ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅರಭಾವಿ ಶಾಸಕ ಮೂಡಲಗಿ : ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಬೆಟಗೇರಿ ಗ್ರಾಮದ ಸಾರ್ವಜನಿಕರ ಬೇಡಿಕೆಗಳಿಗೆ ತಕ್ಷಣವೇ …
Read More »ಮನೋಜ್ ಜಾರಂಗೆ, ಮಹಾರಾಷ್ಟ್ರ ಸಿಎಂ ಭಿನ್ನ ಹೇಳಿಕೆ: ಮರಾಠ ಮೀಸಲಾತಿ ಗಡುವಿನ ಬಗ್ಗೆ ಮೂಡಿದ ಗೊಂದಲ
( ಮಹಾರಾಷ್ಟ್ರ): ಸರ್ಕಾರದ ನಿಯೋಗ ಮರಾಠಾ ಮೀಸಲಾತಿ ಬಗ್ಗೆ ಅದಷ್ಟು ಬೇಗ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದ ಹಿನ್ನೆಲೆ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಮೊಟಕುಗೊಳಿಸಿದ್ದಾರೆ. ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಲು ಡಿಸೆಂಬರ್ 24ರ ತನಕ ಗಡುವು ನೀಡಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ, ಮರಾಠ ಮೀಸಲಾತಿಗೆ ಮನೋಜ್ ಜಾರಂಗೆ …
Read More »ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ
ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಉಳಿಮುಟ್ಟದ ರಂಗೇಶ್ವರ, ಶಿವ ದೇವಾಲಯ ಹಾಗೂ ಲಕ್ಷ್ಮೀ ದೇವಸ್ಥಾನಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಭಾಗಿ ಮೂಡಲಗಿ : ಢವಳೇಶ್ವರ ಗ್ರಾಮದಲ್ಲಿ ಎಲ್ಲರೂ ಭಕ್ತಿ ಭಾವದಿಂದ ಸುಮಾರು ಮೂರುವರೆ ಕೋಟಿ ರೂ. ವೆಚ್ಚದಲ್ಲಿ ರಂಗೇಶ್ವರ, ಶಿವ ಮತ್ತು ಲಕ್ಷ್ಮೀ …
Read More »‘ಕನ್ನಡ’ ಫಿಲ್ಮ್ ಚೇಂಬರ್ನಲ್ಲಿ ಧ್ವಜಾರೋಹಣ ನೆರವೇರಿಸಿದ ನಟಿ ಲೀಲಾವತಿ
‘ಕನ್ನಡ’ ಫಿಲ್ಮ್ ಚೇಂಬರ್ನಲ್ಲಿ ಧ್ವಜಾರೋಹಣ ನೆರವೇರಿಸಿದ ನಟಿ ಲೀಲಾವತಿ ಇಂದು ಕರ್ನಾಟಕದಲ್ಲಿ ‘ರಾಜ್ಯೋತ್ಸವ’ದ ಸಂಭ್ರಮ ಮನೆ ಮಾಡಿದೆ. ಕನ್ನಡ ಚಿತ್ರರಂಗದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುವರ್ಣ ವರ್ಷವನ್ನು ಆಚರಿಸಲಾಯಿತು. ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ ಸುರೇಶ್, ಉಪಾಧ್ಯಕ್ಷೆ ಪ್ರಮೀಳಾ ಜೋಷಾಯ್, ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಕಾರ್ಯದರ್ಶಿ ಭಾ.ಮಾ ಗೀರಿಶ್ ಸಮ್ಮುಖದಲ್ಲಿ ಹಿರಿಯ ನಟಿ ಅಭಿನೇತ್ರಿ ಲೀಲಾವತಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರಿಗೆ …
Read More »ಕನ್ನಡ ರಾಜ್ಯೋತ್ಸವ ಕಳೆಗಟ್ಟಿದೆ. ಕುಂದಾನಗರಿ ಬೆಳಗಾವಿಯಲ್ಲಿ ಸಂಭ್ರಮ ಜೋರಾಗಿದೆ.
ಬೆಳಗಾವಿ: ಕನ್ನಡ ರಾಜ್ಯೋತ್ಸವ ಕಳೆಗಟ್ಟಿದೆ. ಕುಂದಾನಗರಿ ಬೆಳಗಾವಿಯಲ್ಲಿ ಸಂಭ್ರಮ ಜೋರಾಗಿದೆ. ರಾಜ್ಯೋತ್ಸವಕ್ಕೆ ಟೀಶರ್ಟ್ಗಳ ಖರೀದಿ ಭರಾಟೆ ಹೆಚ್ಚಾಗಿದ್ದು, ಕನ್ನಡ ನಾಡು, ನುಡಿ ಕುರಿತು ಜಾಗೃತಿ ಜೊತೆ ಕನ್ನಡಾಭಿಮಾನ ಮೂಡಿಸುವ ಟೀಶರ್ಟ್ಗಳ ಖರೀದಿಗೆ ಕನ್ನಡಮ್ಮನ ಕಂದಮ್ಮಗಳು ಮುಗಿ ಬಿದ್ದಿದ್ದಾರೆ. ಬೆಳಗಾವಿಯಿಂದ ಲಂಡನ್ಗೂ ಟೀಶರ್ಟ್ ಕಳಿಸಿದ್ದು ವಿಶೇಷವಾಗಿದೆ. ಇಡೀ ರಾಜ್ಯದಲ್ಲಿ ರಾಜ್ಯೋತ್ಸವ ಆಚರಣೆ ಒಂದೆಡೆಯಾದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಚರಿಸುವ ರಾಜ್ಯೋತ್ಸವ ತುಂಬಾ ವಿಶೇಷವಾಗಿಯೇ ಇರುತ್ತದೆ. ಅಷ್ಟೊಂದು ಸಂಭ್ರಮ, ಸಡಗರದಿಂದ ಇಲ್ಲಿ ರಾಜ್ಯೋತ್ಸವ ಆಚರಿಸಲಾಗುತ್ತದೆ. …
Read More »ಟಾಟಾ ಮೋಟಾರ್ಸ್ಗೆ ₹766 ಕೋಟಿ ನೀಡುವಂತೆ ಪಶ್ಚಿಮಬಂಗಾಳ ಸರ್ಕಾರಕ್ಕೆ ಆದೇಶ
ನವದೆಹಲಿ: ಟಾಟಾ ಮೋಟಾರ್ಸ್ ಮತ್ತು ಪಶ್ಚಿಮಬಂಗಾಳ ಸರ್ಕಾರದ ನಡುವಿನ ಸಿಂಗೂರ್ ಘಟಕ ವ್ಯಾಜ್ಯ ಕಡೆಗೂ ಇತ್ಯರ್ಥ ಕಂಡಿದೆ. ನ್ಯಾನೋ ಕಾರು ಉತ್ಪಾದನಾ ಘಟಕವನ್ನು ಸ್ಥಳಾಂತರಿಸಿದ್ದಕ್ಕಾಗಿ ಉಂಟಾದ ನಷ್ಟವನ್ನು ಭರಿಸಲು ಕೋರಿದ್ದ ಟಾಟಾ ಮೋಟಾರ್ಸ್ಗೆ, ಸಿಎಂ ಮಮತಾ ಬ್ಯಾನರ್ಜಿ ಅವರ ಸರ್ಕಾರ 766 ಕೋಟಿ ರೂಪಾಯಿ ಪರಿಹಾರವಾಗಿ ನೀಡಬೇಕು ಎಂದು ಮಧ್ಯಸ್ಥಿಕೆ ನ್ಯಾಯಮಂಡಳಿಯು ಸೋಮವಾರ ಆದೇಶಿಸಿದೆ. ಪಶ್ಚಿಮಬಂಗಾಳದ ಸಿಂಗೂರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನ್ಯಾನೋ ಕಾರು ಉತ್ಪಾದನಾ ಘಟಕ ಸ್ಥಾಪನೆಗೆ …
Read More »ಆಧಾರ್ ಮೂಲಕ ಸೈಬರ್ ಬಳಸಿ ಲಕ್ಷಾಂತರ ರೂಪಾಯಿ ವಂಚನೆ.. ಬಿಹಾರದ ಮೂವರು ಆರೋಪಿಗಳ ಬಂಧನ
ಮಂಗಳೂರು: ಆಧಾರ್ ಮೂಲಕ ಸೈಬರ್ ಬಳಸಿ ವಿವಿಧ ಬ್ಯಾಂಕ್ಗಳಿಂದ ಲಕ್ಷಾಂತರ ರೂಪಾಯಿ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಪ್ರಕರಣದಡಿ AEPS (Aadhar Enabled Payment System) ಬಿಹಾರದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಿಹಾರ ರಾಜ್ಯದ ಸುಪೌಲ್ ನ ದೀಪಕ್ ಕುಮಾರ್ ಹೆಂಬ್ರಮ್ (33) ಅರಾರಿ ಜಿಲ್ಲೆಯ ವಿವೇಕ್ ಕುಮಾರ್ ಬಿಶ್ವಾಸ್ (24) ಮದನ್ ಕುಮಾರ್ (23) ಬಂಧಿತರು. 6 ತಿಂಗಳಿನ ಅವಧಿಯಲ್ಲಿ ಮಂಗಳೂರು ನಗರದ ಸಬ್ ರಿಜಿಸ್ಟ್ರಾರ್ …
Read More »ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಆರೋಪ
ಮಂಗಳೂರು: ಬರಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ಇವತ್ತಿನವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ನಾವು ಎರಡು ಬಾರಿ ಮನವಿ ಕೊಟ್ಟೆವು. ಬರ ಪರಿಹಾರ ವೀಕ್ಷಣೆ ಮಾಡಲು ಕೇಂದ್ರದ ತಂಡ ಬಂದಿದೆ. ಪರಿಶೀಲನೆ ಮಾಡಿ 136 ತಾಲೂಕುಗಳಲ್ಲಿ 116 ತಾಲೂಕುಗಳು ಬರಪೀಡಿತ …
Read More »