Breaking News

Uncategorized

ಮೋದಿ ಜನಪ್ರಿಯತೆ ಮಂಕಾಗಿದೆ, ಕರ್ನಾಟಕದಲ್ಲಿ ಮೋದಿ ವರ್ಚಸ್ಸು ನಂಬಿದ್ದ ಬಿಜೆಪಿ ಧೂಳಿಪಟ ಆಯ್ತು: ಸಿಎಂ ಸಿದ್ದರಾಮಯ್ಯ

ಚಿಕ್ಕೋಡಿ: ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಐದು ಭರವಸೆಗಳನ್ನು ನೀಡಿದ್ದೇವೆ. ಅದರಲ್ಲಿ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡಲು ನಾವು ಘೋಷಣೆ ಮಾಡಿದ್ದೀವಿ. ಆದರೆ ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕೇಳಿದರೆ ಅಕ್ಕಿ ಕೊಡುವುದಕ್ಕೆ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಸಾರ್ವತ್ರಿಕ ಲೋಕಸಭಾ …

Read More »

ಪ್ರಮಾಣದ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಎಲ್ಲಿಯೂ ಸಿಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಎಲ್ಲ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ ಒಂದರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.29 ಲಕ್ಷ ಮೆಟ್ರಿಕ್ ಟನ್ ಎಲ್ಲಿಯೂ ದೊರೆಯುತ್ತಿಲ್ಲ ಎಂದರು. ವಿವಿಧ ರಾಜ್ಯದವರಿಂದ …

Read More »

ಮಗುವಿನಿಂದ ಮತ್ತೊಂದು ಮಗುವಿನ ಮೇಲೆ ಹಲ್ಲೆ: ಬೆಂಗಳೂರಿನ ಡೇ ಕೇರ್ ಸೆಂಟರ್​ಗೆ ಪೊಲೀಸ್, ಮಕ್ಕಳ ಹಕ್ಕುಗಳ ಆಯೋಗದಿಂದ ನೋಟೀಸ್

ಬೆಂಗಳೂರು: ಶಿಶುಪಾಲ‌ನಾ ಕೇಂದ್ರವೊಂದರಲ್ಲಿ ಮೂರು ವರ್ಷದ ಬಾಲಕ 2 ವರ್ಷದ ಬಾಲಕಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಬೇಬಿ ಕೇರ್ ಸೆಂಟರ್​ಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸುಬ್ರಮಣ್ಯನಗರ ಪೊಲೀಸರು ನೋಟಿಸ್​ ನೀಡಿದ್ದಾರೆ‌. ಅಲ್ಲದೆ‌ ರಾಜ್ಯ ಮಕ್ಕಳ‌ ಹಕ್ಕುಗಳ ಆಯೋಗವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಎಷ್ಟು ವರ್ಷಗಳಿಂದ ಡೇ ಕೇರ್ ನಡೆಸುತ್ತಿದ್ದೀರಾ? ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದುಕೊಂಡಿದ್ದೀರಾ? ಮಕ್ಕಳ ಸುರಕ್ಷತೆಗೆ ಏನೆಲ್ಲಾ ಕ್ರಮ ಕೈಗೊಂಡಿದ್ದೀರಾ? …

Read More »

ಬೆಳೆದು ನಿಂತ ಮಗನ ಜೀವ ತೆಗೆದುತಾಯಿ

ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ತಾಯಿ ಮತ್ತು ಬಾಲಾಪರಾಧಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಚಿಕ್ಕೋಡಿ: ತಾಯಿಗಿಂತ ಮಿಗಿಲಾದ ದೇವರಿಲ್ಲ ಅಂತಾರೆ. ಆದರೆ, ಇಲ್ಲಿ ತಾಯಿಯೇ ಬೆಳೆದು ನಿಂತ ಮಗನ ಜೀವ ತೆಗೆದು ಇದೀಗ ಜೈಲುಪಾಲಾಗಿರುವ ವಿಲಕ್ಷಣ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದ ನಿವಾಸಿ ಹರಿಪ್ರಸಾದ್ ಬೋಸ್ಲೆ (21) ಕೊಲೆಯಾದ ಯುವಕ. ಸುಧಾ ಬೋಸ್ಲೆ ಜೈಲುಪಾಲಾದ ತಾಯಿ. ಕೊಲೆಗೆ ಸಹಕರಿಸಿದ …

Read More »

ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದ ಪತಿ

ಚಿಕ್ಕೋಡಿ: ಪತಿಯು ತನ್ನ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಹಾರೂಗೇರಿ ಪಟ್ಟಣದಲ್ಲಿ ಗುರುವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ರುಕ್ಮವ್ವ ಉಪ್ಪಾರ (29) ಗಂಡನಿಂದಲೇ ಕೊಲೆಯಾಗಿದ್ದಾರೆ.   ಆರೋಪಿಯ ಹೆಸರು ಮಲ್ಲಪ್ಪ ಉಪ್ಪಾರ. ಕೊಲೆಗೆ ಸಾಂಸಾರಿಕ ವೈಮನಸ್ಸು ಕಾರಣವೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಲ್ಲಪ್ಪ ಸದಾಶಿವ ಉಪ್ಪಾರನನ್ನು ಬಂಧಿಸಲಾಗಿದೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ …

Read More »

ಮಹಿಳಾ ವಿವಿಗೆ 5 ಲಕ್ಷಕ್ಕೂ ಹೆಚ್ಚು ವಿದ್ಯುತ್ ಬಿಲ್

ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವೂ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದು, ಈ ಬಾರಿ 5 ಲಕ್ಷಕ್ಕೂ ಅಧಿಕ ಬಿಲ್ ಬಂದಿದ್ದು, ಬಿಲ್ ಕಂಡು ಸ್ವತಃ ಕುಲಪತಿಗಳೇ ಶಾಕ್‌ಗೆ ಒಳಗಾಗಿದ್ದಾರೆ. ದೊಡ್ಡ ಕ್ಯಾಂಪಸ್ ಹೊಂದಿರುವ ಮಹಿಳಾ ವಿಶ್ವವಿದ್ಯಾಲಯದ ಏಪ್ರಿಲ್ ತಿಂಗಳ ವಿದ್ಯುತ್ ಬಿಲ್ 3,39,313 ರೂ. ಬಂದಿತ್ತು. ಮೇ ತಿಂಗಳ ಬಿಲ್ 5,06,302 ಲಕ್ಷ ರೂ. ಬಿಲ್ ಬಂದಿದೆ. ವಿವಿಯಲ್ಲಿ ಸೋಲಾರ್ ಸೌಲಭ್ಯವಿದ್ದರೂ ವಿದ್ಯುತ್ ಬಿಲ್ ಮಿತಿಮೀರಿ ಬಂದಿರುವುದು ವಿವಿ ಆಡಳಿತ ಮಂಡಳಿ …

Read More »

‘ನನ್ನ ಪತಿ ಸಾವಿಗೆ ನ್ಯಾಯ ಸಿಗಬೇಕು’: ಮೃತ ಹೆಡ್ ಕಾನ್ಸ್​ಟೇಬಲ್ ಪತ್ನಿ ನಿರ್ಮಲಾ ಆಗ್ರಹ

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು‌ ಹೋಗಿದ್ದ ಹೆಡ್ ಕಾನ್ಸ್​ಟೇಬಲ್ ಸಾವು ಪ್ರಕರಣಕ್ಕೆ ಸಂಬಂಧ ಆರೋಪಿ ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ಧಾರೆ. ಸಿದ್ದಣ್ಣ ಬಂಧಿತ ಆರೋಪಿ. ಗುರುವಾರ ಮಧ್ಯರಾತ್ರಿ ಹೆಡ್‌ ಕಾನ್ಸ್‌ಟೇಬಲ್ ಮೈಸೂರು ಅಲಿಯಾಸ್ ಮಯೂರ್ ಚವ್ಹಾಣ್ (51) ಅಕ್ರಮ ಮರಳು ಸಾಗಾಟದ ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದರು. ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆ ಯಜಮಾನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ಪತಿ ಸಾವಿಗೆ …

Read More »

ಪಠ್ಯ ಪರಿಷ್ಕರಣೆ ಬಗ್ಗೆ ಬೊಮ್ಮಾಯಿ, ಸುನೀಲ್ ಕುಮಾರ್, ತೇಜಸ್ವಿ ಸೂರ್ಯ ಕಿಡಿ

ಬೆಂಗಳೂರು: ”ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ್ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ”ರಾಜ್ಯದಲ್ಲಿ ಕಾಂಗ್ರೆಸ್ …

Read More »

ಕೌಟುಂಬಿಕ ಕಲಹದಿಂದ ಗಾಯಗೊಂಡಿದ್ದ ಅತ್ತೆ ಸಾವು.. ಸೊಸೆ ವಿರುದ್ಧ ಕೊಲೆ ಕೇಸ್ ದಾಖಲು

ಬೆಳಗಾವಿ : ಕೌಟುಂಬಿಕ ಕಲಹದಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯ ಸಾವಿಗೆ ಸೊಸೆ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸ್ವತಃ ಮೃತ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಬೈಲಹೊಂಗಲ ಪಟ್ಟಣದ ಮಹೆಬೂಬಿ ಯಾಕೂಶಿ (53) ಎಂಬವರು ನಿನ್ನೆ(ಮಂಗಳವಾರ) ಮೃತಪಟ್ಟಿದ್ದರು. ಈ ಸಂಬಂಧ ಸೊಸೆ ಮೆಹರೂನಿ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸುಬಾನ್​ ಯಾಕೂಶಿ ಪೊಲೀಸರಿಗೆ ದೂರು ನೀಡಿದ್ದಾರೆ. …

Read More »

ಲೈಂಗಿಕ ಕಿರುಕುಳ ಆರೋಪ ಪ್ರಾಂಶುಪಾಲ ಅಮಾನತು

ಬಳ್ಳಾರಿ: ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಎಎಸ್ ಎಂ ಮಹಿಳಾ ಕಾಲೇಜಿನ ಪ್ರಾಂಶುಪಾಲ ಶರಣಪ್ಪ ಅವರನ್ನು ವೀರಶೈವ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ, ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಕಾಲೇಜು ಉಪನ್ಯಾಸಕಿ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದ್ದರು. ಈ ಕುರಿತು ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ …

Read More »