Breaking News

Uncategorized

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ನಿರ್ಣಯ ಕೈಗೊಳ್ಳಬೇಕು : ಕುರುಬೂರ ಶಾಂತಕುಮಾರ್

ಬೆಳಗಾವಿ: ಇಲ್ಲಿಯವರೆಗೆ ಬೆಳಗಾವಿ ಅಧಿವೇಶನದಲ್ಲಿ ನಡೆದ ಚರ್ಚೆಗಳಲ್ಲಿ ಎಷ್ಟು ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ ಇದರ ಕುರಿತಾಗಿ ಈಗಿನ ಚಳಿಗಾಲ ಅಧಿವೇಶನದ ಮುನ್ನ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ್ ಆಗ್ರಹಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೀಕರ ಬರಗಾಲದ ಹಿನ್ನೆಲೆ ರೈತ ಸಮುದಾಯ ಸಂಕಷ್ಟದಲ್ಲಿದೆ. ಅಧಿವೇಶನದಲ್ಲಿ ರೈತರ ಸಂಪೂರ್ಣ ಸಾಲ …

Read More »

155 ಪೌರಕಾರ್ಮಿಕರ ಖಾಯಮಾತಿಗೆ ನಿರ್ಧಾರ: ಬೆಳಗಾವಿ ಡಿಸಿ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರ್ಹ 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಪಾಲಿಕೆಯಲ್ಲಿ ನೇರ ನೇಮಕಾತಿಯಡಿ ಖಾಲಿ ಇರುವ ಒಟ್ಟು 155 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ ದಿನಾಂಕದ ಪೂರ್ವದಲ್ಲಿ ನಿರಂತರವಾಗಿ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಸಮಾನ ಕೆಲಸಕ್ಕೆ ಸಮಾನ ವೇತನ/ಹೊರಗುತ್ತಿಗೆ ಮೇರೆಗೆ ಕನಿಷ್ಠ 2 ವರ್ಷಗಳ ಸೇವೆ ಸಲ್ಲಿಸಿರುವ ಮತ್ತು ಹಾಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತ ಅರ್ಜಿಗಳನ್ನು ಪರಿಶೀಲನಾ ಸಮಿತಿಯಿಂದ ಪರಿಶೀಲನೆಗೆ …

Read More »

ಅಂಬರೀಶ್ ಪುಣ್ಯಸ್ಮರಣೆಯಂದು ಪುತ್ರನ ಹೊಸ ಸಿನಿಮಾ ಬಿಡುಗಡೆ; ಸುಮಲತಾ, ದರ್ಶನ್​​ ಭಾವುಕ

 ಹಿರಿಯ ನಟ​ ಅಂಬರೀಶ್ ಇಹಲೋಕ ತ್ಯಜಿಸಿ ಇಂದಿಗೆ ಐದು ವರ್ಷ. 5ನೇ ಪುಣ್ಯಸ್ಮರಣೆಯಂದು ಅವರ ಪುತ್ರ ನಟಿಸಿರುವ ಹೊಸ ಸಿನಿಮಾ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಟ, ಮಂಡ್ಯದ ಗಂಡು ಹಿರಿಮೆಯ ಡಾ.ಅಂಬರೀಶ್​ ಕೊನೆಯುಸಿರೆಳೆದು ಇಂದಿಗೆ 5 ವರ್ಷವಾಗುತ್ತಿದೆ. ಐದನೇ ವರ್ಷದ ಪುಣ್ಯಸ್ಮರಣೆಯ ಈ ದಿನ ಪುತ್ರ ಅಭಿಷೇಕ್ ಅಂಬರೀಶ್‌​ ನಟಿಸಿರುವ ‘ಬ್ಯಾಡ್​ ಮ್ಯಾನರ್ಸ್’ ಸಿನಿಮಾ ತೆರೆಕಂಡಿದೆ. ಪತ್ನಿ ಸುಮಲತಾ ಅಂಬರೀಶ್​ ಸೇರಿದಂತೆ ಗಣ್ಯರು ಅಂಬಿ ಅವರನ್ನು ಸ್ಮರಿಸಿ, ಭಾವುಕ …

Read More »

ಜಾತಿಗಣತಿ ವರದಿ: ಬರೀ ಊಹೆಗಳ ಮೇಲೆ ಮಾತನಾಡುವುದು ಸರಿಯಲ್ಲ, ಬಿಜೆಪಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ- ಸಿದ್ದರಾಮಯ್ಯ

ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆ: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ …

Read More »

ಟಿ20 ಕ್ರಿಕೆಟ್‌ನಿಂದ ದೂರ ಉಳಿದ ರೋಹಿತ್ ಶರ್ಮಾ?

ನವದೆಹಲಿ: ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್ ಶರ್ಮಾ ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಏಕದಿನ ವಿಶ್ವಕಪ್‌ ಆರಂಭಕ್ಕೂ ಮುನ್ನವೇ ಅವರು ತಮ್ಮ ಭವಿಷ್ಯದ ಬಗ್ಗೆ ಚರ್ಚಿಸಿದ್ದರು ಎಂದು ತಿಳಿದುಬಂದಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಚೇರಿ ಈ ಮಾಹಿತಿ ನೀಡಿದೆ. ನವೆಂಬರ್ 2022ರಲ್ಲಿ ಭಾರತ ಟಿ20 ವಿಶ್ವಕಪ್‌ನಲ್ಲಿ ಸೋತ ನಂತರ, ರೋಹಿತ್ ಟಿ20 ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿಲ್ಲ. ಅಂದಿನಿಂದ ಪಾಂಡ್ಯ …

Read More »

ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್​ಗೆ ಮಹಾರಾಷ್ಟ್ರದ ಸಚಿವ, ಸಂಸದರನ್ನು ರಾಜ್ಯಕ್ಕೆ ಕರೆತರುವ ಯೋಜನೆ ರೂಪಿಸಿದೆ :M.E.S.

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023ರಿಂದ ಡಿಸೆಂಬರ್ 15ರವರೆಗೆ 10 ದಿನಗಳ ಕಾಲ ನಡೆಯುವ ಚಳಿಗಾಲ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಎಂಇಎಸ್ ನಿಂದ ಸಿದ್ಧತೆ ನಡೆಸಿದ್ದು, ಗಡಿ ಜಿಲ್ಲೆಯಲ್ಲಿ ಮತ್ತೆ ಭಾಷಾ ದ್ವೇಷದ ಕಿಡಿ ಹಚ್ಚಲು ಮುಂದಾಗಿದೆ. ಮರಾಠಾ ಮಂದಿರದಲ್ಲಿ ಸಭೆ ಸೇರಿ ಮಹಾಮೇಳಾವ್ ನಡೆಸಲು ಎಂಇಎಸ್ ತೀರ್ಮಾನ ಕೈಗೊಳ್ಳುವ ಮೂಲಕ ಗಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಮಹಾಮೇಳಾವ್ ಯಶಸ್ಸಿಗಾಗಿ ಬೆಳಗಾವಿ ಮತ್ತು ಖಾನಾಪುರದಲ್ಲಿ ಸಮಿತಿ ರಚನೆಗೆ …

Read More »

ಮರಳು ತುಂಬಿದ ಟ್ರ್ಯಾಕ್ಟರ್ ತರಬೇಡಿ ಎಂದಿದ್ದಕ್ಕೆ ರೈತರ ಮೇಲೆ ಹಲ್ಲೆ ?

ಹಾವೇರಿ : ಜಮೀನಿನ ಪೈಪ್​ಲೈನ್ ಮೇಲೆ ಮರಳು ಟ್ರ್ಯಾಕ್ಟರ್​ ತರಬೇಡಿ ಎಂದಿದ್ದಕ್ಕೆ ರೈತನ ಮೇಲೆ ಹಲ್ಲೆ ಮಾಡಿರುವ ಆರೋಪ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮದಲ್ಲಿ ಕೇಳಿಬಂದಿದೆ. ಹಲ್ಲೆಗೊಳಗಾದ ರೈತನನ್ನ 33 ವರ್ಷದ ಗೋಪಾಲಕೃಷ್ಣ ಐರಣಿ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ನೀರು ಹಾಯಿಸಲು ಹೋದಾಗ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಗೋಪಾಲಕೃಷ್ಣ ಅವರು ಆರೋಪಿಸಿದ್ದಾರೆ. ಜಮೀನಿನಲ್ಲಿನ ಪೈಪ್​ಲೈನ್ ಒಡೆಯುತ್ತವೆ. ಮರಳು ತುಂಬಿದ …

Read More »

ಇಸ್ರೇಲ್‌ಗೆ ಶಸ್ತ್ರಾಸ್ತ್ರ ರಫ್ತು ನಿಲ್ಲಿಸುವಂತೆ ಎಲ್ಲಾ ರಾಷ್ಟ್ರಗಳಿಗೆ ಸೌದಿ ಅರೇಬಿಯಾ ಒತ್ತಾಯ

ರಿಯಾದ್(ಸೌದಿ ಅರೇಬಿಯಾ): ಇಸ್ರೇಲ್-ಹಮಾಸ್ ಸಂಘರ್ಷ ನಿಲ್ಲುವಂತೆ ಕಾಣುತ್ತಿಲ್ಲ. ಈ ಬೆನ್ನಲ್ಲೇ ಇಸ್ರೇಲ್‌ಗೆ ಶಸ್ತ್ರಾಸ್ತ್ರ ರಫ್ತು ಮಾಡುವುದನ್ನು ನಿಲ್ಲಿಸುವಂತೆ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಮಂಗಳವಾರ ಎಲ್ಲಾ ರಾಷ್ಟ್ರಗಳನ್ನು ಒತ್ತಾಯಿಸಿದ್ದಾರೆ. ಬ್ರಿಕ್ಸ್ ಜಂಟಿ ಸಭೆಯ ಸಂದರ್ಭದಲ್ಲಿ ಈ ವಿನಂತಿ ಮಾಡಿದ್ದಾರೆ. ಬ್ರಿಕ್ಸ್ ಗುಂಪಿನ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೌದಿ ಅರೇಬಿಯಾವು ಪ್ಯಾಲೇಸ್ಟಿನಿಯನ್ ರಾಜ್ಯವನ್ನು ಸ್ಥಾಪಿಸಲು ಗಂಭೀರ ಮತ್ತು ಸಮಗ್ರ ಶಾಂತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಒತ್ತಾಯಿಸುತ್ತಿದೆ. ಇಸ್ರೇಲ್ …

Read More »

ಮಗಳನ್ನು ಪ್ರೀತಿಸುವಂತೆ (Love) ಪೀಡಿಸುತ್ತಿದ್ದ ಪಾಗಲ್ ಪ್ರೇಮಿಯ ಉಸಿರನ್ನ ಯುವತಿಯ ತಂದೆ ನಿಲ್ಲಿಸಿದ್ದಾರೆ.

ಬೆಂಗಳೂರು: ಮಗಳನ್ನು ಪ್ರೀತಿಸುವಂತೆ (Love) ಪೀಡಿಸುತ್ತಿದ್ದ ಪಾಗಲ್ ಪ್ರೇಮಿಯ ಉಸಿರನ್ನ ಯುವತಿಯ ತಂದೆ ನಿಲ್ಲಿಸಿದ್ದಾರೆ. ಡೇವಿಡ್ ಕೊಲೆಯಾದ ಯುವಕ. ಮಂಜುನಾಥ್ ಎಂಬವರ ಮಗಳನ್ನು ಡೇವಿಡ್ ಪ್ರೀತಿಸುವಂತೆ ಪೀಡಿಸುತ್ತಿದ್ದನು. ಇದೇ ವಿಚಾರವಾಗಿ ಒಂದೂವರೆ ವರ್ಷದ ಹಿಂದೆ ರಾಜಿ ಪಂಚಾಯ್ತಿಯೂ ನಡೆದಿತ್ತು. ಮಗಳ ತಂಟೆಗೆ ಬರದಂತೆ ಡೇವಿಡ್​ಗೆ ಎಚ್ಚರಿಕೆ ನೀಡಲಾಗಿತ್ತು. ಆದ್ರೂ ಡೇವಿಡ್ ತನ್ನ ಚಾಳಿಯನ್ನು ನಿಲ್ಲಿಸಿರಲಿಲ್ಲ. ಮದುವೆ ಮಾಡಿಕೊಡಿ ಇಲ್ಲವಾದ್ರೆ ಖಾಸಗಿ ಫೋಟೋಗಳನ್ನು (Private Photo) ರಿವೀಲ್ ಮಾಡುತ್ತೀನಿ ಎಂದು ಬೆದರಿಕೆ …

Read More »

ಮುಂಬೈ ಉಗ್ರರ ದಾಳಿಗೆ 15 ವರ್ಷ! ಎಲ್​ಇಟಿಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಇಸ್ರೇಲ್

ನವದೆಹಲಿ: ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ 26/11 (Mumbai 26/11 attack) ದಾಳಿ ನಡೆದು ಇಂದಿಗೆ 15 ವರ್ಷಗಳು ಕಳೆದಿವೆ. ಈ ಕರಾಳ ದಿನದ ಸಂದರ್ಭದಲ್ಲಿ ಇಸ್ರೇಲ್ ಸರ್ಕಾರ (Isreal Government) ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತದ ಸ್ನೇಹಿ ರಾಷ್ಟ್ರಗಳಲ್ಲಿ ಒಂದಾಗಿರುವ ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೈಬಾ (Lashkar-e-Taiba) ಸಂಘಟನೆಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಮಂಗಳವಾರ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ. ಈಗಾಗಲೇ ಎಲ್​ಇಟಿಯನ್ನ …

Read More »