ಹಾಸನ: ನಿನ್ನೆ ಪ್ರಧಾನಿ ನರೇಂದ್ರ ಮೋದಿ ರೌಡಿ ರವಿಗೆ ತಲೆ ಬಾಗಿದ್ದಾರೆ. ಭೂಗತ ದೊರೆಗಳಿಗೆ ಬಿಜೆಪಿ ತಲೆ ಬಾಗುತ್ತಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಪ್ರಧಾನಿ ಮೋದಿ ಡಾನ್ ಮುಂದೆ ತಲೆ ಬಾಗಿದ್ದಾರೆ. ಈ ದೃಶ್ಯ ನೋಡಿದರೆ ಬಿಜೆಪಿಯ ಸ್ಥಿತಿ ತಿಳಿಯುತ್ತದೆ. ಕ್ರಿಕೆಟ್ ಬೆಟ್ಟಿಂಗ್ ನಡೆಸುವವನಿಗೆ ಕೈ ಮುಗಿದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ …
Read More »ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್&ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಶಾಲ ಕಂಟ್ರಿ ಸೈಡ್ ಹೊಟೆಲ್ ಸಿಬ್ಬಂದಿ
ಬೆಳಗಾವಿ: ಊಟ ಮಾಡಲು ಹೋದ ತಮ್ಮ ತಂಡದ ಮೇಲೆ ಹೊಟೆಲ್ ಸಿಬ್ಬಂದಿ ತೀವ್ರತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬೆಳಗಾವಿಯ ಸೋಶಿಯಲ್ ಮೀಡಿಯಾ ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್ ಪೊಲೀಸ್ ದೂರು ದಾಖಲಿಸಿದ್ದಾರೆ. ಸುಳಗಾದ ವಿಶಾಲ ಕಂಟ್ರಿ ಸೈಡ್ ಎನ್ನುವ ಹೊಟೆಲ್ ಗೆ ಮಾರ್ಚ್ 9ರ ರಾತ್ರಿ ತಾವು ಸುಮಾರು 25 ಜನರು ಊಟಕ್ಕೆ ತೆರಳಿದ್ದಾಗಿಯೂ, ಆ ವೇಳೆ ಅಲ್ಲಿನ ಸಿಬ್ಬಂದಿ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಲ್ಲದೆ, ಜಗಳ ಮಾಡಿ ಹೊಟೆಲ್ ಪಾತ್ರೆಗಳಿಂದ …
Read More »ಯುವತಿ ಜತೆಗಿನ ನಗ್ನ ವಿಡಿಯೋ ತೋರಿಸಿ ವಂಚನೆ: ಇಬ್ಬರು ಯುವತಿಯರು ಸೇರಿ 6 ಮಂದಿ ಬಂಧನ
ಬೆಂಗಳೂರು: ವೆಬ್‌ಸೈಟ್ ಮೂಲಕ ಪರಿಚಯವಾದ ವ್ಯಕ್ತಿಗಳನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಇಬ್ಬರು ಯುವತಿಯರು ಸೇರಿ 6 ಮಂದಿಯ ತಂಡವನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಅನಿಲ್ ಕುಮಾರ್ (37), ತುಮಕೂರಿನ ಗಿರೀಶ್ (36), ಬ್ಯಾಟರಾಯನಪುರ ನಿವಾಸಿ ಶಿವಶಂಕರ್(50) ಮತ್ತು ರಾಜಾಜಿನಗರ ನಿವಾಸಿ ರಾಮಮೂರ್ತಿ(37) ಹಾಗೂ ಇಬ್ಬರು ಯುವತಿ ಯರನ್ನು ಬಂಧಿಸಲಾಗಿದೆ. ಆರೋಪಿಗಳು 39 ವರ್ಷದ ರಾಜಶ್ರೀಲೇಔಟ್ ನಿವಾಸಿ ಶ್ರೀನಿವಾಸ್ ಎಂಬುವರಿಗೆ 10 ಲಕ್ಷ ರೂ.ಗೆ ಬೇಡಿಕೆ ಇಟ್ಟು, …
Read More »ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಸಿದ್ದರಾಮಯ್ಯ
ಬೆಳಗಾವಿ: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಮುಂದುವರಿದ ಭಾಗವಾಗಿ ಸಿದ್ದರಾಮಯ್ಯ ಈ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 14ರಿಂದ 17ರವರೆಗೆ ಅವರು ಜಿಲ್ಲೆಯ ವಿವಿಧೆಡೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ….
Read More »ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅನಿಲ ಬೆನಕೆ
ಬೆಳಗಾವಿ: ನಗರದಲ್ಲಿ ವಿವಿಧ ಕಡೆಗಳಲ್ಲಿ ಇಂದು ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು, ಸುಮಾರು 3 ಕೋಟಿಗೂ ಹೆಚ್ಚು ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಅಶೋಕ ನಗರದಲ್ಲಿ ಸುಮಾರು 27 ಲಕ್ಷ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ, ಅಮನ ನಗರ ಮತ್ತು ಮಾರುತಿ ನಗರದಲ್ಲಿ 2.5 ಕೋಟಿ ವೆಚ್ಚದಲ್ಲಿ ಚರಂಡಿ ಮತ್ತು ರಸ್ತೆ ಕಾಮಗಾರಿಗೆ ಚಾಲನೆ, ಎಸ್ ಮೋಟರ್ಸ ಹತ್ತಿರ 50 ಲಕ್ಷ ವೆಚ್ಚದಲ್ಲಿ ರಸ್ತೆ …
Read More »ನಾಗಾಲ್ಯಾಂಡ್ ಮತ್ತು ಮೇಘಾಲಯಗಳಲ್ಲಿ ಬಿಜೆಪಿ ಸರ್ಕಾರ, ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
ಮುಂಡರಗಿ: ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗುವ ಹಿನ್ನೆಲೆಯಲ್ಲಿ ಪಟ್ಟಣದ ಕೊಪ್ಪಳ ಸರ್ಕಲ್‍ನಲ್ಲಿ ಬಿಜೆಪಿ ಮುಂಡರಗಿ ಮಂಡಲದ ಕಾರ್ಯಕರ್ತರು ಗುರುವಾರ ಸಿಹಿ ಹಂಚಿ ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು. ಪುರಸಭೆ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಎಸ್.ಸಿ.ಮೋರ್ಚಾ ಮಾಜಿ ಅಧ್ಯಕ್ಷ ಸುಭಾಸ ಗುಡಿಮನಿ, ಮುಂಡರಗಿಮಂಡಲ ಪ್ರಧಾನ ಕಾರ್ಯದರ್ಶಿ ದೇವಪ್ಪ ಇಟಗಿ, ಮುಂಡರಗಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಪವಿತ್ರಾ ಕಲ್ಲಕುಟಗರ ಮಾತನಾಡಿದರು. ಪುರಸಭೆ …
Read More »ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಕರೆ ಹಿಂಪಡೆದ ಕಾಂಗ್ರೆಸ್
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ‘ಬಿಜೆಪಿ ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ …
Read More »ಡಿಸಿ ಕಚೇರಿಯಲ್ಲಿ ಮೂವರು ಹೆಣ್ಣುಮಕ್ಕಳಿಗೆ ಪಿನಾಯಿಲ್ ಕುಡಿಸಿ, ತಾನೂ ಕುಡಿದ ಮಹಿಳೆ
ಬೆಳಗಾವಿ: ಜೀವನ ನಿರ್ವಹಣೆ ಕಷ್ಟವಾದ ಕಾರಣಕ್ಕೆ ಮಹಿಳೆಯೊಬ್ಬರು ಬುಧವಾರ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲೇ ಮೂವರು ಹೆಣ್ಣುಮಕ್ಕಳಿಗೆ ಪಿನೈಲ್ ಕುಡಿಸಿ ತಾವೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ನಾಲ್ವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ನಗರದ ಅನಗೋಳದ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದವರು. ಮಕ್ಕಳಾದ ಸೃಷ್ಟಿ (14), ಸಾಕ್ಷಿ (8) ಹಾಗೂ ಸಾನ್ವಿ (3) ಅವರಿಗೂ ಪಿನೈಲ್ ಕುಡಿಸಿದ್ದರಿಂದ ನಾಲ್ವರೂ ಅಸ್ವಸ್ಥಗೊಂಡಿದ್ದಾರೆ. ಬೈಲಹೊಂಗಲ ಜನತಾ ಪ್ಲಾಟ್‌ನಲ್ಲಿ …
Read More »ರಾಜ್ಯದ ಪಶುಪಾಲಕರಿಗೆ ಪ್ರತಿ ದಿನ 11 ಕೋಟಿ ರೂ. ಕೈತಪ್ಪಿ ಹೋಗುತ್ತಿದೆ : ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದ ಹಾಲು ಉತ್ಪಾದಕ ರೈತರು ಹಾಗೂ ಗ್ರಾಹಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಭ್ರಷ್ಟ ಬಿಜೆಪಿಯೆ ನೇರ ಕಾರಣ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು,ರಾಜ್ಯದ ಪ್ರಮುಖ ದಿನ ಪತ್ರಿಕೆಗಳು ಇಂದು ಹಾಲು ಮತ್ತು ಹಾಲಿನ ಉತ್ಪನ್ನಗಳ ಕುರಿತಂತೆ ಅತ್ಯಂತ ಆತಂಕಕಾರಿಯಾದ ವರದಿಗಳನ್ನು ಪ್ರಕಟಿಸಿವೆ. ಈ ಮಾರ್ಚ್‍ನಲ್ಲಿ ಪ್ರತಿ ದಿನ 99 ಲಕ್ಷ ಲೀಟರುಗಳಷ್ಟು ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ …
Read More »ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ನಿಯಮಿತದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಸಂಬಂಧ ವಿರೂಪಾಕ್ಷಪ್ಪ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಮಂಗಳವಾರ ವಿಚಾರಣೆ ನಡೆಸಿದರು. ವಿಚಾರಣೆ …
Read More »