ಬೆಂಗಳೂರು- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದದ ಸಂಘರ್ಷ ತಾರಕ್ಕೇರಿರುವ ಬೆನ್ನಲ್ಲೇ, ಇಂದು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ 14, ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಕರ್ನಾಟಕ-ಮಹಾರಾಷ್ಟ್ರ ಉಲ್ಬಣಿಸಿದೆ. ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ …
Read More »ಅಸಮರ್ಪಕ ಹಾಗೂ ಸಮಯಕ್ಕೆ ಸರಿಯಾಗಿ ನೀರುಸರಬರಾಜಾಗುತ್ತಿಲ್ಲ:ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ
ನಗರದಲ್ಲಿ ಅಸಮರ್ಪಕ ಹಾಗೂ ಸಮಯಕ್ಕೆ ಸರಿಯಾಗಿ ನೀರುಸರಬರಾಜಾಗುತ್ತಿಲ್ಲ. ಇನ್ನು ಈ ಭಾಗದ ವಾಟರ್‌ಮ್ಯಾನ್ ಸ್ಥಳೀಯರ ಜತೆ ಸರಿಯಾಗಿ ವರ್ತಿಸುತ್ತಿಲ್ಲ ಎಂದು ಆರೋಪಿಸಿ ಸೋಮವಾರ ಶಿವಾಜಿನಗರದ ನಿವಾಸಿಗಳು ಖಾಲಿ ಕೊಡದೊಂದಿಗೆ ಪ್ರತಿಭಟನೆಗೆ ಮುಂದಾದ ಘಟನೆ ನಾಲ್ಕನೇ ಕ್ರಾಸ್‌ನಲ್ಲಿ ನಡೆದಿದೆ. ನಾಲ್ಕು-ಐದು ದಿನಗಳಿಗೆ ಒಮ್ಮೆ ನಗರದಲ್ಲಿ ನೀರು ಸರಬರಾಜು ಆಗುತ್ತಿದೆ. ಮೂರು ತಾಸು ನೀರು ಬಿಡಬೇಕು ಎಂಬ ಸೂಚನೆ ಇದ್ದರೂ ಸಹ ಬರೀ ಎರಡು ತಾಸಿಗೆ ನೀರಿನ ವಾಲ್ವವನ್ನು ವಾಟರ್‌ಮ್ಯಾನ್ ಬಂದ್ ಮಾಡುತ್ತಾರೆ …
Read More »ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್
ಹಾವೇರಿ : ರಾಜ್ಯದ ಶಾಲಾ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಎನ್ ಡಬ್ಲ್ಯೂ ಕೆಎಸ್ ಆರ್ ಟಿಸಿ ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುವುದು. ಖಾಸಗಿಯವರ ಸಹಭಾಗಿತ್ವದಲ್ಲಿ ಈ …
Read More »ಕಾನೂನು ಉಲ್ಲಂಘನೆ ಮಾಡಿದರೆ ಮಹಾರಾಷ್ಟ್ರ ಸಚಿವರ ಮೇಲೂ ಕ್ರಮ: ಗೃಹ ಸಚಿವ
ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು: ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಗೆ ಆಗಮಿಸುತ್ತಿರೋ ಮಹಾರಾಷ್ಟ್ರದ ಸಚಿವರ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಯಾರೇ ಕಾನೂನು ಉಲ್ಲಂಘನೆ …
Read More »ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ!
ಹುಬ್ಬಳ್ಳಿ: ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ. ‘ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ. ಉದ್ಯಮಿ ಭರತ್ ಜೈನ್ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಸಹೋದರ …
Read More »ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ನಿಷೇಧಿಸಲು ಅಗ್ರಹಿಸಿ ಕುಂದಾನಗರಿಯಲ್ಲಿ ಖಡಕ್ ಪ್ರತಿಭಟನೆ
ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ನಿಷೇಧಿಸಲು ಅಗ್ರಹಿಸಿ ಕುಂದಾನಗರಿಯಲ್ಲಿ ಖಡಕ್ ಪ್ರತಿಭಟನೆ ನಡೆಸಲಾಯಿತು ಸೋಮವಾರ ಬೀದಿಗಿಳಿದ ಕನ್ನಡ ಪರ ಹೋರಾಟಗಾರರು ಕನ‌್ನಡ ನಾಡಿನಲ್ಲಿ ಕನ್ನಡಕ್ಕೆ ಆಗುತ್ತಿರುವ ನಿರಂತರ ಅವಮಾನಕ್ಕೆ ಅಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಕರ್ನಾಟಕ ಏಕೀಕರಣ ಸಮಿತಿಯ ವತಿಯಿಂದ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉರುಳು ಸೇವೆ ಸಲ್ಲಿಸಲಾಯಿತು .ಕನ್ನಡಿಗರಿಗೆ ನ್ಯಾಯ ನೀಡಲು ಅಗ್ರಹಿಸಿ ಘೋಷಣೆ ಕೂಗಲಾಯಿತು. ಕರ್ನಾಟಕ ಸರ್ಕಾರ ಕನ್ನಡಿಗರೊಂದಿಗೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದ …
Read More »ವಿಧಾನ ಪರಿಷತ್ ಸದಸ್ಯಗೆ ಫುಲ್ ಕ್ಲಾಸ್ ತಗೊಂಡ ಸಾರ್ವಜನಿಕರು;
ಕೋಲಾರ: ಆತ ವಿಧಾನಪರಿಷತ್ ಸದಸ್ಯ. ಗೊತ್ತಿದ್ದೋ ಗೊತ್ತಲ್ಲದೆಯೊ ತಪ್ಪು ನಡೆದು ಹೋಗಿದೆ. ಆಗಿರುವ ತಪ್ಪುನ್ನು ಸಮಾಧಾನವಾಗಿ ಬಗ್ಗೆ ಹರಿಸಿಕೊಳ್ಳದೆ ದರ್ಪ ತೋರಿದ ಎಂಎಲ್ಸಿಗೆ ಸಾರ್ವಜನಿಕರು ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಕ್ಲಾಸ್ಗೆ ದಂಗಾದ ಎಂಎಲ್ಸಿ ಕೆಲಕಾಲ ತಬ್ಬಿಬ್ಬರಾಗಿದ್ದಾರೆ. ಹೌದು, ಕೋಲಾರದ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೋಲಾರಕ್ಕೆ ಆಗಮಿಸುತ್ತಿದ್ದ ಎಂ.ಎಲ್.ಸಿ ರವಿ ಕುಮಾರ್ ಇದ್ದ ಕಾರು ಹಿಂಬದಿಯಿಂದ ಬೈಕ್ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾನೆ. …
Read More »ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ; ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ; ಶಾಸಕ ಯತ್ನಾಳ್ ಆರೋಪ
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೋಕರ್ ಎಂದು ಟೀಕಿಸಿರುವ ವಿಚಾರವಾಗಿ ವಾಗ್ದಾಳಿ ನಡೆಸಿರುವ ಯತ್ನಾಳ್, ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ. ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣ ಕೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ವಚನಾನಂದ ಶ್ರೀಗಳು ಯಡಿಯೂರಪ್ಪ ಅವರಿಂದ 10 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ. ಮಠದ ಅಭಿವೃದ್ಧಿ ಕಾಮಗಾರಿ …
Read More »ಬೆಳಗಾವಿ ಜಿಲ್ಲೆಯಲ್ಲಿ ಛಲವಾದಿ ಸಮಾಜದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಕೂಡ ಒಬ್ಬರೂ ಶಾಸಕರು ಇಲ್ಲಾ
ಬೆಳಗಾವಿ ಜಿಲ್ಲೆಯಲ್ಲಿ ಛಲವಾದಿ ಸಮಾಜದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಕೂಡ ಒಬ್ಬರೂ ಶಾಸಕರು ಇರದೇ ಇರುವುದು ನಮ್ಮ ದುರ್ದೈವ. ಸಂಘಟಿತರಾಗದಿದ್ರೆ ನಮ್ಮ ಸಮಾಜಕ್ಕೆ ರಾಜಕೀಯ ಶಕ್ತಿ ಬರುವುದಿಲ್ಲ ಎಂದು ಹುಬ್ಬಳ್ಳಿ ಕಾಂಗ್ರೆಸ ಶಾಸಕ ಪ್ರಸಾದ ಅಬ್ಬಯ್ಯ ಕರೆ ನೀಡಿದರು. ರವಿವಾರ ನಗರದ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಛಲವಾದಿ ಸಮಾಜದ ಸಮಾವೇಶ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕಾಂಗ್ರೆಸ್, ಬಿಜೆಪಿ ಟಿಕೆಟ್ ಸಿಕ್ಕರೂ ವ್ಯವಸ್ಥಿತವಾಗಿ …
Read More »ವಿನಯ್ ಕುಲಕರ್ಣಿ ಧಾರವಾಡಕ್ಕೆ ಭೇಟಿ ನೀಡಲು ಕೋರ್ಟ್ ಅನುಮತಿ
ಬೆಂಗಳೂರು, ಡಿಸೆಂಬರ್ 04; ನ್ಯಾಯಾಲಯ ವಿಧಿಸಿದ್ದ ಷರತ್ತಿನಿಂದಾಗಿಬೆಳಗಾವಿಜೈಲಿನಿಂದ ಬಿಡುಗಡೆಯಾಗಿದ್ದರೂ ಧಾರವಾಡಕ್ಕೆ ಭೇಟಿ ನೀಡಲು ಸಾಧ್ಯವಾಗಿರದ ಮಾಜಿ ಸಚಿವ ವಿನಯ್ ಕುಲಕರ್ಣಿ ಕೊನೆಗೂ ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಆದು ಮಾಮೂಲಿಯಾಗಲ್ಲ, ಅನಾರೋಗ್ಯಕ್ಕೆ ತುತ್ತಾಗಿ ತುರ್ತು ನಿಗಾ ಘಟಕ (ಐಸಿಯು)ನಲ್ಲಿರುವ ಸಹೋದರಿ ಭೇಟಿ ಮಾಡಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ …
Read More »