ಬೆಂಗಳೂರು: ”ಸುಪ್ರೀಂ ಕೋರ್ಟ್ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡದೇ, ತಮಿಳುನಾಡು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ” ಎಂದು ಸರ್ಕಾರದ ನಿಲುವಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ”ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಸಿಡಬ್ಲ್ಯೂಎಂಎದಲ್ಲಿ ಪ್ರತಿಭಟಿಸದೇ ಮತ್ತು …
Read More »ರೈತರು ಈ ಕೆಲಸ ಮಾಡಿದ್ರೆ ಪಿಎಂ ಕಿಸಾನ್ 14 ನೇ ಕಂತು ಪಡೆಯಬಹುದು!
ದೇಶದ ಅಗತ್ಯವಿರುವ ಮತ್ತು ಬಡ ವರ್ಗಕ್ಕಾಗಿ ಸರ್ಕಾರವು ಅನೇಕ ರೀತಿಯ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸುತ್ತದೆ. ಈ ಯೋಜನೆಗಳ ಮೂಲಕ, ಅಗತ್ಯವಿರುವ ಆರ್ಥಿಕ ಸಹಾಯವನ್ನು ಜನರಿಗೆ ತಲುಪಿಸಲಾಗುತ್ತದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಒಂದು ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಅರ್ಹ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ ಮತ್ತು ನಂತರ ಈ ಹಣವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2-2 ಸಾವಿರ ರೂಪಾಯಿಗಳ ಮೂರು ಕಂತುಗಳಲ್ಲಿ …
Read More »ಧಾರವಾಡ: ಹೆದ್ದಾರಿ ಡಿವೈಡರ್ಗೆ ಕಾರು ಡಿಕ್ಕಿ.. ಇಬ್ಬರು ಸಾವು
ಧಾರವಾಡ: ರಸ್ತೆ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಭವಿಸಿದೆ. ಕಳೆದ ತಡರಾತ್ರಿ ಧಾರವಾಡದಿಂದ ಊಟಕ್ಕೆ ಢಾಬಾಗೆ ಹೋಗಿದ್ದ ಯುವಕರು ತಮ್ಮ ಕಾರಿನಲ್ಲಿ ವಾಪಸ್ ಬರುವಾಗ ಹೆದ್ದಾರಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿ ಓರ್ವ ಸಾವನ್ನಪ್ಪಿದ್ದರೆ, ಮತ್ತೋರ್ವ ಚಿಕಿತ್ಸೆ ಫಲಿಸದೇ ಧಾರವಾಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ವಿನಯ ಹಿರೇಮಠ (28) ಹಾಗೂ ಸಂದೀಪ್ (29) …
Read More »ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ: ಸ್ಯಾಂಡಲ್ವುಡ್ ನಿರ್ಮಾಪಕನ ಬಂಧನ
ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹಣ ವಸೂಲಿ ಮಾಡಿದ ಆರೋಪದಡಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಕನ್ನಡ ಚಿತ್ರರಂಗದಲ್ಲಿ ‘ಸ್ವಯಂಕೃಷಿ’ ಎಂಬ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ ಬಾಬು ಎಂಬುವರನ್ನು ಬಂಧಿಸಿದ್ದಾರೆ. ನಿರ್ಮಾಪಕ ತನ್ನ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಸೆರೆ ಹಿಡಿದುಕೊಂಡು ಬೆದರಿಕೆ ಹಾಕಿದ್ದಾರೆ ಹಾಗೂ 15 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ 36 ವರ್ಷದ ಮಹಿಳೆಯೊಬ್ಬರು ಕೊಡಿಗೆಹಳ್ಳಿ ಪೊಲೀಸ್ …
Read More »ಬೆಳ್ಳಂ ಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ಮೂವರು ಸಾವ
ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ನಗರದಲ್ಲಿ ಸಂಭವಿಸಿದೆ. ಇಲ್ಲಿನ ಶಾಹುನಗರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸದಸ್ಯರು ದುರ್ಮರಣ ಹಿನ್ನೆಲೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟದೆ. ಸ್ಥಳಕ್ಕೆ ಕಟ್ಟಡದ ಮಾಲೀಕ ಮತ್ತು ಇಂಜಿನಿಯರ್ ಬಂದ ಬಳಿಕ ಮೃತದೇಹಗಳನ್ನು ತೆರವು ಮಾಡುತ್ತೇವೆ ಎಂದು ಸಂಬಂಧಿಕರು ಪಟ್ಟು ಹಿಡಿದಿದ್ದಾರೆ. ಬೋರವೆಲ್ ಸ್ವಿಚ್ ಆನ್ ಮಾಡುವ ವೇಳೆ ಕರೆಂಟ್ …
Read More »ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ
ಮೈಸೂರು: ಕಬ್ಬಿನ ಗದ್ದೆಯೊಂದರಲ್ಲಿ ಕಬ್ಬು ಬೆಳೆ ಕಟಾವಿನ ವೇಳೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಗುಡ್ಡದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕಬ್ಬು ಕಟಾವು ಮಾಡಲು ಬಂದಿದ್ದ ಕೂಲಿ ಕಾರ್ಮಿಕರು ಮರಿಗಳನ್ನು ರಕ್ಷಣೆ ಮಾಡಿದ್ದಾರೆ. ಟಿ.ನರಸೀಪುರ ತಾಲೂಕಿನ ಗುಡ್ಡದ ಕೊಪ್ಪಲು ಗ್ರಾಮದಲ್ಲಿ, ದೊರೆಸ್ವಾಮಿ ಎಂಬುವವರ ಜಮೀನಿನಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಅವರ ಜಮೀನಿನಲ್ಲಿ ಕಬ್ಬು ಬೆಳೆಯನ್ನು ಕಟಾವು ಮಾಡುವ ಸಮಯದಲ್ಲಿ, ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಕಾಣಿಸಿಕೊಂಡಿವೆ. ಈ …
Read More »ಬಬಲೇಶ್ವರ, ತಿಕೋಟಾದಲ್ಲಿ ಕುಡಿವ ನೀರು ಯೋಜನೆ ಪರಿಷ್ಕರಿಸಲು ತೀರ್ಮಾನ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಮೊದಲು ಗ್ರಾಮ ಪಂಚಾಯಿತಿಗಳಾಗಿದ್ದು, ಈಗ ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾಗಳಿಗೆ ಪ್ರತಿಯೊಬ್ಬರಿಗೂ ದಿನಕ್ಕೆ 135 ಲೀಟರ್ ನೀರು ಒದಗಿಸುವ ರೀತಿಯಲ್ಲಿ ನೀರು ಪೂರೈಕೆ ಯೋಜನೆಗಳನ್ನು ಪರಿಷ್ಕರಿಸಿ, ಕಾರ್ಯಗತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಿಜಯಪುರ ನಗರ ಮತ್ತು ಬಬಲೇಶ್ವರ, ತಿಕೋಟಾ ಪಟ್ಟಣಗಳ ಕುಡಿವ ನೀರು ಪೂರೈಕೆ ಯೋಜನೆಗಳಿಗೆ ಸಂಬಂಧಿಸಿದಂತೆ ಗುರುವಾರ …
Read More »ಲಂಚದ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಮಾಜಿ ನ್ಯಾಯಾಧೀಶ ಸುಧೀರ್ ಪರ್ಮಾರ್ ಅವರನ್ನ ಇಡಿ ಬಂಧಿಸಿದೆ.
ನವದೆಹಲಿ: ಈ ಹಿಂದೆಪಂಚಕುಲ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಸುಧೀರ್ ಪರ್ಮಾರ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿದೆ. ನ್ಯಾಯಾಧೀಶ ಸುಧೀರ್ ಪರ್ಮಾರ್ ಲಂಚ ಆರೋಪದಡಿ ಅಮಾನತುಗೊಂಡಿದ್ದರು. ಇದೀಗ ಪರ್ಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕುರಿತಾದ ತನಿಖೆಗಾಗಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಪರ್ಮಾರ್ ಅವರನ್ನು ದೆಹಲಿಯ ಪಕ್ಕದ ಗುರುಗ್ರಾಮದಲ್ಲಿರುವ ಏಜೆನ್ಸಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ನಂತರ ಮಾಜಿ ನ್ಯಾಯಧೀಶರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬಂಧಿಸಲಾಗಿದೆ. ತನಿಖೆಗಾಗಿ ಕಸ್ಟಡಿಗೆ …
Read More »ಅನಧಿಕೃತ ಶಾಲೆ, ತರಗತಿ, ಪಠ್ಯಕ್ರಮಕ್ಕೆ ಆ. 14ರೊಳಗೆ ಬ್ರೇಕ್ ಹಾಕಿ.. ಡಿಡಿಪಿಐಗಳಿಗೆ ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು : ರಾಜ್ಯದಲ್ಲಿ ನೋಂದಣಿ ಮಾಡದೆ ಅನಧಿಕೃತವಾಗಿ ಶಾಲೆ ನಡೆಸುತ್ತಿರುವುದು, ತರಗತಿಗಳನ್ನು ನಡೆಸುತ್ತಿರುವುದು, ಅನಧಿಕೃತ ಪಠ್ಯಕ್ರಮ ಬೋಧನೆ, ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜಿಸಿದ ನಂತರವೂ ರಾಜ್ಯ ಪಠ್ಯಕ್ರಮದಲ್ಲಿ ಶಾಲೆ ನಡೆಸುತ್ತಿರುವುದನ್ನು ನಿಯಂತ್ರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಸಂಬಂಧ ಆಗಸ್ಟ್ 14ರ ವರೆಗೆ ಅಧಿಕಾರಿಗಳಿಗೆ ಗಡುವು ನೀಡಲಾಗಿದ್ದು, ಆಗಸ್ಟ್ 16ರೊಳಗೆ ವರದಿಯನ್ನು ಸಲ್ಲಿಕೆ ಮಾಡುವಂತೆ ಸೂಚಿಸಲಾಗಿದೆ. ವರದಿ ಸಲ್ಲಿಕೆ ಮಾಡದೇ ಇದ್ದಲ್ಲಿ ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ …
Read More »ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಬಂಧಿಸಿರುವುದಾಗಿ ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಸಂತೋಷ ಬಾಬು ತಿಳಿಸಿದ್ದಾರೆ.
ಹುಬ್ಬಳ್ಳಿ : ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ಬಿಂಬಿಸುವಂತಹ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಈ ಸಂಬಂಧ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಸಂತೋಷ ಬಾಬು ಮಾಹಿತಿ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತನ ಇ-ಮೇಲ್ ಐಡಿ ಮತ್ತು ಸಾಮಾಜಿಕ ಜಾಲತಾಣಗಳ ವಿವರಗಳನ್ನು ವಿಧಿ …
Read More »