ರಾಮದುರ್ಗ: ಇಲ್ಲಿನ ಸ್ಟೀಲ್ ವ್ಯಾಪಾರಿ ಅಪಹರಣ ಮತ್ತು ಬನ್ನೂರಿನ ಮನೆಯೊಂದಕ್ಕೆ ನುಗ್ಗಿ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮದುರ್ಗ ಮತ್ತು ಕಟಕೋಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 8 ಜನರನ್ನು ಬಂಧಿಸಿದ್ದಾರೆ. ಈ ಎರಡೂ ಪ್ರಕರಣಗಳನ್ನು ಕೈಗೆತ್ತಿಕೊಂಡ ಕಟಕೋಳ ಮತ್ತು ರಾಮದುರ್ಗದ ಪೊಲೀಸರು ತಂಡಗಳನ್ನು ರಚಿಸಿ ತನಿಖೆಗೆ ಮುಂದಾಗಿದ್ದರು. ಒಟ್ಟು 8 ಜನ ಆರೋಪಿಗಳು ಬಂಧಿಸಿ ಅವರಿಂದ 188 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ನಾಲ್ಕು …
Read More »ಜಿ.ಪಂ, ತಾ.ಪಂ ಕ್ಷೇತ್ರ ಪುನರ್‌ವಿಂಗಡಣೆ: ಅಧಿಸೂಚನೆ ಹೊರಡಿಸಿದ ಸರ್ಕಾರ
ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿ ಮಾಡಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಕ್ಷೇತ್ರಗಳನ್ನುಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಿ ಮಾಡಿದ್ದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ. ರಾಜ್ಯದ ಹಲವು ಗ್ರಾಮಗಳು ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಸೇರಿವೆ. ಕೆಲ ಗ್ರಾಮಗಳನ್ನು ಸೇರಿಸಿ ಪಟ್ಟಣ …
Read More »ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧುಕೋಕಿಲ ನೇಮಕ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ‘ಸಾಂಸ್ಕೃತಿಕ ಘಟಕ’ ದ ಅಧ್ಯಕ್ಷರನ್ನಾಗಿ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಕುರಿತಂತೆ ಆದೇಶ ಹೊರಡಿಸಿದ್ದು, ಪ್ರದೇಶ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮತ್ತು ರಾಜ್ಯ ನಾಯಕರ ಸಹಕಾರದೊಂದಿಗೆ ಸಾಂಸ್ಕೃತಿಕ ಘಟಕದ ಸಂಘಟನೆ ಹಾಗೂ ಆ ಮೂಲಕ ಪಕ್ಷದ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಸಾಧುಕೋಕಿಲ ಅವರಿಗೆ ಮಹತ್ವದ …
Read More »ಬೆಳಗಾವಿಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ: ರಾಜಹಂಸಗಡದತ್ತ ಹೊರಟ ಸಿಎಂ ಬೊಮ್ಮಾಯಿ
ಬೆಳಗಾವಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜಹಂಸಗಡದತ್ತ ಸಿಎಂ ಬಸವರಾಜ ಬೊಮ್ಮಾಯಿ ಹೊರಟಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ರಾಜಹಂಸಗಡದತ್ತ ಹೊರಟಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ , ಗೋವಿಂದ ಕಾರಜೋಳ, ರಮೇಶ್ ಜಾರಕಿಹೊಳಿ ಸಾಥ್ ನೀಡಿದ್ದಾರೆ. ಶಿವಾಜಿ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಲಿದ್ದಾರೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಕನ್ನಡ …
Read More »ರಾಜ್ಯ ಸರ್ಕಾರಿ ನೌಕರರ ವೇತನ ಶೇ 17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ತಕ್ಷಣದಲ್ಲೇ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಏಳನೇ ವೇತನ ಆಯೋಗವನ್ನು ಈಗಾಗಲೇ ನೇಮಿಸಲಾಗಿದೆ. ಅವರಿಂದ ವರದಿ ಪಡೆದು ಶೀಘ್ರದಲ್ಲಿ ವೇತನ ಪರಿಷ್ಕರಣೆಗೆ ಪ್ರಯತ್ನ …
Read More »ಬೆಳಗಾವಿ: ಮಾರ್ಚ್ 1ರಂದು ಸಿದ್ದರಾಮಯ್ಯ ‘ಪ್ರಜಾಧ್ವನಿ’ ಯಾತ್ರೆ
ಬೆಳಗಾವಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ‘ಪ್ರಜಾಧ್ವನಿ’ ಯಾತ್ರೆಯ ಅಂಗವಾಗಿ ಮಾರ್ಚ್ 1ರಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪಂತಬಾಳೆಕುದ್ರಿಯಲ್ಲಿ ಸಮಾವೇಶ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಶಿಂಧೋಳಿಯಿಂದ ಮೆರವಣಿಗೆ ನಡೆಯಲಿದೆ. 5 ಸಾವಿರ ಬೈಕುಗಳ ಸಮೇತ ಯುವಜನರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು. ಅಲ್ಲಿಂದ ಪಂತಬಾಳೆಕುಂದ್ರಿಯ ವೈರ್‌ಲೆಸ್ ಮೈದಾನಕ್ಕೆ ತೆರಳಿ ಅಲ್ಲಿ ಸಮಾವೇಶ ನಡೆಸಲಾಗುವುದು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, …
Read More »ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಲ್ಲಿರುವ ನೂರಾರು ಉದ್ಯಾನಗಳು ಈಗ ನಿರ್ವಹಣೆ ಇಲ್ಲದೇ ಸೊರಗಿವೆ.
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಲ್ಲಿರುವ ನೂರಾರು ಉದ್ಯಾನಗಳು ಈಗ ನಿರ್ವಹಣೆ ಇಲ್ಲದೇ ಸೊರಗಿವೆ. ಮಳೆಗಾಲದಲ್ಲಿ ನೈಸರ್ಗಿಕ ನೀರಿನ ಕಾರಣ ದಟ್ಟ ಹಸಿರು, ಬಣ್ಣಬಣ್ಣದ ಹೂವುಗಳಿಂದ ಕಂಗೊಳಿಸುತ್ತಿದ್ದ ಉದ್ಯಾನಗಳು ಈಗ ಹಾಳು ಕೊಂಪೆ ಯಾಗಿವೆ. ನೆರಳು, ನೆಮ್ಮದಿ ಹುಡುಕಿ ಬಂದವರಿಗೆ ಮುಳ್ಳು-ದಾರಿಗಳಾಗಿವೆ. ‘ಸ್ಮಾರ್ಟ್‌ಸಿಟಿ’ ಯೋಜನೆ ಕಾರ್ಯಗತವಾಗಿರುವ ಬೆಳಗಾವಿ ನಗರದಲ್ಲಿ 120ಕ್ಕೂ ಹೆಚ್ಚು ಉದ್ಯಾನಗಳಿವೆ. ಇವುಗಳಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 88 ಉದ್ಯಾನಗಳಿವೆ. ಅದರ ಪೈಕಿ 60 ಉದ್ಯಾನಗಳು ಸುಸ್ಥಿತಿಯಲ್ಲಿದ್ದು, ಉಳಿದವು ಮೂಲಸೌಕರ್ಯಗಳಿಂದ …
Read More »ಮನಸ್ಸಿಗೆ ಬಂದಂತೆ ಇತಿಹಾಸ ಬದಲಿಸಲಾಗದು: ಸುಪ್ರೀಂಕೋರ್ಟ್
ನವದೆಹಲಿ:“ಭಾರತದ ಮೇಲೆ ವಿದೇಶಿಗರು ಆಕ್ರಮಣ ನಡೆಸಿ, ಆಳಿದ್ದರು ಎಂಬುದು ಇತಿಹಾಸದ ಸತ್ಯ. ನಮಗೆ ಬೇಕಾದಂತೆ ಇತಿಹಾಸವನ್ನು ಬದಲಿಸಲು ಸಾಧ್ಯವಿಲ್ಲ. ಯಾವುದೇ ದೇಶದ ಇತಿಹಾಸವು ಆ ದೇಶದ ವರ್ತಮಾನ ಹಾಗೂ ಭವಿಷ್ಯದ ಪೀಳಿಗೆಯನ್ನು ಕಾಡುವಂತಿರಬಾರದು’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ. ವಿದೇಶಿ ಆಕ್ರಮಣಕಾರರಿಂದ ಹೆಸರು ಬದಲಾಗಿರುವ ದೇಶದ ಸಾಂಸ್ಕೃತಿಕ, ಪ್ರಾಚೀನ ಹಾಗೂ ಧಾರ್ಮಿಕ ಕ್ಷೇತ್ರಗಳ ಮೂಲ ಹೆಸರನ್ನೇ ಮತ್ತೆ ಇಡಲು ಮರು ನಾಮಕರಣ ಆಯೋಗ ರಚಿಸಬೇಕು ಎಂದು ಕೋರಿ ವಕೀಲ …
Read More »ವಿಧಾನಸಭೆ ಚುನಾವಣೆ: ಉತ್ತರದಲ್ಲಿ ಗುಜರಾತ್ ಮಾದರಿ: ಹಳಬರಿಗೆ ಕೊಕ್, ಹೊಸಬರಿಗೆ ಟಿಕೆಟ್
ಬೆಂಗಳೂರು: ಹೊಸ ಮುಖಗಳಿಗೆ ಅವಕಾಶ ಸೃಷ್ಟಿಸುವ “ಗುಜರಾತ್ ಮಾದರಿ’ ಪ್ರಯೋಗವನ್ನು ಈ ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ನಡೆಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದು, ಇದಕ್ಕೆ ಪೂರಕವಾದ ಕ್ಷೇತ್ರ-ಕಾರ್ಯ, ಸಮೀಕ್ಷೆ ಸದ್ದಿಲ್ಲದೆ ಪ್ರಾರಂಭಗೊಂಡಿದೆ. ರಾಜ್ಯದಲ್ಲಿ ಗುಜರಾತ್ ಮಾದರಿಯಲ್ಲಿ ಹಿರಿಯರಿಗೆ ಟಿಕೆಟ್ ತಪ್ಪಿಸುವ ಸಾಧ್ಯತೆ ಇಲ್ಲ ಎಂದು ಬಿಜೆಪಿಯ ಒಂದು ವಲಯ ವದಂತಿ ಹಬ್ಬಿಸುತ್ತಿದ್ದರೂ ಉತ್ತರ ಕರ್ನಾಟಕ ಭಾಗದಲ್ಲಿ ಹೊಸಬರಿಗೆ ಅವಕಾಶ ಕೊಡಲೇಬೇಕೆಂಬ ವಾದ ಬಲವಾಗತೊಡಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ …
Read More »ಪ್ರಧಾನಿ ಮೋದಿಯವರು ಇಂದಿನ ವಿಶ್ವ ಮಾನವ: ಶಿವಮೊಗ್ಗದಲ್ಲಿ ಯಡಿಯೂರಪ್ಪ ಬಣ್ಣನೆ
ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರು ಹೇಳಿದ ವಿಶ್ವಮಾನ ತತ್ವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಉದಾಹರಣೆ. ಪ್ರಧಾನಿ ಮೋದಿ ಅವರು ಇಂದಿನ ವಿಶ್ವಮಾನವ. ವಸುದೈವ ಕುಟುಂಬಿಕಂ ಆಶಯವನ್ನು ಈಡೇರಿಸುತ್ತಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಣ್ಣಸಿದರು. ಶಿವಮೊಗ್ಗದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, “ನಿಮ್ಮ ಹುಟ್ಟುಹಬ್ಬದ ದಿನವೇ ವಿಮಾ ನಿಲ್ದಾಣ ಉದ್ಘಾಟನೆ ಮಾಡಬೇಕು. ಅಂದು ನಾನು ಬಂದೇ ಬರುತ್ತೇನೆ ಎಂದು …
Read More »
Laxmi News 24×7