ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು, ಸಮಾಜದ ಎಲ್ಲ ಉಪ ಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್ 10 ರಂದು ನಿಪ್ಪಾಣಿಯಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಬೇಡಿಕೆ ಈಡೇರಿಸುವಂತೆ …
Read More »ಸಿಂಥೆಟಿಕ್ ರಿದಮ್ ಇಂಡಿಯನ್ ಮೃದಂಗ ಮತ್ತು ತಬಲಾವನ್ನು ಸಿಂಥೆಟಿಕ್ ಡ್ರಮ್ ಹೆಡ್‌ಗಳನ್ನು ಬಳಸಿ ತಯಾರಿಸಲಾಗುತ್ತಿದೆ
ಬೆಂಗಳೂರು: ನಮ್ಮ ದೈನಂದಿನ ಜೀವನದಲ್ಲಿ ಸಂಗೀತ ಒಂದು ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿದೆ. ಅನಾದಿ ಕಾಲದಿಂದಲೂ ರಾಗ, ತಾಳ, ಲಯ ಬದ್ಧ ನಾದವು ವಿಶ್ವದ ಎಲ್ಲಾ ಸಂಸ್ಕೃತಿಗಳಲ್ಲಿ, ಸಂಗೀತ ಪ್ರಾಕಾರಗಳಲ್ಲಿ ತನ್ನದೇ ಆದ ಛಾಪು ಮೂಡಿಸುತ್ತ ಬಂದಿದೆ. ಅಲ್ಲದೇ ಹಲವು ಕಾಯಿಲೆಗಳು ಶೀಘ್ರವಾಗಿ ಗುಣವಾಗಲು ಇದು ಸಹಕಾರಿಯಾಗಿದೆ ಎನ್ನುವುದು ಹಲವು ಸಂಶೋಧನೆಗಳಿಂದ ದೃಢಪಟ್ಟಿದೆ. ಸಂಗೀತವು ಪ್ರೀತಿ ಮತ್ತು ಸಂತೋಷದ ಸಾರ್ವತ್ರಿಕ ಭಾಷೆಯಾಗಿದ್ದು, ಇದಕ್ಕೆ ಅಪವಾದ ಎಂಬಂತೆ ವಾದ್ಯಗಳಿಗೆ ಪ್ರಾಣಿ ಚರ್ಮವನ್ನು ಬಳಸುತ್ತಿದ್ದಾರೆ. ಆದರೆ, …
Read More »ಕೇಂದ್ರ, ರಾಜ್ಯ ಸರ್ಕಾರಗಳ ಅಣುಕು ಶವಯಾತ್ರೆ.
ಮಂಡ್ಯ : ಸಕ್ಕರೆ ನಗರಿ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ಜೀವನಾಡಿ ಕೆ.ಆರ್.ಎಸ್ ಜಲಾಶಯದಿಂದ ತಮಿಳುನಾಡಿಗೆ ನಿತ್ಯ ನೀರು ಹರಿಸುತ್ತಿರೋದು ಅನ್ನದಾತನ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನ ವಿರೋಧಿಸಿ ಜಿಲ್ಲಾದ್ಯಂತ ಕಾವೇರಿ ಕಿಚ್ಚು ಹೆಚ್ಚಾಗ್ತಾನೇ ಇದೆ. ಆದ್ರೆ ಸರ್ಕಾರ ಮಾತ್ರ ಮೌನ ವಹಿಸಿದ್ದು, ಸರ್ಕಾರದ ಕಣ್ಣು ತೆರೆಸಲು ವಿಭಿನ್ನ ರೀತಿಯಲ್ಲಿ ಹೋರಾಟಗಳನ್ನ ಮಾಡಲಾಗ್ತಿದೆ. ಇಷ್ಟಕ್ಕೂ ಬಗ್ಗದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು …
Read More »ಕೃಷ್ಣ ಜನ್ಮಾಷ್ಟಮಿ ನಿಯಮ ಜಾರಿ: ಮೊಸರು ಗಡಿಗೆ ಆಚರಣೆಗೆ ಸಿಸಿಟಿವಿ.. ಮಫ್ತಿಯಲ್ಲಿ ಪೊಲೀಸರ ಕಣ್ಗಾವಲು
ಮುಂಬೈ: ಕೃಷ್ಣಾ ಎಂದಾಗ ಅವನು ಗೋಪಿಕೆಯರೊಂದಿಗೆ ಮಾಡುತ್ತಿದ್ದ ತುಂಟಾಟಗಳು ನೆನಪಿಗೆ ಬರುತ್ತವೆ. ಆದರೆ ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆಯನ್ನು ಆಚರಿಸುವಾಗ ಕುಚೇಷ್ಟೆಗಳನ್ನು ಮಾಡಿ ಅನುಚಿತವಾಗಿ ವರ್ತಿಸಿದರೆ ಅಂತಹವರ ಮೇಲೆ ನಿಗಾ ಇಡಲು ಮುಂಬೈ ಪೊಲೀಸರು ನಿರ್ಧರಿಸಿದ್ದಾರೆ. ಇದಕ್ಕಾಗಿ ಮಫ್ತಿಯಲ್ಲಿ ಪೊಲಿಸರು ಜನರ ಜೊತೆಯೇ ಇದ್ದು, ಆ ರೀತಿ ನಡೆದುಕೊಂಡದ್ದು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲು ಸಿದ್ಧರಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಬಣ್ಣದ ನೀರನ್ನು ಅಜಾಗರೂಕತೆಯಿಂದ ಎಸೆಯುವುದು ಮತ್ತು ಮೊಸರು ಗಡಿಗೆ ಹಬ್ಬದ ಸಮಯದಲ್ಲಿ ಮಹಿಳೆಯರಿಗೆ …
Read More »ದಿ. ಜಯಶ್ರೀ ಚಂದ್ರಶೇಖರ ಕೊಣ್ಣೂರ ಇವರ ಸ್ಮರಣಾರ್ಥ ನೂತನ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭ
ಗೋಕಾಕ : ಖಾತ್ಯ ಉದ್ಯಮಿ ಚಂದ್ರಶೇಖರ ಕೊಣ್ಣೂರು ಅವರ ಧರ್ಮಪತ್ನಿ ಅವರ ದಿ. ಜಯಶ್ರೀ ಚಂದ್ರಶೇಖರ ಕೊಣ್ಣೂರು ಅವರ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಿಸಿರುವ ನೂತನ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭ ನೆರವೇರಿತು. ಮರಡಿ ಶಿವಾಪುರದ ಹೊರವಲಯದಲ್ಲಿ ನಿರ್ಮಿಸಿರುವ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆಯನ್ನು ಮಠಾಧೀಶರು ಹಾಗೂ ಗಣ್ಯರು ನೆರವೇರಿಸಿದರು. ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿರುವ ಸುಕ್ಷೇತ್ರ ಇಂಚಲ ಮಠದ ಪರಮಪೂಜ್ಯ ಶ್ರೀ ಡಾ ಶಿವಾನಂದ …
Read More »ಸ್ವಾಮೀಜಿ ನಿರ್ಧಾರದಿಂದ ಶಿಕ್ಷಕರ ತವರೂರಾಗಿ ಮಾರ್ಪಟ್ಟಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ಶಿಕ್ಷಕರನ್ನು ಹೊಂದಿರುವ ಹೆಗ್ಗಳಿಕೆಯನ್ನು ಈ ಗ್ರಾಮ ಪಡೆದುಕೊಂಡಿದೆ.
ಬೆಳಗಾವಿ: ಅದು ಶಿಕ್ಷಣ ವಂಚಿತ ಕುಗ್ರಾಮವಾಗಿತ್ತು. ಆದರೆ ಆ ಸ್ವಾಮೀಜಿ ಅಂದು ತೆಗೆದುಕೊಂಡ ನಿರ್ಧಾರದಿಂದ ಈಗ ಇಡೀ ಗ್ರಾಮದ ಚಿತ್ರಣವೇ ಬದಲಾಗಿದೆ. ಶಿಕ್ಷಕರ ತವರೂರಾಗಿ ಮಾರ್ಪಟ್ಟಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ಶಿಕ್ಷಕರನ್ನು ಹೊಂದಿರುವ ಹೆಗ್ಗಳಿಕೆಯನ್ನು ಈ ಗ್ರಾಮ ಪಡೆದುಕೊಂಡಿದೆ. ಶಿಕ್ಷಕರ ದಿನಾಚರಣೆ ನಿಮಿತ್ತ ಈ ವಿಶೇಷ ವರದಿ ನಿಮಗಾಗಿ. ಹೌದು, ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಇಂಚಿಂಚಿಗೂ ಶಿಕ್ಷಕರು ಸಿಗುತ್ತಾರೆ. ರಾಜ್ಯದ ವಿವಿಧೆಡೆ ಐನೂರಕ್ಕೂ ಹೆಚ್ಚು ಶಿಕ್ಷಕರು ಅಕ್ಷರ ಕಲಿಸುವ ಮೂಲಕ …
Read More »ಚಿಕ್ಕೋಡಿ ಫುಡ್ ಪಾಯಿಸನ್ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೇ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಆಗಸ್ಟ್ 28ರಂದು ಫುಡ್ ಪಾಯಿಸನ್ ಪ್ರಕರಣದಲ್ಲಿ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕೋಡಿ ಪಟ್ಟಣದ ಶಬ್ಬಿರ್ ಮಕಾಂದಾರ (58) ಮೃತರು. ಕಳೆದ ತಿಂಗಳು ಆಗಸ್ಟ್ 28 ರಂದು ಹಿರೇಕೋಡಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭೋಜನದ ಬಳಿಕ 100ಕ್ಕೂ ಹೆಚ್ಚು ಜನ ವಾಂತಿ ಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. …
Read More »ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಗೋಕಾಕ* : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ …
Read More »ಬೆಂಗಳೂರಿನಲ್ಲಿ ಮತ್ತೆ ಆರಂಭವಾಗಲಿದೆ ಡಬ್ಬಲ್ ಡೆಕ್ಕರ್ ಬಸ್ ಜಮಾನ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಬ್ಬಲ್ ಡೆಕ್ಕರ್ ಬಸ್ಗಳ ಜಮಾನ ಮತ್ತೆ ಶುರುವಾಗಲಿದೆ. ಪ್ರಾಯೋಗಿಕವಾಗಿ ಐದು ಮಾರ್ಗದಲ್ಲಿ ಡಬ್ಬಲ್ ಡೆಕ್ಕರ್ ಬಸ್ಗಳು ಸಂಚರಿಸಲಿವೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ಅನುಸಾರವಾಗಿ ಬಸ್ ಸಂಖ್ಯೆ ಹೆಚ್ಚಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕಲಾಸಿಪಾಳ್ಯ ಟಿಟಿಎಂಸಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಡಬ್ಬಲ್ ಡೆಕ್ಕರ್ ಬಸ್ಗಳಿಗೆ ಟೆಂಡರ್ ಕರೆಯಲಾಗಿದೆ. ಒಂದು ವಾರದಲ್ಲಿ ಟೆಂಡರ್ ಪೂರ್ಣವಾಗಲಿದೆ. ಮೊದಲ ಹಂತವಾಗಿ 5 ಡಬ್ಬಲ್ ಡೆಕ್ಕರ್ ಬಸ್ಗಳನ್ನು ರಸ್ತೆಗಿಳಿಸಲಾಗುತ್ತದೆ. ಇದಕ್ಕಾಗಿ …
Read More »ಬೈಕ್ ಸವಾರರ ಮೇಲೆ ನರಿ ದಾಳಿ ಬೆಳಗಾವಿಯ ಶಾಸ್ತ್ರೀ ನಗರದಲ್ಲಿ ನರಿ ಪ್ರತ್ಯಕ್ಷ
ಬೆಳಗಾವಿ- ಇತ್ತೀಚಿಗೆ ಬೆಳಗಾವಿಯ ಶಾಸ್ತ್ರೀ ನಗರದಲ್ಲಿ ನರಿ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಬೆಳಗಾವಿಯ ವೀರಭದ್ರ ನಗರದಲ್ಲಿ ನರಿ ದಾಳಿ ಮಾಡಿದ್ದು ಇಬ್ಬರು ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಇಬ್ಬರು ಬೈಕ್ ಸವಾರರ ಮೇಲೆ ನರಿಯೊಂದು ದಾಳಿ ಮಾಡಿದ್ದು ಕಾಲಿಗೆ ಕಚ್ಚಿ ಪರಾರಿಯಾಗಿದೆ.ನರಿ ದಾಳಿಯಿಂದ ಅಲ್ಪ ಗಾಯಗೊಂಡ ಇಬ್ಬರು ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗಿದ್ದಾರೆ. ರಾತ್ರಿ ಹೊತ್ತು ವೀರಭದ್ರ ನಗರದಲ್ಲಿ ಇಬ್ಬರು ಬೈಕ್ ಮೇಲೆ ಹೋಗುತ್ತಿರುವಾಗ …
Read More »