Breaking News

Uncategorized

ಸವದತ್ತಿ ಜಾತ್ರೆಗೆ ಹೋದ ಮಗ ಕಾಣೆ : ಊಟ ಬಿಟ್ಟು ಮಗನಿಗಾಗಿ ಕಾಯುತ್ತಿರುವ ತಾಯಿ ಹೃದಯ…!

ಬೆಳಗಾವಿ : ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಗೆ ಹೋಗಿ ವಾಪಸ್ ಮನೆಗೆ ಬರದೆ ಮಗ ಕಾಣೆಯಾಗಿದ್ದು ಇತ್ತ ಹೆತ್ತ ಕರುಳು ಮಗನಿಗಾಗಿ ಊಟ ಬಿಟ್ಟು ನಿದ್ರೆ ಮಾಡದೆ ಕಾಯುತ್ತಿರುವ ಘಟನೆ ಮನಕಲಕುವಂತಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಲಘುಮೇಶ್ವರ ಗ್ರಾಮದ ಲಕ್ಕಪ್ಪ ಭೀಮಪ್ಪ ಕೊಪ್ಪದ (40) ಕಾಣೆಯಾದ ವ್ಯಕ್ತಿ. ಈತನಿಗೆ ಮಾತನಾಡಲು ಬರುವುದಿಲ್ಲ. ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನದ ಜಾತ್ರೆಗೆ ಹೋಗಿದ್ದು ಈವರೆಗೂ ಮರಳಿ‌ ಮನೆಗೆ ಬಂದಿಲ್ಲ. ಮಗ ಮನೆಗೆ ಬರದ …

Read More »

ಡಿಸಿಸಿ ಬ್ಯಾಂಕ್ ಠೇವಣಿ 500 ಕೋಟಿ ರೂ. ಹೆಚ್ಚಳ

ಬೆಳಗಾವಿ: ಇಲ್ಲಿನ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ) ಹೊಸ ಆಡಳಿತ ಮಂಡಳಿಯ ಮೂರು ತಿಂಗಳ ಅವಧಿಯಲ್ಲಿ  ಠೇವಣಿ 500 ಕೋಟಿ ರೂ. ಹೆಚ್ಚಳವಾಗಿದೆ. ಆದರೆ, ಬ್ಯಾಂಕಿನ ವಹಿವಾಟು ಬಗ್ಗೆ ತಪ್ಪು ಮಾಹಿತಿ ನೀಡುತ್ತಿರುವ ಡಾ.ಮಹಾಂತೇಶ ಕಡಾಡಿ ಸೇರಿ ನಾಲ್ವರಿಗೆ ಕಾನೂನು ನೋಟೀಸ್ ನೀಡಲಾಗಿದೆ ಎಂದು ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕಿನಲ್ಲಿ ಯಾವುದೇ ರೀತಿಯ ಠೇವಣಿ ಕಡಿಮೆಯಾಗಿಲ್ಲ. ನಬಾರ್ಡ್ …

Read More »

ಗ್ರಾಮೀಣ ಭಾಗದಲ್ಲಿ ಮಹಿಳಾ ಸಬಲೀಕರಣಕ್ಕೆ ಶ್ರಮಿಸಲು ಕರೆ

ಬೆಳಗಾವಿ: ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸಬಲೀಕರಣದಿಂದ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ. ಹೀಗಾಗಿ ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ  ಗ್ರಾಪಂ ಮಟ್ಟದ ಮುಖ್ಯ ಪುಸ್ತಕ ಬರಹಗಾರರು, ಎಂಬಿಕೆ ಮತ್ತು ಎಲ್‌ಸಿಆರ್‌ಪಿ ಸಂಪನ್ಮೂಲ ವ್ಯಕ್ತಿಗಳ, ಕೃಷಿ ಸಖಿ,  ಪಶು ಸಖಿಯರ ಮೂಲಕ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ಬದ್ಧತೆಯಿಂದ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಗ್ರಾಮೀಣ ಮಹಿಳೆಯರ ಶ್ರೇಯೋಭೀವೃದ್ಧಿ ಉದ್ದೇಶದಿಂತ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ …

Read More »

ವಾಲ್ಮೀಕಿ ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಸಮುದಾಯಕ್ಕೆ ಸೈಟ್ ಭಾಗ್ಯ ಘೋಷಿಸಿದ ಸಚಿವ ಸತೀಶ್ ಜಾರಕಿಹೊಳಿ!

ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಜನಸಾಗರವೇ ಹರಿದುಬಂದಿದೆ. ವಾಲ್ಮೀಕಿ ಜಾತ್ರೆಯನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರೆ, ಸಚಿವ ಸತೀಶ್ ಜಾರಕಿಹೊಳಿ ಅವರು ಸಮುದಾಯದ ಜನರಿಗೆ ‘ನಿವೇಶನ’ ನೀಡುವ ಬಂಪರ್ ಆಫರ್ ಘೋಷಿಸಿದ್ದಾರೆ. ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠ ಆಯೋಜಿಸಿದ್ದ “ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ-2026 ಮತ್ತು ಜನ ಜಾಗೃತಿ ಜಾಥಾ ಮಹೋತ್ಸವ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ‌ ಈ ವೇಳೆ ಮಾತನಾಡಿದ ಅವರು ಬಿಜೆಪಿವರು 4 …

Read More »

ಕೋಟಿ ಸುರಿದರೂ ಬಳಕೆಯಾಗದ ಬೆಳಗಾವಿ ಬಸ್ ನಿಲ್ದಾಣ ಬಳಿಯ ಅಂಡರ್‌ಪಾಸ್: ರಸ್ತೆ ವಿಭಾಜಕ ಜಿಗಿಯುವ ಜನರಿಗೆ ಕಸ್ತೂರಿ ಭಾಂವಿ ಪಾಠ!

ಬೆಳಗಾವಿ: ಕೇಂದ್ರ ಬಸ್ ನಿಲ್ದಾಣದ ಬಳಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಅಂಡರ್‌ಪಾಸ್ ಬಿಳಿ ಆನೆಯಂತಾಗಿದೆಯೇ? ಸಂಚಾರಿ ನಿಯಮ ಗಾಳಿಗೆ ತೂರಿ ಜೀವದ ಹಂಗು ತೊರೆದು ರಸ್ತೆ ದಾಟುತ್ತಿರುವ ಸಾರ್ವಜನಿಕರಿಗೆ ಸಮಾಜ ಸೇವಕಿ ಕಸ್ತೂರಿ ಭಾಂವಿ ಇಂದು ಬಿಸಿ ಮುಟ್ಟಿಸಿದ್ದಾರೆ. ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಸಿಬಿಟಿವರೆಗಿನ ರಸ್ತೆಯಲ್ಲಿ ಪಾದಚಾರಿಗಳ ಸುರಕ್ಷತೆಗಾಗಿ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಅಂಡರ್‌ಪಾಸ್ ನಿರ್ಮಿಸಲಾಗಿದೆ. ಆದರೆ, ಈ ವ್ಯವಸ್ಥೆಯನ್ನು ಬಳಸುವ ಬದಲು ಸಾರ್ವಜನಿಕರು …

Read More »

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಇಂಡಿ ಕೂಟ ನಿರ್ಧರಿಸಿದೆ. ವಿಪಕ್ಷ ಸಂಸದರು ಪ್ರಧಾನಿ ಮೋದಿ  ವಿರುದ್ಧ ಅನಿರೀಕ್ಷಿತ ಕೃತ್ಯ ಎಸಗಲು ಸಂಚು ರೂಪಿಸಿದ ಆರೋಪ, ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷದವರಿಗೆ ಮಾತನಾಡಲು ಅವಕಾಶ ಕೊಡ್ತಿಲ್ಲ ಅನ್ನೋದು ಇಂಡಿ  ಕೂಟದ ಆರೋಪವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಚರ್ಚೆ ನಡೆದಿದೆ. ಇಂಡಿಯಾ ಮೈತ್ರಿಕೂಟದ ಭಾಗವಲ್ಲದ ತೃಣಮೂಲ …

Read More »

ಸಾವಿರಾರು ದಾಳಿಗಳ ನಡುವೆ ಹಿಂದೂ ಸಮಾಜ ಅಳಿಸಲು ಸಾಧ್ಯವಾಗಿಲ್ಲ: ನರೇಂದ್ರ ಜೀ

ಗದಗ: ಎರಡು ಸಾವಿರ ವರ್ಷಗಳಿಂದ ಹಿಂದೂಗಳ ಮೇಲೆ ಅನೇಕ ದಾಳಿಗಳು ನಡೆಯುತ್ತಾ ಬಂದಿವೆ. ಆದರೆ, ಇಂದಿಗೂ ನಮ್ಮ ಧರ್ಮ-ಪರಂಪರೆ ಅಳಿಸಲು ಯಾರಿಗೂ ಸಾಧ್ಯವಾಗಿಲ್ಲ ಎಂದು ಉತ್ತರ ಕರ್ನಾಟಕ ಆರ್‌ಎಸ್‌ಎಸ್ ಪ್ರಾಂತ ಪ್ರಚಾರಕ ನರೇಂದ್ರ ಜೀ ಹೇಳಿದರು. ಬೆಟಗೇರಿಯ ರಂಗಪ್ಪಜ್ಜನ ಮಠದ ಹತ್ತಿರದ ಬಯಲು ಜಾಗೆಯಲ್ಲಿ ನಡೆದ ಹಿಂದೂ ಸಮ್ಮೇಳನ ಉದ್ದೇಶಿಸಿ ಮಾತನಾಡಿ, ಹಿಂದೂ ಸಮ್ಮೇಳನ ಅನ್ಯಧರ್ಮದ ವಿರುದ್ದ ಮಾತನಾಡುವುದಲ್ಲ. ಇದು ಭಾರತ ಮಾತೆಯ ಜಾತ್ರೆಯಾಗಿದೆ. ಬೆಟಗೇರಿಯಲ್ಲಿ ನಮ್ಮ ೪೫ ಸಮುದಾಯಗಳು …

Read More »

12 ಸ್ಥಾನಗಳಿಗೆ ಕಾಂಗ್ರೆಸ್​ ಬೆಂಬಲಿಗರ ಗೆಲುವು

ಚಿಂತಾಮಣಿ: ತಾಲೂಕಿನ ವೈಜಕೂರು ರೇಷ್ಮೇ ಬೆಳೆಗಾರರ, ರೈತರ ಸೇವಾ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಒಟ್ಟು 12 ಸ್ಥಾನಗಳಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್​ ಬೆಂಬಲಿತ ಕಾಂಗ್ರೆಸ್​ ಬೆಂಬಲಿಗರು ಗೆಲುವು ಸಾಧಿಸುವ ಮೂಲಕ ವಿರೋಧ ಪಕ್ಷಕ್ಕೆ ಮುಖಭಂಗ ಮಾಡಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ ವನಿತಾ ಫಲಿತಾಂಶ ಘೋಷಿಸಿದರು. ಸಹಕಾರ ಸಂಘದ ಸಾಲಗಾರರ ಕ್ಷೇತ್ರದಲ್ಲಿ 10 ನಿರ್ದೇಶಕರು, ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ, ಠೇವಣೆದಾರರ ಕ್ಷೇತ್ರದಲ್ಲಿ ತಲಾ ಒಂದೊಂದು ನಿರ್ದೇಶಕ ಸ್ಥಾನಗಳಿಗೆ ಭಾನುವಾರ …

Read More »

ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ಆಡಿಸಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಪರಮೇಶ್ವರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ  ಪಂದ್ಯ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೀವಿ. ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ಕೂಡಾ ರಚಿಸಲಾಗಿತ್ತು. ಸಮಿತಿಯು ಕೂಡಾ ಒಂದಷ್ಟು ಶಿಫಾರಸು ಮಾಡಿದೆ. ಐಪಿಎಲ್ ಮ್ಯಾಚ್‌ಗಳು ಬರ್ತಿವೆ. ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ. ಬುಧವಾರ ನಾನು ಸಭೆ …

Read More »

ರಾಮಕೃಷ್ಣ ಮಿಷನ್ ವಾರ್ಷಿಕೋತ್ಸವದಲ್ಲಿ ಯುವ ಸಮ್ಮೇಳನ

ಬೆಳಗಾವಿ: ಸ್ವಾಮಿ ವಿವೇಕಾನಂದರು ನಮ್ಮ ದೇಶದ ಯುವಪೀಳಿಗೆ ಯಾವತ್ತಿಗೂ ದಾಸ್ಯ ಮನಸ್ಥಿತಿ ಹೊಂದಬಾರದು ಎಂದು ಬಯಸಿದ್ದರು. ಆದರೆ ಅವರು ಏನು ಆಗಬಾರದೆಂದು ಚಿಂತಿಸಿದ್ದರೋ ಇವತ್ತು ಅದೇ ಆಗುತ್ತಿದ್ದು, ಭಾರತ ಗಡಿ ಹೊರಗೆ ವಿಶ್ವದಲ್ಲೇ ಬಲಾಢ್ಯ ರಾಷ್ಟ್ರವಾಗುತ್ತ ಹೆಜ್ಜೆ ಹಾಕುತ್ತಿದ್ದರೇ, ಗಡಿಯೊಳಗೆ ದಾಸ್ಯ ಮನೋಭಾವದರೆ ತುಂಬಿಕೊಳ್ಳುತ್ತಿದ್ದಾರೆ ಎಂದು ಯುವ ಬ್ರಿಗೇಡ್ ಮುಖ್ಯಸ್ಥ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ನಗರದ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ವಾರ್ಷಿಕೋತ್ಸವ ಪ್ರಯುಕ್ತ ಶುಕ್ರವಾರ ಏರ್ಪಡಿಸಿದ್ದ …

Read More »