Breaking News
Home / Uncategorized (page 22)

Uncategorized

ಮಾರ್ಚ್‌ನಲ್ಲಿ ಭಾರತದ ಚಿಲ್ಲರೆ ಹಣದುಬ್ಬರ ಶೇ.4.85ಕ್ಕೆ ಇಳಿಕೆ

ನವದೆಹಲಿ: ಭಾರತದಲ್ಲಿ ಚಿಲ್ಲರೆ ಹಣದುಬ್ಬರವು ಫೆಬ್ರವರಿಯಲ್ಲಿ ಶೇಕಡಾ 5.09 ರಿಂದ ಮಾರ್ಚ್ನಲ್ಲಿ 10 ತಿಂಗಳ ಕನಿಷ್ಠ ಶೇಕಡಾ 4.85 ಕ್ಕೆ ಇಳಿದಿದೆ. ಇತ್ತೀಚಿನ ಎಂಪಿಸಿ ಪ್ರಕಟಣೆಗಳ ಪ್ರಕಾರ, ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು 2025 ರ ಹಣಕಾಸು ವರ್ಷದಲ್ಲಿ ಸಿಪಿಐ ಹಣದುಬ್ಬರವನ್ನು ಶೇಕಡಾ 4.5 ಕ್ಕೆ ಅಂದಾಜಿಸಲಾಗಿದೆ ಎಂದು ಹೇಳಿದರು. ಇತ್ತೀಚಿನ ಅಂಕಿಅಂಶಗಳು ಕೇಂದ್ರ ಬ್ಯಾಂಕಿನ ಶೇಕಡಾ 2-6 ರ ಸಹಿಷ್ಣುತೆಯ ಬ್ಯಾಂಡ್ನಲ್ಲಿವೆ, ಗುರಿಯನ್ನು ಶೇಕಡಾ 4 ಕ್ಕೆ …

Read More »

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ   ಬಳ್ಳಾರಿ: ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಇನ್ನೂ ಸಮಯವಿದೆ. ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಬಿ.ವೈ.ವಿಜಯೇಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.   ಯಡಿಯೂರಪ್ಪ ಆದೇಶದಂತೆ ಬಳ್ಳಾರಿಗೆ ಬಂದಿದ್ದೇನೆ. ಕಾಂಗ್ರೆಸ್ …

Read More »

ಸಿಡಿಲು ಬಡಿದು ಕುರಿಗಾಯಿ ಬಾಲಕ ಮೃತ್ಯು. ಕುಟುಂಬಕ್ಕೆ ಆಸರೆಯಾಗಿದ್ದ

ಇಂಡಿ (ವಿಜಯಪುರ): ಗುರುವಾರ ಸಂಜೆ ಬಿರುಗಾಳಿ ಸಹಿತ ಸಿಡಿಲು ಅಪ್ಪಳಿಸಿ ಕುರಿಗಾಯಿ ಬಾಲಕ ಬಲಿಯಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದಿದೆ. ಕುರಿ ಮೇಯಿಸುವಾಗ ಸಿಡಿಲಿಗೆ ಬಲಿಯಾದ ಬಾಲಕನನ್ನು ಬೀರಪ್ಪ ನಿಂಗಪ್ಪ ಅವರಾದಿ (15) ಎಂದು ಗುರುತಿಸಲಾಗಿದೆ. ಇಂಡಿ ಪಟ್ಟಣದ ಹೊರವಲಯದಲ್ಲಿ ಬೀರಪುಪ ಕುರಿ ಮೇಯಿಸುವಾಗ ಜೋರಾಗಿ ಬಿರುಗಾಳಿ ತುಂತುರು ಮಳೆ ಸುರಿಯಲು ಆರಂಭಿಸಿದೆ. ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಬೀರಪ್ಪ ಪಕ್ಕದಲ್ಲಿದ್ದ ಮರದ ಕೆಳಗೆ ಹೋಗಿದ್ದಾಗ ಸಿಡಿಲು …

Read More »

ಮಠಾಧೀಶರ ಆಶೀರ್ವಾದ ಪಡೆದ ನಿಂಬಾಳ್ಕರ್

ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ತಾಲ್ಲೂಕಿನ ವಿವಿಧ ಮಠಗಳಿಗೆ ತೆರಳಿ ಮಠಾಧೀಶರ ಆಶೀರ್ವಾದ ಪಡೆದರು. ಸ್ವರ್ಣವಲ್ಲಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಠದ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ, ಕೆಪಿಸಿಸಿ ವಕ್ತಾರ ದೀಪಕ್ ದೊಡ್ಡೂರು, ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಗದೀಶ ಗೌಡ, ಪ್ರಮುಖರಾದ ರಮೇಶ ದುಬಾಶಿ, ಶ್ರೀಪಾದ ಹೆಗಡೆ ಕಡವೆ ಹಾಗೂ ಪ್ರಮುಖರು ಇದ್ದರು. …

Read More »

ಅಬಕಾರಿ ಇಲಾಖೆಯಿಂದ ಒಟ್ಟು 50 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ಕೊಪ್ಪಳ: ಲೋಕಸಭಾ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಾದ ಮಾ. 16 ರಿಂದ ಏ. 09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 50,61,464 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಬಿ.ಆರ್.ಹಿರೇಮಠ್ ಅವರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾ. 16 ರಿಂದ ಏ.09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 196 ದಾಳಿಗಳನ್ನು ನಡೆಸಲಾಗಿದ್ದು, 147 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ …

Read More »

ಹೆಬ್ಬಾಳ್ಕರ್ ಪಂಚಮಸಾಲಿ ಹೌದೊ ಅಲ್ಲವೋ ಎನ್ನುವ ಗೊಂದಲ ವಿಚಾರ ಇಡೀ ಜಗತ್ತಿಗೆ ಗೊತ್ತಿದೆ.:ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರಿಂದಲೇ ಸಮಾಜದವರು ಅವರನ್ನು ನಮ್ಮವರು ಎಂದು ಒಪ್ಪಿಕೊಂಡಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ನೀಡಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಚುನಾವಣೆಯ ಸಂದರ್ಭದಲ್ಲಿ ಯಾರೂ ಸಹ ವಿಷಯಾಂತರ ಮಾಡಬಾರದು. ನಮ್ಮವರು ಎನ್ನುವ ಕಾರಣಕ್ಕೆ ಮೀಸಲಾತಿ ಹೋರಾಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು ಎಂದು ಸಮರ್ಥಿಸಿಕೊಂಡರು. ಯಾರೊ ಒಬ್ಬರು ಏನೇನೋ ಮಾತನಾಡುತ್ತಾರೆ …

Read More »

ಹೆಣ್ಮಕ್ಳೇ ಸ್ಟ್ರಾಂಗು ಗುರೂ… ರಾಜ್ಯಕ್ಕೆ ಟಾಪರ್ ಇವರೇ, ದ.ಕ ಪ್ರಥಮ, ಗದಗ ಜಿಲ್ಲೆ ಕೊನೆ ಸ್ಥಾನ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಟಾಪರ್ ಗಳು ಇವರೇ: ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ನಂತರ ಸ್ಥಾನದಲ್ಲಿ ಕೆ ಹೆಚ್ ಉರ್ವೀಶ್ ಪ್ರಶಾಂತ್ …

Read More »

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡಿದ್ದೇ ಜೋಶಿ: ದಿಂಗಾಲೇಶ್ವರ ಶ್ರೀ

ದಾವಣಗೆರೆ: ಹುಬ್ಬಳ್ಳಿ – ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಈವರೆಗೆ ಯಾವುದೇ ರಾಜಕೀಯ ಪಕ್ಷಗಳಿಂದ ಆಹ್ವಾನ ಬಂದಿಲ್ಲ ಎಂದು ಶಿರಹಟ್ಟಿ ಜಗದ್ಗುರು ಶ್ರೀ ಫಕಿರೇಶ್ವರ ಸಂಸ್ಥಾನ ಮಠದ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು. ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿ, ವಚನಾನಂದ ಸ್ವಾಮೀಜಿಯವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾವುದೇ ಪಕ್ಷಗಳಿಂದ ಆಹ್ವಾನ ಬಂದರೂ ಮೊದಲು ಭಕ್ತರು ಹಾಗೂ ಸಾರ್ವಜನಿಕರ ಮುಂದೆ ವಿಚಾರ ಇಡುತ್ತೇನೆ. …

Read More »

ಎಲ್ಲರ ಮನಗೆದ್ದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್- ಹಿರಿಯ ವಕೀಲ ದ್ವಿವೇದಿ ಜುಗಲ್ ಬಂದಿ

ನವದೆಹಲಿ,- ಹಿರಿಯ ವಕೀಲ ದಿನೇಶ್ ದ್ವಿವೇದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನಲ್ಲಿ ನಡೆಸಿರುವ ಮಾತಿನ ಸಂಭಾಷಣೆ ಎಲ್ಲರ ಮನಗೆದ್ದಿದೆ. ಕೋರ್ಟ್ ಹಾಲ್ಗೆ ಬಂದ ಹಿರಿಯ ವಕೀಲ ದ್ವಿವೇದಿ ಅವರು ನನ್ನ ಬಣ್ಣ ಬಣ್ಣದ ಕೂದಲಿಗೆ ಹೋಳಿ ಹಬ್ಬ ಕಾರಣ.ನನಗೆ ಮಕ್ಕಳು, ಮೊಮ್ಮಕ್ಕಳು ಹೆಚ್ಚಾಗಿರುವುದರಿಂದ ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ವಿಷಾದಿಸುತ್ತೇನೆ ಎನ್ನುತ್ತಾರೆ.

Read More »

ತೆಲಂಗಾಣ ಔಷಧ ಘಟಕ ಸ್ಫೋಟ

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಂಪನಿ ಘಟಕದ ರಾಸಾಯನಿಕ ರಿಯಾಕ್ಟರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಜಿಲ್ಲೆಯ ಹತ್ತನೂರ ಮಂಡಲದ ಚಂದಾಪುರ ಗ್ರಾಮದಲ್ಲಿರುವ ಎಸ್‌ಬಿ ಆರ್ಗಾನಿಕ್ಸ್ ಲಿಮಿಟೆಡ್‌ನ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದರು. ಗುರುವಾರ ಕಾರ್ಖಾನೆಯ ಆವರಣದಲ್ಲಿ ಅವಶೇಷಗಳಡಿ ಒಬ್ಬ ಕಾರ್ಮಿಕನ ಶವ ಪತ್ತೆಯಾಗಿದ್ದು, ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ …

Read More »