ಮಹಾಲಿಂಗಪುರ : ಹಿಂದೂಗಳ ಪವಿತ್ರ ಹಬ್ಬ, ವರ್ಷದ ಆರಂಭ ದಿನದವಾದ ಯುಗಾದಿಯ ದಿನ ನಸುಕಿನ ಜಾವ ನಡೆಯುವ ಜಟೋತ್ಸವ ವಿಕ್ಷಣೆಗಾಗಿ ಮುಂಜಾನೆ ಬುಧವಾರ ಪಟ್ಟಣದ ಐತಿಹಾಸಿಕ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತ ಜನಸಾಗರವೇ ಹರಿದು ಬಂದಿತ್ತು. ಜಟೋತ್ಸವ ಪವಾಡ ಪುರುಷ ಮಹಾಲಿಂಗೇಶ್ವರರ ಜಟೆಗಳು ವಿಜ್ಞಾನಕ್ಕೆ ಸವಾಲು ಎಂಬಂತೆ ಪ್ರತಿವರ್ಷ ಒಂದು ಗೋಧಿ ಕಾಳಿನಷ್ಟು ಬೆಳೆಯುತ್ತಿವೆ. ಇಂತಹ ಪವಾಡ ಸದೃಶ್ಯ ಜಟೆಗಳನ್ನು ನೋಡುವದೇ ಭಕ್ತರ ಸೌಭಾಗ್ಯ. ಇಂತಹ ವೈಶಿಷ್ಟ್ಯ ಪೂರ್ಣ ಜಟೆಗಳ ಅಭಿಷೇಕ (ಜಟೋತ್ಸವ)ದ …
Read More »ಬಿಜೆಪಿ ಉತ್ಸಾಹಕ್ಕೆ ಆಕಾಂಕ್ಷಿಗಳು ಅಡ್ಡಗಾಲು: ರಥಯಾತ್ರೆಗಳಿಗೆ ತಟ್ಟಿದ ಪೈಪೋಟಿಯ ಬಿಸಿ
ಬೆಂಗಳೂರು :ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ನಾಯಕರ ನಿರಂತರ ಭೇಟಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯಿಂದ ಆಡಳಿತ ಬಿಜೆಪಿಯಲ್ಲಿ ಹೆಚ್ಚಿರುವ ಉತ್ಸಾಹಕ್ಕೆ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಅಡ್ಡಗಾಲಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿ, ಎರಡನೇ ಪಟ್ಟಿಗೆ ಬಿಡುಗಡೆಗೆ ತಯಾರಿ ನಡೆಸಿದೆ. ಪ್ರತಿಪಕ್ಷ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಿ ಮೊದಲ ಪಟ್ಟಿ ತ್ವರಿತವಾಗಿ ಘೋಷಿಸಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲು ಸನ್ನದ್ಧವಾಗಿದೆ. ಆದರೆ ಬಿಜೆಪಿ ಪಾಳೆಯದಲ್ಲಿ ಮೇಲ್ನೋಟಕ್ಕೆ ಯಾವುದೇ …
Read More »ಖಾನಾಪುರದಲ್ಲಿ ಡಾ.ಸೋನಾಲಿ ಸರ್ನೋಬತ್ ಬಿಜೆಪಿಯ ಪ್ರಬಲ ಆಕಾಂಕ್ಷಿ
ಖಾನಾಪುರ: ಕರ್ನಾಟಕ ವಿಧಾನ ಸಭೆ ಚುನಾವಣೆ ಇನ್ನೇನು ಘೋಷಣೆಯಾಗಲಿದೆ. ಇಡೀ ರಾಜ್ಯದಲ್ಲಿ ಚುನಾವಣೆ ವಾತಾವರಣ ನಿರ್ಮಾಣವಾಗಿದೆ. ಅಘೋಷಿತ ನೀತಿ ಸಂಹಿತೆ ಜಾರಿಯಾಗಿದೆ. ರಾಜಕೀಯ ಪಕ್ಷಗಳು ಕಳೆದ 3 ತಿಂಗಳನಿಂದಲೆ ಚುನಾವಣೆ ಮೂಡ್ ಗೆ ಜಾರಿವೆ. ಪ್ರಮುಖ ಮೂರೂ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿವೆ. ಪಕ್ಷಾಂತರ ಪರ್ವವೂ ಜೋರಾಗಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ಇನ್ನಷ್ಟು ಘಟಾನುಘಟಿಗಳು ಪಕ್ಷ ಬದಲಾವಣೆ ಮಾಡುವ ಮುನ್ಸೂಚನೆ ಈಗಾಗಲೆ ಕಾಣಿಸಿದೆ. ಪಕ್ಷಾಂತರಿಗಳಿಗಾಗಿ ಮೂರೂ ಪಕ್ಷಗಳು ಕೆಲವು ಸೀಟ್ …
Read More »ಕರ್ನಾಟಕದ ಇತಿಹಾಸದಲ್ಲಿ 25 ಸಿಎಂಗಳು ಬಂದರೂ ಸಹ, 5 ವರ್ಷ ಪೂರ್ಣಗೊಳಿಸಿದ್ದು ಮೂವರು ಮಾತ್ರ: ಯಾರವರು ಗೊತ್ತಾ?
ರ್ನಾಟಕದ ಇತಿಹಾಸದಲ್ಲಿ 25 ಮುಖ್ಯಮಂತ್ರಿಗಳು ಬಂದು ಹೋಗಿದ್ದಾರೆ. ಅದರಲ್ಲಿ ಸಂಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲು ಸಮರ್ಥರಾಗಿದ್ದು ಕೇವಲ ಮೂವರಿಗೆ ಮಾತ್ರ. ಅವರೆಲ್ಲರೂ ಕಾಂಗ್ರೆಸ್’ನಿಂದ ಆಯ್ಕೆಯಾದವರು. ಎಸ್ ನಿಜಲಿಂಗಪ್ಪ (1962-68), ಡಿ ದೇವರಾಜ ಅರಸು (1972-77) ಮತ್ತು ಸಿದ್ದರಾಮಯ್ಯ (2013-2018) ತಮ್ಮ ಪೂರ್ಣಾವಧಿಯನ್ನು ಪೂರ್ಣಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿಗಳು. ಬಿಜೆಪಿ ಮತ್ತು ಕುಮಾರಸ್ವಾಮಿಯವರ ಜೆಡಿಎಸ್‌ನಿಂದ ಯಾವುದೇ ಮುಖ್ಯಮಂತ್ರಿ ಕರ್ನಾಟಕದಲ್ಲಿ ಪೂರ್ಣಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಮೈಸೂರು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಅವಧಿ: …
Read More »ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರ ಬಲಿ
ಬೆಳಗಾವಿ: ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಬಲಿಯಾಗಿದ್ದಾರೆ. ಯಮನಪ್ಪ ಪ್ರಕಾಶ ರೆಡ್ಡರಟ್ಟಿ (10) ಹಾಗೂ ಯೇಶು ಬಸಪ್ಪ (14) ಮತರಾದ ಬಾಲಕರು. ಭಾನುವಾರ ಸಂಜೆ 4.30ರ ಹೊತ್ತಿಗೆ ಈ ಬಾಲಕರು ಈಸಲೆಂದು ಕೃಷಿ ಹೊಂಡಕ್ಕೆ ಇಳಿದಿದ್ದಾರೆ. ಈ ವೇಳೆ ಯಮನಪ್ಪ ನೀರಿನಲ್ಲಿ ಮುಳುಗುತ್ತಿದ್ದ. ಆತನನ್ನು ರಕ್ಷಿಸಲು ಯೇಶು ಪ್ರಯತ್ನಿಸಿದ್ದಾನೆ. ಆದರೆ ಇಬ್ಬರೂ ಬದುಕುಳಿಯಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Read More »ಕಾಂಗ್ರೆಸ್ ಮೊದಲ 80ಅಭ್ಯರ್ಥಿ ಗಳ ಪಕ್ಕಾ ಲಿಸ್ಟ್ ಬಹುತೇಕ ಖಚಿತ..?
80 ಅಭ್ಯರ್ಥಿಗಳ ಮೊದಲ ಪಟ್ಟಿ : 1. ಚಿಕ್ಕೋಡಿ – ಗಣೇಶ ಹುಕ್ಕೇರಿ 2. ಯಮಕನಮರಡಿ – ಸತೀಶ್ ಜಾರಕಿಹೊಳಿ 3. ಬೆಳಗಾವಿ ಗ್ರಾಮೀಣ : ಲಕ್ಷ್ಮೀ ಹೆಬ್ಬಾಳಕರ್ 4. ಖಾನಾಪುರ – ಅಂಜಲಿ ನಿಂಬಾಳ್ಕರ್ 5. ಬೈಲಹೊಂಗಲ : ಮಹಾಂತೇಶ 6. ಜಮಖಂಡಿ : ಸಿದ್ದು ಆನಂದ ನ್ಯಾಮಗೌಡ 7. ಬಬಲೇಶ್ವರ : ಎಂ. ಬಿ. ಪಾಟೀಲ 8. ಬಸವನಬಾಗೇವಾಡಿ : ಶಿವಾನಂದ ಪಾಟೀಲ್ 9. ಇಂಡಿ : …
Read More »ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೋಳಿ
ಗೋಕಾಕ್- ಲಖನ್ ಜಾರಕಿಹೋಳಿ ಅವರು ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷದ ಅವಧಿ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡ ಅಭಿವೃದ್ಧಿ ಕಮಗಾರಿಗಳ ವಿವರ ಬಿಡುಗಡೆ ಮಾಡಿದ್ದಾರೆ ವಿಧಾನಪರಿಷತ್ ಸದಸ್ಯರಾದ ನಂತರ ಬಿಡುಗಡೆಯಾದ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು 2ಕೋಟಿ ರೂಪಾಯಿ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 1ಕೋಟಿ ರೂಪಾಯಿ …
Read More »ಪ್ರಸ್ತುತ ಮಾರುಕಟ್ಟೆ ಅಪೇಕ್ಷಿಸುವ ವೃತ್ತಿ ಕೌಶಲಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’: RCU ಕುಲಸಚಿವ ಪ್ರೊ.ಶಿವಾನಂದ ಗೊರನಾಳೆ
ಬೆಳಗಾವಿ: ‘ಪ್ರಸ್ತುತ ಮಾರುಕಟ್ಟೆ ಅಪೇಕ್ಷಿಸುವ ವೃತ್ತಿ ಕೌಶಲಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಶಿವಾನಂದ ಗೊರನಾಳೆ ಹೇಳಿದರು. ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವೃತ್ತಿ ಮಾರ್ಗದರ್ಶನ, ತರಬೇತಿ ಮತ್ತು ವಿದ್ಯಾರ್ಥಿ ಉದ್ಯೋಗ ಕೋಶ ಹಾಗೂ ಟಿಸಿಎಸ್ ಸಾಫ್ಟವೇರ್ ಸಂಸ್ಥೆ ಹಮ್ಮಿಕೊಂಡಿದ್ದ ನೇಮಕಾತಿ ಸಂದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ‘ನಮ್ಮ ಜ್ಞಾನ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವೃತ್ತಿ …
Read More »ಯುಗಾದಿ ಹಬ್ಬದ ಪ್ರಯುಕ್ತ ಬಡ ವಿಧವಾ ಕುಟುಂಬಗಳಿಗೆ ಆಹಾರ ಧಾನ್ಯಗಳ ವಿತರಣೆ
ಗೋಕಾಕ: ವನಿತೆಯರು ವೈಜ್ಞಾನಿಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಸಾಮರ್ಥ್ಯ ತೋರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೋಕಾಕ ತಾಲ್ಲೂಕು ಘಟಕ ಅಧ್ಯಕ್ಷೆ ಭಾರತಿ ಮದಭಾವಿ ಹೇಳಿದರು. ಇಲ್ಲಿಯ ಶಿವಾ ಫೌಂಡೇಶನ್ ಮತ್ತು ಬೆಂಗಳೂರಿನ ಸ್ನೇಹಾ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಬಡ ವಿಧವಾ ಕುಟುಂಬಗಳಿಗೆ ಆಹಾರ ಧಾನ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಮ್ಮ ಮುಂದೆ ಸ್ಪೂರ್ತಿಯಾಗಬಲ್ಲ ಸಾಕಷ್ಟು ಮಹಿಳೆಯರು ಇದ್ದಾರೆ’ …
Read More »ಮುಖ್ಯಮಂತ್ರಿ ಭೇಟಿಗಾಗಿ ಒಂದು ಗಂಟೆ ಕಾದು ವಾಪಸ್ ಆದ ಶಾಸಕಿ ಕುಸುಮಾವತಿ ಶಿವಳ್ಳಿ
ಹುಬ್ಬಳ್ಳಿ: ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಮುಖ್ಯಮಂತ್ರಿಗಳ ಭೇಟಿಗಾಗಿ ಸುಮಾರು ಒಂದು ಗಂಟೆ ಕಾದರೂ ಭೇಟಿಯಾಗದ ಹಿನ್ನೆಲೆಯಲ್ಲಿ ವಾಪಸ್ಸು ತೆರಳಿದ ಘಟನೆ ನಡೆಯಿತು. ಇಲ್ಲಿನ ಆದರ್ಶ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಶಾಸಕಿ ಕುಸುಮಾವತಿ ತೆರಳಿದ್ದರು. ಸುಮಾರು ಒಂದು ಗಂಟೆ ಕಾಲ ಕಾದರು ಕುಳಿತರು. ಆದರೆ ಬೆಳಗಾವಿಗೆ ತೆರಳುವ ಭರದಲ್ಲಿ ಭೇಟಿಯಾಗದೆ ಸಿಎಂ ಬೊಮ್ಮಾಯಿ ಹೊರಟು ಹೋದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಕುಸುಮಾವತಿ ಶಿವಳ್ಳಿ, ಕ್ಷೇತ್ರದ …
Read More »
Laxmi News 24×7