ಬೆಂಗಳೂರು, ನವೆಂಬರ್ 14: ಸ್ಥಳೀಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಸಲುವಾಗಿ ರಾಜ್ಯದ ನಾಲ್ಕು ರೈಲ್ವೇ ನಿಲ್ದಾಣಗಳ ಮರುನಾಮಕರಣ (Renaming Of four Railway Stations) ಮಾಡಲು ಗೃಹ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಗುರುವಾರ ಮಾತನಾಡಿದ ರಾಜ್ಯ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ರಾಜ್ಯದ ನಾಲ್ಕು ರೈಲು ನಿಲ್ದಾಣಗಳಿಗೆ ಕರ್ನಾಟಕದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪರಂಪರೆಗೆ ಕೊಡುಗೆ ನೀಡಿದ ಸಂತರ ಹೆಸರನ್ನಿಡಲು ಮನವಿ ಮಾಡಿದ್ದೇವೆಂದು ಹೇಳಿದರು. ಯಾವ ಯಾವ ನಿಲ್ದಾಣಗಳ …
Read More »ಬೆಂಗಳೂರಿನ ವಿಕಾಸಸೌಧದಲ್ಲಿ ಸಭೆಯನ್ನು ನಡೆಸಿದ ಸಚಿವ ಸತೀಶ ಜಾರಕಿಹೊಳಿ..
ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಎನ್.ಹೆಚ್.ಎ.ಐ ವತಿಯಿಂದ ಉದ್ದೇಶಿಸಲಾದ ವಿವಿಧ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಬಾಕಿ ಇರುವ ಇತರ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕೇಂದ್ರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದ ಸಚಿವ ಸತೀಶ ಜಾರಕಿಹೊಳಿ.. ಸಭೆಯಲ್ಲಿ ಪ್ರಸ್ತುತ ಕಾಮಗಾರಿಗಳ ಗತಿಯನ್ನೂ, ಭೂಸ್ವಾಧೀನಕ್ಕೆ ಸಂಬಂಧಿಸಿದ ಸವಾಲುಗಳನ್ನೂ ಪರಿಶೀಲಿಸಲಾಗಿದ್ದು, ಯೋಜನೆಗಳನ್ನು ವೇಗಗತಿಯಲ್ಲಿ ಪೂರ್ಣಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಣಾಮಕಾರಿ …
Read More »ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
*ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಅಂಧ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ* * *ಭಾರತ – ನೇಪಾಳ ನಡುವಿನ ಪಂದ್ಯ ವೀಕ್ಷಿಸಿದ ಸಚಿವರು* *ಬೆಂಗಳೂರು:* ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ …
Read More »ಮಂಗಳೂರಿನ ಈ ಶಾಲೆಯಲ್ಲಿದ್ದಾರೆ ಏಳು ಅವಳಿ ಜವಳಿ ಮಕ್ಕಳು!
ಮಂಗಳೂರು: ಶಾಲೆಗಳಲ್ಲಿ ಒಂದೋ ಅಥವಾ ಎರಡು ಜೋಡಿ ಅವಳಿ ಜವಳಿ ಮಕ್ಕಳು ಇರುವುದು ಸಾಮಾನ್ಯ. ಆದರೆ ಮಂಗಳೂರಿನ ಶಾಲೆಯೊಂದರಲ್ಲಿ ಒಂದಲ್ಲ, ಎರಡಲ್ಲ, ಏಳು ಜೋಡಿ ಅವಳಿ ಜವಳಿ ಮಕ್ಕಳಿದ್ದಾರೆ. ಇವರು ಶಾಲೆಯ ಇತರ ವಿದ್ಯಾರ್ಥಿಗಳಿಗೆ, ಶಿಕ್ಷಕರ ಆಕರ್ಷಣೆಗೆ ಪಾತ್ರರಾಗಿದ್ದಾರೆ. ಈ ಏಳು ಅವಳಿ ಜವಳಿ ವಿದ್ಯಾರ್ಥಿಗಳಿರುವುದು ಮಂಗಳೂರಿನ ಹೊರವಲಯದ ವಾಮಂಜೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್ನಲ್ಲಿ. ಈ ಶಾಲೆಯ ಒಂದನೇ ತರಗತಿಯಲ್ಲಿ ಒಂದು ಜೋಡಿ, …
Read More »ನಾನು ಎಂದೂ ಕಾಂಗ್ರೆಸ್ ಬಿಡುವುದಿಲ್ಲ; ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದೇನೆ: ಕೆ.ಎನ್.ರಾಜಣ್ಣ
ತುಮಕೂರು: ನಾನು ಕಾಂಗ್ರೆಸ್ ಬಿಟ್ಟುಬಿಡುತ್ತೇನೆ ಎಂದು ಹೇಳಲಾಗುತ್ತಿದೆ. ಆದರೆ ನಾನು ಎಂದೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದೇನೆಯೇ ಹೊರತು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಸಾಲ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ಸಮಾನವಾದ ಅವಕಾಶ ನೀಡುವಂತಹ ಪಕ್ಷ ಕಾಂಗ್ರೆಸ್ ಆಗಿದೆ ಎಂದು ನಾನು …
Read More »ಸಕ್ಕರೆ ಕಾರ್ಖಾನೆ ಬಳಿ ಇದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆ: ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಕಾರ್ಖಾನೆ ಬಳಿ ಕಬ್ಬು ತುಂಬಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಗುರುವಾರ ನಡೆದಿದೆ. ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ಇದ್ದ ಹಲವು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಲಾಗಿದೆ. ಗೋದಾವರಿ ಸಕ್ಕರೆ ಕಾರ್ಖಾನೆಯನ್ನು ಶುಕ್ರವಾರದಿಂದ ಕಾರ್ಯಾರಂಭ ಮಾಡುವ ಉದ್ದೇಶದಿಂದ ಕಾರ್ಖಾನೆಯವರು ಸುಮಾರು, 150 ಟ್ರ್ಯಾಕ್ಟರ್ಗಳಲ್ಲಿ ಕಬ್ಬು ತುಂಬಿಸಿ ಇರಿಸಿದ್ದರು. ಆದರೆ ಕಾರ್ಖಾನೆಯ ಆಡಳಿತ …
Read More »ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ “ಡಾ. ಶಿವಬಸವ ಮಹಾಸ್ವಾಮಿ ಜಿ ರೈಲ್ವೆ ನಿಲ್ದಾಣ” ಎಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಿದೆ.
ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ “ಡಾ. ಶಿವಬಸವ ಮಹಾಸ್ವಾಮಿ ಜಿ ರೈಲ್ವೆ ನಿಲ್ದಾಣ” ಎಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಿದೆ. ಗುರು ಬಸವಣ್ಣನವರ ತತ್ವಗಳ ಪ್ರಚಾರಕರು, ಶ್ರೀ ರುದ್ರಾಕ್ಷಿ ಮಠದ ಪರಮಪೂಜ್ಯ ಲಿಂಗೈಕ್ಯ ಡಾ. ಶಿವಬಸವ ಮಹಾಸ್ವಾಮಿಗಳು ಗಡಿನಾಡು ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಹಾಗೂ ನಾಡು–ನುಡಿಯ ರಕ್ಷಣೆಯ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಶಿಕ್ಷಣ, ಆರೋಗ್ಯ, ಸಾಮಾಜಿಕ ಜಾಗೃತಿ ಮತ್ತು ಸಮಾಜಸೇವೆಯ ಕ್ಷೇತ್ರಗಳಲ್ಲಿ ಅವರು ನೀಡಿದ ಅಪ್ರತಿಮ …
Read More »ರಾಜ್ಯದಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ
ಬೆಂಗಳೂರು, ನವೆಂಬರ್ 13: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಜೊತೆಗೆ ಹಾವುಗಳ ಕಾಟವೂ ಹೆಚ್ಚಿದೆ. ಅತಿಯಾಗಿ ನಡೆಯುತ್ತಿರುವ ಕಾಂಕ್ರಿಟೀಕರಣದ ಪ್ರಭಾವದಿಂದಾಗಿ ಹಾವುಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿದ್ದು, ಅವುಗಳ ಕಡಿತ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿದೆ. ಕೇವಲ 10 ತಿಂಗಳ ಅವಧಿಯಲ್ಲಿ 18 ಸಾವಿರಕ್ಕೂ ಹೆಚ್ಚು ಹಾವು ಕಡಿತ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದು, ಒಟ್ಟು 125 ಜನ ಈವರೆಗೆ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಒಂದು ವಾರದ ಅವಧಿಯಲ್ಲೇ 512 ಹಾವು ಕಡಿತ ಕೇಸ್ಗಳು ಪತ್ತೆಯಾಗಿದ್ದು, ಆ …
Read More »ಹುಲಿ ದಾಳಿ ಮಾಡಿದರೂ ಮನುಷ್ಯನನ್ನು ತಿನ್ನಲ್ಲ: ಕಾರಣ ತಿಳಿಸಿದ ವನ್ಯಜೀವಿ ಛಾಯಾಗ್ರಾಹಕ
ಮೈಸೂರು: ಹುಲಿ ದಾಳಿಯಿಂದಾಗುತ್ತಿರುವ ಪ್ರಾಣ ಹಾನಿ ಹಾಗೂ ಇತರ ಹಾನಿಗಳನ್ನು ತಡೆಯುವ ನಿಟ್ಟಿನಲ್ಲಿ ಬಂಡೀಪುರ ಹಾಗೂ ನಾಗರಹೊಳೆಯ ವ್ಯಾಪ್ತಿಯ ವನ್ಯಜೀವಿ ಸಫಾರಿಯನ್ನು ರಾಜ್ಯ ಸರ್ಕಾರ ಬಂದ್ ಮಾಡಿದೆ. ಈ ಬಗ್ಗೆ ವನ್ಯಜೀವಿ ಛಾಯಾಗ್ರಾಹಕರು ಹಾಗೂ ರೈತ ಮುಖಂಡರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ವನ್ಯಜೀವಿ ಛಾಯಾಗ್ರಾಹಕ ಮಧುಸೂದನ್ ಮಾತನಾಡಿ, “ಹುಲಿ ದಾಳಿಗೆ ತುಂಬಾ ಕಾರಣಗಳಿರುತ್ತವೆ. ಒಂದು ಹುಲಿಗಳ ಸಂಖ್ಯೆ ಅಧಿಕವಾಗಿದೆ. ಹಾಗೆಯೇ ಕಾಡಿನೊಳಗೆ ಅವುಗಳ ಹೊಡೆದಾಟ ಮತ್ತು ಕೆಲ ಗಾಯಗೊಂಡ ಹುಲಿಗಳು ಕಾಡಂಚಿನ …
Read More »ಬೆಳಗಾವಿಯಲ್ಲಿ 29ನೇ ಕರ್ನಾಟಕ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್: 5 ಸಾವಿರ ಮಕ್ಕಳು ಭಾಗಿಯಾಗುವ ನಿರೀಕ್ಷೆ
ಬೆಳಗಾವಿ: 29ನೇ ಕರ್ನಾಟಕ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ (ಬೃಹತ್ ಮಕ್ಕಳ ಮೇಳ) ಇದೇ ಡಿಸೆಂಬರ್ 27ರಿಂದ ಜ.1ರ ವರೆಗೆ 6 ದಿನಗಳ ಕಾಲ ಬೆಳಗಾವಿಯಲ್ಲಿ ಏರ್ಪಡಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಘಟಕದ ಅಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ತಿಳಿಸಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಫಿನಿಕ್ಸ್ ಪಬ್ಲಿಕ್ ಶಾಲೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯದ …
Read More »
Laxmi News 24×7