Breaking News

Uncategorized

ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಾಂತರ ತಡೆ

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತವರ ಕುಟುಂಬದ ಸದಸ್ಯರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ. ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯು ನ್ಯಾ| ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದು, ಪ್ರಕರಣದ ತನಿಖೆಗೆ ಫೆ.24ರವರೆಗೆ ತಡೆ ನೀಡಿತು. ಅಲ್ಲದೆ, ಈವರೆಗಿನ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿ …

Read More »

ನೇಮಕಾತಿ ಅಕ್ರಮ: ಮತ್ತೆ 8 ಸಹಶಿಕ್ಷಕರ ಬಂಧನ

ಬೆಂಗಳೂರು: 2012-13 ಹಾಗೂ 2014-15ನೇ ಸಾಲಿನ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕರ ನೇಮಕಾತಿ ಅಕ್ರಮ ಸಂಬಂಧ ಮತ್ತೆ 8 ಸಹಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಧಾನಸೌಧ ಠಾಣೆಯಲ್ಲಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಇಬ್ಬರು ನಿರ್ದೇಶಕರು, ಮೂವರು ನಿವೃತ್ತ ಸಹ ನಿರ್ದೇಶಕರು, ಪ್ರಥಮ ದರ್ಜೆ ಸಹಾಯಕ, ಎಂಜಿನಿ ಯರ್ ಹಾಗೂ 61 ಸಹಶಿಕ್ಷಕರನ್ನು ಈಗಾಗಲೇ ಬಂಧಿಸಿದ್ದಾರೆ. ಅವರೆಲ್ಲರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. …

Read More »

ಅಂಬೇಡ್ಕರ್‌ ಜೀವಂತವಾಗಿ ಇದ್ದಿದ್ದರೆ ಅವರನ್ನು ಕೊಲ್ಲುತ್ತಿದ್ದೆ: ಅವಹೇಳನಕಾರಿ ವಿಡಿಯೋ ವೈರಲ್

ಹೈದರಾಬಾದ್: ಸಂವಿಧಾನ ಶಿಲ್ಫಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹಮಾರಾ ಪ್ರಸಾದ್ ಬಂಧಿತ ವ್ಯಕ್ತಿ. ಹಮಾರಾ ಪ್ರಸಾದ್ ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.   ವಿಡಿಯೋದಲ್ಲಿ ಏನಿದೆ? : ಡಾ.ಬಿ.ಆರ್.ಅಂಬೇಡ್ಕರ್‌ ಅವರು ಬರೆದ ಪುಸ್ತಕವೊಂದನ್ನು ಹಿಡಿದುಕೊಂಡು ಹಮಾರಾ ಪ್ರಸಾದ್ ಗಾಂಧೀಜಿಯನ್ನು ಗೋಡ್ಸೆ ಕೊಂದಂತೆ, ಒಂದು ವೇಳೆ ಅಂಬೇಡ್ಕರ್‌ ಈಗ ಜೀವಂತವಾಗಿ ಇದ್ದಿದ್ದರೆ …

Read More »

ಡಬ್ಬಲ್‌ ಎಂಜಿನ್‌ ಸರ್ಕಾರದಿಂದ ಮಹಾಮೋಸ:H.D.K.

ಬೆಂಗಳೂರು: ‘ತೆರಿಗೆ ಸಂಗ್ರಹದಲ್ಲಿ ಕರ್ನಾಟಕವನ್ನು ತನ್ನ ಎಟಿಎಂ ಯಂತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿಯ ಡಬ್ಬಲ್‌ ಎಂಜಿನ್‌ ಸರ್ಕಾರ, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಮಹಾಮೋಸ ಮಾಡಿರುವುದು ಬಯಲಾಗಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯ ಮುಖಪುಟದಲ್ಲಿ ‘ವಿಶೇಷ ಅನುದಾನ: ರಾಜ್ಯಕ್ಕೆ ಸೊನ್ನೆ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ವಿಶೇಷ ವರದಿಯ ತುಣುಕಿನೊಂದಿಗೆ ಸರಣಿ ಟ್ವೀಟ್‌ ಮಾಡಿರುವ ಅವರು, ‘ಚುನಾವಣೆ ವರ್ಷದಲ್ಲಿ ತಿಂಗಳಿಗೆ ನಾಲ್ಕು ಬಾರಿ ರಾಜ್ಯಕ್ಕೆ ಬರುವ …

Read More »

 ಫೆ. 24ರಿಂದ ಬೆಳಗಾವಿ ಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಪ್ರವಾಸ:

ಗೋಕಾಕ: ಫೆ. 24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ ಗಾರ್ಡನ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆ. 28 ರಂದು ಸಂಜೆ ಗೋಕಾಕನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ …

Read More »

ಸರ್ವೋದಯ ಕರ್ನಾಟಕ ಪಕ್ಷದಿಂದ ಚುನಾವಣೆ ಸ್ಪರ್ಧೆ: ಚಾಮರಸ

ಧಾರವಾಡ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಸಾಕಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷವು 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ’ ಎಂದು ಪಕ್ಷದ ಅಧ್ಯಕ್ಷ ಚಾಮರಸ ಮಾಲಿಪಾಟೀಲ ತಿಳಿಸಿದರು.   ‘ರಾಜಕೀಯದಿಂದ ಭ್ರಷ್ಟಾಚಾರವನ್ನು ದೂರ ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ಈ ಬಾರಿ ಯುವ ಸಮುದಾಯಕ್ಕೆ ಹೆಚ್ಚಿನ ಸ್ಥಾನಗಳನ್ನು ನೀಡಲಾಗುತ್ತಿದೆ. ಜತೆಗೆ ರಾಜಕೀಯ ಎಂಬುದು ಹಣ ಗಳಿಕೆಯ ಉದ್ಯೋಗವಲ್ಲ, ಅದು ಸೇವಾ ಕ್ಷೇತ್ರ …

Read More »

ಕನ್ನಡಿಗರ ವಿರುದ್ಧ ಪ್ರಚೋದನಕಾರಿ ಭಾಷಣ: ಸಂಜಯ್‌ ರಾವುತ್‌ಗೆ ಷರತ್ತುಬದ್ಧ ಜಾಮೀನು

ಬೆಳಗಾವಿ: ಮಹಾರಾಷ್ಟ್ರದ ರಾಜ್ಯಸಭೆ ಸದಸ್ಯ ಹಾಗೂ ಶಿವಸೇನೆ ರಾಜ್ಯ ವಕ್ತಾರ ಸಂಜಯ್‌ ರಾವುತ್‌ ಸೇರಿದಂತೆ ಇಬ್ಬರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ. 2018ರ ಮಾರ್ಚ್‌ 30ರಂದು ಇಲ್ಲಿನ ಭಾಗ್ಯ ನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ವೆಬ್‌ಸೈಟ್‌ವೊಂದರ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಸಂಜಯ ರಾವುತ್‌ ಕನ್ನಡಿಗರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದರು.   ರಾವುತ್‌, ಬೆಳಗಾವಿಯ ಪತ್ರಕರ್ತರಾದ ಕಿರಣ್‌ ಠಾಕೂರ, …

Read More »

ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  ಗೋಕಾಕ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡಾರದ ಸುಭಾಷ್ ಗಿರಗೌಡ, ಭರತೇಶ ವೀರಭದ್ರನವರ, ಮಲ್ಲಪ್ಪ ರುದ್ರಗೌಡ, ಸುನಿಲ್ ರಾಠೋಡ, ಟಿಪ್ಪುಸುಲ್ತಾನನ ಮುಲ್ಲಾ, ಶಿವಾನಂದ ಬಸಪ್ಪ ಮಾಳಗಿ, ಪರುಶುರಾಮ ಜಾಮುನಿ ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಕಟಾಂಬಳೆ ಗ್ರಾಮದ …

Read More »

ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಎಲ್ಲದಕ್ಕೂ ಉತ್ತರ ನೀಡವ ಅವಶ್ಯಕತೆ ಇಲ್ಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

  ಗೋಕಾಕ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆಯುವುದು ಖಚಿತ. ಹೀಗಾಗಿ ಕಾಂಗ್ರೆಸ್‌ ಪಕ್ಷ ಕಳೆದ ಒಂದು ವರ್ಷದಿಂದಲೇ ಚುನಾವಣೆ ತಯಾರಿ ನಡೆಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಿಂದ ಕಳೆದ ಒಂದು ವರ್ಷದಲ್ಲಿ ಭಾರತ ಜೋಡೋ ಯಾತ್ರೆ, ಪ್ರಜಾಧ್ವನಿ ಯಾತ್ರೆ ಸೇರಿದಂತೆ 3ರಿಂದ 5 ಕಾರ್ಯಕ್ರಮಗಳು ಹಮ್ಮಿಕೊಂಡಿದ್ದು, ಈಗ ಮತ್ತೆ ವಿಧಾನಸಭಾ …

Read More »

ಅಲ ಮಹದಿ ಟ್ರೋಫಿ ವಿಜೇತರಾದ ಗೋಕಾಕ ಫುಟ್ಬಾಲ್ ಕ್ಲಬ್

ಗೋಕಾಕ: ಬೆಳಗಾವಿಯ ಅನಗೊಳ ಪ್ರದೇಶದಲ್ಲಿ ಅಲ ಮಹದಿ ಟ್ರೋಫಿ ಎಂಬ ಫುಟ್ ಬಾಲ್ ಪಂದ್ಯ ದವರು ಆಯೋಜನೆ ಮಾಡಿದ್ದ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾ ಗಿದ್ದಾರೆ U22 ಫೂಟ ಬಾಲ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾಗಿ ಮೊದಲನೆಯ ಬಾರಿಗೆ ಈ ಒಂದು ಟ್ರೋಫಿ ತನ್ನ ಮಡಿಲಿಗೆ ಗೋಕಾಕ ತಂಡ ಸೇರ್ಪಡೆ ಮಾಡಿಕೊಂಡಿದೆ . ಇದರ ನಾಯಕತ್ವ ವಹಿಸಿದಿ ಅರ್ಯನ ಸಾಯ ನ್ನವರ ಅವರು ತಮ್ಮ ತಂಡದ ಬಗ್ಗೆ …

Read More »