ಬೆಂಗಳೂರು : ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಶನಿವಾರ ಹೈದರಾಬಾದ್ಗೆ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಶಾಸಕ ರವಿ ಗಣಿಗ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ, ಇದರಿಂದ ಏನೂ ಆಗುವುದಿಲ್ಲ ಎಂದು …
Read More »ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದ ನಾಯಕ ಮುಖ್ಯಮಂತ್ರಿ: ಅಮಿತ್ ಶಾ
ಹೈದರಾಬಾದ್ (ತೆಲಂಗಾಣ): ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನತೆ ಅಧಿಕಾರಕ್ಕೆ ತಂದರೆ ಹಿಂದುಳಿದ ವರ್ಗದ ನಾಯಕನನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಇಂದು ಸೂರ್ಯಪೇಟ್ ಜಿಲ್ಲೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಪಾಲ್ಗೊಂಡರು. ”ನಾನು ತೆಲಂಗಾಣದ ಜನತೆಗೆ ಒಂದು ಮಾತು ಹೇಳ ಬಯಸುತ್ತೇನೆ. ನೀವು ಬಿಜೆಪಿಗೆ ಆಶೀರ್ವಾದ ಮಾಡಿ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ, …
Read More »“ಒಲಿಂಪಿಕ್ಸ್ ಕ್ರೀಡಾಕೂಟ ಆತಿಥ್ಯ ವಹಿಸಲು ಭಾರತ ಸಿದ್ಧ”: ಗೋವಾದಲ್ಲಿ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಿದ ಪ್ರಧಾನಿ ಮೋದಿ
ಪಣಜಿ (ಗೋವಾ): ಮೊದಲ ಬಾರಿಗೆ ಗೋವಾದ ಪಣಜಿಯಲ್ಲಿ ನಡೆಯುತ್ತಿರುವ 37ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಿದರು. ದಕ್ಷಿಣ ಗೋವಾದ ಮಾರ್ಗಾವೊದಲ್ಲಿರುವ ಪಂಡಿತ್ ಜವಾಹರ್ಲಾಲ್ ನೆಹರು ಕ್ರೀಡಾಂಗಣದಲ್ಲಿ ಅ. 26ರಿಂದ ನ. 9ರವರೆಗೆ ನಡೆಯಲಿರುವ ಕ್ರೀಡಾಕೂಕ್ಕೆ ದೇಶದ ಅಥ್ಲೀಟ್ಗಳು ಹಸ್ತಾಂತರಿಸಿದ ಆಟಗಳನ್ನು ಪ್ರತಿನಿಧಿಸುವ ಜ್ಯೋತಿ(Infinity Flame) ಯನ್ನು ಸ್ವೀಕರಿಸುವ ಮೂಲಕ ಮೋದಿ ಚಾಲನೆ ನೀಡಿದರು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಭಾರತದ ಸಂಕಲ್ಪ ಹಾಗೂ …
Read More »ಚಿಕ್ಕಬಳ್ಳಾಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಇಂದು ಮುಂಜಾನೆ ತಾಲೂಕಿನ ಚಿತ್ರಾವತಿ ಬಳಿಯ ಆರ್ಟಿಒ ಕಚೇರಿ ಸಮೀಪ ಹೆದ್ದಾರಿ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೊ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತರಲ್ಲಿ 8 ಜನ ಪುರುಷರು, 4 ಮಹಿಳೆಯರು, ಒಂದು …
Read More »ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು: ಅಕ್ಟೋಬರ್ 28 ಮತ್ತು 29ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಹಿಜಾಬ್ ಧರಿಸಿಯೇ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬಹುದಾಗಿದೆ. ಆದರೆ ಕೆಲ ಷರತ್ತುಗಳನ್ನು ವಿಧಿಸಿದ್ದು, ಕಟ್ಟುನಿಟ್ಟಾಗಿ ಷರತ್ತು ಪಾಲಿಸಲು ಸೂಚನೆ ನೀಡಿದೆ. ಸೂಚನೆಗಳೇನು?: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಕೊಠಡಿಗೆ ಪ್ರವೇಶ ಕಲ್ಪಸಲು ಸೂಚಿಸಿದ್ದರೂ ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ …
Read More »ಕಿತ್ತೂರು ಉತ್ಸವದಲ್ಲಿ ಕುಸ್ತಿ ಪಂದ್ಯಾವಳಿ
ಬೆಳಗಾವಿ: ಚನ್ನಮ್ಮನ ಕಿತ್ತೂರು ಉತ್ಸವದಲ್ಲಿ ಆಯೋಜಿಸಿರುವ ಕುಸ್ತಿ ಪಂದ್ಯಾವಳಿ ಕಣ್ಮನ ಸೆಳೆಯಿತು. ರಾಜ್ಯ, ಹೊರ ರಾಜ್ಯ, ಹೊರ ದೇಶಗಳ ಕುಸ್ತಿಪಟುಗಳು ತಮ್ಮ ಪಟ್ಟುಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಜನರು ಶಿಳ್ಳೆ, ಚಪ್ಪಾಳೆಗಳ ಮೂಲಕ ಪೈಲ್ವಾನರನ್ನು ಹುರಿದುಂಬಿಸಿದರು. ಪಟ್ಟಣದ ಕೆಇಬಿ ಗ್ರಿಡ್ ಮೈದಾನದಲ್ಲಿ ಆಯೋಜಿಸಿದ್ದ ಪುರುಷರ ಹಾಗೂ ಮಹಿಳೆಯರ ಅಂತರರಾಷ್ಟ್ರೀಯ ಜಂಘೀ ನಿಖಾಲಿ ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದ ವಿಭಾಗದಲ್ಲಿ ಹರಿಯಾಣ ರಾಜ್ಯದ ಉಮೇಶ ಚೌಧರಿ ಮಥುರಾ ವಿರುದ್ಧ ಇರಾನ್ …
Read More »ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ.
ಬೆಳಗಾವಿ: ಚನ್ನಮ್ಮನ ಉತ್ಸವಕ್ಕೆ ಜನಸಾಗರವೇ ಕಿತ್ತೂರಿಗೆ ಹರಿದು ಬಂದಿದೆ. ಕಲರ್ಫುಲ್ ಲೈಟಿಂಗ್ಸ್‌ನಿಂದ ಕಂಗೊಳಿಸುತ್ತಿದ್ದ ಕೋಟೆಯಲ್ಲಿ ಜನರು ಸೆಲ್ಫಿ ಫೋಟೋ ತೆಗೆಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಉತ್ಸವಕ್ಕೆ ಬಂದವರು ಕೋಟೆ ಅಭಿವೃದ್ಧಿಯಾಗಿ, ಪ್ರಸಿದ್ಧ ಪ್ರವಾಸಿ ತಾಣವಾಗಬೇಕು, ದಸರಾ ಮಾದರಿಯಲ್ಲಿ ಕಿತ್ತೂರು ಉತ್ಸವ ಜರುಗಬೇಕು ಎಂದು ಆಶಿಸಿದರು. ವೀರರಾಣಿ ಚನ್ನಮ್ಮಾಜಿ ಆಳಿದ ಕೋಟೆಯಲ್ಲಿ ಯುವಕ, ಯುವತಿಯರು, ಚಿಕ್ಕ ಮಕ್ಕಳು, ಮಹಿಳೆಯರು ಸೇರಿ ಇಡೀ ಕುಟುಂಬಸ್ಥರು ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ವಸ್ತು ಪ್ರದರ್ಶನದಲ್ಲಿ ಮಾರಾಟಕ್ಕೆ ಇಟ್ಟಿರುವ ವಿವಿಧ ವಸ್ತುಗಳ …
Read More »ಹೆಸರಿಡದ ಸಿನಿಮಾಗೆ ದೊಡ್ಮನೆ ಕುಡಿ ರೆಡಿ: ಧೀರೇನ್ ರಾಮ್‌ಕುಮಾರ್ ಕಟ್ಟುಮಸ್ತ್ ದೇಹ ನೋಡಿ
ಡಾ.ರಾಜ್ ಕುಮಾರ್ ಕುಟುಂಬದ ಮೂರನೇ ತಲೆಮಾರಿನ ಕುಡಿ ಧೀರೇನ್ ರಾಮ್‌ಕುಮಾರ್ ಸದ್ಯ ತಮ್ಮ ಎರಡನೇ ಸಿನಿಮಾದ ಸಿದ್ಧತೆಯಲ್ಲಿದ್ದಾರೆ. 2020ರಲ್ಲಿ ಶಿವ 143 ಎಂಬ ಚಿತ್ರದಿಂದ ಕನ್ನಡ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೊಡ್ಮನೆ ಕುಡಿ ಧೀರೇನ್ ರಾಮ್‌ಕುಮಾರ್ ಬಾಡಿ ಬಿಲ್ಡ್ ಮಾಡಿರುವ ಫೋಟೊಗಳು ಇದೀಗ ಚಿತ್ರರಂಗದಲ್ಲಿ ಸುದ್ದಿಯಾಗುತ್ತಿದೆ. ಹೆಸರಿಡದ ಎರಡನೇ ಸಿನಿಮಾಗೆ ಭರ್ಜರಿಯಾಗಿ ತಯಾರಾಗಿದ್ದಾರೆ. ಧೀರೇನ್ ರಾಮ್‌ಕುಮಾರ್ಇವರ ಮೊದಲ ಸಿನಿಮಾವನ್ನು ಅನಿಲ್ ಕುಮಾರ್ ನಿರ್ದೇಶಿಸಿದ್ದರು. ಜಯಣ್ಣ ಭೋಗೆಂದ್ರ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ …
Read More »ದಾವಣಗೆರೆಯ ಕನ್ನಿಕಾ ಪರಮೇಶ್ವರಿ ದೇವಿಗೆ ಧನಲಕ್ಷ್ಮಿ ಅಲಂಕಾರ
ದಾವಣಗೆರೆ: ದಸರಾ ಪ್ರಯುಕ್ತ ದಾವಣಗೆರೆಯಾದ್ಯಂತ ಬಹುತೇಕ ಎಲ್ಲಾ ದೇವತೆಗಳಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ದೇವಾಲಯಗಳಲ್ಲಿ ಹೂವು, ಕುಂಕುಮ, ಎಲೆ, ಉತ್ತುತ್ತಿ, ತರಕಾರಿ, ಹಣ್ಣು-ಹಂಪಲುಗಳಿಂದ ತರಹೇವಾರಿ ಅಲಂಕಾರ ಮಾಡುವುದು ಸಾಮಾನ್ಯ. ಆದರೆ ದಾವಣಗೆರೆ ನಗರದ ಕನ್ನಿಕಾ ಪರಮೇಶ್ವರಿ ದೇವಿಗೆ ಕರೆನ್ಸಿ ನೋಟುಗಳಿಂದ ಧನಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ಭಕ್ತರ ಗಮನ ಸೆಳೆಯುತ್ತಿದೆ. ದೊಡ್ಡಪೇಟೆಯ ಕನ್ನಿಕಾ ಪರಮೇಶ್ವರಿ ದೇವಿಗೆ ನವರಾತ್ರಿಯ ಒಂಭತ್ತು ದಿನಗಳ ಕಾಲ ವಿವಿಧ ಅಲಂಕಾರ ಮಾಡಲಾಗಿತ್ತು. ಹತ್ತನೇ ದಿನವಾದ ಇಂದು ಲಕ್ಷಾಂತರ ರೂಪಾಯಿ …
Read More »ನಾನು ಕೇಂದ್ರ ಸಚಿವೆಯಾಗಿ ಸಂತೋಷವಾಗಿದ್ದೇನೆ, ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಇಲ್ಲ: ಶೋಭಾ ಕರಂದ್ಲಾಜೆ
ಮೈಸೂರು: ನಾನು ಕೇಂದ್ರ ಸಚಿವೆಯಾಗಿ ಸಂತೋಷವಾಗಿದ್ದೇನೆ, ಅಲ್ಲಿಯೇ ಇರುತ್ತೇನೆ. ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಇಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದರು. ನಿನ್ನೆಯೇ ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಿನ್ನೆ ಸಂಜೆ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತಿ, ಅಲ್ಲಿ ಚಾಮುಂಡೇಶ್ವರಿಯಲ್ಲಿ ಮತ್ತೇ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಬೇಡಿಕೊಂಡು, ಪೂಜೆ ಸಲ್ಲಿಸಿದರು. ಅಭಿಮನ್ಯು ಆನೆಗೆ …
Read More »