ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬೇಲೂರಿನಲ್ಲಿ ನಡೆದಿದೆ. ಶಿಬಾರಗಟ್ಟಿ ಗ್ರಾಮದ ನಿಜಗುಣಿ ಗಿರಿಯಪ್ಪನವರ (28) ಎಂಬುವವರೇ ಸಾವಿಗೀಡಾದ ಲೈನ್‌ಮ್ಯಾನ್. ಇಂದು ಬೇಲೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಜಗುಣಿ ಅವರಿಗೆ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದಾರೆ. ಸದ್ಯ ನಿಜಗುಣಿ ಅವರ ಶವವನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿನ ಬಾಡಿಗೆ ಮನೆಗಳಲ್ಲಿ ವಾಸಿಸುವವರೂ ಸೇರಿದಂತೆ ಎಲ್ಲ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಿಂದ ಬಾಡಿಗೆದಾರರು ವಂಚಿತರಾಗಲಿದ್ದಾರೆ ಎಂಬ ಆಪಾದನೆ ಕೇಳಿ ಬಂದ ಹಿನ್ನೆಲೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರೂ ಸೇರಿದಂತೆ ಗೃಹಬಳಕೆಯ ಎಲ್ಲರಿಗೂ ಗೃಹಜ್ಯೋತಿ ಯೋಜನೆಯ ಲಾಭ ಸಿಗಲಿದೆ. ಸರ್ಕಾರ ಘೋಷಿಸಿದಂತೆ 200 ಯೂನಿಟ್ವರೆಗೆ ಬಾಡಿಗೆದಾರರೂ ಬಿಲ್ ಪಾವತಿ …
Read More »ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿರುವುದು ಅತ್ಯಂತ ನೋವು ತಂದಿದೆ.:ಸಚಿವ ಬಿ ನಾಗೇಂದ್ರ
ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿರುವುದು ಅತ್ಯಂತ ನೋವು ತಂದಿದೆ. ವಿಜಯನಗರ ಜಿಲ್ಲೆಯ ಜನಪ್ರತಿನಿಧಿಗಳು ಮತ್ತೆ ಒಂದು ಮಾಡೋಕೆ ಒಪ್ಪಿದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಯುವಜನ ಸೇವಾ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರು ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ವಿಶ್ವ ಪ್ರಸಿದ್ಧ ಹಂಪಿ, ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇರಿದಂತೆ ಇತರ ಪ್ರೇಕ್ಷಣೀಯ ಸ್ಥಳಗಳು ನಮ್ಮ ಜಿಲ್ಲೆಯಿಂದ …
Read More »ನಮ್ಮ ಸಮಾಜಕ್ಕೆ ಒತ್ತು ಕೊಡದೇ ಇರುವುದರಿಂದ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆ ಎಂದು ವಿನಯ್ ಕುಲಕರ್ಣಿ
ಬೆಳಗಾವಿ : ರಾಜ್ಯದಲ್ಲಿ ವಿರೇಂದ್ರ ಪಾಟೀಲರ ನಂತರ ಇಷ್ಟೊಂದು ದೊಡ್ಡ ಬಹುಮತ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದೆ. ಹೀಗಾಗಿ ಹಿಂದೆ ಮಾಡಿದ ತಪ್ಪು ಮತ್ತೆ ಪುನರಾವರ್ತನೆ ಆಗಬಾರದು ಎಂದು ತಮ್ಮದೇ ಪಕ್ಷದ ನಾಯಕರಿಗೆ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಕಳೆದ ಚುನಾವಣೆಗಳಲ್ಲಿ ನಮ್ಮ ಸಮಾಜದಿಂದ ಕಾಂಗ್ರೆಸ್ ಪಕ್ಷಕ್ಕೆ ಮತಗಳು ಕಡಿಮೆ ಸಂಖ್ಯೆಯಲ್ಲಿ ಬರುತ್ತಿದ್ದವು. ಆದರೆ …
Read More »ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ವಿದೇಶಿ ಬೆಂಬಲ : ಶೋಭಾ ಕರಂದ್ಲಾಜೆ
ಉಡುಪಿ: ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ವಿದೇಶಿ ಬೆಂಬಲ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ”ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳಿಗೆ ವಿದೇಶಿ ಫಂಡಿಂಗ್ ಇದ್ದೇ ಇರುತ್ತದೆ. ಪ್ರತಿಭಟನೆಗೆ ಬೆಂಬಲ ನೀಡುತ್ತಿರುವ ವಿದೇಶಿ ವ್ಯಕ್ತಿಯು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ದೇಶವನ್ನು …
Read More »ಪತಿಯ ಆಯಸ್ಸು ವೃದ್ಧಿಗಾಗಿ ಕಾರವಾರದಲ್ಲಿ ವಟ ಸಾವಿತ್ರಿ ವ್ರತಾಚರಣೆ
ಭರತಖಂಡದಲ್ಲಿ ಪ್ರಸಿದ್ಧ ಪತಿವ್ರತೆಯರಲ್ಲಿ ಸಾವಿತ್ರಿ ಆದರ್ಶಪ್ರಾಯಳು. ಸತ್ಯವಾನ್ ಸಾವಿತ್ರಿಯನ್ನು ಸೌಭಾಗ್ಯದ ಪ್ರತೀಕವೆಂದೇ ಪರಿಗಣಿಸಲಾಗುತ್ತದೆ. ಇಂದಿಗೂ ಹೆಚ್ಚಿನ ಮಹಿಳೆಯರು ವಟ ಸಾವಿತ್ರಿ ವ್ರತವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ಶನಿವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರು ವಟ ಸಾವಿತ್ರಿ ವ್ರತವನ್ನು ಆಚರಿಸಿದ್ದಾರೆ. ಪತಿಯ ಆಯುಷ್ಯ ಮತ್ತು ಆರೋಗ್ಯಕ್ಕಾಗಿ ಅವರು ಪ್ರಾರ್ಥಿಸಿದರು. ಜೇಷ್ಠ ಹುಣ್ಣಿಮೆಯ ದಿನ ಕಾರವಾರದಲ್ಲಿ ಸ್ತ್ರೀಯರು ವಟ ಸಾವಿತ್ರಿ ವ್ರತವನ್ನು ಆಚರಿಸಿದರು. ಬೆಳಗ್ಗೆಯಿಂದಲೇ ಕಾರವಾರದ ಸುತ್ತಮುತ್ತಲ ಆಲದ ಮರಗಳ ಸಮೀಪ …
Read More »ಪಕ್ಷದ್ರೋಹ ಮಾಡಿದವರನ್ನು ಕ್ಷಮಿಸುವುದಿಲ್ಲ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ಕಾಂಗ್ರೆಸ್‌ನಲ್ಲಿದ್ದು ಪಕ್ಷದ್ರೋಹ ಮಾಡಿದವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ತಾಲೂಕು ಕಚೇರಿಯಲ್ಲಿ ನೂತನ ಶಾಸಕರ ಕಚೇರಿ ಪೂಜೆ ಹಮ್ಮಿಕೊಂಡಿದ್ದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಇದ್ದುಕೊಂಡು ಪಕ್ಷದ್ರೋಹ ಮಾಡಿದವರನ್ನು ನಾನು ಎಂದಿಗೂ ಕ್ಷಮಿಸುವುದಿಲ್ಲ ಎಂದರು. ಈ ಹಿಂದೆ ಇದ್ದ ಶಾಸಕರು ಯಾವುದೇ ಫೈಲ್ ಬಂದ್ರೂ ಸಹ ಜಿಲ್ಲಾಧಿಕಾರಿಗಳ ಬಳಿ ತಡೆ ಹಿಡಿಯುತ್ತಿದ್ದರು. ಆದರೆ ನನಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟು …
Read More »ಕ್ಷುಲ್ಲಕ ಕಾರಣಕ್ಕೆ ಮಗನನ್ನೇ ಕೊಂದು ಹಾಕಿದ ಚಿಕ್ಕಪ್ಪ!
ಬೆಂಗಳೂರು : ಕಳೆದ ಎರಡ್ಮೂರು ದಿನಗಳಿಂದ ರಾಜ್ಯದ ರಾಜಧಾನಿಯಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ ರಾತ್ರಿ ನಗರದಲ್ಲಿ ಮತ್ತೊಂದು ಹತ್ಯೆಯಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಗನನ್ನೇ ಚಿಕ್ಕಪ್ಪ ಕೊಲೆ ಮಾಡಿರುವ ಘಟನೆ ನಡೆದಿದೆ. ಕೆಂಗೇರಿ ಉಪನಗರದ ಹೊಯ್ಸಳ ಸರ್ಕಲ್ ಸಮೀಪದ ಹ್ಯಾಪಿ ಡೇ ಬಾರ್ ಬಳಿ ಘಟನೆ ನಡೆದಿದೆ. ಕೆಂಗೇರಿಯ ಗಾಂಧಿನಗರ ನಿವಾಸಿ ನವೀನ್ (25) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಂಠಪೂರ್ತಿ ಕುಡಿದು, ಹಳೆ ವೈಷಮ್ಯದ ವಿಚಾರಕ್ಕೆ ಆರಂಭವಾದ ಗಲಾಟೆ …
Read More »ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ವಿವರ ಜಾರಿ
ಬೆಂಗಳೂರು – ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ವಿವರ ನೀಡಿದೆ. ಎಲ್ಲಾ ಗ್ಯಾಂರಟಿ ಯೋಜನೆಗಳು ಇದೇ ವರ್ಷ ಜಾರಿಯಾಗಲಿದೆ ಎಂದು ಸರಕಾರ ತಿಳಿಸಿದೆ. ಸಚಿವಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಈ ಕುರಿತು ಮಾಹಿತಿ ನೀಡಿದ್ದಾರೆ. ಗೃಹ ಜ್ಯೋತಿ ಅಡಿ ವಿದ್ಯುತ್ ಬಳಕೆಯ 12 ತಿಂಗಳ ಸರಾಸರಿ ಆಧಾರದ ಮೇಲೆ ಶೇ.10ರಷ್ಟು ಹೆಚ್ಚು ಸೇರಿಸಿ ಉಚಿತವಾಗಿ ನೀಡುತ್ತೇವೆ ಎಂದು ತಿಳಿಸಿದರು. ಜುಲೈ 1ರಿಂದ ಈ ಯೋಜನೆ ಜಾರಿಯಾಗಲಿದೆ. ಶಕ್ತಿ ಯೋಜನೆಯಡಿ …
Read More »ಎಲ್‌ಪಿಜಿ ಸಿಲಿಂಡರ್ ಬೆಲೆ ₹83.50 ಕಡಿತ
ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್ ದರ ಗುರುವಾರ ₹83.50 ಕಡಿತಗೊಂಡಿದೆ. ದೆಹಲಿಯಲ್ಲಿ 19ಕೆ.ಜಿಯ ವಾಣಿಜ್ಯ ಸಿಲಿಂಡರ್ ಬೆಲೆ ₹1773 ಆಗಿದೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಗುರುವಾರ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
Read More »