ಬೆಳಗಾವಿ: ಈ ಬಾರಿ ಬಿಜೆಪಿ ಆಪರೇಷನ್ ಕಮಲ ಮಾಡುವುದು ಹಗಲು ಕನಸು. ಪ್ರತಿಬಾರಿ ಆಪರೆಶನ್ ಕಮಲ ಸಕ್ಸಸ್ ಆಗಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ನಮ್ಮ ಲೆಕ್ಕದ ಪ್ರಕಾರ ನಮಗೆ ಬಹುಮತದ ಕೊರತೆಯಾಗಲ್ಲ. ಯಾರು ಏನೆ ಮಾಡಿದ್ರೂ ರಾಜ್ಯದ ಜನ ಕಾಂಗ್ರೆಸ್ ಪರ ಇದ್ದಾರೆ ಎಂದರು. ಮೈತ್ರಿಗೆ ಸಿದ್ಧವಿರುವುದಾಗಿ …
Read More »ಬೆಳಗಾವಿಯ 18 ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ
ಬೆಳಗಾವಿ: ಬೆಳಗಾವಿಯ ೧೮ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಶುಕ್ರವಾರ ನಗರದ ಆರ್ ಪಿಡಿ ಕಾಲೇಜನಲ್ಲಿ ಸ್ಥಾಪನೆ ಮಾಡಲಾದ ಸ್ಟ್ರಾಂಗ್ ರೂಂ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ …
Read More »ದಿ ಕೇರಳ ಸ್ಟೋರಿ’ ಚಿತ್ರ ತಂಡದ ಸದಸ್ಯನಿಗೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ಮುಂಬೈ (ಮಹಾರಾಷ್ಟ್ರ): ‘ದಿ ಕೇರಳ ಸ್ಟೋರಿ’ ಚಿತ್ರ ತಂಡದ ಸಿಬ್ಬಂದಿಯೊಬ್ಬರಿಗೆ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಸಿಬ್ಬಂದಿಯೊಬ್ಬರು ಅಪರಿಚಿತ ಸಂಖ್ಯೆಯಿಂದ ಸಂದೇಶ ಸ್ವೀಕರಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಹಾಗಾಗಿ, ಸಿಬ್ಬಂದಿಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಲಿಖಿತ ದೂರು ಸ್ವೀಕರಿಸದ ಕಾರಣ ಎಫ್‌ಐಆರ್ ದಾಖಲಿಸಿಲ್ಲ. ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರ ಮೇ …
Read More »ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನ
ಜೈಪುರ: ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನಗೊಂಡಿದ್ದು, ಇಬ್ಬರು ನಾಗರಿಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಹನುಮಾನ್ ಘರ್ ಗ್ರಾಮದ ಬಳಿ ನಡೆದಿದೆ. ಯುದ್ಧ ವಿಮಾನ ಪತನಗೊಂಡು ವಿಮಾನದ ಅವಶೇಷಗಳು ಮನೆಯ ಮೇಲೆ ಬಿದ್ದಿದೆ. ಪರಿಣಿಮ ಮನೆಯಲ್ಲಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ವಿಮಾನದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
Read More »ಜೆ.ಪಿ ನಡ್ದಾ ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ವಿರುದ್ಧ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸೋತರೆ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ …
Read More »ರಾಹುಲ್ ಗಾಂಧಿ ನಾಳೆ ಬೆಳಗಾವಿಗೆ:ಸತೀಶ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದು, ಯಮಕನಮರಡಿ ಮತಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಂಡಿರುವ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಯಮಕನಮರಡಿ ಮತಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ನಡೆಯುವ ಕಾರ್ಯಕ್ರಮದ ಸ್ಥಳವನ್ನು ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯುವ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ25 ಸಾವಿರ ಜನ ಸೇರುವ ನಿರೀಕ್ಷೆಇದೆ ಎಂದರು. ರಾಜ್ಯದಲ್ಲಿ …
Read More »ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ ಎಂದಸುಮಲತಾ
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 5 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಅಭ್ಯರ್ಥಿಗಳ ಪರ ಭರ್ಜರಿ ಮತಬೇಟೆಯಲ್ಲಿ ತೊಡಗಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಂಸದೆ ಸುಮಲತಾ ಇದ್ದಕ್ಕಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿರುವ ಘಟನೆ ನಡೆದಿದೆ. ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾ ಪರ ಚುನಾವಣ ಅಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳಿದರು. ಅಂಬರೀಶ್ ಅವರು 27 ವರ್ಷಗಳ ಕಾಲ …
Read More »ನಾನು ಮುಖ್ಯಮಂತ್ರಿ ಆಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ:ಸಿದ್ದರಾಮಯ್ಯ
ಬಾಗಲಕೋಟೆ: ನಾನು ಮುಖ್ಯಮಂತ್ರಿ ಆಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಾದಾಮಿ ಪಟ್ಟಣದ ಕಾಳಿದಾಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಮುಖ್ಯಮಂತ್ರಿ ಆಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ. ಭೀಮಸೇನ ಚಿಮ್ಮನಕಟ್ಟಿ ಅವರನ್ನು ಗೆಲ್ಲಿಸಿ. ಬಾದಾಮಿ ಜನತೆಗೆ ನಾನು ಸದಾ ಚಿರಋಣಿ …
Read More »ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ. ಕಾಂಗ್ರೆಸ್ಗೆ 141 ಸೀಟು ಬರೋದು ಪಕ್ಕಾ ಎಂದು ಡಿ ಕೆ ಶಿ
ಬೆಂಗಳೂರು: ಬಜರಂಗದಳ ನಿಷೇಧ ಘೋಷಣೆ ವಾಪಸ್ ಪಡೆಯೋದಿಲ್ಲ. ಬಿಜೆಪಿಯವರು ಯಾವ ರೀತಿ ಬೇಕಾದ್ರೂ ನೆರೇಷನ್ ಮಾಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಹಮ್ಮಿಕೊಂಡಿದ್ದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜರಂಗದಳಕ್ಕೂ ಆಂಜನೇಯನಿಗೂ ಏನು ಸಂಬಂಧ? ನಾನು ಕೂಡ ರಾಮ, ಆಂಜನೇಯ, ಶಿವನ ಭಕ್ತ. ನಾನು ಕೂಡ ದಿನ ಹನುಮಾನ್ ಚಾಲೀಸಾ ಪಠಣ ಮಾಡುತ್ತೇನೆ. ಕುಂಬಳಕಾಯಿ ಕಳ್ಳ ಅಂದ್ರೆ ಇವರ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತಾ …
Read More »ಕಾಂಗ್ರೆಸ್-ಜೆಡಿಎಸ್ ಎರಡೂ ಒಂದೇ, ಭ್ರಷ್ಟ, ಪರಿವಾರವಾದಿ ಪಕ್ಷಗಳು:ಮೋದಿ
ಚಿತ್ರದುರ್ಗ: ಕಾಂಗ್ರೆಸ್ ಮತ್ತು ಜೆಡಿಎಸ್ ನೋಡಲು ಬೇರೆ ಪಕ್ಷಗಳಂತೆ ಕಂಡು ಬಂದರೂ, ಎರಡೂ ಪಕ್ಷಗಳು ಒಂದೇ ಆಗಿವೆ. ಉಭಯ ಪಕ್ಷಗಳು ಭ್ರಷ್ಟ, ಪರಿವಾರವಾದಿಯಾಗಿವೆ. ಈ ಪಕ್ಷಗಳು ಸಮಾಜದಲ್ಲಿ ಒಡಕುಗಳನ್ನು ಬಿತ್ತುತ್ತವೆ. ಅವರ ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ನಿಧಾನಗತಿಯಲ್ಲಿತ್ತು. ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ರಚನೆಯಾಗುತ್ತಿದ್ದಂತೆ ಅಭಿವೃದ್ಧಿಗೆ ವೇಗ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಚಿತ್ರದುರ್ಗದಲ್ಲಿಂದು ಬಿಜೆಪಿ ಪರ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು, ಚಿತ್ರದುರ್ಗದ ಕೋಟೆಯನ್ನು ಏಳು …
Read More »
Laxmi News 24×7