ಕೊಪ್ಪಳ : ಕೇಂದ್ರಕ್ಕೆ ಕರ್ನಾಟಕವೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯ. ಬಿಜೆಪಿಯವರಿಗೆ ನಿಜವಾಗಿಯೂ ರಾಜ್ಯದ ಜನರ ಮೇಲೆ ಕಾಳಜಿ ಇದ್ದರೆ, ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿ ನಮ್ಮ ಪಾಲಿನ ಹಣ ಬಿಡುಗಡೆ ಮಾಡಿಸಲಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದ್ದಾರೆ. ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಬದ್ಧತೆ ಇದ್ದರೆ, ರಾಜ್ಯದಿಂದ ಒಂದು ಟೀಂ ಕರೆದುಕೊಂಡು ಕೇಂದ್ರ ಸರ್ಕಾರಕ್ಕೆ ರಾಜ್ಯದ …
Read More »ಕೆಇಎ ಪರೀಕ್ಷಾ ಅಕ್ರಮದ ಕಿಂಗ್ಪಿನ್ ಆರ್ ಡಿ ಪಾಟೀಲ್ ಎಸ್ಕೇಪ್: ದೃಶ್ಯ ಸಿಸಿಟಿಯಲ್ಲಿ ಸೆರೆ
ಕಲಬುರಗಿ: ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್ಪಿನ್ ಆರ್ ಡಿ ಪಾಟೀಲ್ ವಸತಿ ಸಮುಚ್ಚಯದಿಂದ ಪರಾರಿಯಾಗಿದ್ದಾನೆ. ಆತ ಕಾಂಪೌಂಡ್ ಹಾರಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ಜೇವರ್ಗಿ ರಸ್ತೆಯಲ್ಲಿರುವ ವರ್ಧಾ ಅಪಾರ್ಟ್ಮೆಂಟ್ನಿಂದ ಆರ್ ಡಿ ಪಾಟೀಲ್ ಎಸ್ಕೆಪ್ ಆಗಿದ್ದು, ಈ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಹುಡುಕಾಟದ ನಡುವೆ ಭಾನುವಾರ ರಾತ್ರಿ 10.30 ರಿಂದ …
Read More »ಮುಂಬೈನ ವಾಂಖೆಡೆ ಮೈದಾನದಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದ ನಡುವೆ ಪಂದ್ಯ
ಮುಂಬೈ : ಮುಂಬೈನ ವಾಂಖೆಡೆ ಮೈದಾನದಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದ ನಡುವೆ ಪಂದ್ಯ ನಡೆಯುತ್ತಿದೆ. ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಅಫ್ಘಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾ ಬೌಲಿಂಗ್ ನಡೆಸಿದೆ. ವಿಶ್ವಕಪ್ ಕ್ರಿಕೆಟ್ 2023ರ 39ನೇ ಪಂದ್ಯ ಇದಾಗಿದೆ. ಸೂಪರ್ ಫೋರ್ ತಲುಪಲು ಅಫ್ಘಾನಿಸ್ತಾನಕ್ಕೆ ಈ ಪಂದ್ಯದ ಗೆಲುವು ನಿರ್ಣಾಯಕವಾಗಿದೆ. ಆಸೀಸ್ ಒಂದು ವೇಳೆ ಅಫ್ಘಾನ್ ತಂಡವನ್ನು ಮಣಿಸಿದರೆ, ನೇರವಾಗಿ ಸೆಮಿಫೈನಲ್ಗೆ ತಲುಪಲಿದೆ. ಹೀಗಾಗಿ …
Read More »ಬಿಜೆಪಿಗರಿಗೆ ರಾಜ್ಯದ ಜನರ ಮೇಲೆ ಪ್ರೀತಿ, ರೈತರ ಮೇಲೆ ಗೌರವ ಹಾಗೂ ಕಾಳಜಿ ಇದ್ದರೆ ಮೊದಲು ಪರಿಹಾರ ಕೊಡಿಸಲಿ” ಎಂದ ಸಿಎಂ
ಬೆಂಗಳೂರು: ”ಹಳ್ಳಿಗಾಡಿನ ಜನರ ಮೇಲೆ ಪ್ರೀತಿ, ರೈತರ ಮೇಲೆ ಗೌರವ ಹಾಗೂ ಕರ್ನಾಟಕದ ಮೇಲೆ ಕಾಳಜಿ ಇದ್ದರೆ, ಮೊದಲು ಕೇಂದ್ರದಿಂದ ಪರಿಹಾರ ಕೊಡಿಸಲಿ” ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬರ ಅಧ್ಯಯನಕ್ಕೆ ತಿರುಗೇಟು ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಇನ್ಫೋಸಿಸ್ ಸಂಸ್ಥೆ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ವಿನ್ಯಾಸಗೊಳಿಸಿರುವ ಗಾಲಿ ಮೇಲಿನ ಲ್ಯಾಬ್ ಎಂಬ ವಿಶೇಷ ಬಸ್ಗೆ ಚಾಲನೆ ನೀಡಿ ಮಾತನಾಡಿದರು. ”ಕೇಂದ್ರದ …
Read More »ಕರುನಾಡಲ್ಲಿ ಘಮ್ಮೆಂದ ‘ಟಗರು ಪಲ್ಯ’; ಎರಡನೇ ವಾರವೂ ಹೌಸ್ಫುಲ್ ಪ್ರದರ್ಶನ
ಕರುನಾಡ ಅಂಗಳದಲ್ಲಿ ಕನ್ನಡ ರಾಜ್ಯೋತ್ಸವದ ಜೊತೆಗೆ ‘ಟಗರು ಪಲ್ಯ’ ವಿಜಯೋತ್ಸವವೂ ಜೋರಾಗಿದೆ. ಡಾಲಿ ಧನಂಜಯ್ ನಿರ್ಮಾಣದ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ನಾಟಿ ಸ್ಟೈಲ್ನಲ್ಲಿ ತಯಾರಾಗಿ ಥಿಯೇಟರ್ಗೆ ಬಂದ ‘ಟಗರು ಪಲ್ಯ’ ಕನ್ನಡ ಕಲಾಭಿಮಾನಿಗಳಿಗೆ ರುಚಿಕೊಟ್ಟಿದೆ. ಪ್ರೇಕ್ಷಕರು ಒಮ್ಮತದಿಂದ ಗ್ರಾಮೀಣ ಸೊಗಡಿನ ಸಿನಿಮಾವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಗಂಧದ ಗುಡಿಯಲ್ಲಿ ಘಮ್ಮೆಂದ ‘ಟಗರು ಪಲ್ಯ’ಕ್ಕೆ ಈಗ ಅಕ್ಕ-ಪಕ್ಕದ ರಾಜ್ಯದಿಂದಲೂ ಬೇಡಿಕೆ ಹೆಚ್ಚಾಗಿದೆ. ಸಿನಿಮಾ ರೈಟ್ಸ್ಗೆ ಕ್ಯೂ ನಿಲ್ಲುವಷ್ಟರ ಮಟ್ಟಿಗೆ ಡಿಮ್ಯಾಂಡ್ ಕ್ರಿಯೇಟ್ …
Read More »‘ಟೈಗರ್ 3’ ಮುಂಗಡ ಬುಕ್ಕಿಂಗ್ನಲ್ಲಿ ದಾಖಲೆ; ಸಿನಿಮಾ ಟಿಕೆಟ್ ಶರವೇಗದಲ್ಲಿ ಮಾರಾಟ
ಮನೀಶ್ ಶರ್ಮಾ ನಿರ್ದೇಶನದ, ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ನಟನೆಯ ‘ಟೈಗರ್ 3’ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷೆಯ ಸಿನಿಮಾ ‘ಟೈಗರ್ 3’. ಸಲ್ಮಾನ್ ಖಾನ್, ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಮುಖ್ಯಭೂಮಿಕೆಯ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ. ಮನೀಶ್ ಶರ್ಮಾ ನಿರ್ದೇಶನದ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಬಿಡುಗಡೆಗೂ ಮುನ್ನ ಟಿಕೆಟ್ಗಳು ಶರವೇಗದಲ್ಲಿ …
Read More »ಅಧಿಕಾರ ಹಂಚಿಕೆ ವಿಚಾರ ಜನರ ಸಮಸ್ಯೆಯಲ್ಲ: ಸಚಿವ ಸಂತೋಷ್ ಲಾಡ್
ಹಾವೇರಿ : ಅಧಿಕಾರ ಹಂಚಿಕೆ ವಿಚಾರ ಜನರ ಸಮಸ್ಯೆಯಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರರಲ್ಲಿ ಮಾತನಾಡಿದ ಅವರು, ಈ ರೀತಿಯ ಹೇಳಿಕೆಗಳಿಗೆ ಸಂಪೂರ್ಣ ತೆರೆ ಎಳೆಯಬೇಕಾಗಿದೆ. ಈ ಕುರಿತಂತೆ ಸಿಎಂ ಮಾತನಾಡುತ್ತಾರೆ. ನಾನಂತೂ ಇದರ ಬಗ್ಗೆ ಮಾತನಾಡುವುದಿಲ್ಲ ಎಂದರು. ಜನರ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಮಾತನಾಡೋಣಾ. ಅಧಿಕಾರ ಹಂಚಿಕೆ, ಬಣ ರಾಜಕೀಯ ಪಕ್ಷ ನೋಡಿಕೊಳ್ಳುತ್ತೆ. ಹೈಕಮಾಂಡ್ ತಾಕೀತು ಮಾಡಿದ ನಂತರ, …
Read More »ರಾಮದುರ್ಗ ತಾಲೂಕಿನ ತುರನೂರ ಗ್ರಾಮದಲ್ಲಿ ಸರಣಿ ಸಾವು 45 ದಿನದಲ್ಲಿ ಒಂದೇ ಗ್ರಾಮದ 30 ಜನ ಸಾವು;
ಬೆಳಗಾವಿ: ಒಬ್ಬರಲ್ಲ, ಇಬ್ಬರಲ್ಲ, ಒಂದೂವರೆ ತಿಂಗಳಲ್ಲಿ ಬರೋಬ್ಬರಿ 30 ಜನರ ಅಕಾಲಿಕ ಮರಣ. ಈ ದಿಢೀರ್ ಸಾವುಗಳಿಗೆಕಾರಣವೇ ಗೊತ್ತಿಲ್ಲ. ಹೌದು,ಜಿಲ್ಲೆಯ ರಾಮದುರ್ಗ ತಾಲೂಕಿನ ತುರನೂರ ಗ್ರಾಮದಲ್ಲಿ ಸರಣಿ ಸಾವು ಸಂಭವಿಸುತ್ತಿರುವುದರಿಂದ ಊರಿನ ಜನರು ಆತಂಕಕ್ಕೊಳಗಾಗಿದ್ದಾರೆ. ಕಳೆದ 45 ದಿನಗಳ ಅಂತರದಲ್ಲಿ 30 ಜನ ಸಾವನ್ನಪ್ಪಿದ್ದಾರೆ. ಈ ಸರಣಿ ಸಾವಿನಿಂದಾಗಿ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಗ್ರಾಮಸ್ಥರು ಏನಂತಾರೆ? : ಈ ಸಾವುಗಳಿಗೆ ಗ್ರಾಮದ ದುರ್ಗಾದೇವಿಗೆ ಪೂಜೆ ಸಲ್ಲಿಸುವಾಗ ದೇವಿ ಮೂರ್ತಿಯು ವಿರೂಪಗೊಂಡಿರುವುದು ಕಾರಣ …
Read More »ಬೆಂಗಳೂರಲ್ಲಿ ಸರ್ಕಾರಿ ಅಧಿಕಾರಿ ಬರ್ಬರ ಕೊಲೆ.
ಬೆಂಗಳೂರು: ಮನೆಗೆ ನುಗ್ಗಿ ಮಹಿಳಾ ಅಧಿಕಾರಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ತಡರಾತ್ರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (37) ಕೊಲೆಯಾದವರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪತಿಯಿಂದ ದೂರವಾಗಿದ್ದ ಪ್ರತಿಮಾ ಒಬ್ಬಂಟಿಯಾಗಿ ದೊಡ್ಡಕಲ್ಲಸಂದ್ರದ ಅಪಾರ್ಟ್ಮೆಂಟ್ವೊಂದರಲ್ಲಿ ವಾಸಿಸುತ್ತಿದ್ದರು. ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಶನಿವಾರ ರಾತ್ರಿ 8 …
Read More »ಬೆಂಗಳೂರಿನಿಂದ ವಿಜಯಪುರ, ಬೆಳಗಾವಿಗೆ ವಿಶೇಷ ಎಕ್ಸ್ಪ್ರೆಸ್ ರೈಲು
ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ. ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ವಿಜಯಪುರ ಮತ್ತು ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಪ್ರಯೋಜನ ಪಡೆದುಕೊಳ್ಳಬೇಕೆಂದು ನೈಋತ್ಯ ರೈಲ್ವೆ ಮನವಿ ಮಾಡಿದೆ. ರೈಲು ಸಂಖ್ಯೆ 06231/06232 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್ಪ್ರೆಸ್ (ಒಂದು ಟ್ರಿಪ್): ರೈಲು ಸಂಖ್ಯೆ 06231 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್ಪ್ರೆಸ್ ನವೆಂಬರ್ 10ರಂದು …
Read More »