ದಾವಣಗೆರೆ: ನಮ್ಮ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ ಎಂದು ಬಸವ ಧರ್ಮ ಪೀಠದ ಮಾತಾ ಗಂಗಾದೇವಿ ಪ್ರತ್ಯೇಕ ಲಿಂಗಾಯತ ಧರ್ಮದ ಧ್ವನಿ ಎತ್ತಿದರು. ನಗರದಲ್ಲಿಂದು ಮಾತನಾಡಿದ ಅವರು, ಜನವರಿ 11ರಿಂದ ಮೂರು ದಿನಗಳ ಕಾಲ ಕೂಡಲ ಸಂಗಮದಲ್ಲಿ ಬಸವ ಧರ್ಮ ಸಮಾವೇಶ ನಡೆಸಲಾಗುತ್ತದೆ. ಮೂರು ದಿನಗಳ ಕಾಲ ಒಂದೊಂದು ಕಾರ್ಯಕ್ರಮ ನಡೆಸಲಾಗುವುದು. ಇಂದು ದಾವಣಗೆರೆಯಲ್ಲಿ ಜಿಲ್ಲಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಬಸವ ಧರ್ಮದ ಜಾಗೃತಿಗಾಗಿ ಎಲ್ಲ ಕಡೆ ಸಮಾವೇಶ …
Read More »ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು
ಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರು ಬಾಲಕಿಯರಿಗಾಗಿ ಹುಡುಕಾಟ ಮುಂದುವರೆದಿದೆ. ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿ ಹಾಗೂ ಓರ್ವ ಬಾಲಕನನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಲಕಿ ಆಫ್ರಿನ್ (13) ಮೃತಪಟ್ಟಿದ್ದಾಳೆ. ಆಯಿಷಾ ಮೃತದೇಹ ನಿನ್ನೆಯೇ ಸಿಕ್ಕಿದ್ದು, ಹನಿ …
Read More »ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ
ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದೆ. ನಂತರ ನಡೆದ ಪಥಸಂಚಲನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿ, ಕನ್ನಡದ ವೈಭವ, ಏಕತೆ ಮತ್ತು ಗೌರವವನ್ನು ಹೊಳೆಯುವ ರಾಜ್ಯೋತ್ಸವದ ಸಂದೇಶವನ್ನು ಜನತೆಗೆ ನೀಡಿದರು. ಈ ವೇಳೆ ಬೆಳಗಾವಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಎಲ್ಲಾ ಪುರಸ್ಕೃತರನ್ನು ಸನ್ಮಾನಿಸಿ, ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. …
Read More »ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ
ಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ತನ್ನ ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ವ್ಯಕ್ತಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಗುಂಡಿಮಾಳ ಗ್ರಾಮದ ನಂದಿನಿ ಹಾಗೂ ಈತನ ಪ್ರಿಯಕರ ದಿನಕರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ರಾಜಶೇಖರ್ ಎಂಬಾತನ ಪತ್ನಿ ನಂದಿನಿಯು ದಿನಕರ್ ಎಂಬಾತನ ವಿವಾಹೇತರ ಸಂಬಂಧ ಇರಿಸಿಕೊಂಡಿದ್ದಳು. …
Read More »ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯ ಪುನರ್ ನಿರ್ಮಾಣ: 1545.23 ಕೋಟಿ ಅನುದಾನ ಕೋರಿ ಕೇಂದ್ರಕ್ಕೆ ಪತ್ರ
ಬೆಂಗಳೂರು: ನೈಋತ್ಯ ಮುಂಗಾರು ಅವಧಿಯಲ್ಲಿ ಭಾರೀ ಮಳೆಯಿಂದಾಗಿ ನದಿಗಳ ಪ್ರವಾಹ ಉಂಟಾಗಿ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ 1545.23 ಕೋಟಿ ರೂ. ಅನುದಾನ ನೀಡುವಂತೆ ಕೋರಿ ಕೇಂದ್ರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ (ಎನ್ಡಿಆರ್ಎಫ್) ಪತ್ರ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿವೆ. ಬೆಳೆ ನಾಶವಲ್ಲದೇ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಬಿರುಕು ಮೂಡಿ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಚೆಕ್ ಡ್ಯಾಂ ಹಾಗೂ ಮನೆಗಳು ಇನ್ನಿತರ ಮೂಲಸೌಕರ್ಯಗಳಿಗೆ ಅಡಚಣೆಯಾಗಿದೆ. …
Read More »ಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ.
ಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ. ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಯೋಜನೆ ಗಳನ್ನು ಸರಿಯಾದ ಫಲಾನುಭವಿಗಳಿಗೆ ಮ೭ಟ್ಟಿಸುವ ಕಾರ್ಯ ಮಾಡಬೇಕು ಎಂದು ಬೆಳಗಾವಿ ಲೋಕಾಯುಕ್ತ ಅಧಿಕಾರಿ ವೆಂಕಟೇಶ ಯಡಹಳ್ಳಿ ಹೇಳಿದರು. ಅವರು ಇಂದು ಹುಕ್ಕೇರಿ ನಗರದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಜರುಗಿದ ಲೋಕಾಯುಕ್ತ ಜಾಗೃತಿ ಶಿಬಿರದಲ್ಲಿ ಭಾಗ ವಹಿಸಿ ತಾಲೂಕಿನ ವಿವಿಧ ಅಧಿಕಾರಿಗಳಿಗೆ ಲೋಕಾಯುಕ್ತ ನಿಯಮಗಳ …
Read More »ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಸ್ವಾಮೀಜಿಯಿಂದ ನಿರ್ಬಂಧ ಹಿನ್ನೆಲೆ. ರಾಯಬಾಗದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಭಕ್ತವೃಂದದಿಂದ ಪ್ರತಿಭಟನೆ.
ಚಿಕ್ಕೋಡಿ : ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಸ್ವಾಮೀಜಿಯಿಂದ ನಿರ್ಬಂಧ ಹಿನ್ನೆಲೆ. ರಾಯಬಾಗದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಭಕ್ತವೃಂದದಿಂದ ಪ್ರತಿಭಟನೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಭಕ್ತವೃಂದರು. ಸ್ವಾಮೀಜಿ ಮೇಲೆ ವಿಧಿಸಿದ ನಿರ್ಬಂಧ ವಾಪಾಸ್ಸು ಪಡೆಯುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಪ್ರತಿಭಟನೆ. ಕನ್ಹೇರಿ ಮಠದ ಸ್ವಾಮೀಜಿಯವರಿಗೆ ನಿರ್ಭಂಧ ಹೇರಿರುವ ರಾಜ್ಯ ಸರ್ಕಾರ.
Read More »ಸಕ್ರೆಬೈಲು ಆನೆ ಬಾಲಣ್ಣನ ಕಿವಿ ಕತ್ತರಿಸಿದ ವೈದ್ಯರ ತಂಡ: ಚಿಕಿತ್ಸೆ ಕುರಿತು ಡಿಎಫ್ಒ ಹೇಳಿದ್ದಿಷ್ಟು
ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದ ಬಾಲಣ್ಣ ಎಂಬ ಹೆಸರಿನ ಸಾಕಾನೆಯ ಬಲ ಕಿವಿಯನ್ನು ಬೆಂಗಳೂರಿನ ವೈದ್ಯರ ತಂಡವು ಕಟ್ ಮಾಡಿದೆ. ಆನೆಗೆ ಕಿವಿಯ ಬಳಿ ಸಣ್ಣದೊಂದು ಗಾಯವಾಗಿತ್ತು. ಗಾಯಕ್ಕೆ ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣ ಅದು ದೊಡ್ಡದಾಗಿತ್ತು. ಹಾಗಾಗಿ ಕಿವಿಯನ್ನೇ ಕತ್ತರಿಸಲಾಗಿದೆ. ಕಳೆದ ತಿಂಗಳು ಶಿವಮೊಗ್ಗದಲ್ಲಿ ನಡೆದಿದ್ದ ಅದ್ಧೂರಿ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಬಾಲಣ್ಣ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿತ್ತು. ಬೆಂಗಳೂರು ವೈದ್ಯರಿಂದ ಸೂಕ್ತ ಚಿಕಿತ್ಸೆ: ಚಿಕಿತ್ಸೆ ಸಂದರ್ಭದಲ್ಲಿ ಬಾಲಣ್ಣ ಆನೆಯ …
Read More »ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ:,ಶೆಟ್ಟರ್
ಚಾಮರಾಜನಗರ: ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ, ಸರ್ಕಾರನೂ ಇರಲ್ಲಾ ಎಂದು ಮಾಜಿ ಸಿಎಂ, ಬೆಳಗಾವಿ ಹಾಲಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಆಂತರಿಕ ಫೈಟ್ ಜೋರಿದೆ, ಎರಡೂವರೆ ವರ್ಷ ಅಧಿಕಾರ ಹಂಚಿಕೆಗೆ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟೇ ಬಂದಿದ್ದಾರೆ. …
Read More »ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ
ಸವದತ್ತಿ: ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ ಸವದತ್ತಿ: ಕರ್ನಾಟಕ ನೀರಾವರಿ ನಿಗಮ ನಿಯಮಿತದ (KNNL) ವತಿಯಿಂದ ಸವದತ್ತಿ ತಾಲೂಕಿನ ಮಹತ್ವಕಾಂಕ್ಷಿ ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿಯಲ್ಲಿ ರೈತರಿಗೆ ಅನುಕೂಲವಾಗುವ ಸೇವಾ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಸವದತ್ತಿ ಶಾಖಾ ಕಾಲುವೆಯ ಕಿಲೋಮೀಟರ್ (ಕಿ.ಮೀ) 3 ಮತ್ತು 4 ರ …
Read More »
Laxmi News 24×7