ಕೊಪ್ಪಳ: ಸಮಸ್ತ ವೀರಶೈವ ಲಿಂಗಾಯತ ಸಮುದಾಯಕ್ಕೇ 2ಎ ಮೀಸಲಾತಿ ಸಿಗಲಿದೆ ಎಂಬುದಾಗಿ ಸಚಿವ ಮುರುಗೇಶ ನಿರಾಣಿ ಭರವಸೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು ಈ ವಿಷಯವಾಗಿ ಮಾತನಾಡಿರುವ ಅವರು, ಸಮಸ್ತ ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಸಿಗಬೇಕು ಎಂಬುದು ನಮ್ಮ ಉದ್ದೇಶ, ಅದು ಈಡೇರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಸಮಸ್ತ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಸಿಗಬೇಕೇ ಹೊರತು ಕೇವಲ ಪಂಚಮಸಾಲಿಗೆ ಮಾತ್ರ ಬೇಡ ಎಂದಿದ್ದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಅದೇ …
Read More »ಸರ್ಕಾರಿ ಕೆಲಸ ಅಂತ ಸುಮ್ಮನೆ ಬೇಕಾಬಿಟ್ಟಿ ಕೆಲಸ ಮಾಡುವವರಿಗೆ ಕೇಂದ್ರ ಬಿಗ್ ಶಾಕ್
ಸರ್ಕಾರಿ ಕೆಲಸ ( Government Job) ಅಂತ ಸುಮ್ಮನೆ ಬೇಕಾಬಿಟ್ಟಿ ಕೆಲಸ ಮಾಡುವವರಿಗೆ ಕೇಂದ್ರ ಬಿಗ್ ಶಾಕ್ ನೀಡಿದೆ. ನಿರ್ಲಕ್ಷ್ಯ ತೋರಿ ಸರಿಯಾಗಿ ಕೆಲಸ ಮಾಡದಿದ್ದರೆ ನಿಮ್ಮ ನಿವೃತ್ತಿಯ ನಂತರದ ಪಿಂಚಣಿ ಮತ್ತು ಗ್ರಾಚ್ಯುಟಿಗೆ ಕತ್ತರಿ ಹಾಕುವ ನಿಯಮವೊಂದರ ಬಗ್ಗೆ ಕೇಂದ್ರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ನೌಕರರಿಗೆ ಡಿಎ ಮತ್ತು ಬೋನಸ್ ಗಿಫ್ಟ್ ನೀಡಿದ ಬೆನ್ನಲ್ಲೇ ಸರ್ಕಾರವು ನೌಕರರಿಗೆ ಕಟ್ಟುನಿಟ್ಟಿನ ಎಚ್ಚರಿಕೆಯೊಂದನ್ನು ನೀಡಿದೆ. ನೌಕರರು ಈ ಎಚ್ಚರಿಕೆಯನ್ನು ನಿರ್ಲಕ್ಷ್ಯಿಸಿದರೆ …
Read More »ವಿಜಯಪುರ: ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ವಿಜಯಪುರ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ, ವಿಜಯಪುರ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ಇಲ್ಲಿನ ಗಾಂಧಿನಗರ ನಿವಾಸಿ ಸಂತೋಷ ಥಾವರು ರಾಠೋಡ್ (22) ಶಿಕ್ಷೆಗೊಳಗಾದ ಆರೋಪಿ. 2021ರ ಏಪ್ರಿಲ್ 2ರಂದು ಜಿಲ್ಲೆಯ ಗಾಂಧಿನಗರದ ಬಳಿ ದನ ಮೇಯಿಸುವಾಗ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದನು. ಈ ಕುರಿತು ವಿಜಯಪುರ ಮಹಿಳಾ ಠಾಣೆಯಲ್ಲಿ …
Read More »ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ
ಬೆಂಗಳೂರು: ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡು ಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು …
Read More »ಕರ್ನಾಟಕದಲ್ಲಿ ಮಹಾರಾಷ್ಟ್ರ ಸಚಿವರು ಹೋಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ: ರಾವತ್
ಬೆಳಗಾವಿ: ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಮಹಾರಾಷ್ಟ್ರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವತು ಮೊದಲು ಜಾಗ ನೀಡಲಿ ಎಂದು ರಾಜ್ಯಸಭಾ ಸದಸ್ಯ, ಶಿವಸೇನೆ ವಕ್ತಾರ ಸಂಜಯ ರಾವತ್ ತಿರುಗೇಟು ನೀಡಿದರು. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ ಬೆನ್ನಲ್ಲೇ ಶಿವಸೇನೆ ವಕ್ತಾರ ಸಂಜಯ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
Read More »ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು: ಕಾಂಗ್ರೆಸ್ ಟ್ವೀಟ್
ಬೆಂಗಳೂರು : ರೌಡಿ ಶೀಟರ್ ಗಳಲ್ಲಿ ಹೆಸರಿಸಲಾಗಿದ್ದ ಹಲವರು ಬಿಜೆಪಿ ಸೇರ್ಪಡೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಹೋರಾಟಕ್ಕೆ ಹೊಸ ಅಸ್ತ್ರವನ್ನಾಗಿ ಮಾಡಿದ್ದು, ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿ ಪ್ರಶ್ನೆಗಳ ಮಳೆ ಸುರಿಸಿದೆ. ”ಕೋಮು ರಾಜಕಾರಣ ಸಾಲದು ಎಂಬಂತೆ ರೌಡಿ ರಾಜಕೀಯ ಮಾಡಲು ಹೊರಟಿದೆ ಬಿಜೆಪಿ.ರಾಮಾರಾಜ್ಯದ ಹೆಸರು ಹೇಳುತ್ತಿದ್ದ ಬಿಜೆಪಿ ನಾಯಕರು ರೌಡಿರಾಜ್ಯ ಮಾಡಲು ಹೊರಟಿದ್ದಾರೆ.ಅಪ್ಪು ಎಂಬ ರೌಡಿ ಮೇಲಿದ್ದ ರೌಡಿ ಶೀಟ್ ತೆಗೆಸಿ …
Read More »ನೈರುತ್ಯ ರೈಲ್ವೆ:₹4,447 ಕೋಟಿ ಆದಾಯ
ಹುಬ್ಬಳ್ಳಿ: ನೈರುತ್ಯ ರೈಲ್ವೆ ಏಪ್ರಿಲ್-ನವೆಂಬರ್ ಅವಧಿಯಲ್ಲಿ ₹ 4,447.62 ಕೋಟಿ ಆದಾಯ ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ₹ 3,400.83 ಕೋಟಿ ಆದಾಯ ಬಂದಿತ್ತು. ಆದಾಯದಲ್ಲಿ ಶೇ 30.78ರಷ್ಟು ಏರಿಕೆಯಾಗಿದೆ ಎಂದು ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಯಾಣಿಕರಿಂದ ಬರುವ ಆದಾಯದಲ್ಲಿ ಕಳೆದ ವರ್ಷಕ್ಕಿಂತ ಶೇ 95.57ರಷ್ಟು ಹೆಚ್ಚಳವಾಗಿದೆ. ₹ 1813.58 ಕೋಟಿ ಆದಾಯ ಬಂದಿದೆ. ಹಿಂದಿನ ವರ್ಷ ₹ 927.31 ಕೋಟಿ ಆದಾಯವಿತ್ತು. ಟಿಕೆಟ್ …
Read More »ಬೆಳಗಾವಿಗೆ ಹೋಗಿಯೇ ತೀರುತ್ತೇವೆ: ಸಿಎಂಗೆ ‘ಮಹಾ’ಸಚಿವರ ಸವಾಲ
ಬೆಳಗಾವಿ: ‘ಡಿಸೆಂಬರ್ 6ಕ್ಕೆ ಬೆಳಗಾವಿಗೆ ಹೋಗಿಯೇ ತೀರುತ್ತೇವೆ. ಕರ್ನಾಟಕದ ಮುಖ್ಯಮಂತ್ರಿ ಹೇಳಿಕೆಗೆ ಪ್ರತ್ಯುತ್ತರ ನೀಡಲೆಂದೇ ಹೋಗುತ್ತೇವೆ. ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಹಾಗೂ ಶಂಭುರಾಜ್ ದೇಸಾಯಿ ಸವಾಲು ಹಾಕಿದ್ದಾರೆ. ಮುಂಬೈನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಕಾಂತ ಪಾಟೀಲ, ‘ಗಡಿ ವಿವಾದದ ಕಾರಣ ತ್ವೇಷಮಯ ವಾತಾವರಣವಿದೆ. ಈಗ ಬರಬೇಡಿ ಎಂದು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ರವಾನಿಸಿದ್ದಾರೆ. ನಾನು …
Read More »ಖಾನಾ ಪುರ ಸಾರ್ವಜನಿಕ ಆಸ್ಪತ್ರೆಯ ಸ್ಥಿತಿ ನೋಡಿ ಹೇಗಿದೆ?
ಖಾನಾಪೂರ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಫೀಜಿಷನ್ ಡಾಕ್ಟರ್ ಸರಳಾ ತಿಪ್ಪನ್ನವರ (ಎಮ್ ಡಿ ಜನರಲ್ ಮೆಡಿಸಿನ್ ) ಅವರು ಕಳೆದ ಒಂದೂವರೆ ವರ್ಷದಿಂದ ಬೆಳಗಾವಿಯ ಬಿಮ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮೂಲ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಹು ಅನಾನುಕೂಲ ಉಂಟಾಗುತ್ತಿದ್ದು ಇದರಲ್ಲಿ ವಿಶೇಷ ಏನೆಂದರೆ ಅವರು ದಿ16/6/2021 ರಂದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ ಮತ್ತೆ ಅದೇ ವಾರದಲ್ಲಿ ಅಂದರೆ ಒಂದೇ ದಿನದಲ್ಲಿ ದಿನಾಂಕ 17/6/2021ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಅವರನ್ನು ನಿಯೋಜನೆ ಮೇರೆಗೆ …
Read More »ಮಹಾರಾಷ್ಟ್ರ ಬಿಟ್ಟು ಕರ್ನಾಟಕ ಸೇರುವ ನಿರ್ಧಾರ ತೆಗೆದುಕೊಂಡಿದ್ದಾರೆ. ಅಕ್ಕಲಕೋಟತಾಲೂಕಿನ ಜನ
ಕರ್ನಾಟಕ ಮಹಾರಾಷ್ಟ್ರ ಗಡಿ ಕ್ಯಾತೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಬಿಟ್ಟು ಕರ್ನಾಟಕ ಸೇರುವ ನಿರ್ಧಾರವನ್ನು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟತಾಲೂಕಿನ ಜನರು ತೆಗೆದುಕೊಂಡಿದ್ದಾರೆ ಕನ್ನಡಿಗರೇ ಹೆಚ್ಚು ವಾಸ ಮಾಡುತ್ತಿರೋ ಅಕ್ಕಲಕೋಟ್ ತಾಲೂಕಿನ 44 ಕ್ಕೂ ಆಧಿಕ ಗ್ರಾಮಗಳ ಜನರಿಂದ ಕರ್ನಾಟಕ ಸೇರಲು ಗ್ರಾಮಗಳ ಮಂಡಲಗಳಲ್ಲಿ ಕರ್ನಾಟಕ ಸೇರಲು ಠರಾವು ಪಾಸ್ ಮಾಡಿದ್ದಾರೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿರೋ ಕನ್ನಡಿರು ಮಹಾರಾಷ್ಟ್ರದಿಂದ ನಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಕನ್ನಡಿಗರು ಇರೋ ಭಾಗದಲ್ಲಿ ಮಹರಾಷ್ಟ್ರ …
Read More »