ಬೆಂಗಳೂರು: ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಪತ್ತೆ ಹಚ್ಚಿದ್ದಾರೆ. ವಿದ್ಯಾರಣ್ಯಪುರ ಮೂಲದ ವಿದ್ಯಾರ್ಥಿನಿಯರು ಜನವರಿ 31ರಂದು ನಾಪತ್ತೆಯಾಗಿದ್ದರು. ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವಳು ಸೆಕೆಂಡ್ ಪಿಯುಸಿ ವ್ಯಾಸಂಗ ಮಾಡ್ತಿದ್ದರೆ, ಇನ್ನೊಬ್ಬಳು ಫಸ್ಟ್ ಪಿಯುಸಿ ಓದುತ್ತಿದ್ದಳು. ಸದ್ಯ ಇಬ್ಬರು ಪತ್ತೆಯಾಗಿದ್ದು, ಆ ಪೈಕಿ ಒಬ್ಬಳು ಮದುವೆಯಾಗಿ ಗರ್ಭಿಣಿಯಾಗಿದ್ದಾಳೆ ಎನ್ನುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪೋಷಕರು ಮಿಸ್ಸಿಂಗ್ ಕೇಸ್ …
Read More »ಜಾರಕಿಹೊಳಿಗೆ ಇಡಿ ಶಾಕ್| ಆಫ್ರಿಕಾದಲ್ಲಿ ಗಣಿಗಾರಿಕೆ ಕಂಪನಿ – ಪುತ್ರ, ಸಹೋದರಿ ನಿರ್ದೇಶಕಿ!
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿಯ ಹಿಂದಿನ ಮಹತ್ವದ ಕಾರಣಗಳು ಹೊರಬಿದ್ದಿವೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ ವಿದೇಶದಲ್ಲಿ ಅಕ್ರಮವಾಗಿ ಹಣ ಹೂಡಿಕೆ ಮಾಡಿರುವ ಆರೋಪದ ಮೇಲೆ ಈ ತನಿಖೆ ತೀವ್ರಗೊಂಡಿದೆ. ನಿಯಮಗಳನ್ನು ಗಾಳಿಗೆ ತೂರಿ ಸತೀಶ್ ಜಾರಕಿಹೊಳಿ ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ಹೂಡಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸತೀಶ್ ಜಾರಕಿಹೊಳಿ …
Read More »ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ
ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕಾನೂನು ತಜ್ಞರ ತಂಡದೊಂದಿಗೆ ಸಮಾಲೋಚಿಸಿ ನಾಳೆಯೇ ಸುಪ್ರೀಂ ಕೋರ್ಟ್‌ಗೆ …
Read More »ಇಂದು ರಾತ್ರಿ iphone 18 Pro ರಿಲೀಸ್ – ಫೋಲ್ಡೇಬಲ್ ಫೋನ್‌ಗೆ ಹೆಸರು `ಐಫೋನ್ ಡ್ಯುವೋ’
ವಾಷಿಂಗ್ಟನ್: ಆಪಲ್ ಕಂಪನಿಯು ಐಫೋನ್‌ನ ಮುಂಬರುವ 18ರ ಸರಣಿಯನ್ನು ಇಂದು ಬಿಡುಗಡೆ ಮಾಡಲಿದೆ. ಇಂದು ರಾತ್ರಿ 9:30ಕ್ಕೆ (ಭಾರತೀಯ ಕಾಲಮಾನ) ಲಾಂಚ್ ಈವೆಂಟ್ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಐಫೋನ್ 18 ಪ್ರೋ, ಐಫೋನ್ 18 ಪ್ರೋ ಮ್ಯಾಕ್ಸ್ ಹಾಗೂ ಬಹುನಿರೀಕ್ಷಿತ ಐಫೋನ್‌ನ ಫೋಲ್ಡೇಬಲ್ ಫೋನ್ ರಿಲೀಸ್ ಆಗುವ ನಿರೀಕ್ಷೆಯಿದೆ. ಇದರ ಜೊತೆಗೆ ಏರ್‌ಪಾಡ್ಸ್, ಆಪಲ್ ವಾಚ್ ಹಾಗೂ ಹಲವು ಹೊಸ ಪ್ರಾಡಕ್ಟ್‌ಗಳು ರಿಲೀಸ್ ಆಗಲಿದೆ. ಫೋಲ್ಡೇಬಲ್ ಫೋನ್‌ಗೆ ಐಫೋನ್ ಡ್ಯುವೋ …
Read More »ಎಪಿಎಂಸಿ ಮಾರುಕಟ್ಟೆಗೆ ಡಿಕೆಶಿ ಭೇಟಿ: ಹೈಕೋರ್ಟ್ ನ್ಯಾ.ಶ್ರೀಶಾನಂದ ಶ್ಲಾಘನೆ
ಬೆಂಗಳೂರು: ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಕಾರ್ಮಿಕರ ಹಾಗೂ ವ್ಯಾಪಾರಿಗಳ ಸಮಸ್ಯೆಗಳನ್ನು ಖುದ್ದು ಆಲಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಮುಕ್ತಕಂಠದಿಂದ ಶ್ಲಾಘಿಸಿದೆ. ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ ಈ ಪ್ರಶಂಸನೀಯ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಖ್ಯಮಂತ್ರಿಗಳ ಈ ದಿಢೀರ್ ಭೇಟಿಯನ್ನು ಕೆಲವರು ಗಿಮಿಕ್ ಎಂದು ಕರೆದರೂ, ನಿಸ್ಸಂದೇಹವಾಗಿ ಇದೊಂದು ಶ್ಲಾಘನೀಯ ಕಾರ್ಯ. ಸಿಎಂ …
Read More »ಕರ್ನಾಟಕದಲ್ಲಿ 37 ವರ್ಷದ ಬಳಿಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆ
ಬೆಂಗಳೂರು: ಕರ್ನಾಟಕದಲ್ಲಿ 37 ವರ್ಷಗಳ ಬಳಿಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿವಿದ್ಯಾರ್ಥಿ ಸಂಘ ಚುನಾವಣೆ ಮರುಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ವಿದ್ಯಾರ್ಥಿ ಚುನಾವಣೆಗೆ ಅಸ್ತು ಎಂದಿದೆ. ಕಾಲೇಜು ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಮತ್ತು ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ಆಗಿನ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಪ್ರಸ್ತುತ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಷೇಧವನ್ನು ತೆರವುಗೊಳಿಸಿ ಚುನಾವಣೆ …
Read More »ತನಿಖಾ ಸಂಸ್ಥೆಗಳಿಂದ ಇನ್ನಷ್ಟು ಕ್ರಮ ಆಗೋ ಸಾಧ್ಯತೆ – ಎಲ್ಲ ಶಾಸಕರು, ಸಚಿವರಿಗೆ ಎಚ್ಚರಿಕೆ ನೀಡಿದ್ದೇನೆ: ಡಿಕೆಶಿ
ಬೆಂಗಳೂರು: ಮುಂದಿನ ದಿನಗಳಲ್ಲಿ ಇನ್ನೂ ಹಲವು ಕಾಂಗ್ರೆಸ್ ನಾಯಕರು, ಸಚಿವರು ಮತ್ತು ಶಾಸಕರ ಮೇಲೂ ತನಿಖಾ ಸಂಸ್ಥೆಗಳ ಕ್ರಮ ನಡೆಯುವ ಸಾಧ್ಯತೆ ಇದೆ. ಹಾಗಾಗಿ ಪಕ್ಷದ ಎಲ್ಲ ಶಾಸಕರು ಮತ್ತು ಸಚಿವರಿಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ತನಿಖೆಗೆ ನಾವು ಹೆದರುವುದಿಲ್ಲ. ಆದರೆ ಸುಳ್ಳು ಕಥೆ ಕಟ್ಟುವುದು, ಸುಳ್ಳು ಆರೋಪ ಮಾಡುವುದು …
Read More »ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಪಾದಯಾತ್ರೆ – ಬಳ್ಳಾರಿ ಜಿಲ್ಲೆಗೆ ಎಂಟ್ರಿ ಕೊಟ್ಟ ಬಿಜೆಪಿ ನಾಯಕರು
ಬಳ್ಳಾರಿ: ರಾಜ್ಯ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ರಾಯಚೂರು ಜಿಲ್ಲೆಯ ಲಿಂಗಸಗೂರಿನಿಂದ ಆರಂಭವಾದ ಬಳ್ಳಾರಿ ಚಲೋ ಪಾದಯಾತ್ರೆ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಪಾದಯಾತ್ರೆ ಇಂದು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಎಂಟ್ರಿಕೊಟ್ಟಿದೆ. ಗುರುವಾರ ಸಂಜೆ ಬಳ್ಳಾರಿ ನಗರದ ಮುನ್ಸಿಪಲ್ ಮೈದಾನದಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಯಲಿದ್ದು, 9ನೇ ದಿನವಾದ ಇಂದೂ 20 ಕಿಲೋಮೀಟರ್ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ನಾಯಕರಿಗೆ ಮಾರ್ಗಮಧ್ಯೆ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿ …
Read More »ಕೆಂಪು ಕೋಟೆ ಬ್ಲಾಸ್ಟ್ ಆತ್ಮಾಹುತಿ ದಾಳಿ – ಕಾರಿನೊಳಗೇ ಐಇಡಿ ಸ್ಫೋಟಿಸಿದ್ದ ಉಮರ್; ಎನ್‌ಐಎ ಚಾರ್ಜ್‌ಶೀಟ್
ನವದೆಹಲಿ: ಇಲ್ಲಿನ ಕೆಂಪು ಕೋಟೆ ಬಳಿ ಸಂಭವಿಸಿದ್ದ ಸ್ಫೋಟವು ಆತ್ಮಹತ್ಯಾ ಬಾಂಬ್ ದಾಳಿಯಾಗಿದ್ದು, ಆರೋಪಿ ಉಮರ್ ಉನ್ ನಬಿ ತಾನು ಚಲಾಯಿಸುತ್ತಿದ್ದ ಐ20 ಕಾರಿನೊಳಗಿನಿಂದಲೇ ಸುಧಾರಿತ ಸ್ಫೋಟಕ ಸಾಧನ ಸ್ಫೋಟಿಸಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಸಲ್ಲಿಸಿದ 7,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ. ಕಳೆದ ವರ್ಷ ನವೆಂಬರ್ 10ರಂದು ನಡೆದ ಈ ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿದ್ದರು. ವೃತ್ತಿಯಲ್ಲಿ ವೈದ್ಯರಾಗಿರುವ ಹಾಗೂ ಫರೀದಾಬಾದ್‌ನ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಸಹಾಯಕ …
Read More »ಬೈ ಬೈ ಪಪ್ಪಾ ಎಂದು ಚೆನಾಬ್ ನದಿಗೆ ಜಿಗಿದ ಯುವತಿ – ವಿಡಿಯೋ ವೈರಲ್
ಶ್ರೀನಗರ: ಯುವತಿಯೊಬ್ಬಳು ತಂದೆಗೆ ʻಬೈ ಬೈ ಪಪ್ಪಾʼ ಎಂದು ಚೆನಾಬ್ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾದ ಪ್ರೇಮ್ ನಗರದಲ್ಲಿ ನಡೆದಿದೆ. ಯುವತಿ ನದಿಗೆ ಜಿಗಿಯುತ್ತಿರುವ ವಿಡಿಯೋ ವ್ಯಕ್ತಿಯೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಯುವತಿ ಆತ್ಮಹತ್ಯೆ ಮಾಡುವುದಾಗಿ ತಿಳಿಸಿ ʻಬೈ ಬೈ ಪಪ್ಪಾʼ ಎಂದು ನದಿಗೆ ಜಿಗಿದಿರುವುದು ಸೆರೆಯಾಗಿದೆ. ಯುವತಿಗಾಗಿ SDRF ತಂಡ ಮತ್ತು ಸ್ಥಳೀಯ ನಿವಾಸಿಗಳು ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆಕೆಯ ಸುಳಿವು …
Read More »
Laxmi News 24×7