ಬೆಳಗಾವಿ : ಭಗವದ್ಗೀತೆ ಪ್ರತಿಯೊಬ್ಬರ ಜೀವನಕ್ಕೆ, ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ ಎಂದು ಕರಿಯರ್ ಎಕ್ಸೆಲ್ ನಿರ್ದೇಶಕ, ನಿವೃತ್ತ ಪ್ರಾಧ್ಯಾಪಕ ವಿನೋಧ ದೇಶಪಾಂಡೆ ಹೇಳಿದ್ದಾರೆ. ಇಲ್ಲಿಯ ಸಂತಮೀರಾ ಶಾಲೆಯಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ಶನಿವಾರ ನಡೆದ ಭಗವದ್ಗೀತೆ ಅಭಿಯಾನದ ಸ್ಫರ್ಧಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡುತ್ತಿದ್ದರು. ಭಗವದ್ಗೀತೆ ಬೇರೆಲ್ಲ ಗ್ರಂಥಗಳ ಸಮಾವೇಶ ಇದ್ದಂತೆ. ಅದನ್ನು ಓದಿದರೆ ಎಲ್ಲ ವೇದ, ಪುರಾಣಗಳನ್ನೂ ಓದಿದಂತೆ. ಬದುಕಿನ ದಾರಿದೀಪ …
Read More »ಭ್ರಷ್ಟಾಚಾರದಲ್ಲಿ ರಾಜ್ಯ ನಂ.1, ಗ್ಯಾರಂಟಿಗಳಲ್ಲಿ ಕಾಲಹರಣ ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ
ಭ್ರಷ್ಟಾಚಾರದಲ್ಲಿ ರಾಜ್ಯ ನಂ.1, ಗ್ಯಾರಂಟಿಗಳಲ್ಲಿ ಕಾಲಹರಣ ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಅಭಿವೃದ್ಧಿ ಸಂಪೂರ್ಣ ನಿಂತಿದೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಏಕೆ?;ಛಲವಾದಿ ನಾರಾಯಣಸ್ವಾಮಿ ಬೆಂಗಳೂರು: ‘ಏಕತಾ ನಡಿಗೆ’ ಕಾರ್ಯಕ್ರಮದ ನಂತರ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ತೀವ್ರ …
Read More »ನಾವು ಡಿಸಿಎಂ ಮಾಡದಿದ್ದರೆ ಕಾಂಗ್ರೆಸ್ ಸಿದ್ದರಾಮಯ್ಯರನ್ನು ಮೂಸಿ ನೋಡುತ್ತಿರಲಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ನಾವು ಡಿಸಿಎಂ ಮಾಡದೇ ಇದಿದ್ದರೆ ಕಾಂಗ್ರೆಸ್ ಅವರನ್ನು ಮೂಸಿ ನೋಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಪಕ್ಷದಲ್ಲಿ ರಾಜಕೀಯ ಜನ್ಮ ಪಡೆದು ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿ ಬೇರೆ ಪಕ್ಷಕ್ಕೆ ಜಂಪ್ ಮಾಡಿದ ವ್ಯಕ್ತಿ, ನನ್ನ ರಾಜಕೀಯ ಉದ್ಧಾರಕ್ಕೆ ಮತ್ತೊಬ್ಬರು ಕಾರಣರು ಅಂತ ಕೋಲಾರದಲ್ಲಿ ಹೇಳಿದ್ದರು. ನಿನ್ನೆ ಚಾಮರಾಜನಗರದಲ್ಲಿ ಇದೇ …
Read More »ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸಿದ ಆರೋಪದಲ್ಲಿ ಉತ್ತರಪ್ರದೇಶ ಮೂಲದ ಇಬ್ಬರನ್ನು ಬಂಧಿಸಲಾಗಿದೆ.
ಮಲ್ಪೆ(ಉಡುಪಿ): ಮಲ್ಪೆಯ ಕಂಪನಿಯೊಂದರಲ್ಲಿ ನೌಕರಿ ಮಾಡುತ್ತಿದ್ದ ಇಬ್ಬರು ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸಿದ ಆರೋಪ ಎದುರಿಸುತ್ತಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ಮೂಲದ ರೋಹಿತ್ (29) ಮತ್ತು ಸಂತ್ರಿ (37) ಬಂಧಿತರಾಗಿದ್ದಾರೆ. ಮಲ್ಪೆಯ ಕೊಚ್ಚಿನ್ ಶಿಪ್ಯಾರ್ಡ್ ಕಂಪನಿ ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ ಅಧೀನದಲ್ಲಿದೆ. ಈ ಸಂಸ್ಥೆಯಿಂದ M/S Shushma Marine Private Limited ಎಂಬ ಸಂಸ್ಥೆಯ ಸಬ್‌ಕಂಟ್ರಾಕ್ಟ್ ಹೊಂದಿದ್ದು, ಈ ಸಂಸ್ಥೆಯಲ್ಲಿ ಉತ್ತರಪ್ರದೇಶ ರಾಜ್ಯದ …
Read More »ಇಂದಿನಿಂದ ಸಾರಿಗೆ, ಪೊಲೀಸ್ ಇಲಾಖೆಗಳಲ್ಲಿ ಬಾಕಿ ಇರುವ ಉಲ್ಲಂಘನಾ ಕೇಸ್ಗಳ ದಂಡ ಪಾವತಿಗೆ ಶೇ.50ರಷ್ಟು ವಿನಾಯಿತಿ: ಡಿ.12ರವರೆಗೆ ಮಾತ್ರ ಅವಕಾಶ
ಬೆಂಗಳೂರು: ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಸಂಚಾರ ಉಲ್ಲಂಘನೆ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ದಂಡ ಪಾವತಿಸಲು ಶೇಕಡಾ 50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಇ-ಚಲನ್ನಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇಕಡಾ 50ರಷ್ಟು ದಂಡಪಾವತಿಗೆ ವಿನಾಯಿತಿ ನೀಡಿತ್ತು. ಇದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಹೀಗಾಗಿ, ಟ್ರಾಫಿಕ್ ವೈಯಲೇಷನ್ ಕೇಸ್ಗಳಿಗೆ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಮತ್ತೆ ಅವಕಾಶ …
Read More »ಗೋಕಾಕ ನಗರದಲ್ಲಿ ನಡೆದಿದ್ದ ಬೃಹತ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿ
ಕುಖ್ಯಾತ ಮನೆಗಳ್ಳರ ಬಂಧನ: ₹33 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಜಪ್ತಿ ಗೋಕಾಕ ನಗರದಲ್ಲಿ ನಡೆದಿದ್ದ ಬೃಹತ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿ, ಭಾರೀ ಪ್ರಮಾಣದ ಚಿನ್ನಾಭರಣ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗೋಕಾಕ ಶಹರದ ಲಕ್ಷ್ಮೀ ಬಡಾವಣೆಯ ಸಚೀನ ಆಶೋಕ ಗೊಂದಳಿ ಎಂಬುವರ ಮನೆಯ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ಟೇಜರಿ ಬಾಗಿಲು ಒಡೆದು ಸುಮಾರು 330 …
Read More »ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು.
ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ (51) ಮೃತಪಟ್ಟವರು. ಇವರು ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರನ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದಾರೆ. ಮಂದಾರ್ತಿ ಮೇಳದಲ್ಲಿ ಇವರ ತಂದೆಯೂ ವೇಷಧಾರಿಯಾಗಿದ್ದರು. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರ ಗೌಡ …
Read More »ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್.ಸಿ/ಎಸ್.ಟಿ ಗುತ್ತಿಗೆದಾರರಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತುಸಭೆ
ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್.ಸಿ/ಎಸ್.ಟಿ ಗುತ್ತಿಗೆದಾರರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಚರ್ಚೆ ನಡೆಸಲಾಯಿತು.
Read More »ಖಾನಾಪೂರ ತಹಶೀಲ್ದಾರರಾಗಿ ಮಂಜುಳಾ ಕೆ. ನಾಯಕ್ ನೇಮಕ ; ದುಂಡಪ್ಪ ಕೋಮಾರ್ ವರ್ಗಾವಣೆ
ಖಾನಾಪೂರ :- ಖಾನಾಪೂರ ತಾಲೂಕಿನಲ್ಲಿ ಆಡಳಿತಾತ್ಮಕ ಬದಲಾವಣೆ ಸಂಭವಿಸಿದ್ದು, ತಾಲೂಕಿನ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ವರ್ಗಾಯಿಸಲಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಮಯ್ಯ ಅವರು ಈ ಸಂಬಂಧ ಆದೇಶಗಳನ್ನು ಹೊರಡಿಸಿದ್ದು, ಅವರ ಸ್ಥಾನಕ್ಕೆ ಶ್ರೀಮತಿ ಮಂಜುಳಾ ಕೆ. ನಾಯಕ್ ಅವರನ್ನು ಖಾನಾಪೂರದ ಹೊಸ ತಹಶೀಲ್ದಾರರಾಗಿ ನೇಮಕ ಮಾಡಲಾಗಿದೆ. ಈ ಕ್ರಮಕ್ಕೆ ಕಾರಣವಾದದ್ದು ಒಂದು ಕೃಷಿ ಸಂಬಂಧಿತ ಪ್ರಕರಣ. ಆ ಸಂಬಂಧಿತ ಪ್ರಕರಣದಲ್ಲಿ ಉಚ್ಚ ನ್ಯಾಯಾಲಯವು ಸರ್ವೇ ಕಾರ್ಯವನ್ನು ನಡೆಸುವಂತೆ ಸ್ಪಷ್ಟ ಆದೇಶ …
Read More »ಇದೇ ಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ನ್ಯೂಸ್ 18 ಕನ್ನಡ ಸುದ್ದಿವಾಹಿನಿ ವತಿಯಿಂದ ಕರುನಾಡ ಹಬ್ಬ
ಇದೇ ಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ನ್ಯೂಸ್ 18 ಕನ್ನಡ ಸುದ್ದಿವಾಹಿನಿ ವತಿಯಿಂದ ಕರುನಾಡ ಹಬ್ಬ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಯೋಜನೆ ಮಾಡಿರುವ ಕನ್ನಡ ಹಬ್ಬದಲ್ಲಿ ಮನೋರಂಜನೆಯ ಜೊತೆಗೆ ವೈವಿಧ್ಯಮಯ ತಿಂಡಿ, ತಿನಿಸು ಒಂದೇ ಸೂರಿನಡಿ ಸಿಗಲಿದೆ. ಹೆಸರಾಂತ ಕಲಾವಿದರು ಕರುನಾಡ ಹಬ್ಬದಲ್ಲಿ ನಿಮ್ಮನ್ನು ರಂಜಿಸಲಿದ್ದಾರೆ. ನೀವು ಬನ್ನಿ ನಿಮ್ಮ ಕುಟುಂಬಸ್ಥರು ಸ್ನೇಹಿತರನ್ನು ಕರೆ ತಂದು ಕನ್ನಡ ಹಬ್ಬ ಯಶಸ್ವಿಗೊಳಿಸಿ. ಕರುನಾಡ ಹಬ್ಬದ ಭಾಗವಾಗಿನಾಡಗೀತೆ ಗಾಯನಅಡಿಗೆ …
Read More »
Laxmi News 24×7