Breaking News

Uncategorized

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್  ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ. ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ …

Read More »

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ-48 ರ ಆರು ಪಥಗಳ ಕಾಮಗಾರಿ ಅಂತಿಮ ಹಂತದಲ್ಲಿ; ಪ್ರಯಾಣಿಕರಿಗೆ ಶೀಘ್ರವೇ ಸುಗಮ ಸಂಚಾರಕ್ಕೆ ಮುಕ್ತ: ಸಂಸದ ಈರಣ್ಣ ಕಡಾಡಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ರ ಪುಣೆ-ಬೆಂಗಳೂರು ವಿಭಾಗದ ಆರು ಪಥಗಳ ಕಾಮಗಾರಿಯು ಬೆಳಗಾವಿಯಿಂದ ಸಂಕೇಶ್ವರ ಬೈಪಾಸ್‌ವರೆಗಿನ 40 ಕಿ.ಮೀ ರಸ್ತೆಯು ಶೇ. 98.10 ರಷ್ಟು ಪೂರ್ಣಗೊಂಡಿದ್ದು, ಮಾರ್ಚ್ 31, 2026 ರೊಳಗೆ ಪೂರ್ಣಗೊಳ್ಳಲಿದೆ. ಹಾಗೂ ಸಂಕೇಶ್ವರ ಬೈಪಾಸ್‌ನಿಂದ ಮಹಾರಾಷ್ಟ್ರ ಗಡಿಯವರೆಗಿನ 37.83 ಕಿ.ಮೀ ಉದ್ದದ ಕಾಮಗಾರಿಯು ಶೇ 78.10% ಪ್ರಗತಿಯಲ್ಲಿದ್ದು ಅಕ್ಟೋಬರ್ 31, 2026 ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು ಶೀಘ್ರದಲ್ಲೇ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ …

Read More »

ಕೇವಲ ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

ಬೆಂಗಳೂರು: ತಮಿಳುನಾಡಿನ ಮಧುರೈ  ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು …

Read More »

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ, ಹುಬ್ಬಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಿಗರ ಸಂಭ್ರಮ

ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ನಡೆಸಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಸರ್ವೋದಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹಾಗೂ ಪರಸ್ಪರ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್” ಎಂದು …

Read More »

ಬೆಳಗಾವಿ: ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ 97.49 ಲಕ್ಷ ರೂ. ಕಾಣಿಕೆ ಸಂಗ್ರಹ

ಬೆಳಗಾವಿ: ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹಂಡಿಯಿಂದ 97.49 ಲಕ್ಷ ರೂ. ಮೌಲ್ಯದ ಕಾಣಿಕೆ ಸಂಗ್ರಹಗೊಂಡಿದೆ. ಮಾರ್ಚ್ 6 ಮತ್ತು 7ರಂದು ನಡೆದ ಎಣಿಕೆಯಲ್ಲಿ 94,06,596 ರೂ. ನಗದು, 1,50,400 ರೂ. ಮೌಲ್ಯದ ಚಿನ್ನಾಭರಣ ಹಾಗೂ 1,92,860 ರೂ.ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಹಂಡಿ ಎಣಿಕೆ ಪ್ರಕ್ರಿಯೆ ಯಾದಿರಾಯ್ ಎಂಬ ದೇವಸ್ಥಾನದ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿ, ಬೆಳಗಾವಿ …

Read More »

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

ಮೈಸೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ಪ್ರತಿಕ್ರಿಯಿಸಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳನ್ನ ಜೈಲಿಗೆ ಹಾಕುವುದಕ್ಕೆ ಆಗುತ್ತಾ?  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ …

Read More »

ನನ್ನ ರಾಜಕೀಯ ಜೀವನ ಬೆಳವಣಿಗೆಗೆ ಅನೇಕ ಹಿರಿಯರ ಆಶೀರ್ವಾದವಿದೆ: ಸಚಿವ ಕೆ.ಎಚ್.ಮುನಿಯಪ್ಪ

ದೇವನಹಳ್ಳಿ: ನಾನು ನನ್ನ ರಾಜಕೀಯ ಜೀವನದಲ್ಲಿ ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, ಸಚಿವನಾಗಲು ಅನೇಕ ನಾಯಕರ ಸಹಕಾರ, ಆಶೀರ್ವಾದ ನನ್ನ ಮೇಲಿದ್ದು, ಅವರನ್ನು ನಾನು ಪ್ರತಿದಿನ ಸ್ಮರಿಸತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಆಯೋಜಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ 10 ದಿನ ಇರುವಾಗ …

Read More »

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

ಬೆಂಗಳೂರು: ಜಿಬಿಎ  ವ್ಯಾಪ್ತಿಯ 5 ನಗರ ಪಾಲಿಕೆಯ ವಾರ್ಡ್‌ಗಳಿಗೆ ಮೀಸಲಾತಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 8ರಂದು ಕರುಡು ಪ್ರತಿ ಬಿಡುಗಡೆ ಮಾಡಿ 15 ದಿನದೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕೆಲವೊಂದು ಆಕ್ಷೇಪಣೆಗಳನ್ನ ಸ್ವೀಕರಿಸಿ ಬದಲಾವಣೆ ಮಾಡಿದ ನಗರಾಭಿವೃದ್ಧಿ ಇಲಾಖೆ ಸರ್ಕಾರಕ್ಕೆ ಮೀಸಲಾತಿ ಪಟ್ಟಿಯನ್ನು ಸಲ್ಲಿಸಿತ್ತು. ವಾರ್ಡ್ ಮೀಸಲಾತಿಗೆ ಸರ್ಕಾರ ಗ್ರೀನ್ ಸಿಗ್ನಲ್ ಹಿನ್ನೆಲೆ ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಿಗೆ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇನ್ನು ಯಾವ್ಯಾವ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾರ್ಚ್ 8. ರಂದು ವಿದ್ಯುತ್ ವ್ಯತ್ಯಯ

ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ. 8. ರಂದು ಬೆಳಗ್ಗೆ 9. ಘಂಟೆಯಿಂದ ಸಾಯಂಕಾಲ 4. ಘಂಟೆಯವರೆಗೆ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡನಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, …

Read More »

ಸಿಸಿಬಿ ಪೊಲೀಸರ ಮೆಗಾ ರೇಡ್​​: ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್​​ ಸೀಜ್​

ಬೆಂಗಳೂರು: ಡ್ರಗ್ಸ್​​ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳಾಗಿದ್ದು, LSD, ಹೈಡ್ರೋ ಗಾಂಜಾ ಮತ್ತು ಚರಸ್​​ನ ಆರೋಪಿಗಳಿಂದ ಸೀಜ್​​ ಮಾಡಲಾಗಿದೆ. LSD ಸ್ಟ್ರಿಪ್ಸ್​​ಗಳನ್ನು ಕರ್ನಾಟಕದಲ್ಲಿ ವಶಪಡಿಸಿಕೊಂಡಿರೋದು ಇದೇ ಮೊದಲು ಎನ್ನಲಾಗಿದೆ. ಆರೋಪಿಗಳು ದೇವರ ಚಿತ್ರ …

Read More »