ಚಿಕ್ಕೋಡಿ: ‘ಅತಿಕ್ರಮಿಸಿದ ಜಾಗವನ್ನು ತೆರವು ಮಾಡಬೇಕು’ ಎಂದು ಆಗ್ರಹಿಸಿ ತಾಲ್ಲೂಕಿನ ಮಾಂಜರಿ ಗ್ರಾಮದಲ್ಲಿ ಮಂಗಳವಾರ ವಾಣಿಜ್ಯ ಸಂಕೀರ್ಣದಲ್ಲಿ ಶವ ಇಟ್ಟು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ಮಾಂಜರಿ ನಿವಾಸಿ ಪುರಂದರ ಜೋಗೆ (85) ಅನಾರೋಗ್ಯದ ಕಾರಣ ಮಂಗಳವಾರ ನಿಧನರಾದರು. ಇದೇ ಊರಿನ ಸಿಕಂದರ್ ಕಿಲ್ಲೇದಾರ ಎನ್ನುವವರು ಪುರಂದರ ಅವರ ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ. ಅದನ್ನು ತೆರವುಗೊಳಿಸಿ ಮೂಲ ಮಾಲೀಕರಿಗೆ ನೀಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು. ‘ಪುರಂದರ ಅವರು ತಮ್ಮ …
Read More »ಚಿಂಚಲಿ ಮಾಯಕ್ಕ ಜಾತ್ರೆ ಇಂದಿನಿಂದ
ರಾಯಬಾಗ: ಕರ್ನಾಟಕ ಹಾಗೂ ಮಹಾರಾಷ್ಟ್ರ ಭಕ್ತರ ಆರಾಧ್ಯ ದೇವತೆ ಚಿಂಚಲಿ ಮಾಯಕ್ಕದೇವಿ ಜಾತ್ರೆ ಫೆ.28ರಿಂದ ಮಾರ್ಚ್ 3ರವರೆಗೆ ಐದು ದಿನ ವೈಭವೋಪೇತವಾಗಿ ಜರುಗಲಿದೆ. ಮಾಯಕಾರತಿ, ಮಹಾಕಾಳಿ, ಮಾಯವ್ವ ಎಂಬೆಲ್ಲ ಹೆಸರಿನಿಂದ ಪೂಜಿಸಲ್ಪಡುವ ಮಾಯಕ್ಕ ದೇವಿ ಜಾತ್ರೆಗೆ ಚಿಂಚಲಿ ಪಟ್ಟಣ ಸಂಭ್ರಮದಿಂದ ಸಜ್ಜುಗೊಂಡಿದೆ. ಈ ಜಾತ್ರೆಗೆ ನೆರೆಯ ತಮಿಳುನಾಡು, ಗೋವಾ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಲಕ್ಷಲಕ್ಷ ಭಕ್ತರು ಆಗಮಿಸುತ್ತಾರೆ. ಜಾತ್ರೆಗೆ ಸುಮಾರು 5 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವುದು ಪ್ರತಿವರ್ಷದ ವಾಡಿಕೆ. …
Read More »ಕನ್ನಡದಲ್ಲೇ ಕನ್ನಡಿಗ-ಕನ್ನಡತಿ ಲಗ್ನ
ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಸೋಮವಾರ ಕನ್ನಡಮಯವಾದ ಮದುವೆ ನೆರವೇರಿತು. ಸಂಪ್ರದಾಯದ ಕಟ್ಟುಪಾಡು ಮೀರಿದ ಜೋಡಿ ಅಚ್ಚುಕಟ್ಟಾಗಿ, ಕನ್ನಡವನ್ನೇ ಅನುಸರಿಸಿ ಹೊಸಬಾಳಿಗೆ ಕಾಲಿಟ್ಟಿತು. ಖಾಸಗಿ ಕಂಪನಿಯ ಉದ್ಯೋಗಿಗಳಾದ ಬೆಳಗಾವಿ ತಾಲ್ಲೂಕಿನ ಶಿಂಧೋಳಿಯ ದೀಪಕ್ ಮುಂಗರವಾಡಿ ಮತ್ತು ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದೇವಗಾಂವದ ರಾಜೇಶ್ವರಿ ವಾಂಗಿ ಅವರ ಮದುವೆ ಕನ್ನಡ ಸಾಹಿತ್ಯ ಸಮ್ಮೇಳನದ ವಾತಾವರಣ ನೆನಪಿಸಿತು. ಜೋಡಿಯು ಉಂಗುರದಿಂದ ಹಿಡಿದು ಕಲ್ಯಾಣ ಮಂಟಪದವರೆಗೆ ಸಂಪೂರ್ಣವಾಗಿ ಕನ್ನಡ ಅನುಸರಿಸಿತು. ಪ್ರವೇಶದ್ವಾರದ ಬಳಿ ಕಿತ್ತೂರು ರಾಣಿ …
Read More »‘ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ಸಂದರ್ಭಕ್ಕೆ ತಕ್ಕಂತೆ ಧೈರ್ಯದಿಂದ ಕೆಲಸ ಮಾಡಬೇಕು’ : ಕಮಿಷನರ್ ಎಸ್.ಎನ್.ಸಿದ್ರಾಮಪ್ಪ
ಬೆಳಗಾವಿ: ‘ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ಸಂದರ್ಭಕ್ಕೆ ತಕ್ಕಂತೆ ಧೈರ್ಯದಿಂದ ಕೆಲಸ ಮಾಡಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಎಸ್.ಎನ್.ಸಿದ್ರಾಮಪ್ಪ ಕರೆ ನೀಡಿದರು. ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ತಮ್ಮ ಸೇವಾನಿವೃತ್ತಿ ಹಿನ್ನೆಲೆಯಲ್ಲಿ ಪೊಲೀಸರಿಂದ ಬುಧವಾರ ಗೌರವವಂದನೆ ಸ್ವೀಕರಿಸಿ ಅವರು ಮಾತನಾಡಿದರು. ‘ಬೆಳಗಾವಿಯಲ್ಲಿ ನಡೆಯುವ ಗಣೇಶ ಉತ್ಸವದ ವಿಸರ್ಜನೆಯಂಥ ಸಂದರ್ಭ ನಾವು 18ರಿಂದ 20 ತಾಸು ಕೆಲಸ ಮಾಡಬೇಕಾಗುತ್ತದೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ನಿಯಮಿತವಾಗಿ ವ್ಯಾಯಾಮ ಮಾಡಬೇಕು. ಪೊಲೀಸ್ ಇಲಾಖೆ …
Read More »ವಾಕಿಂಗ್ ಹೋದವರ ಮೇಲೆ ಕರಡಿ ದಾಳಿ.
ಶಿವಮೊಗ್ಗ: ಚಿರತೆ, ಕಾಡಾನೆ ಕಾಡು ಬಿಟ್ಟು ನಾಡಿನತ್ತ ಹೆಜ್ಜೆ ಹಾಕುತ್ತಿರುವುದು ಹೊಸತೇನು ಅಲ್ಲ ಆದರೆ ಈ ಬಾರಿ ಕರಡಿಯೊಂದು ನಗರ ಪ್ರದೇಶದಲ್ಲಿ ಕಂಡು ಬಂದಿದ್ದು ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗುವವರ ಮೇಲೆ ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ ತುಕಾರಂ ಶೆಟ್ಟಿ ಎಂಬುವವರ ಹೊಟ್ಟೆಯ ಭಾಗಕ್ಕೆ ತರಚಿದ ಗಾಯಗಳಾಗಿವೆ. ಸೋಮವಾರ ಬೆಳಗ್ಗೆ ತುಕಾರಾಂ ಶೆಟ್ಟಿ ಅವರು ವಾಕಿಂಗ್ ಹೋದ ವೇಳೆ ಕರಡಿಯನ್ನು ಬೀದಿ …
Read More »ರಾಜ್ಯಸಭಾ ಚುನಾವಣೆ: ಬಿಜೆಪಿ, ಜೆಡಿಎಸ್ ವಿರುದ್ಧ ಡಿಕೆಶಿ ‘ಆಪರೇಷನ್ ಬಾಂಬ್’ ಆರೋಪ
ಬೆಂಗಳೂರು: ಇಂದು ರಾಜ್ಯಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಇದೇ ವೇಳೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಬಿಜೆಪಿ, ಜೆಡಿಎಸ್ ವಿರುದ್ಧ ಆಪರೇಷನ್ ಬಾಂಬ್ ಆರೋಪ ಮಾಡಿದ್ದಾರೆ. ಈ ಕುರಿತಂತೆ ಬೆಂಗಳೂರಿನ ಹಿಲ್ಟನ್ ಹೋಟೆಲ್ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಮ್ಮ 42 ಶಾಸಕರನ್ನು ಬಿಜೆಪಿ, ಜೆಡಿಎಸ್ ನವರು ಸಂಪರ್ಕಿಸಿ, ಆಪರೇಷನ್ ಮಾಡೋ ಪ್ರಯತ್ನ ನಡೆಸಿದ್ದಾರೆ. ಅವರಿಗೆ ರಾಜಕೀಯದ ಬಗ್ಗೆ ಬೇಸಿಕ್ ಕಾಮನ್ ಸೆನ್ಸ್ ಇಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದರು. ಹಣ ಇದೆ …
Read More »ನಾಳೆ ರಾಜ್ಯಸಭಾ ಕದನ; ಅಡ್ಡಮತದಾನ ಭೀತಿ, ಕೈಗೆ ಫಜೀತಿ!
ಬೆಂಗಳೂರು: ರಾಜ್ಯದಲ್ಲಿ ರಾಜ್ಯಸಭಾ ಕದನ (Rajya Sabha Election) ಕುತೂಹಲ ಕೆರಳಿಸಿದೆ. “ನಂಬರ್ ಗೇಮ್” ಆರಂಭವಾಗಿರುವ ಹಿನ್ನೆಲೆಯಲ್ಲಿ ಮೂರೂ ರಾಜಕೀಯ ಪಕ್ಷಗಳೂ ತಂತ್ರಗಾರಿಕೆಯಲ್ಲಿ ತೊಡಗಿವೆ. ಒಟ್ಟು ನಾಲ್ಕು ಸ್ಥಾನಕ್ಕೆ ಐವರು ಅಭ್ಯರ್ಥಿಗಳು ಇರುವುದರಿಂದ ಚುನಾವಣಾ ಕಣ ರೋಚಕವಾಗಿದೆ. ಈ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದ್ದು, ಕಾಂಗ್ರೆಸ್ ತನ್ನ ಶಾಸಕರನ್ನು (Congress MLAs) ರೆಸಾರ್ಟ್‌ಗೆ (Resort Politics) ಶಿಫ್ಟ್ ಮಾಡಲು ಪ್ಲ್ಯಾನ್ ಮಾಡಿದೆ. ಈ ಸಂಬಂಧ ಈಗಾಗಲೇ ಸೂಚನೆಯನ್ನೂ ನೀಡಿದೆ. ಆಡಳಿತ …
Read More »ಸಂಕೇಶ್ವರ-ಮೈಸೂರು ಬಸ್ ಆರಂಭ
ಸಂಕೇಶ್ವರ: ವಾಯವ್ಯ ಸಾರಿಗೆ ಸಂಸ್ಥೆಯ ಸಂಕೇಶ್ವರ ಘಟಕದಿಂದ ಮೈಸೂರಿಗೆ ಹೊಸ ಬಸ್ ಸಂಚಾರವನ್ನು ಗುರುವಾರ ಆರಂಭಿಸಲಾಗಿದೆ. ಈ ಬಸ್ ಮಧ್ಯಾಹ್ನ 12.30ಕ್ಕೆ ಕೊಲ್ಹಾಪುರದಿಂದ ಹೊರಟು, ಮಧ್ಯಾಹ್ನ 2 ಗಂಟೆಗೆ ಸಂಕೇಶ್ವರ ಬಸ್ ನಿಲ್ದಾಣಕ್ಕೆ ಬರಲಿದೆ. ಸಂಕೇಶ್ವರದಿಂದ 2.10ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಮೈಸೂರು ತಲುಪಲಿದೆ. ರಾತ್ರಿ 8 ಗಂಟೆಗೆ ಮೈಸೂರಿನಿಂದ ಹೊರಡುವ ಬಸ್, ಮಧ್ಯಾಹ್ನ 12.30ಕ್ಕೆ ಕೊಲ್ಹಾಪುರ ತಲುಪಲಿದೆ.730 ಕಿ.ಮೀ. ದೂರದ ಪ್ರಯಾಣಕ್ಕೆ ₹700 ದರ ನಿಗದಿಪಡಿಸಲಾಗಿದೆ.
Read More »ಲೋಕಸಭೆ ಚುನಾವಣೆ: ಪರಿಶಿಷ್ಟರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ
ರಾಮದುರ್ಗ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಈ ಬಾರಿ ಎಸ್‍ಸಿ/ಎಸ್‍ಟಿ ಸಮುದಾಯದ ಅನಂತಕುಮಾರ ಬ್ಯಾಕೋಡ ಅವರಿಗೆ ನೀಡಬೇಕು ಎಂದು ಪಕ್ಷದ ಎಸ್‍ಸಿ/ಎಸ್‍ಟಿ ಘಟಕದ ಉಪಾಧ್ಯಕ್ಷೆ ಲಕ್ಷ್ಮೀ ನಾಗಣ್ಣವರ ವರಿಷ್ಠರನ್ನು ಒತ್ತಾಯಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪರಿಶಿಷ್ಟ ಜಾತಿಯವರಿಗೆ 50 ವರ್ಷಗಳಿಂದಲೂ ಟಿಕೆಟ್ ನೀಡಿಲ್ಲ. ಸುಮಾರು 6 ಲಕ್ಷ ಮತಗಳಿದ್ದರೂ ಈ ಜನಾಂಗಕ್ಕೆ ವಿಧಾನ ಪರಿಷತ್, ವಿಧಾನಸಭೆ ಮತ್ತು ನಿಗಮ ಮಂಡಳಿಗೂ ಪರಿಗಣಿಸಿಲ್ಲ’ ಎಂದು ಆಕ್ರೋಶ …
Read More »ರಾಜ್ಯ ಕಾನೂನು ವಿವಿ: 2 ವರ್ಷಗಳಿಂದ ನಡೆದಿಲ್ಲ ಘಟಿಕೋತ್ಸವ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ (ಅಕಾಡೆಮಿಕ್ ಕೌನ್ಸಿಲ್) ರಚನೆ ವಿಳಂಬ ಆಗಿರುವ ಕಾರಣ ಎರಡು ವರ್ಷಗಳಿಂದ ವಿಶ್ವವಿದ್ಯಾಲಯದ ಘಟಿಕೋತ್ಸವ ನಡೆದಿಲ್ಲ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ರಾಜ್ಯದ 108 ಕಾನೂನು ಕಾಲೇಜುಗಳಿವೆ. 2021-22 ಮತ್ತು 2022-23ನೇ ಸಾಲಿನ ಘಟಿಕೋತ್ಸವ ಈವರೆಗೆ ನಡೆದಿಲ್ಲ. ಕಾನೂನು ಪದವಿ ಹಾಗೂ ಸ್ನಾತಕೋತ್ತರ ಪದವಿಯ 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಮಾಣ ಪತ್ರದ ನಿರೀಕ್ಷೆಯಲ್ಲಿದ್ದಾರೆ. ರಚನೆಯಾಗದ ಮಂಡಳಿ: ‘ಒಂದು ವರ್ಷಕ್ಕಿಂತ ಹೆಚ್ಚು ಸಮಯದಿಂದ ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ …
Read More »
Laxmi News 24×7