Breaking News

Uncategorized

ಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಅಲಿಯಾಸ್​ ಚನ್ನೇಗೌಡ ನಿಧನ

ಮಂಡ್ಯ: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಅಲಿಯಾಸ್​ ಚನ್ನೇಗೌಡ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದವರಾದ ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿರಲಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೇ ನಟನಿಗೆ ಹೃದಯ ಸಂಬಂಧಿ ಸಮಸ್ಯೆ, ಕೆಮ್ಮು, ಉಬ್ಬಸ, ಶ್ರವಣದೋಷ ಸೇರಿದಂತೆ ವಯೋಸಹಜ ಅನಾರೋಗ್ಯ ಸಮಸ್ಯೆಗಳಿದ್ದವು. ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ. …

Read More »

ಹಚ್ಚೆಗಳು ಕೇವಲ ಶಾಯಿಯ ಪದಗಳಾಗಿರದೆ, ದುರಂತದ ಕ್ಷಣದಲ್ಲಿ ತಂದೆ ಮತ್ತು ಮಗನ ನಡುವಿನ ಅಂತಿಮ ಕೊಂಡಿಯಾಗಿ ಕಾರ್ಯನಿರ್ವಹಿಸಿದವು.

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಮಾರಕ ಸ್ಫೋಟದ ನಂತರ, ಚಾಂದನಿಚೌಕ್‌ನ ೩೪ ವರ್ಷದ ಉದ್ಯಮಿ ಅಮರ್ ಕಟಾರಿಯಾ ಅವರ ಮೃತದೇಹವನ್ನು ಅವರ ತಂದೆ ಗುರುತಿಸಿದರು. ಅವರ ತೋಳುಗಳ ಮೇಲೆ ಅಮ್ಮ_ನನ್ನ_ಮೊದಲ_ಪ್ರೀತಿ” ಮತ್ತು ಅಪ್ಪ_ನನ್ನ_ಶಕ್ತಿ” ಎಂದು ಬರೆದ ವಿಶಿಷ್ಟ ಹಚ್ಚೆಗಳು ಮತ್ತು ಅವರ ಪತ್ನಿಯ ಹೆಸರು ಕೃತಿ” ಎಂದು ಬರೆದಿದ್ದಕ್ಕಾಗಿ ಗುರುತಿಸಲು ಸುಲಭವಾಯಿತು. ಅಮರ್ ಕಟಾರಿಯಾ ಔಷಧೀಯ ವ್ಯವಹಾರವನ್ನು ನಡೆಸುತ್ತಿದ್ದ ಮತ್ತು ಬೈಕಿಂಗ್ ಮತ್ತು ಪ್ರಯಾಣವನ್ನು ಇಷ್ಟಪಡುತ್ತಿದ್ದ. ದಾಳಿಯಲ್ಲಿ ಕೊಲ್ಲಲ್ಪಟ್ಟ …

Read More »

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್​ ಕಾರ್ಡ್​ ವಿತರಣೆ: ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸಚಿವರ ಕರೆ

ಮಂಡ್ಯ: ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಬೆಂಗಳೂರು, ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಜರುಗಿತು. ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಕಾರ್ಮಿಕ ಸಚಿವ ಸಚಿವ ಸಂತೋಷ್ …

Read More »

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾವ್ಯ, ಕಥೆ, ವೈಚಾರಿಕ ಬರಹ ಮತ್ತು ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವ ವಿವಿಧ ಗಣ್ಯರ ಉಪಸ್ಥಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್’ನ ವತಿಯಿಂದ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಇಂದು ಬೆಳಗಾವಿಯ ಕುಮಾರಗಂಧರ್ವ ಕಲಾಮಂದಿರದಲ್ಲಿ ಕನ್ನಡ ಮತ್ತು …

Read More »

ಮಲಪ್ರಭಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಮಲಪ್ರಭಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಎರಡನೇ ಸಭೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಿತು. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಎರಡನೇ ಸಭೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಿತು. ಮಲಪ್ರಭಾ ನೀರಾವರಿ ಯೋಜನೆಯ ಸಲಹಾ ಸಮಿತಿಯ ಅಧ್ಯಕ್ಷರೂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ಅವರ …

Read More »

ದೆಹಲಿಯಲ್ಲಿ ಭೀಕರ ಸ್ಫೋಟ: ; ಚಲ್ಲಾಪಿಲ್ಲಿಯಾದ ದೇಹಗಳು

ನವದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಎಲ್ಲೆಂದರಲ್ಲಿ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಪ್ರಾಥಮಿಕ ಮಾಹಿತಿ ಪ್ರಕಾರ 10ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಂಜೆ 7 ಗಂಟೆ ಹೊತ್ತಿಗೆ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.ದೆಹಲಿ ಸ್ಫೋಟದ ಕುರಿತು ತನಿಖೆ ಆರಂಭವಾಗಿದೆ. ಘಟನೆ ಕುರಿತು ಕೇಂದ್ರ ಗೃಹ ಸಚಿವರು ಮಾಹಿತಿ ಪಡೆಯುತ್ತಿದ್ದಾರೆ. ಉಗ್ರರ ಕೈವಾಡವಿರಬಹುದೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.

Read More »

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್ ಲೈಫ್

ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಜೈಲಲ್ಲ (Parappana Agrahara Jail) ಐಷಾರಾಮಿ ರೆಸಾರ್ಟ್! ಐಸಿಸ್ ಉಗ್ರ ಜುಹಾದ್, ವಿಕೃತ ಕಾಮಿ ಉಮೇಶ್ ರೆಡ್ಡಿ, ಗೋಲ್ಡ್ ಸ್ಮಗ್ಲಿಂಗ್ ಕೇಸ್​ನಲ್ಲಿ ಜೈಲು ಸೇರಿದ ತೆಲುಗು ನಟ ತರುಣ್ ಇವರೆಲ್ಲ ಜೈಲಿನಲ್ಲಿ ಬಿಂದಾಸ್ ಆಗಿದ್ದಾರೆ. ಇವರು ಜಾಲಿ ಲೈಫ್ ಮಾಡುತ್ತಿರುವುದಕ್ಕೆ ಸಂಬಂಧಿಸಿದ ವೈರಲ್ ಆಗಿರುವ ವಿಡಿಯೋಗಳು ಸರ್ಕಾರವನ್ನೇ ನಡುಗಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಜೈಲಧಿಕಾರಿಗಳು, ಜೈಲಿನ ಎಲ್ಲಾ ಬ್ಯಾರಕ್‌ಗಳನ್ನು ಪರಿಶೀಲನೆ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಜೈಲಿನ ಸಿಬ್ಬಂದಿ …

Read More »

ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮ…

ಧಾರವಾಡ : ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಜಿ.ಬಿ.ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಕ್ಷಮತಾ ಹುಬ್ಬಳ್ಳಿ ಸಹಯೋಗದಲ್ಲಿ ಆಯೋಜಿಸಿದ ಖ್ಯಾತ ಹಾಸ್ಯ ನಟ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿಗಳು, ಸಾಹಿತಿಗಳು ಹಾಗೂ ಗಣ್ಯರು ಅನಿಸಿಕೆ ಹಂಚಿಕೊಂಡರು. ಪತ್ರಕರ್ತ ಡಾ. ಬಂಡು ಕುಲಕರ್ಣಿ ಮಾತನಾಡಿ, ಯಶವಂತ ಸರದೇಶಪಾಂಡೆ ಪ್ರಯೋಗಶೀಲ ವ್ಯಕ್ತಿ. ಕೇವಲ ರಂಗಭೂಮಿಯಷ್ಟೇ ಅಲ್ಲ, ಸಿನೆಮಾ ಕ್ಷೇತ್ರದಲ್ಲಿಯೂ ಪ್ರಯೋಗಗಳನ್ನು ಮಾಡಿ ಯಶ ಕಂಡರು. ತಮಗನಿಸಿದ್ದನ್ನು ಮಾಡುವುದರಲ್ಲಿ …

Read More »

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ…

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ… ಡಿನ್ನರ್ ಪಾರ್ಟಿಗೆ ಅವರೇನು ನನ್ನನ್ನು ಕರೆದಿಲ್ಲ; ಗೃಹ ಸಚಿವ ಜಿ.ಪರಮೇಶ್ವರ ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ವಿಚಾರ ಭಾರಿ ಸದ್ದು ಮಾಡುತ್ತಿರುವ ನಡುವೆ ದೆಹಲಿಯಲ್ಲೇ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ನ.16ರಂದು ದೆಹಲಿಯಲ್ಲಿ ಸಂಸದ ರಾಜಶೇಖರ ಹಿಟ್ನಾಳ್ ಮನೆಯಲ್ಲಿ ಡಿನ್ನರ್ ಪಾರ್ಟಿ ನಿಗದಿಯಾಗಿದ್ದು, ಔತಣಕೂಟದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಬಣದ ಸಚಿವರು, ಶಾಸಕರು ಮತ್ತು ಸಂಸದರು ಕೂಡ ಈ ವೇಳೆ ಉಪಸ್ಥಿತರಿರಲಿದ್ದು, ಡಿನ್ನರ್ …

Read More »

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ… ಪರಿಸರ ಜಾಗೃತಿಯ ಸಂದೇಶ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ವೃಕ್ಷಾರೋಪಣ ಮಾಡಿ ಪರಿಸರ ಸಂರಕ್ಷಣೆಯ ಸಂದೇಶವನ್ನು ನೀಡಲಾಯಿತು. ಇಂದು ಭಾನುವಾರ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದ ಶ್ರೀ ಕಲಮೇಶ್ವರ ದೇವಸ್ಥಾನದ ಆವರಣದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ಅಧ್ಯಕ್ಷ ವಿರೇಶ್ ಬಸಯ್ಯಾ ಹಿರೇಮಠ ಅವರ ನೇತೃತ್ವದಲ್ಲಿ ಬಿಲ್ವಪತ್ರೆ ಮತ್ತು ಇನ್ನಿತರ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯನ್ನು ಮೂಡಿಸಲಾಯಿತು. …

Read More »