ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ. ಇತ್ತಿಚಿಗೆ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ 400 ಸೀಟ್ ಪೈಕಿ 4 ಮಾತ್ರ ಕಾಂಗ್ರೆಸ್ ಗೆದ್ದಿದೆ. ದೇಶದಲ್ಲಿ ದಯನೀಯ ಸೋಲು ಅನುಭವಿಸಿ ಕಾಂಗ್ರೆಸ್ ಬೀದಿ ಪಾಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಬೆಳಗಾವಿಯ ಧರ್ಮನಾಥ ಭವನದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು, ಪ್ರಧಾನಿ ಮೋದಿಯವರು …
Read More »ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ: ವ್ಯಕ್ತಿಗೆ ಚಾಕು ಇರಿತ, ಕಾರ್ ಗ್ಲಾಸ್ ಒಡೆದು ಪುಂಡಾಟ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಕಂಡ ಕಂಡಲ್ಲಿ ಜನರನ್ನು ಅಡ್ಡ ಹಾಕುವ ಕಿರಾತಕರು ಹಲ್ಲೆ ಮಾಡಿ ಉದ್ಧಟತನ ತೋರುತ್ತಿದ್ದಾರೆ. ಇದೇ ರೀತಿ ಹವಾ ಮೈಂಟೇನ್ ಮಾಡಲು ಅಟ್ಟಹಾಸ ಮೆರೆದಿದ್ದ ರೌಡಿಶೀಟರ್ ಕೈಗೆ ಗಿರಿನಗರ ಪೊಲೀಸ್ ಠಾಣೆಯ ಪೊಲೀಸರು ಕೈಕೋಳ ತೊಡಿಸಿದ್ದಾರೆ. ರೌಡಿಶೀಟರ್ ನರಸಿಂಹ ಅಲಿಯಾಸ್ ಕೂಸೆ, ಸಹಚರ ಕಾಂತರಾಜ್ ಬಂಧಿತರು. ಕೃತ್ಯದಲ್ಲಿ ಭಾಗಿಯಾಗಿದ್ದ ಯೋಗೇಶ್ ಸೇರಿ ಮೂವರ ವಿರುದ್ಧ ತಲೆಮರೆಸಿಕೊಂಡಿದ್ದು ಶೋಧಕಾರ್ಯ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ …
Read More »ನಾಳೆ ಬಿಜೆಪಿ ಅಭ್ಯರ್ಥಿಗಳ ಪರ ಕಿಚ್ಚ ಸುದೀಪ್ ಪ್ರಚಾರ: ಐದು ಕ್ಷೇತ್ರಗಳಲ್ಲಿ ಹೆಬ್ಬುಲಿ ರೋಡ್ ಶೋ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗು ಅವರು ಸೂಚಿಸುವ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕಾರ್ಯ ನಡೆಸುವುದಾಗಿ ಪ್ರಕಟಿಸಿರುವ ನಟ ಕಿಚ್ಚ ಸುದೀಪ್ ನಾಳೆ ಅಧಿಕೃತವಾಗಿ ಸಿಎಂ ಸೂಚಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಸಾಂಕೇತಿಕವಾಗಿ ಭಾಗಿಯಾಗಿ ಬೆಂಬಲ ಸೂಚಿಸಿ ಪ್ರಚಾರ ನಡೆಸಿದ್ದ ಸುದೀಪ್ ನಾಳೆಯಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ. ನಟ ಕಿಚ್ಚ ಸುದೀಪ್ ಪ್ರಚಾರ …
Read More »ಯೋಗಿ ಆದಿತ್ಯನಾಥ ಅವರಿಗೆಜೀವ ಬೆದರಿಕೆ
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು ಅವರ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. 112 ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಕರೆ ಮಾಡಿದ ವ್ಯಕ್ತಿ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಒಂದು ವಾರದ ಹಿಂದಷ್ಟೇ ಯೋಗಿ ಆದಿತ್ಯನಾಥ ಅವರಿಗೆ ವ್ಯಕ್ತಿಯೊಬ್ಬ ಜಾಲತಾಣದಲ್ಲಿ ಜೀವಬೆದರಿಕೆ ಒಡ್ಡಿದ್ದು ಆತನನ್ನು …
Read More »ಕಣ್ಮುಚ್ಚಿ ಕುಳಿತ ಅಧಿಕಾರಿಗಳು : ತುಮ್ಮರಗುದ್ದಿಯಲ್ಲಿ ರಾರಾಜಿಸುತ್ತಿದೆ ಹೆಬ್ಬಾಳ್ಕರ್ ಭಾವಚಿತ್ರ !
ಬೆಳಗಾವಿ :ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇದೀಗ ತುಸು ಜೋರಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಬಿಗು ಚುನಾವಣೆ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ. ಆದರೆ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಚುನಾವಣೆಯ ನೀತಿ ಸಂಹಿತೆ ಅನ್ವಯವಾಗುವುದಿಲ್ಲವೋ ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ ಲೋಕೋಪಯೋಗಿ ಇಲಾಖೆ ವತಿಯಿಂದ ತುಮ್ಮರಗುದ್ದಿ ಗ್ರಾಮದಲ್ಲಿ ಕೈಗೊಂಡಿರುವ ಕಾಮಗಾರಿಯ ಒಟ್ಟು ಖರ್ಚು ವೆಚ್ಚ ಕುರಿತ ಬೃಹತ್ ಫಲಕ ಇನ್ನೂ ತೆರವುಗೊಳಿಸಿಲ್ಲ. …
Read More »ಇಂದು ಸಮಾಜದಲ್ಲಿ ಸತ್ಯ ಹೇಳುವವರಿಗೆ ಭಯ ಹುಟ್ಟಿಸಲಾಗುತ್ತಿದೆ: ಬಸವನಾಡಿನಲ್ಲಿ ರಾಹುಲ್ ಗಾಂಧಿ
ಬಾಗಲಕೋಟೆ: ಬಸವಣ್ಣ ಸತ್ಯದ ಪರವಾಗಿ ಹೋರಾಡಿದವರು. ಇಂದು ಸಮಾಜದಲ್ಲಿ ಸತ್ಯ ಹೇಳುವವರಿಗೆ ಭಯ ಹುಟ್ಟಿಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಕೂಡಲಸಂಗಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಬಸವಣ್ಣನವರ ಜಯಂತಿಯಲ್ಲಿ ಭಾಗಿಯಾಗಿರುವುದು ಖುಷಿ ಕೊಟ್ಟಿದೆ. ನನ್ನನ್ನು ಆಹ್ವಾನಿಸಿದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವ, ಶರಣ ತತ್ವವನ್ನು ಬಸವಣ್ಣ ರಕ್ಷಣೆ ಮಾಡಿದರು. ಪ್ರಜಾಪ್ರಭುತ್ವ, ಸಂಸತ್ತು ಎಲ್ಲದಕ್ಕೂ ಬಸವಣ್ಣ ಪ್ರೇರಣೆ. ಸಮಾಜದಲ್ಲಿ ಅಂಧತ್ವವಿದ್ದಾಗ ಬಸವಣ್ಣನವರ ಬೆಳಕಿನ ಹಾದಿ ತೋರಿದರು ಎಂದರು. ಇನ್ನೊಬ್ಬರನ್ನು …
Read More »ಚುನಾವಣೆ ಹೊತ್ತಲ್ಲಿ ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ ಎಸ್ಪಿ ರಿಷ್ಯಾಂತ್ ವರ್ಗಾವಣೆ ಮಾಡಲಾಗಿದೆ. ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿ. ಅರೂಣ್ ಕೆ ದಾವಣಗೆರೆ ನೂತನ ಡಿಸಿಪಿಯಾಗಿ ನೇಮಕವಾಗಿದ್ದಾರೆ. ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ : ಹುಬ್ಬಳ್ಳಿಯಲ್ಲಿ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ : …
Read More »ಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: 12 ರೈಲುಗಳ ಓಡಾಟದಲ್ಲಿ ವ್ಯತ್ಯಯ
ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವಂತೆ ಮಾಡಿದೆ. ಬೆಂಗಳೂರು: ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ …
Read More »ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದಲ್ಲಿ ಕೌಶಿಕ್ ಸಾಧನೆ
ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ. ಬೆಂಗಳೂರು: ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಮಂಗಳೂರು ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 …
Read More »ನನ್ನ ಆಸ್ತಿ ಪಟ್ಟಿ 5 ಸಾವಿರ ಜನರಿಂದ ಡೌನ್‌ಲೋಡ್: ಡಿಕೆಶಿ
ಮಂಡ್ಯ: ‘ನಾನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ಪಟ್ಟಿಯನ್ನು 5 ಸಾವಿರ ಜನರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲಿ ಬಿಜೆಪಿ ಮುಖಂಡರ ಕುತಂತ್ರ ರಾಜಕಾರಣ ಅಡಗಿದೆ. ರಾಜಕೀಯ ಲೆಕ್ಕಾಚಾರದ ಕಾರಣಕ್ಕೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಡಿ.ಕೆ.ಸುರೇಶ್ ಅವರೂ ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುರುವಾರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸುರೇಶ್ ನಾಮಪತ್ರ ಸಲ್ಲಿಕೆ ಆತುರದ ನಿರ್ಧಾರವಲ್ಲ, ಇಲ್ಲಿ ನಮ್ಮ ತಂತ್ರವೂ ಇದೆ. ಈಗಲೇ ನಾನು ಆ …
Read More »