(ಬೆಳಗಾವಿ): ಒಂದೆಡೆ ಮಹಿಳೆಯರ ಪೂರ್ಣಕುಂಭ ಮೆರವಣಿಗೆ ಕಣ್ಮನ ಸೆಳೆದರೆ, ಮತ್ತೊಂದೆಡೆ ಮಕ್ಕಳ ಜಾನಪದ ಕಲೆಗಳ ಪ್ರದರ್ಶನ ಜನರನ್ನು ರಂಜಿಸಿತು. ಆಲಂಕೃತ ಚಕ್ಕಡಿಗಳು, ಟ್ರ್ಯಾಕ್ಟರ್ಗಳ ಸಾಲು ಗ್ರಾಮೀಣ ಸೊಗಡು ಸೂಸಿತು. ಇಡೀ ಊರಿಗೆ ಊರೇ ಸಂಭ್ರಮದಲ್ಲಿ ಮಿಂದೆದ್ದರೆ, ನೂರಾರು ಮಕ್ಕಳು ತಮ್ಮ ಪ್ರತಿಭೆ ಅನಾವರಣಗೊಳಿಸಿ ಬೀಗಿದರು. ಮಾಸ್ತಮರ್ಡಿಯಲ್ಲಿ ಸೋಮವಾರದಿಂದ ಆರಂಭಗೊಂಡ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ದಲ್ಲಿ ಇಂತಹ ದೃಶ್ಯಕಾವ್ಯಕ್ಕೆ ಸಾಕ್ಷಿಯಾಯಿತು. ಮಕ್ಕಳಲ್ಲಿ ಕಲಿಕೆ ಬಗ್ಗೆ ಪ್ರೇರಣೆ ತುಂಬಲು …
Read More »ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಗೆ ‘ಅತ್ಯುತ್ತಮ’ ಪ್ರಶಸ್ತಿ
ಬೆಳಗಾವಿ: ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಗೆ ಕರ್ನಾಟಕದ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ ಲಭಿಸಿದೆ. ಭಾರತ ಸರಕಾರದ ಗೃಹ ಸಚಿವಾಲಯ ಪ್ರತಿ ವರ್ಷ ಉತ್ತಮ ಪೊಲೀಸ್ ಠಾಣೆಗಳನ್ನು ನಿರ್ಧರಿಸುತ್ತಿದ್ದು ಕಳೆದ ವರ್ಷದಲ್ಲಿನ ಉತ್ತಮ ನಿರ್ವಹಣೆ ಹಾಗೂ ಕಾರ್ಯನಿರ್ವಹಣೆ ಪರಿಗಣಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ. ದೇಶಾದ್ಯಂತ ಪೊಲೀಸ್ ಠಾಣೆಗಳ ಶ್ರೇಯಾಂಕ ನಿರ್ಧಾರ ಗೃಹ ವ್ಯವಹಾರಗಳ ಸಚಿವಾಲಯದ ವಾರ್ಷಿಕ ಪ್ರಕ್ರಿಯೆಯಾಗಿದೆ. ಅಪರಾಧ ದರ, ತನಿಖೆ, ಪ್ರಕರಣಗಳ ವಿಲೇವಾರಿ, ಮೂಲಸೌಕರ್ಯ ಮತ್ತು ಸಾರ್ವಜನಿಕ ಸೇವೆಯ ವಿತರಣೆ ಸೇರಿದಂತೆ 165 …
Read More »(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳಕೆಗಾಗಿ ಜಿಲ್ಲೆಗೆ ನೀಡಲಾಗಿರುವ ಮತಯಂತ್ರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ …
Read More »ಆಂಧ್ರದ ರಾಜ್ಯಪಾಲರಾಗಿ ಕನ್ನಡಿಗ ನಜೀರ್
ಬೆಂಗಳೂರು: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಎಸ್. ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ‘ನೂತನವಾಗಿ ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ …
Read More »ಚುನಾವಣ ಸೇತುವೆ ಮೇಕೆದಾಟು
ಬೆಂಗಳೂರು ನಗರ ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವ ಯೋಜನೆಯಾದ ಮೇಕೆದಾಟು ಯೋಜನೆ ಈ ಬಾರಿಯ ಚುನಾವಣ ಅಸ್ತ್ರವಾಗುವ ಸಾಧ್ಯತೆಗಳಿವೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ರಾಜಕೀಯ ಮತ್ತು ಭಾವನಾತ್ಮಕ ಸಂಘರ್ಷಕ್ಕೆ ಕಾರಣವಾಗುವ ಮೇಕೆದಾಟು ಯೋಜನೆ ರಾಜಕೀಯ ಪಕ್ಷಗಳಿಗೆ ಆಯಾ ಸಂದರ್ಭದಲ್ಲಿ ರಾಜಕೀಯ ದಾಳ ಮತ್ತು ಚುನಾವಣ ಅಸ್ತ್ರವೂ ಆಗಿರುತ್ತದೆ. ಈ ಬಾರಿಯೂ ಅಷ್ಟೇ ದಕ್ಷಿಣ ಕರ್ನಾಟಕದಲ್ಲಿ ಮೇಕೆದಾಟು ಯೋಜನೆಯನ್ನು ಚುನಾವಣೆ ಅಸ್ತ್ರವನ್ನಾಗಿಸಲು ಎಲ್ಲ ಪಕ್ಷಗಳು ಪ್ರಯತ್ನಿಸಿವೆ. …
Read More »ಶಿವಮೊಗ್ಗ ಏರ್ ಪೋರ್ಟ್ ಗೆ ‘ಕುವೆಂಪು’ ಹೆಸರಿಡಲು ನಿರ್ಧಾರ : B.S ಯಡಿಯೂರಪ್ಪ
ಶಿವಮೊಗ್ಗ : ಶಿವಮೊಗ್ಗ ಏರ್ ಪೋರ್ಟ್ ಗೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ಶಿವಮೊಗ್ಗ ಏರ್ ಪೋರ್ಟ್ ಗೆ ನನ್ನ ಹೆಸರು ಇಡಬೇಡಿ ಎಂದು ಈಗಾಗಲೇ ಮನವಿ ಮಾಡಿದ್ದೇನೆ. ಶಿವಮೊಗ್ಗ ಏರ್ ಪೋರ್ಟ್ ಗೆ ಕುವೆಂಪು ಹೆಸರಿಡುವಂತೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ. ಫೆ.27 ರಂದು ಶಿವಮೊಗ್ಗ ಏರ್ ಪೋರ್ಟ್ ಗೆ ಮೋದಿ ಬರುತ್ತಾರೆ. ಮೋದಿ …
Read More »ಯಕ್ಷಗಾನ ಸಮ್ಮೇಳನ: ರೋಹಿತ್ ಚಕ್ರತೀರ್ಥ ವಿರುದ್ಧ ಬಿಲ್ಲವ ಸಮುದಾಯದ ಪ್ರತಿಭಟನೆ
ಉಡುಪಿ: ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣ ಮಾಡಲು ಆಗಮಿಸಿದ ಲೇಖಕ ರೋಹಿತ್ ಚಕ್ರತೀರ್ಥ ವಿರುದ್ಧ ಬಿಲ್ಲವ ಸಂಘಟನೆಗಳ ಮುಖಂಡರು ಶನಿವಾರ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟು ಗುರುಗಳಿಗೆ ಹಾಗೂ ಬಿಲ್ಲವ ಸಮಾಜಕ್ಕೆ ರೋಹಿತ್ ಚಕ್ರತೀರ್ಥ ಅವಮಾನ ಮಾಡಿದ್ದು ಸಮ್ಮೇಳನದಲ್ಲಿ ಭಾಷಣ ಮಾಡಲು ಅವಕಾಶ ನೀಡಬಾರದು ಎಂದು ಘೋಷಣೆ ಕೂಗಿದರು. ಸಮ್ಮೇಳನ ನಡೆಯುವ ಸ್ಥಳದ ಕಡೆಗೆ ಹೊರಟ ಪ್ರತಿಭಟನಾಕಾರರನ್ನು ರಾಷ್ಟ್ರೀಯ …
Read More »ಮೈತ್ರಿ ಸುಳಿವು ನೀಡಿದ ಗಾಲಿ ಜನಾರ್ದನ ರೆಡ್ಡಿ
ರಾಮದುರ್ಗ (ಬೆಳಗಾವಿ ಜಿಲ್ಲೆ): ‘ಚುನಾವಣೆ ಬಳಿಕ ರಾಜ್ಯದಲ್ಲಿ ಅಧಿಕಾರಕ್ಕೇರುತ್ತೇನೆ. ಇಲ್ಲದಿದ್ದರೆ ಅಧಿಕಾರಕ್ಕೆ ಬರುವವರ ಕೈ ಹಿಡಿದಾದರೂ ಅಧಿಕಾರ ಮಾಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಶನಿವಾರ ಹೇಳಿದರು. ಇಲ್ಲಿ ರೆಡ್ಡಿ ಸಮಾಜ ಹಮ್ಮಿಕೊಂಡಿದ್ದ ವೇಮನರ 611ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿದ ಅವರು, ‘ನನ್ನ ಕೈ ಯಾರು ಹಿಡಿಯುತ್ತಾರೆ, ನಾನು ಯಾರ ಕೈಹಿಡಿಯುತ್ತೇನೆ ಎನ್ನುವುದು ಚುನಾವಣೆ ಬಳಿಕ ಗೊತ್ತಾಗಲಿದೆ’ ಎನ್ನುವ ಮೂಲಕ ಮೈತ್ರಿಯ ಸುಳಿವು …
Read More »ಕಾಣೆಯಾಗಿದ ಗೋಕಾಕ ಪ್ರತಿಷ್ಠಿತ ಉದ್ಯಮಿ ಶವವಾಗಿ ಪತ್ತೆ
ಗೋಕಾಕ : ಗೋಕಾಕ್ ನಗರದ ಶುಕ್ರವಾರ ಸಂಜೆ ಅಪಹರಣಕ್ಕೆ ಒಳಗಾದ ಉದ್ಯಮಿಯ ಶವ ಕೊಲೆಯಲ್ಲಿ ಪರ್ಯವಸನಗೊಂಡಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ರಾಜು/ಮುನ್ನಾ ಝಂವರ ಎಂಬ ಗೋಕಾಕ ನಗರದ ಉದ್ಯಮಿ ಶುಕ್ರವಾರ ಸಂಜೆ 6:00 ರ ಸುಮಾರಿಗೆ ನಗರದ ಸಿಟಿ ಹೆಲ್ತ್ ಕೇರ್ ವೈದ್ಯ ಸಚಿನ್ ಶಿರಗಾಂವಿ ಜೊತೆ ಸೇರಿ ಮಾತುಕತೆ ನಡೆಸಿದ ನಂತರ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಸಹಾ ಅಷ್ಟೇ ಹೊತ್ತಿಗೆ ಬಂದ್ ಆಗಿತ್ತು. ಈ ಬಗ್ಗೆ ರಾಜು …
Read More »ನಮ್ಮ ಮೈತ್ರಿ ಸರಕಾರ ನ್ಯಾಯಸಮ್ಮತವಾಗಿದ್ದು, ಅವಧಿ ಪೂರೈಸುತ್ತದೆ: ಫಡ್ನವೀಸ್
ನಾಸಿಕ್: ಏಕನಾಥ್ ಶಿಂಧೆ-ಬಿಜೆಪಿ ಸರಕಾರವು ನ್ಯಾಯಸಮ್ಮತವಾಗಿದೆ ಮತ್ತು ಅಧಿಕಾರದಲ್ಲಿ ಮುಂದುವರಿಯುತ್ತದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಅದರ ಪತನದ ಬಗ್ಗೆ ಭವಿಷ್ಯ ನುಡಿದ ಬೆನ್ನಲ್ಲೇ, ಜೂನ್ 2022 ರಲ್ಲಿ ಅಧಿಕಾರಕ್ಕೆ ಬಂದ ಸರಕಾರವು ಸಂವಿಧಾನದ ನಿಯಮಗಳ ಪ್ರಕಾರ ರಚನೆಯಾಗಿದೆ ಎಂದು ಫಡ್ನವೀಸ್ ಹೇಳಿದ್ದಾರೆ. ನಾಸಿಕ್ ನಗರದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, ಏಕನಾಥ್ಅ ಶಿಂಧೆ ಅವರ ಬಣದ …
Read More »