ಬೆಳಗಾವಿ(ಸುವರ್ಣಸೌಧ): ವಸತಿ ಯೋಜನೆ ಸಹಾಯಧನ ಮೊತ್ತ ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಕೆ.ಜಿ. ಬೋಪಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವಿವಿಧ ವಸತಿ ಯೋಜನೆಗಳಡಿ ಮನೆ ನಿರ್ಮಿಸಿಕೊಳ್ಳಲು ಅರ್ಹ ಫಲಾನುಭವಿಗಳಿಗೆ ನೀಡುತ್ತಿರುವ ಸಹಾಯಧನದ ಮೊತ್ತವನ್ನು ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷ ರೂ. ಹಾಗೂ ನಗರ ಪ್ರದೇಶದಲ್ಲಿ 5 ಲಕ್ಷ ರೂ.ಗೆ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ರಾಜ್ಯ …
Read More »ಈಗಾಗಲೇ ಮಹಾಜನ ವರದಿ ಇತ್ಯರ್ಥ : ಸಿದ್ದರಾಮಯ್ಯ
ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸಿ ಕಾಂಗ್ರೆಸ್ ಸಿ ಎಲ್ ಪಿ ಅದ್ಯಕ್ಷ ಸಿದ್ದರಾಮಯ್ಯ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಈಗಾಗಲೇ ಮಹಾಜನ್ ಆಯೋಗ ವರದಿ ಇತ್ಯರ್ಥ ಆಗಿದೆ ಆದರೆ ಮಹಾರಾಷ್ಟ್ರ ಸರ್ಕಾರ ನಮಗೆ ಸೇರಬೇಕು ಎಂದು ನಿರ್ಣಯ ಮಾಡಿದರೆ ಅದಕ್ಕೆ ಕಾನೂನು ಬಲ ಇಲ್ಲಾ, ನಾವು ನಮ್ಮ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ. ಮಹಾರಾಷ್ಟ್ರ ವಿಧಾನಸಭೆ ನಿರ್ಣಯಕ್ಕೆ ಕವಡೆ ಕಾಸಿನಕಿಮ್ಮತ್ತು ಇಲ್ಲ ಎಂದರು.
Read More »ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಪತನ!
ಬಳ್ಳಾರಿ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸುವ ಮೂಲಕ ಡಿ.25ರಂದು ರಾಜ್ಯ ಬಿಜೆಪಿಗೆ ಗಾಲಿ ಜನಾರ್ದನ ರೆಡ್ಡಿ ಶಾಕ್ ಕೊಟ್ಟಿದ್ದರು. ಇದೀಗ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗ ದಮ್ಮೂರು ಶೇಖರ್ ಅವರು ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಪಥನವಾಗಿದೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ದಮ್ಮೂರು …
Read More »ಮೂಡಲಗಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆ: ಸಚಿವ ಆರ್.ಅಶೋಕ್
ಮೂಡಲಗಿ: ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ನೂತನ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಮಂಗಳವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಹೊಸ ತಾಲೂಕುಗಳ ಪೈಕಿ ಮೂಡಲಗಿ ತಾಲೂಕಿಗೆ ಮಾತ್ರ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಆರಂಭಿಸಲಾಗಿದ್ದು, ಇದಕ್ಕೆ ಇಲ್ಲಿನ ಜನಪ್ರೀಯ ಶಾಸಕ …
Read More »ಜಾರಕಿಹೊಳಿ ಕುಟುಂಬದ ಫೋಟೋ ಹಿಡಿದು ಶಬರಿ ಮಲೆ ಯಾತ್ರೆಗೆ ತೆರಳಿದ ಯುವಕ.
ಗೋಕಾಕ: ದೇಶಾದ್ಯಂತ ರಾಜಕೀಯ ಚರ್ಚೆ ಜೋರಾಗಿದೆ ಇನ್ನು ಹಲವು ಜನ ಅಭಿಮಾನಿಗಳು ಅವರ ಅವರ ಅಭಿಮಾನಿ ಬಳಗದ ಫೋಟೋ ಗಳನ್ನಾ ಹಿಡಿದು ಜಾತ್ರೆ ಗಳಲ್ಲಿ ಪೂಜೆ ಸಲ್ಲಿಸುವುದು ಹಾಗೂ ಅನೇಕ ಹರಕೆ ಗಳನ್ನ ಹೊತ್ತಿರುವ ವಿಡಿಯೋ ಹಾಗೂ ಫೋಟೋ ಗಳನ್ನ ನೀವು ನೋಡಿರ್ತಿರಿ ಆದ್ರೆ ಇಲ್ಲೊಬ್ಬ ಗೋಕಾಕ ತಾಲೂಕಿನ ಸುದ್ದಿ ಕುಳ್ಳರ ಸ್ವಾಮಿ ಎಂಬ ಅಯ್ಯಪ್ಪ ಸ್ವಾಮಿ ಮಾಲಧಾರಿ ಭಕ್ತ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು ಇರುವ ಫೋಟೋ …
Read More »ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆ:ಸತೀಶ ಜಾರಕಿಹೊಳಿ
ಹೊನಗಾ, ಬೆನ್ನಾಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವರೂಢ ಮೂರ್ತಿ ಲೋಕಾರ್ಪಣೆ ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆಯಾಗಲಿ: ಶಾಸಕ ಸತೀಶ ಜಾರಕಿಹೊಳಿ ಛತ್ರಪತಿ ಶಿವಾಜಿ ಮಹಾರಾಜರು ವಿಶ್ವ ಪ್ರಸಿದ್ದ ಪಡೆದ ಮಹಾನ್ ಹೋರಾಟಗಾರ, ಅವರ ಚಿಂತನೆ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆಯಾಗಲಿ ಎಂದು” ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಹೊನಗಾ, ಬೆನ್ನಾಳಿ ಗ್ರಾಮದಲ್ಲಿ ಭಾನುವಾರ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜ …
Read More »ವಿಧಾನಮಂಡಲದ ಚಳಿಗಾಲ ಅಧಿವೇಶನ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು: ಸಭಾಪತಿ ರಘುನಾಥರಾವ್
ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿ.19 ರಿಂದ ಆರಂಭಗೊಳ್ಳಲಿದ್ದು, ಪ್ರತಿವರ್ಷದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಅವರು ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಭಾನುವಾರ(ಡಿ.18) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಚಿವರು, ಶಾಸಕರು ಸೇರಿದಂತೆ ಯಾರಿಗೂ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ವಸತಿ ಕೊರತೆ ಕಂಡುಬಂದರೆ ಕೂಡಲೇ ವ್ಯವಸ್ಥೆ ಮಾಡಬೇಕು. ವಾಹನ ಚಾಲಕರು, ಮಾರ್ಷಲ್ ಗಳಿಗೆ ಸಮರ್ಪಕ ಊಟ ಒದಗಿಸಬೇಕು. ಆರೋಗ್ಯ …
Read More »ಗೋಕಾಕ: ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.
ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರಕಾರ ಬಡವರ ದೀನ ದಲಿತರ …
Read More »ಮಹಿಳೆಯರು ಇನ್ನೂ 6 ತಿಂಗಳು ಗರ್ಭ ಧರಿಸ ಬಾರದಂತೆ; ಇದು ಜಿಕಾ ಎಫೆಕ್ಟ್..!
ರಾಯಚೂರು: ರಾಜ್ಯದ ರಾಯಚೂರು ಜಿಲ್ಲೆಯಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ನಿನ್ನೆ ವರದಿಯಾಗಿದ್ದು, ಎಲ್ಲರಲ್ಲೂ ಆಂತಕ ಸೃಷ್ಟಿಸಿದೆ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸಬೇಕು ಎನ್ನುತ್ತಾರೆ ಮಕ್ಕಳ ತಜ್ಞರು. ಈ ನಡುವೆ ಆರೋಗ್ಯ ಇಲಾಖೆ, ಮುಂದಿನ ಆರು ತಿಂಗಳ ಕಾಲ ಯಾರೂ ಗರ್ಭ ಧರಿಸದಂತೆ, ಸೂಚನೆ ಪ್ರಕಟಿಸಿದೆ. ಜಿಕಾ ವೈರಸ್ ಒಂದೇ ಮಾದರಿಯ ಆರ್‌ಎನ್‌ಎ ವೈರಸ್ ಗುಂಪಿಗೆ (ಫ್ಲೇಮಿ ವೈರಸ್ ಗುಂಪು) ಸೇರಿದ್ದಾಗಿದೆ. ಈಡಿಸ್ ಜಾತಿಯ ಸೊಳ್ಳೆ ಕಚ್ಚುವುದರಿಂದ …
Read More »ಸಿದ್ಧಾರೂಢರ ದರ್ಶನ ಪಡೆದ ಶಿವಣ್ಣ ದಂಪತಿ
ಹುಬ್ಬಳ್ಳಿ (ಡಿ.14) : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shiva Rajkumar) ಅವರು ವೇದ ಚಿತ್ರದ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಇಂದು ಪತ್ನಿ ಗೀತಾ (Geetha) ಜೊತೆ ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ (Siddharoodha Mutt) ಭೇಟಿ ನೀಡಿದ್ರು. ಗುರು ಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ (Pooja) ಸಲ್ಲಿಸಿದ್ದಾರೆ. 10 ನಿಮಿಷಗಳ ಸಿದ್ಧಾರೂಡರ ಗದ್ದುಗೆಯ ಬಳಿ ಶಿವಣ್ಣ ದಂಪತಿ (Couple) ಧ್ಯಾನ ಮಾಡಿದ್ರು. ವೇದ ಸಿನಿಮಾ ಪ್ರೀ ರಿಲೀಸ್ …
Read More »