Breaking News

Uncategorized

ಸಿನಿಮಾ ಶೈಲಿಯಲ್ಲಿ ಬ್ಯಾಂಕಿಗೆ ವಂಚನೆ: ತಂಗಿ ಮದ್ವೆ ಸಾಲಕ್ಕೆ ಅಣ್ಣ ಜೈಲು ಸೇರುವ ಪರಿಸ್ಥಿತಿ

ನೆಲಮಂಗಲ, ಡಿಸೆಂಬರ್​ 27: ಆಭರಣ ಮೌಲ್ಯಮಾಪಕನಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್​ಗೆ 23 ಲಕ್ಷಕ್ಕೂ ಹೆಚ್ಚು ಹಣ ವಂಚನೆ (fraud) ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ. ಆಭರಣ ಮೌಲ್ಯಮಾಪಕ ಮಂಜುನಾಥ ವಂಚಕ. ನೆಲಮಂಗಲ ಪೊಲೀಸ್ ಠಾಣೆಗೆ ಮ್ಯಾನೇಜರ್ ಆನಂದ್ ದೂರು ನೀಡುತ್ತಿದ್ದಂತೆ ಇತ್ತ ವಂಚಕ ಪರಾರಿ ಆಗಿದ್ದಾರೆ. ತಂಗಿಯ ಮದುವೆ ಸಾಲಕ್ಕೆ ಅಣ್ಣ ಜೈಲು ಸೇರುವ ಪರಿಸ್ಥಿತಿ ಎದರಾಗಿದೆ.ಅರ್ಧ ಕೆಜಿಯಷ್ಟು ನಕಲಿ ಚಿನ್ನಾಭರಣ ಅಡವಿಟ್ಟು ಮಂಜುನಾಥ …

Read More »

ಚಾಟಿಯಿಂದತಮಗೆ ತಾವೇ ಹೊಡೆದುಕೊಂಡಅಣ್ಣಮಲೈ

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯಲ್ಲಿ ಓದುತ್ತಿದ್ದ ಇಂಜಿನಿಯರಿಂಗ್​ ವಿಧ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್​ನಲ್ಲಿ …

Read More »

ಅನ್ಯ ರಾಜ್ಯಗಳಿಂದ ಸಾಗಿಸುತ್ತಿದ್ದ ₹86 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಮಾದಕ ದಂಧೆಕೋರರ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, 8 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ನಗರವನ್ನು ಸಂಪರ್ಕಿಸುವ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ ರೈಲುಗಳ ಮೂಲಕ ನಗರಕ್ಕೆ ಗಾಂಜಾ ಪೂರೈಸುತ್ತಿದ್ದ ಪ್ರತ್ಯೇಕ 5 ಪ್ರಕರಣಗಳಲ್ಲಿ 8 ಜನರನ್ನು ರಾಜ್ಯ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಆರೋಪಿಗಳಿಂದ ಸರಿಸುಮಾರು 86 ಲಕ್ಷ ರೂ. ಮೌಲ್ಯದ ಗಾಂಜಾ …

Read More »

ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ರಾಷ್ಟ್ರೀಯ‌ ನಾಯಕರ ಸ್ವಾಗತಕ್ಕೆ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ತುದಿಗಾಲ ಮೇಲೆ‌ ನಿಂತಿದ್ದಾರೆ.

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ರಾಷ್ಟ್ರೀಯ‌ ನಾಯಕರ ಸ್ವಾಗತಕ್ಕೆ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ತುದಿಗಾಲ ಮೇಲೆ‌ ನಿಂತಿದ್ದಾರೆ. ಇಡೀ ದೇಶದ ಚಿತ್ತ ಈಗ ಬೆಳಗಾವಿಯತ್ತ ನೆಟ್ಟಿದೆ. 1924, ಡಿ.26ರಂದು ಬಾಪೂಜಿ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆದಿದ್ದ ಅಂದಿನ ವಿಜಯ ನಗರದ, ಇಂದಿನ ಟಿಳಕವಾಡಿ ವೀರಸೌಧ ಮತ್ತೊಂದು ಐತಿಹಾಸಿಕ ಘಟನೆಗೆ …

Read More »

ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಇನ್ನೆರಡು ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದ ಚಿಕ್ಕೋಡಿ ಯೋಧ ಸಾವು

ಚಿಕ್ಕೋಡಿ: ಮಣಿಪುರದ ಬೊಂಬಾಲಾ ಕ್ಷೇತ್ರದಲ್ಲಿ ಸೇನಾ ವಾಹನ ಪಲ್ಟಿಯಾಗಿ ಚಿಕ್ಕೋಡಿ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪಾನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತಾ(42) ಸಾವನ್ನಪ್ಪಿದವರು. ಸೋಮವಾರ ಮಧ್ಯಾಹ್ನ ದಾರಿಮಧ್ಯೆ ಗುಡ್ಡ ಕುಸಿದ ಪರಿಣಾಮ ಸೇನೆಯ 2.5 ಡೈಟನ್ ವಾಹನ‌ ಪಲ್ಟಿಯಾಗಿತ್ತು. ಸೇನಾ ವಾಹನದಲ್ಲಿ ಒಟ್ಟು ಆರು ಜನ ಯೋಧರು ಪ್ರಯಾಣಿಸುತ್ತಿದ್ದರು. ಆರು ಯೋಧರ ಪೈಕಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವ …

Read More »

ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆ…ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ- ಸಚಿವ ಈಶ್ವರ ಖಂಡ್ರೆ

ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆ…ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ- ಸಚಿವ ಈಶ್ವರ ಖಂಡ್ರೆ ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆಸುಳ್ಳನ್ನು ಸತ್ಯವಾಗಿ ಬಿಂಬಿಸುತ್ತಾರೆ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ಬಿಜೆಪಿಗರಿಗೆ ಸುಳ್ಳು ಆರೋಪ ಮಾಡಿ ರೂಢಿಯಾಗಿ ಬಿಟ್ಟಿದೆ. ಸುಳ್ಳನ್ನು ಸತ್ಯವಾಗಿ ಬಿಂಬಿಸುತ್ತಾರೆ. ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ. ಅವರೇ ತನಿಖೆ ಮಾಡಿದಂತೆ …

Read More »

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. :C.M.

1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಗಾಂಧೀಜಿಯವರ ವಿಚಾರಧಾರೆಯನ್ನು ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿದ್ದು, ಆ ಪ್ರಯುಕ್ತ ಶತಮಾನೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಸುವರ್ಣಸೌಧದ ಪಕ್ಕದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣದ ಕಾರ್ಯಕ್ರಮವಿದ್ದು, 27ರಂದು …

Read More »

ವಿಶೇಷ ಅನುದಾನದಲ್ಲಿ ಅಮನ್ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ

ಬೆಳಗಾವಿಯ ಅಮನ್ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ ಬೆಳಗಾವಿಯ ಅಮನ್ ನಗರದಲ್ಲಿ ಅಭಿವೃದ್ಧಿ ಕಾರ್ಯ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ ವಿಶೇಷ ಅನುದಾನದಲ್ಲಿ ಕಾಮಗಾರಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸದಾ ಬದ್ಧ ಬೆಳಗಾವಿ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಮನ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿಯ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಮನ್ ನಗರದಲ್ಲಿ …

Read More »

ಶೇ.80ರಷ್ಟು ಸ್ತ್ರೀಪೀಡಕರು, ನಿಂದಕರು, ಅತ್ಯಾಚಾರಿಗಳು ಬಿಜೆಪಿ ಪಕ್ಷದಲ್ಲೇ ಇದ್ದಾರೆ.

ಸ್ವತಃ ಗೂಂಡಾಗಳನ್ನು ಬಿಟ್ಟು ತನ್ನ ಮೇಲೆ ತಾನೇ ಮೊಟ್ಟೆ ಎಸೆಯುವಂತೆ ಮಾಡಿರುವ ಕಾಮುಕ ಮುನಿರತ್ನ ಜನರ ಛೀಮಾರಿಯಿಂದ ತಪ್ಪಿಸಿಕೊಳ್ಳಲು ಡ್ರಾಮ ಶುರು ಮಾಡಿದ್ದಾನೆ. ದಲಿತರನ್ನು, ಒಕ್ಕಲಿಗರನ್ನು ಹಾಗೂ ಮಹಿಳೆಯರನ್ನು ಅಶ್ಲೀಲವಾಗಿ ಮಾತನಾಡಿರುವ ಮುನಿರತ್ನನ ಶಾಸಕ ಸ್ಥಾನವೇ ಅಡಕತ್ತರಿಯಲ್ಲಿದೆ. ಮುನಿರತ್ನ, ಸಿ.ಟಿ.ರವಿಯಂತವರಿಗೆ ಬಿಜೆಪಿ ಬೆಂಬಲಿಸುತ್ತಿದೆ ಎನ್ನುವುದೇ ಅದರ ನಿಜಬಣ್ಣ ಬಯಲುಗೊಳಿಸಿದೆ. ಸ್ತ್ರೀಪೀಡಕರು, ಜಾತಿ ನಿಂದಕರೆಲ್ಲ ಬಿಜೆಪಿಗೆ ಪ್ರಿಯವಾಗುವುದು ಯಾಕೆ? ಶೇ.80ರಷ್ಟು ಸ್ತ್ರೀಪೀಡಕರು, ನಿಂದಕರು, ಅತ್ಯಾಚಾರಿಗಳು ಬಿಜೆಪಿ ಪಕ್ಷದಲ್ಲೇ ಇದ್ದಾರೆ. ಯಡಿಯೂರಪ್ಪನವರೇ ಪೋಕ್ಸೋ …

Read More »

ವಿಸ್ತಾರ ನ್ಯೂಸ್ ಬೆಳಗಾವಿ ಜಿಲ್ಲಾ ವರದಿಗಾರ ಮಂಜುನಾಥ ಹುಡೇದರವರ ಸಹೋದರ, ಇಂಡಸ್ ಇಂಡ್ ಬ್ಯಾಂಕ್ ಉದ್ಯೋಗಿ ಪ್ರಮೋದ ಅಶೋಕ ಹುಡೇದ ನಿಧನ

ಬೆಳಗಾವಿ : ವಿಸ್ತಾರ ನ್ಯೂಸ್ ಬೆಳಗಾವಿ ಜಿಲ್ಲಾ ವರದಿಗಾರ ಮಂಜುನಾಥ ಹುಡೇದರವರ ಸಹೋದರ, ಇಂಡಸ್ ಇಂಡ್ ಬ್ಯಾಂಕ್ ಉದ್ಯೋಗಿ ಪ್ರಮೋದ ಅಶೋಕ ಹುಡೇದ ಅವರ ಅಕಾಲಿಕ ನಿಧನ ಪ್ರಮೋದ ಹುಡೇದ ಬುಧವಾರ ಬೆಳಗ್ಗೆ ತಮ್ಮ 26 ನೇ ವಯಸ್ಸಿನಲ್ಲಿ ನಿಪ್ಪಾಣಿಯಲ್ಲಿ ಹೃದಯಾಘಾತದಿಂದ ನಿಧನರಾಗಿರುವ ಸುದ್ದಿ ತಿಳಿದು ಮನಸ್ಸಿಗೆ ತುಂಬಾ ಬೇಸರವಾಯಿತು. ಇಷ್ಟು ಚಿಕ್ಕ ವಯಸ್ಸಿನಲ್ಲಿ, ತಂದೆ, ತಾಯಿ, ಸಹೋದರರು, ಪತ್ನಿ ಮತ್ತು ಒಂದು ವರ್ಷದ ಚಿಕ್ಕ ಮಗುವನ್ನು ಬಿಟ್ಟು ಅವರು …

Read More »