Breaking News

Uncategorized

ಲಿಂಗಾಯತ ಮತ ಬ್ಯಾಂಕ್​ಗೋಸ್ಕರ ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಲಿಂಗಾಯತ ಸಮುದಾಯದ ಮತ ಬ್ಯಾಂಕ್ ನೋಡಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಮಾಡಿದ್ದಾರೆ. ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಇಟ್ಟುಕೊಳ್ಳುವ ಅನಿವಾರ್ಯತೆ ಇದೆ. ಹೀಗಾಗಿ, ಅವರ ಆಯ್ಕೆ ಮಾಡಿರಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಲು ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು ಕೂಡ ಒಂದು ಕಾರಣ. ಇನ್ನು ಬಿಜೆಪಿಯಲ್ಲೂ ಮಕ್ಕಳಿಗೆ, ಮೊಮ್ಮಕ್ಕಳಿಗೆ ಸ್ಥಾನಮಾನ ನೀಡುವ …

Read More »

ದೀಪಾವಳಿಯಲ್ಲಿ ಬದುಕು ಕತ್ತಲಾಗದಿರಲಿ: ಪಟಾಕಿ ಹೊಡೆಯುವಾಗ ಮುಂಜಾಗ್ರತೆ ವಹಿಸಲು ನೇತ್ರತಜ್ಞರ ಸಲಹೆ

ದಾವಣಗೆರೆ: ದೀಪಾವಳಿ ಬೆಳಕಿನ‌ ಹಬ್ಬ. ಆದರೆ, ಈ ಬೆಳಕಿನ ಹಬ್ಬದಲ್ಲಿ ಸಾಕಷ್ಟು ಜನ ಪಟಾಕಿ ಹೊಡೆಯುವ ಸಾಹಸಕ್ಕೆ ಕೈ ಹಾಕಿ ತಮ್ಮ ಬದುಕು ಕತ್ತಲಾಗಿಸಿಕೊಂಡಿದ್ದಾರೆ. ಪಟಾಕಿ ಸಿಡಿದರೆ ಕಣ್ಣಿಗಾಗುವ ಹಾನಿ ಹಾಗೂ ಪಟಾಕಿ ಹೊಡೆಯುವ ಮುನ್ನ ಮುಖ್ಯವಾಗಿ ಮಕ್ಕಳು ಯುವಕರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಯಾವ ರೀತಿ ಮುಂಜಾಗ್ರತೆ ವಹಿಸಬೇಕು ಎಂದು ನೇತ್ರತಜ್ಞ ರವೀಂದ್ರನಾಥ್ ಮಾಹಿತಿ ಕೊಟ್ಟಿದ್ದಾರೆ. ದೀಪಗಳ ಹಬ್ಬ ದೀಪಾವಳಿ. ಬೆಳಕಿನ ಹಬ್ಬದಲ್ಲಿ ಪಟಾಕಿ ಹೊಡೆದು ಸಂಭ್ರಮಿಸುವುದು ಯಾವ ಹಬ್ಬಗಳಲ್ಲೂ …

Read More »

ಇದು ಕುಟುಂಬ ರಾಜಕಾರಣವಲ್ಲ-ಯುವ ನಾಯಕತ್ವಕ್ಕೆ ಸಿಕ್ಕ ಆದ್ಯತೆ: ಬಿ.ವೈ. ವಿಜಯೇಂದ್ರ

ಬೆಂಗಳೂರು:ಕುಟುಂಬ ರಾಜಕಾರಣ ನನ್ನ ಆಯ್ಕೆಯಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ವರಿಷ್ಠರು ನನಗೆ ಅವಕಾಶವನ್ನು ನೀಡಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದ ಅವರು, ಕುಟುಂಬ ರಾಜಕಾರಣದ ಆಧಾರದಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡುವುದಿದ್ದರೆ ಕಳೆದ ಮೂರು ತಿಂಗಳ ಹಿಂದೆಯೇ ವರಿಷ್ಠರು ಮಾಡುತ್ತಿದ್ದರು. ಇದು ಬಿಜೆಪಿ ರಾಜಕಾರಣವಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ನನಗೆ ಅವಕಾಶವನ್ನು ನೀಡಿದ್ದಾರೆ …

Read More »

2 ಸಾವಿರ ಎಕರೆಯಲ್ಲಿ ವಿಶ್ವ ದರ್ಜೆಯ ಕೆಹೆಚ್‌ಐಆರ್ ಸಿಟಿ ನಿರ್ಮಾಣ, 1 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಎಂ ಬಿ ಪಾಟೀಲ್​

ಬೆಂಗಳೂರು: ರಾಜಧಾನಿಯಿಂದ 60-80 ಕಿ.ಮೀ. ದೂರದಲ್ಲಿ ಜಾಗತಿಕ ದರ್ಜೆಯ ‘ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರ’ (ಕೆಹೆಚ್‌ಐಆರ್)ವನ್ನು ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆ ಆಗಲಿದ್ದು, 80 ಸಾವಿರದಿಂದ 1 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಉದ್ದೇಶಿತ ಕೆಹೆಚ್‌ಐಆರ್ ಸಿಟಿ ಬಗ್ಗೆ ಗಣ್ಯ ಉದ್ಯಮಿಗಳು, ವೈದ್ಯರು, ಶಿಕ್ಷಣ ತಜ್ಞರು ಮತ್ತು ಸಂಶೋಧಕರ ಸಲಹೆ, …

Read More »

ಕರ್ನಾಟಕ ಬಿಜೆಪಿಯ ನೂತನ ಸಾರಥಿ ವಿಜಯೇಂದ್ರ

ನವದೆಹಲಿ: ಬಹು ದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಕೊನೆಗೂ ಆಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ನೇಮಕ ತಕ್ಷಣಕ್ಕೆ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದಕ್ಷಿಣ ಕನ್ನಡ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್​ ಇದುವರೆಗೆ …

Read More »

ಬೆಳಗಾವಿ ಪೌರಕಾರ್ಮಿಕರ ನೌಕರಿ ಕಾಯಮಾತಿ 15 ವರ್ಷಗಳಿಂದ ಕಾಯಮಾತಿ ಆದೇಶ ಸಿಕ್ಕಿಲ್ಲ.

ಬೆಳಗಾವಿ:ಬೆಳಗಾವಿ ನಗರವನ್ನು ಸ್ವಚ್ಛ ಮತ್ತು ಸುಂದರವಾಗಿಡಲು ತಮ್ಮ ಜೀವನವನ್ನು ಮುಡಿಪಾಗಿಡುವ ಪೌರಕಾರ್ಮಿಕರಿಗೆ ಇನ್ನೂ ನೌಕರಿ ಕಾಯಮಾತಿ ಆದೇಶ ಸಿಕ್ಕಿಲ್ಲ. 2008ರಿಂದ ಮಹಾನಗರ ಪಾಲಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕೆಂದು ಸರ್ಕಾರದ ಆದೇಶವಿದ್ದರೂ ನೇಮಕ ಮಾಡದೇ ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿದೆ. ಇನ್ನು ಅಧಿವೇಶನದೊಳಗೆ ಕಾರ್ಮಿಕರ ನೌಕರಿ ಕಾಯಂಗೊಳಿಸುವ ವಿಶ್ವಾಸವನ್ನು ಜಿಲ್ಲಾಧಿಕಾರಿ ಇಂದು ವ್ಯಕ್ತಪಡಿಸಿದ್ದು, ಪೌರ ಕಾರ್ಮಿಕರ ಮೊಗದಲ್ಲಿ ಮಂದಹಾಸ ಮೂಡಿದೆ‌. ಹೌದು.. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ಕಾಯಮಾತಿ …

Read More »

ಶಾಲೆಯಲ್ಲಿ ಕುಕ್ಕರ್ ಬ್ಲಾಸ್ಟ್; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಡುಗೆ ಸಿಬ್ಬಂದಿ

ಗ್ಯಾಸ್ ಒಲೆ ಮೇಲೆ 20 ಲೀಟರ್ ಕುಕ್ಕರ್‌ನಲ್ಲಿ 3 ಸೇರು ತೊಗರಿಬೇಳೆ ಬೇಯಿಸುತ್ತಿದ್ದಾಗ ವಿಜಿಲ್ ಬಾರದೇ ಏಕಾಏಕಿ ಸ್ಫೋಟಗೊಂಡಿದೆ. ಅದರಿಂದ ಕೊಠಡಿಯ ಚಾವಣಿ, ಅಕ್ಕಪಕ್ಕದ ಗೋಡೆಗೆ ತೊಗರಿಬೇಳೆ ಸಿಡಿದಿರುವುದು ಕಂಡು ಬಂದಿದೆ. ಸದ್ಯ ಬಿಸಿಯೂಟ ತಯಾರಿಸುವ ಪಾತ್ರೆ, ಇತರ ಸಾಮಾನುಗಳು ತುಂಬಾ ಹಳೆದಾಗಿವೆ. ಸುಸ್ಥಿತಿಯಲ್ಲಿ ಇಲ್ಲದ ಕಾರಣ ಒಂದಿಲ್ಲೊಂದು ಸಮಸ್ಯೆ ಎದುರಿಸುವಂತಾಗಿದೆ. 600 ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುತ್ತಿದ್ದು, ಶಿಕ್ಷಕರು ಪಾಠದ ಕಡೆ ಗಮನಹರಿಸಲು ಆಗದೇ ಬಿಸಿಯೂಟದ ಕಡೆಗೆ ಹೆಚ್ಚಿನ ಲಕ್ಷ್ಯ …

Read More »

ಕಿಯೋನಿಕ್ಸ್​ನಲ್ಲಿ 500 ಕೋಟಿ ರೂ ಅವ್ಯವಹಾರ:ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಬಿಜೆಪಿಯವರು ಮೊದಲೇ ಮಾತನಾಡಿದ್ದರೆ ಪ್ರತಿಪಕ್ಷದ ನಾಯಕರು ಸಿಗುತ್ತಿದ್ದರೇನೋ, ಹಲವು ನಾಯಕರು ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಅವರ ಮಾತು ಕೇಳಿ ಸಂತೋಷವಾಗಿದೆ. ಅವರು ನನಗೆ ಖೆಡ್ಡಾ ತೋಡಲು ಹೊರಟಿದ್ದಾರೆ. ಆದರೆ, ಅವರೇ ಖೆಡ್ಡಾಕ್ಕೆ ಬೀಳುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರೇ ತಿಂದು ತೇಗಿದವರು. ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಬಿಜೆಪಿಯವರದ್ದು ಸುಳ್ಳಿನ …

Read More »

ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್‌ವಿಂಗಡಣೆ; ಮೀಸಲು ನಿಗದಿಗೆ ಅಂತಿಮ ಗಡುವು ನೀಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಚುನಾವಣೆಗಾಗಿ ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಗೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು …

Read More »

ಕನ್ನಡದ ಪ್ರಸಿದ್ಧ ನಟ ‘ಆಟೋರಾಜ’ ದಿ.ಶಂಕರ್ ನಾಗ್ ಅವರಿಗಿಂದು 69ನೇ ವರ್ಷದ ಹುಟ್ಟುಹಬ್ಬ.

‘ಶಂಕರ್ ನಾಗ್’. ಅಮೋಘ ಅಭಿನಯ, ಅಪಾರ ಅಭಿಮಾನಿಗಳು, ಎಲ್ಲಕ್ಕಿಂತ ಮಿಗಿಲಾಗಿ ಕನ್ನಡಿಗರ ಮನದಾಳದಲ್ಲಿ ಅಚ್ಚಳಿಯದ ಹೆಸರು ಈ ‘ಆಟೋರಾಜ’. ಇಂದು ದಿ.ಶಂಕರ್​ ನಾಗ್​ ಅವರ 69ನೇ ಜನ್ಮದಿನವನ್ನು ಅಭಿಮಾನಿಗಳು ವಿಭಿನ್ನವಾಗಿ ಆಚರಿಸುತ್ತಿದ್ದಾರೆ. ಶಂಕರ್​​ ನಾಗ್​ ಇಹಲೋಕ ತ್ಯಜಿಸಿ ಹಲವು ವರ್ಷಗಳೇ ಕಳೆದಿವೆ. ಅವರು ಅಭಿನಯಿಸಿದ ಸಿನಿಮಾಗಳು, ನಿರ್ದೇಶಿಸಿದ ಚಿತ್ರಗಳು ಹಾಗೂ ಕರಾಟೆ ಕಿಂಗ್​​ಗಿದ್ದ ದೂರದೃಷ್ಟಿ, ಕನ್ನಡ ಚಿತ್ರರಂಗವನ್ನು ಮುಗಿಲೆತ್ತರ ಬೆಳೆಸುವ ಕನಸೆಲ್ಲವನ್ನೂ ಈಗಲೂ ಅಭಿಮಾನಿಗಳ ಸ್ಮರಿಸುತ್ತಾರೆ. ಬಣ್ಣದ ಲೋಕದಲ್ಲಿ ಅತ್ಯಂತ …

Read More »