾಡಬಹುದು, ಛಲವಿದ್ದರೆ ಏನೆಲ್ಲ ಸಾಧಿಸಬಹುದು’ ಎನ್ನುವುದಕ್ಕೆ ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಯುವ ರೈತ ಹೊನ್ನಪ್ಪ ಸಾವಳಗೆಪ್ಪ ಬೂದಿಹಾಳ ಮಾದರಿಯಾಗಿದ್ದಾರೆ. 2008ರಲ್ಲಿ ಬಿಎ ಪದವಿ ಮುಗಿಸಿ ನೌಕರಿ ದೊರೆಯದಿದ್ದಾಗ ಒಂದೇ ಆಕಳು ಸಾಕಿ ಹೈನುಗಾರಿಕೆ ಆರಂಭಿಸಿ ಹೊನ್ನಪ್ಪ ಅವರ ಹೊಲದಲ್ಲಿ ಇಂದು 20ಕ್ಕೂ ಅಧಿಕ ಎಚ್‌ಎಫ್‌ ತಳಿಯ ಹಸುಗಳು ಇವೆ. ಪ್ರತಿ ದಿನ ಬೆಳಿಗ್ಗೆ 100 ಲೀಟರ್‌, ಸಂಜೆ 100 ಲೀಟರ್‌ ಹೀಗೆ ನಿತ್ಯ 200 …

Read More »