Breaking News

Uncategorized

ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ: ಹೆಚ್.ವಿಶ್ವನಾಥ್,

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಹೆಚ್.ಡಿ.ಕುಮಾರಸ್ವಾಮಿ ಪೆನ್ ಡ್ರೈವ್ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ ಎಂದು ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ, ಮಾಜಿ ಸಿಎಂ, ಮಾಜಿ ಪ್ರಧಾನಿಗಳ ಮಗ. ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದರು.

Read More »

ಬಜೆಟ್​ನಲ್ಲಿ ವಿವಿಧ ಜಿಲ್ಲೆಗಳನ್ನು ಕೇಂದ್ರೀಕರಿಸಿ ಘೋಷಣೆಯಾದ ಪ್ರಮುಖ ಅನುದಾನ,

ಮೈಸೂರು ಜಿಲ್ಲೆ: ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮ ಜಾರಿ. ಮೈಸೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸೈಕ್ಲಿಂಗ್ ವೆಲೋಡ್ರೋಮ್ ಸ್ಥಾಪನೆ. ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ …

Read More »

ಸಿದ್ದರಾಮಯ್ಯ ರಾಜ್ಯದ ಮಟ್ಟಿಗೆ ಇಂದು ತಮ್ಮ ದಾಖಲೆಯ 14ನೇ ಬಜೆಟ್​ ಮಂಡಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಜೆಟ್​ ಮಂಡಿಸಿದ್ದು ಮುಖ್ಯಾಂಶಗಳು ಹೀಗಿವೆ… 20% ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185%ಗೆ ಹೆಚ್ಚಳ ಮಾಡಲಾಗಿದೆ. ರಾಜ್ಯದ ಎಲ್ಲ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಆಯ್ದ ವಾಹನಗಳ ವರ್ಗಗಳಿಗೆ ವಿಧಿಸುವ ತೆರಿಗೆ ಪರಿಷ್ಕರಣೆ ಬಗ್ಗೆ ಸಿಎಂ ಪ್ರಸ್ತಾಪ ಮಾಡಿದ್ದಾರೆ. 2023-24ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ. ಈ …

Read More »

”ರಾಜ್ಯದಲ್ಲಿ 10,034 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 2 ಸಾವಿರ ಕೋಟಿಗೆ ಅನುದಾನ! ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ”ಪೊಲೀಸ್ ವಸತಿ ಗೃಹ- 2025 ಯೋಜನೆಯಡಿ ರಾಜ್ಯದಲ್ಲಿ 10,034 ವಸತಿ ಗೃಹಗಳನ್ನು ನಿರ್ಮಿಸಲು 2 ಸಾವಿರ ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ” ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಸದಸ್ಯರ ಧರಣಿ, ಗದ್ದಲದ ನಡುವೆ ಆರಂಭವಾದ ಪ್ರಶ್ನೋತ್ತರದ ಕಲಾಪದಲ್ಲಿ ಜೆಡಿಎಸ್ ಹಿರಿಯ ಸದಸ್ಯ ಹೆಚ್.ಡಿ. ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ”9524 ಪಿಸಿ ವಸತಿ ಗೃಹಗಳು, 510 ಪಿಎಸ್‍ಐ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ. …

Read More »

ಬೆಳಗಾವಿಯಲ್ಲಿ ಶತಕ ಬಾರಿಸಿದ ಟೊಮೆಟೋ, ಮೆಣಸಿನಕಾಯಿ ದರ

ಬೆಳಗಾವಿ: ರಾಜ್ಯದೆಲ್ಲೆಡೆ ಟೊಮೆಟೊ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲೂ ಟೊಮೆಟೊ ಮತ್ತು ಮೆಣಸಿನಕಾಯಿ ಬೆಲೆ ನೂರರ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿದೆ. ಒಂದೆಡೆ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಮಳೆರಾಯನ ಆಗಮನಕ್ಕಾಗಿ ರೈತರು ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ‌. ಮತ್ತೊಂದೆಡೆ ಟೊಮೆಟೋ, ಮೆಣಸಿನಕಾಯಿ ಬೆಲೆ ಏರಿಕೆಯಾಗಿರುವುದು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ. ಜುಲೈ ತಿಂಗಳ ಮೊದಲ ವಾರ ಮುಗಿಯುತ್ತ ಬಂದರೂ ಜಿಲ್ಲೆಯಲ್ಲಿ …

Read More »

ಗ್ಯಾರಂಟಿ ಯೋಜನೆ ನೀಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ: ಬಿಜೆಪಿ ಪ್ರತಿಭಟನೆ

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಫ್ರೀಡಂ ಪಾರ್ಕ್​ನಲ್ಲಿ ಒಂದು ದಿನದ ಧರಣಿ ನಡೆಸಿದ ಬಿಜೆಪಿಗರು, ಕಾಂಗ್ರೆಸ್​ ಗ್ಯಾರಂಟಿಗಳನ್ನು ಬೇಷರತ್ತಾಗಿ ಜಾರಿ ಮಾಡಬೇಕು ಎಂದು …

Read More »

ಮುಂಗಾರಿನಿಂದ ಜೋಗದಲ್ಲಿ ಜಲಸಿರಿ;

ಶಿವಮೊಗ್ಗ : ಜಿಲ್ಲೆಯಲ್ಲಿ ಮುಂಗಾರು ತಡವಾದರು ಸಹ ಸಣ್ಣದಾಗಿ ಪ್ರಾರಂಭಗೊಂಡಿದೆ. ಆದರೆ ನಿರೀಕ್ಷಿಸಿದಷ್ಟು ಪ್ರಮಾಣದಲ್ಲಿ ಮಳೆ ಬಾರದೆ ಇದ್ದರೂ ಸಹ ವರುಣನ ಆಗಮನ ಮಲೆನಾಡ ರೈತರಿಗೆ ತುಸು ನೆಮ್ಮದಿ ತರಿಸಿದೆ. ಇನ್ನು ಜಗತ್ ಪ್ರಸಿದ್ಧ ಜೋಗ ಜಲಪಾತಕ್ಕೆ ಮಳೆಯಿಂದ ಜೀವಕಳೆ ಬಂದಂತೆ ಆಗಿದೆ. ಮುಂಗಾರು ಸುಮಾರು 40 ದಿನ ತಡವಾದರೂ ಜೋಗದಲ್ಲಿ ಶರಾವತಿ ಬಳಕುತ್ತಾ ಮೇಲಿಂದ ಧುಮ್ಮಿಕ್ಕುತ್ತಿದ್ದಾಳೆ. ರಾಜಾ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಕವಲುಗಳಲ್ಲಿ 960 ಅಡಿ ಎತ್ತರದಿಂದ …

Read More »

ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ ಎಂದು ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವರು, ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ ಎಂದು ತಿಳಿಸಿದ್ದಾರೆ.     ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಜೋಶಿ …

Read More »

ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿ

ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾದ ಘಟನೆ ನಗರದ ನೇಕಾರನಗರದ ಬಸವೇಶ್ವರ ಸರ್ಕಲ್ ಬಳಿ‌ ಇಂದು‌ ಮುಂಜಾನೆ ನಡೆದಿದೆ‌. ಕೊಲೆಯಾದ ಮಹಿಳೆ ಸುಧಾ (೨೪) ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ ಹಿರೇಮಠ (೨೮) ಎಂಬಾತನೇ ಕುಡಿದ ಮತ್ತಿನಲ್ಲಿಯೇ ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಿನ ಜಾವ ೧೨.೩೦ ರಿಂದ ಬೆಳಿಗ್ಗೆ ೯.೩೦ ರ ಮಧ್ಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ …

Read More »

ಪ್ರತಿಪಕ್ಷ ನಾಯಕನಿಲ್ಲದೆ ಅಧಿವೇಶನ ‌ನಡೆಸಬೇಕೇ?: ಬಿಜೆಪಿಗೆ ದಿನೇಶ್​ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಒಂದೂವರೆ ತಿಂಗಳು ಕಳೆದಿದ್ದರೂ ಪ್ರತಿಪಕ್ಷ ನಾಯಕರ ಆಯ್ಕೆ ಮಾಡದ ಬಿಜೆಪಿ ಕ್ರಮವನ್ನು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ತೀವ್ರವಾಗಿ ಟೀಕಿಸಿದ್ದಾರೆ.   ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರದ ಪ್ರಥಮ ಬಜೆಟ್ ಅಧಿವೇಶನ ನಾಳೆಯಿಂದ ಪ್ರಾರಂಭವಾಗಲಿದೆ.‌ ಅಧಿವೇಶನ ಶುರುವಾಗುತ್ತಿದ್ದರೂ ರಾಜ್ಯದ ಅಧಿಕೃತ ಪ್ರತಿ ಪಕ್ಷವಾದ ಬಿಜೆಪಿ ಪ್ರತಿಪಕ್ಷ ನಾಯಕನನ್ನೇ ಆಯ್ಕೆ ಮಾಡಿಲ್ಲ. ಒಂದು ಸೋಲು ಪ್ರತಿಪಕ್ಷ ನಾಯಕನನ್ನೂ ಆಯ್ಕೆ ಮಾಡದಷ್ಟು ಬಿಜೆಪಿ ನಾಯಕರಿಗೆ ರೇಜಿಗೆ …

Read More »