Breaking News

Uncategorized

ಪೊಲೀಸ್ ಇಲಾಖೆಯಲ್ಲಿ ಕಳ್ಳಾಟ ಆಡುತ್ತಿದ್ದ ಅಧಿಕಾರಿಗಳಿಗೆ ಶಾಕ್; ವರ್ಗಾವಣೆ ನಂತರ NOC, LPC ಕಡ್ಡಾಯ

ಬೆಂಗಳೂರು, : ಪೊಲೀಸ್ ಇಲಾಖೆಯಲ್ಲಿ (Police Department) ಕಳ್ಳಾಟ ಆಡುತ್ತಿದ್ದ ಅಧಿಕಾರಿಗಳಿಗೆ ಶಾಕ್. ವರ್ಗಾವಣೆ ನಂತರ ಇಷ್ಟ ಬಂದಂತೆ ವರ್ತಿಸುತ್ತಿದ್ದವರಿಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ (B Dayanand) ಚಾಟಿ ಬೀಸಿದ್ದಾರೆ. ನಗರ ಪೊಲೀಸ್ ಆಯುಕ್ತರು ಪ್ರತಿ ಠಾಣೆಗೆ ಭೇಟಿ ಮಾಡಿದಾಗ ಪೊಲೀಸರ ಕಳ್ಳಾಟ ಬಯಲಾಗಿದೆ. ಹೀಗಾಗಿ ಮುಂದೆ ಹೀಗೆ ಆಗದಂತೆ ಖಡಕ್ ಆಗಿ ಸೂಚನೆ ಕೊಟ್ಟಿದ್ದಾರೆ. ಹಾಗೂ ಕೆಲವು ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದ್ದಾರೆ. ವರ್ಗಾವಣೆ ನಂತರ ಕೆಲಸಕ್ಕೆ …

Read More »

ಕುಡಿಯುವ ನೀರಿನ ಆಹಾಕಾರ ತಪ್ಪಿಸಲು ಸ್ಥಳೀಯ ಪಿಡಿಓ, ವಿಎ ಮತ್ತು ಆರ್‍ಡಿಪಿಆರ್ ಇಂಜನೀಯರ್‍ಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಿ:ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕುಡಿಯುವ ನೀರಿನ ಆಹಾಕಾರ ತಪ್ಪಿಸಲು ಸ್ಥಳೀಯ ಪಿಡಿಓ, ವಿಎ ಮತ್ತು ಆರ್‍ಡಿಪಿಆರ್ ಇಂಜನೀಯರ್‍ಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರದಂದು ನಗರದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಟಾಸ್ಕ್‍ಫೋರ್ಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ತಿಂಗಳಿನಿಂದ ಮೇ-ತಿಂಗಳಿನವರೆಗೆ ಕುಡಿಯುವ …

Read More »

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಉಚಿತ ಸೈಕಲ್ ವಿತರಣೆ’ ಯೋಜನೆ ಮರು ಜಾರಿ ಸಾಧ್ಯತೆ..!

ಬೆಂಗಳೂರು : ರಾಜ್ಯದ 8 ನೇ ತರಗತಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಉಚಿತ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಈ ಸೈಕಲ್ ಯೋಜನೆಯನ್ನು ಮತ್ತೆ ಸರ್ಕಾರ ಮರುಪರಿಚಯಿಸುವ ಸಾಧ್ಯತೆಯಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸಿಎಂ ಸಿದ್ದರಾಮಯ್ಯರಿಗೆ ಪ್ರಸ್ತಾವನೆ ಸಲ್ಲಿಸಿದ್ದು, 2020-21ನೇ ಶೈಕ್ಷಣಿಕ ವರ್ಷದಿಂದ ಸ್ಥಗಿತಗೊಂಡಿರುವ ಉಚಿತ ಬೈಸಿಕಲ್ ಯೋಜನೆಯನ್ನು ಮರು ಪರಿಚಯಿಸಲು ಅನುಮೋದನೆ ನೀಡುವಂತೆ ಮನವಿ ಮಾಡಿದೆ. ಹೊಸ ಪ್ರಸ್ತಾವನೆಗಳನ್ನು ಸಲ್ಲಿಸದಂತೆ ಪೂರ್ವ ಸೂಚನೆ ಇದ್ದ ಕಾರಣ, …

Read More »

ಫೆ.5ರಂದು ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ

ಬೆಳಗಾವಿ: ಸರ್ಕಾರದ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಫಲಾನುಭವಿಗಳ ಸಮಾವೇಶವನ್ನು ಫೆ.5 ರಂದು ನಗರದ ಸರ್ದಾರ್‌ ಪ್ರೌಢಶಾಲೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.   ನಗರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಸಮಾವೇಶ ನಡೆಸಲಾಗುವುದು. ಫಲಾನುಭವಿಗಳನ್ನು ಗುರುತಿಸಿ ಆಹ್ವಾನಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು …

Read More »

ಬಿಯರ್ ದರ ಮತ್ತೆ ಹೆಚ್ಚಳ, ಮದ್ಯ ಪ್ರಿಯರಿಗೆ ಆಘಾತ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಫೆಬ್ರವರಿ 2: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ (Karnataka government) ಮತ್ತೆ ಆಘಾತ ನೀಡಿದೆ. ಪದೇ ಪದೇ ದರ ಏರಿಕೆ ಮಾಡಿ ಜೇಬಿಗೆ ಕತ್ತರಿ ಹಾಕುತ್ತಿದ್ದು, ಕಿಸೆಯಲ್ಲಾ ಖಾಲಿಯಾದರೂ ಕಿಕ್ ಮಾತ್ರ ಏರದಂತಾಗಿದೆ.! ರಾಜ್ಯ ಸರ್ಕಾರ ಬಿಯರ್ (Beer) ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದೆ. ಅಬಕಾರಿ ಸುಂಕವನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಅಂದ್ರೆ ಶೇ 10 ರಷ್ಟು ಹೆಚ್ಚಿಸಿದೆ. ಇದರಿಂದಾಗಿ, ಬಿಯರ್ ಬಾಟಲ್ ಬೆಲೆ …

Read More »

ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ಮಯಾಂಕ್ ಅಗರ್ವಾಲ್‌ ತ್ರಿಪುರಾದಿಂದ ಬೆಂಗಳೂರಿಗೆ ಶಿಫ್ಟ್

ತ್ರಿಪುರಾದಿಂದ 6E525 ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನಲ್ಲೇ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮಯಾಂಕ್ ಅಗರ್ವಾಲ್ ಆರೋಗ್ಯದ ಬಗ್ಗೆ ಕರ್ನಾಟಕ ಕ್ರಿಕೆಟ್‌ ತಂಡದ ಮ್ಯಾನೇಜರ್ ರಮೇಶ್ ಪ್ರತಿಕ್ರಿಯಿಸಿದ್ದು, ಮಯಾಂಕ್ ಅರ್ಗವಾಲ್ ಅವರು ಅಪಾಯದಿಂದ ಪಾರಾಗಿದ್ದಾರೆ. ವಿಮಾನ ನಿಲ್ದಾಣದಿಂದ ಮನೆಗೆ ತೆರಳುತ್ತಿದ್ದು, ನಾಳೆ (ಫೆಬ್ರವರಿ 01) ಬೆಂಗಳೂರಿನಲ್ಲಿ ವೈದ್ಯರನ್ನ ಸಂಪರ್ಕಿಸಲಿದ್ದಾರೆ. ಥ್ರೋಟ್ ಇನ್ಪೇಕ್ಷನ್ ಆಗಿರುವ ಕಾರಣ ಅವರಿಗೆ ಮಾತನಾಡಲು ಆಗುತ್ತಿಲ್ಲ ಎಂದು ಮಾಹಿತಿ ನೀಡಿದರು.   …

Read More »

ರಸ್ತೆ ಮೇಲೆ ಮಲಗಿ ರೈತರ ಆಕ್ರೋಶ

ಬೆಳಗಾವಿ: ‘ಇಲ್ಲಿನ ಜೈ ಕಿಸಾನ್ ಸಗಟು ತರಕಾರಿ ಮಾರುಕಟ್ಟೆಯಲ್ಲಿ ಸ್ಥಳೀಯ ರೈತರ ಬದಲಿಗೆ, ಹೊರರಾಜ್ಯದ ದಲ್ಲಾಳಿ ಗಜ್ಜರಿ ಖರೀದಿಸಿ ಮೋಸ ಮಾಡಲಾಗುತ್ತಿದೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಾರುಕಟ್ಟೆ ಎದುರು ರಸ್ತೆಯಲ್ಲೇ ಮಲಗಿ ಮಂಗಳವಾರ ಪ್ರತಿಭಟನೆ ನಡೆಸಿದರು. ಮಾರುಕಟ್ಟೆ ಆವರಣದಲ್ಲಿ ಗಜ್ಜರಿ ಸುರಿದ ಆಕ್ರೋಶ ವ್ಯಕ್ತಪಡಿಸಿದ ರೈತರು, ‘ಬೆಳಗಾವಿ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಜ್ಜರಿ ಬೆಳೆಯಲಾಗುತ್ತಿದೆ. ಆದರೆ, ಇಲ್ಲಿನ ವರ್ತಕರು ಮಾರಾಟಕ್ಕಾಗಿ ಹೊರರಾಜ್ಯದಿಂದ …

Read More »

ಲೋಕಸಮರ: BJP ಘಟಕದಿಂದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ. ಲಿಸ್ಟ್‌ನಲ್ಲಿ ಯಾರೆಲ್ಲಾ ಇದ್ದಾರೆ?

2024ರ Loka Saba ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ BJP ಘಟಕದಿಂದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ.ರಾಜ್ಯ ಬಿಜೆಪಿ ಘಟಕದ ವತಿಯಿಂದ ಯಾವ್ಯಾವ ಕ್ಷೇತ್ರಕ್ಕೆ ಯಾರ್ಯಾರು ಅಭ್ಯರ್ಥಿಗಳಾಗಬೇಕು? ಅವರ Strength and Weakness ಕುರಿತ ವರದಿಯೊಂದಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೇ ಅಳೆದುತೂಗಿ ಪಟ್ಟಿ‌ ಸಿದ್ಧಪಡಿಸಿದ್ದು,‌ ಎಲ್ಲವೂ ಅಂದುಕೊಂಡಂತೆ ಆದ್ರೆ, ಫೆಬ್ರವರಿ ಮೊದಲ ವಾರದಲ್ಲಿ ಪಟ್ಟಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷರ ಕೈ ಸೇರಲಿದೆ. ಈಗಾಗಲೇ ಎರಡು …

Read More »

ನಿಮ್ಮ ಎಲುಬಿಲ್ಲದ ನಾಲಿಗೆಯನ್ನು ಹತೋಟಿಯಲ್ಲಿಟ್ಟುಕೊಳ್ಳಿ: ಸಿಎಂ ವಿರುದ್ಧ ಜೋಶಿ ಕೆಂಡ

ಬೆಂಗಳೂರು: ಸಿದ್ದರಾಮಯ್ಯನವರೇ, ನಿಮಗೂ ನಿಮ್ಮ ಪಕ್ಷಕ್ಕೂ ಯಾವ ಮಂಕು ಬಡಿದಿದೆಯೋ ತಿಳಿಯುತ್ತಿಲ್ಲ. ಸಂವಿಧಾನದ ಪರಮೋಚ್ಚ ಸ್ಥಾನದಲ್ಲಿರುವವರ ಬಗ್ಗೆ ಕಾಂಗ್ರೆಸ್ ಗೆ ಗೌರವವಿಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) …

Read More »

ಹನುಮ ಧ್ವಜಕ್ಕೆ ಅಪಮಾನ: ಬಿಜೆಪಿಯಿಂದ ನಾಳೆ ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರ ಹಿಂದೂ ವಿರೋಧ ನೀತಿ ಅನುಸರಿಸುತ್ತಿದ್ದು, ಕೆರಗೋಡಿನಲ್ಲಿ ಹನುಮಧ್ವಜ ಮತ್ತು ರಾಷ್ಟ್ರಧ್ವಜಕ್ಕೂ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಸೋಮವಾರ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.   ನಾಳೆ ಬೆಳಿಗ್ಗೆ 10 ಗಂಟೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮಧ್ವಜವನ್ನು ಕೆಳಕ್ಕಿಳಿಸಿ ಹರಿದಿರುವುದು ಖಂಡನೀಯ ಎಂದು …

Read More »