Breaking News

Uncategorized

ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ

ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದೆದುರು ಪ್ರತಿಭಟನೆ ಡಿಸಿ ಮೂಲಕ ಸಿಎಂ’ಗೆ ಮನವಿ ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಮೇಲೆ ಹೇರಲಾಗಿರುವ ಜಿಲ್ಲಾ ಪ್ರವೇಶ ನಿರ್ಬಂಧವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ, ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ …

Read More »

ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್‌ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅಂತಿಮ ನಮನ

ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್‌ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ ಶರೀರದ ಅಂತಿಮ‌ ದರ್ಶನ ಪಡೆದು, ಬಳಿಕ‌ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮೇಟಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಅಗಲಿದ ಆತ್ಮೀಯನಿಗೆ ಅಂತಿಮ ನಮನ ಸಲ್ಲಿಸಿದೆ. ಮೇಟಿಯವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬ ಸದಸ್ಯರು ಮತ್ತು ಬಂಧು ಬಳಗದವರಿಗೆ ಈ ದುಃಖ ಭರಿಸುವ ಶಕ್ತಿ ದೊರಕಲಿ.

Read More »

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಭಾಲ್ಕಿ ತಾಲೂಕಿನ ನೀಲಂನಹಳ್ಳಿ ತಾಂಡಾ ಹತ್ತಿರದ ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ನೆರೆಯ ತೆಲಂಗಾಣದ ನಾರಾಯಣಖೇಡ್ ತಾಲೂಕಿನ ಜಗನ್ನಾಥಪುರದ ರಾಚಪ್ಪ ರಾಮಚಂದ್ರಪ್ಪ ಬಿರಾದಾರ್ (51), ಚಾಲಕ ನವನಾಥ ಶರಣಪ್ಪ (25), ಯಲ್ಲವಾಯಿ ಗ್ರಾಮದ ನಾಗರಾಜು ಇಸ್ಟಯ್ಯಾ (38) ಸ್ಥಳದಲ್ಲಿಯೇ ಮೃತಪಟ್ಟರೆ, ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಜಗನ್ನಾಥಪುರಿಯ ಕಾಶಿನಾಥ ರಾಮಶೆಟ್ಟಿ (62) …

Read More »

ಕೇತಗಾನಗಳ್ಳಿ ಸರ್ಕಾರಿ ಜಮೀನು ಒತ್ತುವರಿ; 10 ದಿನಗಳಲ್ಲಿ ಒತ್ತುವರಿ ಕುರಿತು ವರದಿ ಸಲ್ಲಿಸಲು ಸೂಚಿಸಿದ ಹೈಕೋರ್ಟ್

ಬೆಂಗಳೂರು : ರಾಮನಗರದ ಕೇತಗಾನಹಳ್ಳಿಯ ವಿವಿಧ ಸರ್ವೇ ಸಂಖ್ಯೆಗಳಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಗೋಮಾಳ ಜಮೀನು ತೆರವಿಗೆ ಸಂಬಂಧಿಸಿದಂತೆ ಮುಂದಿನ 10 ದಿನಗಳಲ್ಲಿ ಸಂಪೂರ್ಣ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ ಮತ್ತವರ ಸಂಬಂಧಿಕರಿಂದ ಒತ್ತುವರಿಯಾಗಿರುವ ಜಮೀನು ತೆರವು ಮಾಡುವಂತೆ ಲೋಕಾಯುಕ್ತ ಆದೇಶವನ್ನು ಜಾರಿ ಮಾಡದ ಕ್ರಮವನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್​.ಆರ್. ಹಿರೇಮಠ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ …

Read More »

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಗೌರಿ ಹುಣ್ಣಿಮೆಯಂದು ಹಾಗೂ ಛಟ್ಟಿ ಅಮವಾಸ್ಯೆವರೆಗೆ ಪ್ರತಿ ಶುಕ್ರವಾರ, ಭಾನುವಾರ ಮತ್ತು ಮಂಗಳವಾರದಂದು ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನ ಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ. ಶೀಗಿ ಹುಣ್ಣಿಮೆಯಿಂದ ದೀಪಾವಳಿ ಅಮವಾಸೆಯವರೆಗಿನ ಅವಧಿಯಲ್ಲಿ ಮಾಡಲಾಗಿದ್ದ …

Read More »

ಸಮಾರಂಭದಲ್ಲಿ ಸುಮಾರು 5 ಲಕ್ಷ ಭಕ್ತಾದಳಿಗೆ ರೊಟ್ಟಿ ಪುರೈಕೆ.

ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಶ್ರೀ ಕೆರಿ ಸಿದ್ದೇಶ್ವರ ದೇವರ ಪೋವಳಿ ವಾಸ್ತು ಶಾಂತಿ ಮತ್ತು ಲಕ್ಷ ದೀಪೋತ್ಸವ ಕಾರ್ಯಕ್ರಮ ಭಕ್ತಾದಿಗಳಿಗೆ ಅನ್ಪ್ರಸಾದಕ್ಕಾಗಿ ಐನಾಪುರದ ಮನೆ ಮನೆಯಿಂದ ಏಳು ಲಕ್ಷ ರೊಟ್ಟಿ ಹಾಗೂ ವನ ಕಾಯಿ ಪಲ್ಯ ತೆಗೆದುಕೊಂಡು ಮಂದಿರಕ್ಕೆ ಆಗಮಿಸುತ್ತಿದ್ದರಿಂದ ಭಕ್ತಿಮಯ ವಾತಾವರಣ ವ್ಯಕ್ತವಾಗುತ್ತಿದೆ. ಕವಲಗುಡ್ಡದ ಸಿದ್ದಾಶ್ರಮ ಆಶೀರ್ವಾದ ಶ್ರೀ ಅಮರೇಶ್ವರ ಮಹಾರಾಜರ ರಿಂದ 28 ಅಕ್ಟೋಬರ್ ರಿಂದ ನೋವೆಂಬರ್ 7 ರವರಿಗೆ ಹತ್ತು ದಿನ ಪ್ರತಿ ದಿನ …

Read More »

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರ: ಮಾತಾ ಗಂಗಾದೇವಿ

ದಾವಣಗೆರೆ: ನಮ್ಮ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ ಎಂದು ಬಸವ ಧರ್ಮ ಪೀಠದ ಮಾತಾ ಗಂಗಾದೇವಿ ಪ್ರತ್ಯೇಕ ಲಿಂಗಾಯತ ಧರ್ಮದ ಧ್ವನಿ ಎತ್ತಿದರು. ನಗರದಲ್ಲಿಂದು ಮಾತನಾಡಿದ ಅವರು, ಜನವರಿ 11ರಿಂದ ಮೂರು ದಿನಗಳ ಕಾಲ ಕೂಡಲ ಸಂಗಮದಲ್ಲಿ ಬಸವ ಧರ್ಮ ಸಮಾವೇಶ ನಡೆಸಲಾಗುತ್ತದೆ. ಮೂರು ದಿನಗಳ ಕಾಲ ಒಂದೊಂದು ಕಾರ್ಯಕ್ರಮ ನಡೆಸಲಾಗುವುದು. ಇಂದು ದಾವಣಗೆರೆಯಲ್ಲಿ ಜಿಲ್ಲಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಬಸವ ಧರ್ಮದ ಜಾಗೃತಿಗಾಗಿ ಎಲ್ಲ ಕಡೆ ಸಮಾವೇಶ …

Read More »

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

ಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರು ಬಾಲಕಿಯರಿಗಾಗಿ ಹುಡುಕಾಟ ಮುಂದುವರೆದಿದೆ. ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿ ಹಾಗೂ ಓರ್ವ ಬಾಲಕನನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಲಕಿ ಆಫ್ರಿನ್​ (13) ಮೃತಪಟ್ಟಿದ್ದಾಳೆ. ಆಯಿಷಾ ಮೃತದೇಹ ನಿನ್ನೆಯೇ ಸಿಕ್ಕಿದ್ದು, ಹನಿ …

Read More »

ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ

ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದೆ. ನಂತರ ನಡೆದ ಪಥಸಂಚಲನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿ, ಕನ್ನಡದ ವೈಭವ, ಏಕತೆ ಮತ್ತು ಗೌರವವನ್ನು ಹೊಳೆಯುವ ರಾಜ್ಯೋತ್ಸವದ ಸಂದೇಶವನ್ನು ಜನತೆಗೆ ನೀಡಿದರು.   ಈ ವೇಳೆ ಬೆಳಗಾವಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಎಲ್ಲಾ ಪುರಸ್ಕೃತರನ್ನು ಸನ್ಮಾನಿಸಿ, ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. …

Read More »

ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ

ಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ತನ್ನ ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ವ್ಯಕ್ತಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಗುಂಡಿಮಾಳ ಗ್ರಾಮದ ನಂದಿನಿ ಹಾಗೂ ಈತನ ಪ್ರಿಯಕರ ದಿನಕರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ರಾಜಶೇಖರ್ ಎಂಬಾತನ ಪತ್ನಿ ನಂದಿನಿಯು ದಿನಕರ್ ಎಂಬಾತನ ವಿವಾಹೇತರ ಸಂಬಂಧ ಇರಿಸಿಕೊಂಡಿದ್ದಳು. …

Read More »