ಬೆಂಗಳೂರು : ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ರ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಹಲವರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸತೊಡಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಇಸ್ರೋಗೆ ಶುಭಾಶಯ ಕೋರಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿಯೂ ಚಂದ್ರಯಾನ-3ರ ವಿಜಯೋತ್ಸವ ಆಚರಿಸಲಾಯಿತು. “ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ …
Read More »Chandrayaan 3: ಚಂದ್ರಯಾನ 3ರ ಯಶಸ್ಸಿಗೆ ಚಿತ್ರರಂಗದ ಗಣ್ಯರು ಶುಭ ಹಾರೈಸಿದ್ದಾರೆ.
ಸಿನಿ ಗಣ್ಯರಿಂದ ಚಂದ್ರಯಾನ 3ರ ಯಶಸ್ಸಿಗೆ ಶುಭ ಹಾರೈಕೆ ಚಂದ್ರಯಾನ 3ರ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ. ಯೋಜನೆಯಂತೆ ಎಲ್ಲವೂ ನಡೆಯಲಿದ್ದು, ದೇಶಾದ್ಯಂತ ಚಂದ್ರಯಾನ 3ರ ಯಶಸ್ಸಿಗೆ ಹೋಮ, ಹವನ, ಪೂಜೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಸಿನಿ ಗಣ್ಯರು ಮೈಕ್ರೋ ಬ್ಲಾಗಿಂಗ್ ಸೈಟ್ X (ಟ್ವಿಟರ್) ನಲ್ಲಿ ಚಂದ್ರಯಾನ 3ರ ಯಶಸ್ಸಿಗೆ …
Read More »ಬೇಧಭಾವ ಹೊಡೆದು ಹಾಕಿ ಮುಸ್ಲಿಂ ಮಹಿಳೆಯಿಂದ ಗಣೇಶ ತಯಾರಿ
ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದುಗಾಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ ಎಂದರೆ ಹೇಗ ವಿಘ್ನ ನಿವಾರಕನನ್ನ ತಯಾರು ಮಾಡಿ ಹಿಂದು ಮುಸ್ಲಿಮ್ ಬೇಧಭಾವ ಹೊಡೆದು ಹಾಕಿದ ಮುಸ್ಲಿಂ ಸಮುದಾಯದ ಮಹಿಳೆಯ …
Read More »ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರ ವರ್ಚಸ್ಸಿನ ಮೇಲೆ ನಡೆಯುತ್ತದೆ.ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ
ಕಾಂಗ್ರೆಸ್ ಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಅವರಲ್ಲಿನ ಶಾಸಕರ ಅಸಮಾಧಾನದ ಪತ್ರ ಬರೆದವರಿಗೆ ಹೆಸರಿಸಲು ಆಪರೇಷನ್ ಎನ್ನುವ ತಂತ್ರ ಅನುಸರಿಸುತ್ತಾರೆ ಎಂದು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಸರಕಾರದಲ್ಲಿನ ಶಾಸಕರ ಅಸಮಾಧನ ಪತ್ರದ ವಿರುದ್ಧವಾಗಿ ಅವರನ್ನು ಹೆದರಿಸಲು ಬಿಜೆಪಿ ಶಾಸಕರ ಆಪರೇಷನ್ ಮಾಡುವ ತಂತ್ರ ಅನುಸರಿಸುತ್ತಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ ಎಂದರು. ಬೆಳಗಾವಿ ಜಿಲ್ಲಾ ವಿಭಜನೆಯಾಗಬೇಕು. ಮೊದಲು ಬೆಳಗಾವಿ ಜಿಲ್ಲಾ ಒಡೆಯಬಾರದು …
Read More »ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಸಿಎಂ ಸಿದ್ದರಾಮಯ್ಯ ಗೌರವಿಸಿದರು.
ಬೆಂಗಳೂರು: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದ್ದಾರೆ. ದೇವರಾಜ ಅರಸ ಅವರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು, ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ, ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ …
Read More »ಒಂದೆಡೆ ಮಳೆ ಆಗುತ್ತಿಲ್ಲ. ಮತ್ತೊಂದೆಡೆ, ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲ ಕಣ್ಣಾಮುಚ್ಚಾಲೆ ಆಟ ಅನ್ನದಾತನ ನಿದ್ದೆಗೆಡಿಸಿದೆ.
ಬೆಳಗಾವಿ: ಒಂದೆಡೆ ಮಳೆ ಆಗುತ್ತಿಲ್ಲ. ಮತ್ತೊಂದೆಡೆ, ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲ. ಇದರಿಂದಾಗಿ ಸಾಲ ಮಾಡಿ ಭತ್ತ ಬೆಳೆದ ರೈತರನ್ನು ಬೆಳೆಹಾನಿ ಭೀತಿ ಕಾಡುತ್ತಿದೆ. ಮಳೆ ಸುರಿಸದ ಮಳೆರಾಯನ ವಿರುದ್ಧ ಕೋಪಗೊಂಡಿರುವ ರೈತರು ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಸರ್ಕಾರದ ವಿರುದ್ಧವೂ ಹಿಡಿಶಾಪ ಹಾಕುತ್ತಿದ್ದಾರೆ. ನೀರಿಲ್ಲದೇ ಭತ್ತದ ಗದ್ದೆ ಬಿರುಕು ಬಿಡುತ್ತಿದೆ. ಒಣಗುವ ಸ್ಥಿತಿ ತಲುಪಿವೆ ನಾಟಿ ಮಾಡಿರುವ ಭತ್ತದ ಸಸಿಗಳು. ಮಳೆಗಾಗಿ ಆಕಾಶದತ್ತ ಮುಖಮಾಡಿ ಅನ್ನದಾತ ಕುಳಿತಿದ್ದಾನೆ. ಇಂಥ ದೃಶ್ಯಗಳು …
Read More »ಹಬ್ಬಗಳ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ನಾಗರ ಪಂಚಮಿಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ.: ಹೆಬ್ಬಾಳ್ಕರ್
ಬೆಂಗಳೂರು: ಹಬ್ಬಗಳ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ನಾಗರ ಪಂಚಮಿಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ತವರು ಮನೆಯ ಏಳಿಗೆ, ಅಣ್ಣ ತಮ್ಮಂದಿರ ಸುಖ ಸಂತೋಷಕ್ಕೆ ಸಹೋದರಿಯರು ಈ ಹಬ್ಬದ ಮೂಲಕ ಪ್ರಾರ್ಥಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ಶನಿವಾರ ನಡೆದ ‘ನಮ್ಮೂರ ನಾಗಪಂಚಮಿ’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ನಾಗಪಂಚಮಿಗೆ ಉಂಡಿ …
Read More »ಭಾರತ-ಐರ್ಲೆಂಡ್ ಮೊದಲ ಟಿ-20 ಪಂದ್ಯಕ್ಕೆ ಮಳೆ ಅಡ್ಡಿ: ಭಾರತಕ್ಕೆ 139 ರನ್ ಗುರಿ
ಡಬ್ಲಿನ್ (ಐರ್ಲೆಂಡ್): ಭಾರತ ಮತ್ತು ಐರ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಿದ್ದು, ಮೊದಲ ಪಂದ್ಯ ಡಬ್ಲಿನ್‌ನ ವಿಲೇಜ್ ಮೈದಾನದಲ್ಲಿ ನಡೆಯುತ್ತಿದೆ. ಪಂದ್ಯ ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಲು ಎರಡೂ ತಂಡಗಳು ತವಕಿಸುತ್ತಿವೆ. ಟಾಸ್ ಗೆದ್ದ ಬುಮ್ರಾ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿದೆ. ಐರ್ಲೆಂಡ್ ಪರ ಬ್ಯಾರಿ ಮೆಕಾರ್ಥಿ ಅರ್ಧಶತಕ …
Read More »ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು
ಬೆಂಗಳೂರು : ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡೇಟು ನೀಡಿದ ಘಟನೆ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ಏಕಾಏಕಿ ಪೊಲೀಸರ ಮೇಲೆರಗಿ ಪರಾರಿಯಾಗಲು ಯತ್ನಿಸಿದಾಗ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ. ಬ್ಯಾಟರಾಯನದೊಡ್ಡಿಯ ಆರೋಪಿ ಸೋಮಶೇಖರ್ ಎಂಬಾತನನ್ನು ಬೆಳಗ್ಗೆ ಸ್ಥಳ ಮಹಜರಿಗೆ ಕರೆದೊಯ್ದಾಗ ಈ ಘಟನೆ ಸಂಭವಿಸಿದೆ. ಪೊಲೀಸ್ ಸಿಬ್ಬಂದಿ ಮಾದಪ್ಪ ಎಂಬುವರ ಮೇಲೆ ಡ್ರ್ಯಾಗರ್ನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿಯನ್ನು ಉಳಿದ ಪೊಲೀಸರು …
Read More »ರಾಜ್ಯದ 9 ಜಿಲ್ಲೆಯ 14 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಯಾರ ಮನೆಯಲ್ಲಿ ಎಷ್ಟು ಆಸ್ತಿ ಪತ್ತೆ?
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಅಪಾದನೆ ಹಿನ್ನೆಲೆ ಗುರುವಾರ ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ,ಧಾರವಾಡ, ಬೀದರ್, ಕೊಪ್ಪಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. 45ಕ್ಕೂ ಹೆಚ್ಚು …
Read More »