ಬೆಳಗಾವಿ: ಚೆಕ್‌ಪೋಸ್ಟ್‌ನಲ್ಲಿ ಶಾಸಕ ಶ್ರೀಮಂತ ಪಾಟೀಲ ಅವರ ಪುತ್ರ ಶ್ರೀನಿವಾಸ ಸಂಚರಿಸುತ್ತಿದ್ದ ವಾಹನವನ್ನು ತಪಾಸಣೆ ಮಾಡದೆ ಬಿಟ್ಟ ಅಧಿಕಾರಿಗಳನ್ನು ತಹಶೀಲ್ದಾರ್ ಎಂ.ಎನ್.ಬಳಿಗಾರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಗವಾಡ-ಮೀರಜ್ ಚೆಕ್‌ಪೋಸ್ಟ್‌ನಲ್ಲಿ ಶನಿವಾರ ಪ್ರತಿ ವಾಹನ ತಪಾಸಣೆ ಮಾಡಲಾಗುತ್ತಿತ್ತು. ಆದರೆ, ಸಾಂಗ್ಲಿಯಿಂದ ಕಾಗವಾಡಕ್ಕೆ ಬರುತ್ತಿದ್ದ ಶಾಸಕರ ಪುತ್ರನ ವಾಹನವನ್ನು ತಪಾಸಣೆ ಮಾಡಿಲ್ಲ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಬಳಿಗಾರ ಸ್ಥಳಕ್ಕೆ ಧಾವಿಸಿ, ಚೆಕ್‌ಪೋಸ್ಟ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ವಾಹನ …
Read More »ಬಸವಜಯ ಮೃತ್ಯುಂಜಯ ಸ್ವಾಮೀಜಿಯವರಿಗೆ ಬೆದರಿಕೆ;:
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸಿದ್ದ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಧಮ್ಕಿ ಹಾಕಿ ಬೆದರಿಕೆಯೊಡ್ದುತ್ತಿದ್ದಾರೆ ಎಂದು ಎಂದು ಶಾಸಕ ಅರವಿಂದ್ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಹೋರಾಟದಲ್ಲಿ ಭಾಗಿಯಾಗಿದ್ದ ಕೆಲ ರಾಜಕೀಯ ನಾಯಕರೇ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ರೀತಿ ಧಮ್ಕಿ ಹಾಕಿದ್ದು ಯಾರು ಎಂಬುದು ನಮ್ಮ …
Read More »ಅಂಕಲಗಿ ಪೂಜ್ಯರ ವಿಧಿವಶ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಗೋಕಾಕ್- ತಾಲೂಕಿನ ಸುಕ್ಷೇತ್ರ ಅಂಕಲಗಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿಯಾಗಿದ್ದ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅಂಕಲಗಿ ಮಠವು ಬೆಳಗಾವಿ ನಾಡಿನಲ್ಲಿ ವಿಶಿಷ್ಟ ಇತಿಹಾಸ, ಭವ್ಯ ಪರಂಪರೆಯನ್ನು ಹೊಂದಿದೆ. ಮಠದ ಸರ್ವತೋಮುಖ ಬೆಳವಣಿಗೆಗಳಲ್ಲಿ ಶ್ರೀ ಗಳ ಪಾತ್ರ ಗಣನೀಯವಾಗಿತ್ತು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆಯನ್ನು ಸಲ್ಲಿಸಿದ್ದರು. ಭಕ್ತರ ಪಾಲಿಗೆ ಪೂಜ್ಯನೀಯವಾಗಿತ್ತು. …
Read More »ಶಿವಲಿಂಗೇಗೌಡ ಶಾಸಕ ಸ್ಥಾನಕ್ಕೆ ರಾಜಿನಾಮೆ
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ದಳಪತಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಜೆಡಿಎಸ್ ಹಿರಿಯ ಶಾಸಕ ಶಿವಲಿಂಗೇಗೌಡ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅರಸಿಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ 400ಕ್ಕೂ ಹೆಚ್ಚು ಕಾರ್ಯಕರ್ತರ ಜೊತೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಲಿಂಗೇಗೌಡ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಅರಸಿಕೆರೆಯಿಂದ ಕೈ …
Read More »ನಮ್ಮದು ಡೆಮಾಕ್ರಟಿಕ್ ಪಕ್ಷ, ಕಾಂಗ್ರೆಸನದ್ದು ಕುಟುಂಬ ಪಾರ್ಟಿ
ಬೆಳಗಾವಿ: ನಮ್ಮದು ಡೆಮಾಕ್ರಟಿಕ್ ಪಾರ್ಟಿ, ಅದರ ಅಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಆಗುತ್ತೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಅಂತಿಮ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದ ಧರ್ಮನಾಥ ಭವನದಲ್ಲಿ ಶುಕ್ರವಾರ ಅಭ್ಯರ್ಥಿಗಳ ಆಯ್ಕೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ರೀತಿ ನಮ್ಮದು ಪರಿವಾರದ ಪಾರ್ಟಿ ಅಲ್ಲ.ಕಾಂಗ್ರೆಸ್ ಪಾರ್ಟಿ ಸುಳ್ಳು ಆಶ್ವಾಸನೆ ಕೊಡುವುದರಲ್ಲಿ ಪರಿಣಿತರ ಪಕ್ಷ ಅದು ಎಂದರು. ಗ್ಯಾಸ್ ಸಿಡಿಲಿಂಡರ್ ಗೆ ಹಣ ಕೊಡ್ತೇವಿ, …
Read More »ಕರ್ನಾಟಕ ವಿಧಾನಸಭಾ ಚುನಾವಣೆ-2023 -ನೀತಿ ಸಂಹಿತೆ ಜಾರಿ, ಜಿಲ್ಲೆಯ ಎಲ್ಲೆಡೆ ಕಟ್ಟೆಚ್ಚರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೆ10 ಮತದಾನ ಹಾಗೂ ಮೆ 13 ರಂದು ಮತ ಎಣಿಕೆ ನಡೆಯಲಿವೆ. ಹಾಗಾಗಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.29) ನಡೆದ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಮತದಾನ ದಿನಾಂಕ ಘೋಷಣೆಯಾಗಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯಲ್ಲಿ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆ: 78,772 ವಿದ್ಯಾರ್ಥಿಗಳ ನೋಂದಣಿ
ಬೆಳಗಾವಿ: ಜಿಲ್ಲೆಯಲ್ಲಿ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, 78,772 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳ ನಡುವೆಯೂ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 120 ಕೇಂದ್ರಗಳಲ್ಲಿ 33,182 ವಿದ್ಯಾರ್ಥಿಗಳು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 151 ಕೇಂದ್ರಗಳಲ್ಲಿ 45,590 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈಗ ಕೊರೊನಾ ಹಾವಳಿ ತಗ್ಗಿದೆ. ಆದರೂ, …
Read More »ಸಧ್ಯದಲ್ಲಿಯೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ:B.S.Y.
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಈಗಗಲೇ ದಿನಾಂಕ ಘೋಷಣೆಯಾಗಿದೆ. ಬಿಜೆಪಿ ಚುನಾವಣೆಗೆ ಸಿದ್ಧವಾಗಿದ್ದು, ಈಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ 4 ತಂಡಗಳಾಗಿ ವಿಜಯಸಂಕಲ್ಪ ಯಾತ್ರೆ ಮಾಡಿದ್ದೇವೆ. ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದ್ದು, ಬಿಜೆಪಿ ಮತ್ತೆ ಅದಿಕಾರಕ್ಕೆ ಬರುವುದು ಸೂರ್ಯ, ಚಂದ್ರ ಇರುವಷ್ಟೇ ಸತ್ಯ ಎಂದು ಹೇಳಿದರು. …
Read More »ಮಹಾಲಿಂಗೇಶ್ವರ ಜಟೋತ್ಸವಕ್ಕೆ ಜನ ಸಾಗರ ;ದೇವರ ಮೊರೆ ಹೋದ ರಾಜಕಾರಣಿಗಳು
ಮಹಾಲಿಂಗಪುರ : ಹಿಂದೂಗಳ ಪವಿತ್ರ ಹಬ್ಬ, ವರ್ಷದ ಆರಂಭ ದಿನದವಾದ ಯುಗಾದಿಯ ದಿನ ನಸುಕಿನ ಜಾವ ನಡೆಯುವ ಜಟೋತ್ಸವ ವಿಕ್ಷಣೆಗಾಗಿ ಮುಂಜಾನೆ ಬುಧವಾರ ಪಟ್ಟಣದ ಐತಿಹಾಸಿಕ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತ ಜನಸಾಗರವೇ ಹರಿದು ಬಂದಿತ್ತು. ಜಟೋತ್ಸವ ಪವಾಡ ಪುರುಷ ಮಹಾಲಿಂಗೇಶ್ವರರ ಜಟೆಗಳು ವಿಜ್ಞಾನಕ್ಕೆ ಸವಾಲು ಎಂಬಂತೆ ಪ್ರತಿವರ್ಷ ಒಂದು ಗೋಧಿ ಕಾಳಿನಷ್ಟು ಬೆಳೆಯುತ್ತಿವೆ. ಇಂತಹ ಪವಾಡ ಸದೃಶ್ಯ ಜಟೆಗಳನ್ನು ನೋಡುವದೇ ಭಕ್ತರ ಸೌಭಾಗ್ಯ. ಇಂತಹ ವೈಶಿಷ್ಟ್ಯ ಪೂರ್ಣ ಜಟೆಗಳ ಅಭಿಷೇಕ (ಜಟೋತ್ಸವ)ದ …
Read More »ಬಿಜೆಪಿ ಉತ್ಸಾಹಕ್ಕೆ ಆಕಾಂಕ್ಷಿಗಳು ಅಡ್ಡಗಾಲು: ರಥಯಾತ್ರೆಗಳಿಗೆ ತಟ್ಟಿದ ಪೈಪೋಟಿಯ ಬಿಸಿ
ಬೆಂಗಳೂರು :ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ನಾಯಕರ ನಿರಂತರ ಭೇಟಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯಿಂದ ಆಡಳಿತ ಬಿಜೆಪಿಯಲ್ಲಿ ಹೆಚ್ಚಿರುವ ಉತ್ಸಾಹಕ್ಕೆ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಅಡ್ಡಗಾಲಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿ, ಎರಡನೇ ಪಟ್ಟಿಗೆ ಬಿಡುಗಡೆಗೆ ತಯಾರಿ ನಡೆಸಿದೆ. ಪ್ರತಿಪಕ್ಷ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಿ ಮೊದಲ ಪಟ್ಟಿ ತ್ವರಿತವಾಗಿ ಘೋಷಿಸಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲು ಸನ್ನದ್ಧವಾಗಿದೆ. ಆದರೆ ಬಿಜೆಪಿ ಪಾಳೆಯದಲ್ಲಿ ಮೇಲ್ನೋಟಕ್ಕೆ ಯಾವುದೇ …
Read More »