ಬೆಂಗಳೂರು: ಗುತ್ತಿಗೆದಾರರನ್ನು ಮಾಧ್ಯಮದವರ ಮುಂದೆ ಯಾರು ಕಳಿಸುತ್ತಿದ್ದಾರೆ ಅಂತ ಗೊತ್ತಿದೆ. ನನಗೆ ಎಲ್ಲವೂ ಗೊತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ. ಇಂದು ಸದಾಶಿವನಗರದಲ್ಲಿರುವ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುತ್ತಿಗೆದಾರರು ವಿರೋಧ ಪಕ್ಷದ ನಾಯಕರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದರು. ಕಾನೂನು ಪ್ರಕಾರ ತನಿಖೆ ಮಾಡಬೇಕು ಅಂತ ಹೇಳಿದ್ದೇವೆ. ಕೆಂಪಣ್ಣ ದೂರು ಕೊಟ್ಟಿದ್ದಾರೆ, ಅವರಿಗೆ ನ್ಯಾಯ ಒದಗಿಸಬೇಕು. ಕೆಲಸಕ್ಕೆ ನ್ಯಾಯ ಒದಗಿಸಬೇಕು, ಜನರಿಗೂ ನ್ಯಾಯ ಸಿಗಬೇಕು ಎಂದು …
Read More »ಸ್ಮಾರ್ಟ್ ಸಿಟಿ ಮೊದಲ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆ ಸ್ಥಾನ ಪಡೆದಿದ್ದರೂ ಸಹ ಯಾವುದೇ ಬೆಳವಣಿಗೆ ಆಗಿಲ್ಲ,
ಬೆಳಗಾವಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸ್ಮಾರ್ಟ್ ಸಿಟಿ ಮೊದಲ ಪಟ್ಟಿಯಲ್ಲೇ ಬೆಳಗಾವಿ ಜಿಲ್ಲೆ ಸ್ಥಾನ ಪಡೆದಿದ್ದರಿಂದ ಕುಂದಾನಗರಿ ಜನ ಸಂಭ್ರಮಿಸಿದ್ದರು. ಆದರೆ ಸ್ಮಾರ್ಟ್ ಸಿಟಿ ಯೋಜನೆಯಿಂದ ಯಾವುದೇ ಉಪಯೋಗ ಆಗಿಲ್ಲವೆಂದು ಜನ ಆರೋಪಿಸುತ್ತಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆ ಅಂದಾಕ್ಷಣ ಬೆಳಗಾವಿ ಜನ ನಮ್ಮ ಕುಂದಾನಗರಿ ಸ್ಮಾರ್ಟ್ ಸಿಟಿ ಆಗುತ್ತದೆ, ನಮಗೆಲ್ಲಾ ಒಳ್ಳೆಯ ಸೌಲಭ್ಯಗಳು ಸಿಗುತ್ತವೆ ಅಂದುಕೊಂಡಿದ್ದರು. ಆದರೆ ತಮ್ಮ ನಂಬಿಕೆಗಳು ಮಾತ್ರ ಹುಸಿಯಾಗಿವೆ. ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ …
Read More »ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯೊಂದಿಗೆ ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ‘ಶತಮಾನೋತ್ಸವ’ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕಾರಣಿಗಳು …
Read More »ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಷೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಷೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಮೂರನೇ ದಿನವೂ ಜಿಲ್ಲಾವಾರು ಶಾಸಕರು ಮತ್ತು ಸಚಿವರ ಸಭೆ ನಡೆಸಿ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯತೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ಅನುದಾನ ಕೊರತೆಯ ಬಗ್ಗೆಯೂ ಮಾಹಿತಿ ನೀಡಿ ಮಿತಿಯೊಳಗೆ ಬೇಡಿಕೆ ತನ್ನಿ ಎನ್ನುವ ಸಲಹೆ ನೀಡಿದ್ದಾರೆ. ಈ ವರ್ಷ ಹೆಚ್ಚು ಅನುದಾನದ ನಿರೀಕ್ಷೆ ಇಟ್ಟುಕೊಳ್ಳದೇ, ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆದ್ಯತೆ ನೀಡಬೇಕು ಎಂದು ಸಿಎಂ …
Read More »ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬ
ಬೆಂಗಳೂರು: ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬವಾಗುತ್ತಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ ಕುರಿತಂತೆ ನಿರ್ದೇಶಿಸಬೇಕು ಎಂದು ವಕೀಲೆ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. …
Read More »ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ, ಬೇಗ ಗುಣಮುಖರಾಗಿ’: ಹೆಚ್‌ಡಿಕೆಗೆ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು: ”ಚುನಾವಣಾ ಸೋಲಿನ ಆಘಾತದಿಂದ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ದೂರಿನ ಪತ್ರದ ಬಗ್ಗೆ ತಮ್ಮ ವಿರುದ್ಧ ಹೆಚ್ಡಿಕೆ ಮಾಡಿದ ತೀಕ್ಷ್ಣ ಟ್ವಿಟ್ಗೆ ಪ್ರತಿಕ್ರಿಯಿಸಿದ ಅವರು, ”ಹೆಚ್.ಡಿ. ಕುಮಾರಸ್ವಾಮಿ ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ …
Read More »ಇನ್ಮುಂದೆ ಬೆಂಗಳೂರಲ್ಲಿ ಫ್ಲೆಕ್ಸ್, ಹೋರ್ಡಿಂಗ್ಸ್ ಹಾಕಿದ್ರೆ 50 ಸಾವಿರ ರೂಪಾಯಿ ದಂಡ: ಡಿ .ಕೆ. ಶಿ.
ಬೆಂಗಳೂರು: ಇನ್ನು ಮುಂದೆ ಬೆಂಗಳೂರು ನಗರದಲ್ಲಿ ಯಾರೂ ಕೂಡ ಫ್ಲೆಕ್ಸ್, ಹೋರ್ಡಿಂಗ್ಸ್ ಹಾಕುವ ಹಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಕುಮಾರ ಕೃಪಾ ಅತಿಥಿ ಗೃಹದಲ್ಲಿ ಇಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಇನ್ನು ಬೆಂಗಳೂರಾದ್ಯಂತ ಫ್ಲೆಕ್ಸ್ ಸಂಪೂರ್ಣವಾಗಿ ನಿಷೇಧ ಮಾಡುತ್ತೇವೆ. ಅನಧಿಕೃತ ಫ್ಲೆಕ್ಸ್ಗಳಿಂದ ನನಗೆ ಅಸಹ್ಯ ಆಗುತ್ತಿದೆ. ಕೋರ್ಟ್ನಿಂದ ಕೂಡ ನಿರ್ದೇಶನ ಇದೆ. ಎಲ್ಲಾ ಫ್ಲೆಕ್ಸ್, ಹೋರ್ಡಿಂಗ್ ತೆಗೆಯಲು ಸೂಚನೆ ನೀಡಲಾಗಿದೆ. ಬೆಂಗಳೂರಿನಾದ್ಯಂತ ಆ.15ರೊಳಗೆ ಎಲ್ಲಾ …
Read More »ಕರೆಂಟ್ ಬಿಲ್ ಜಾಸ್ತಿ ಬಂತೆಂದು ಮೀಟರ್ ರೀಡರ್ನನ್ನೇ ಕೊಂದರು!
(ಒಡಿಶಾ): ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಇಂದು (ಸೋಮವಾರ) ಭೀಕರ ಹತ್ಯೆ ನಡೆದಿದೆ. ಅಧಿಕ ಪ್ರಮಾಣದ ಬಿಲ್ ನೀಡುತ್ತಿದ್ದಾನೆ ಎಂಬ ಆರೋಪದ ಮೇಲೆ ವಿದ್ಯುತ್ ಮೀಟರ್ ರೀಡರ್ನನ್ನೇ ಹರಿತವಾದ ಆಯುಧಗಳಿಂದ ಇರಿದು ಹತ್ಯೆ ಮಾಡಲಾಗಿದೆ. ಹಂತಕರು ಪರಾರಿಯಾಗಿದ್ದು, ಪ್ರಕರಣ ದಾಖಲಾಗಿದೆ. ಘಟನೆಯ ವಿವರ: ಗಂಜಾಂ ಜಿಲ್ಲೆಯ ಕುಪಾಟಿ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಹತ್ಯೆಯಾಗಿದೆ. ಲಕ್ಷ್ಮೀ ನಾರಾಯಣ ತ್ರಿಪಾಠಿ ಮೃತ ವ್ಯಕ್ತಿ. ಹಲವು ವರ್ಷಗಳಿಂದ ಇವರು ವಿದ್ಯುತ್ ಬಿಲ್ ರೀಡರ್ ಆಗಿ ಕೆಲಸ ಮಾಡುತ್ತಿದ್ದರು. ಪ್ರತಿ ತಿಂಗಳು …
Read More »ಜನರ ಆಶೀರ್ವಾದ ಇಲ್ಲಎಂದಾಗಲು ಅಧಿಕಾರದ ಹಪಾಹಪಿ ಬಿಜೆಪಿಯವರಿಗೆ ಜಾಸ್ತಿಯಾಗಿದೆ: ಸಚಿವ ಆರ್.ಬಿ. ತಿಮ್ಮಾಪೂರ ಕಿಡಿ
ಬಾಗಲಕೋಟೆ: ”ಜನರ ಆಶೀರ್ವಾದ ಇಲ್ಲಎಂದಾಗಲು ಅಧಿಕಾರದ ಹಪಾಹಪಿ ಬಿಜೆಪಿಯವರಿಗೆ ಜಾಸ್ತಿಯಾಗಿದೆ” ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಕೆಪಿಡಿ ಸಭೆ ನಡೆಸಲು ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ, ಸಿಂಗಪುರದಲ್ಲಿ ಆಪರೇಷನ್ ಸರ್ಕಾರ ಕೆಡವಲು ಯೋಚನೆ ಮಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ”ಬಿಜೆಪಿಯವರಿಗೆ ಜನರ ಆಶೀರ್ವಾದ ದೊರೆತಿಲ್ಲ. ಜನ ತಿರಸ್ಕರಿಸಿದರೂ ಬಿಜೆಪಿಯವರು ಅಧಿಕಾರದ ದಾಹದಿಂದ ಈ ಪ್ರಯತ್ನ ನಡೆದಿರಬಹುದು” ಎಂದು ಹೇಳಿದರು. …
Read More »ಇತ್ತೀಚೆಗೆ ಸುರಿದ ಮಳೆಯಿಂದ ಶತಮಾನ ಕಂಡಿರುವ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದೆ
ಬಾಗಲಕೋಟೆ: ಇತ್ತೀಚೆಗೆ ಸುರಿದ ಮಳೆಯಿಂದ ಶತಮಾನ ಕಂಡಿರುವ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಜಿಲ್ಲೆಯ ಇಲಕಲ್ಲ ತಾಲೂಕಿನ ಗುಡೂರ ಎಸ್. ಸಿ. ಗ್ರಾಮದಲ್ಲಿರುವ ಸರಕಾರಿ ಶಾಲೆ ಇದಾಗಿದೆ. ಮಳೆಯಿಂದ ಸಂಪೂರ್ಣ ಶಾಲೆಯ ಮೇಲ್ಛಾವಣಿ ಜಖಂಗೊಂಡಿದೆ. ಈ ಸರ್ಕಾರಿ ಶಾಲೆಯು 150 ವರ್ಷದ ಹಳೆಯದಾಗಿದೆ. ಶಾಲೆಯ ಕಟ್ಟಡ ಶಿಥಿಲಗೊಂಡಿತ್ತು. ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆ ಹೆಂಚಿನ ಮೇಲ್ಛಾವಣಿ ಕಸಿದುಬಿದ್ದಿದೆ. ಶಾಲೆಯ ಒಟ್ಟು ಐದು ಕೊಠಡಿಗಳು ಹೆಂಚಿನ ಮೇಲ್ಛಾವಣಿ ಹೊಂದಿವೆ. …
Read More »