ಬಾಗಲಕೋಟೆ: ವೃದ್ಧರೊಬ್ಬರು ನುಂಗಿದ್ದ 187 ನಾಣ್ಯಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಹೊಟ್ಟೆಯಿಂದ ತೆಗೆಯುವಲ್ಲಿ ಕುಮಾರೇಶ್ವರ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹಾನಗಲ್ ಕುಮಾರೇಶ್ವರ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ತಜ್ಞ ವೈದ್ಯರಾಗಿರುವ ಡಾ.ಈಶ್ವರ ಕಲಬುರ್ಗಿ, ಡಾ.ಪ್ರಕಾಶ ಕಟ್ಟಿಮನಿ ಅವರೊಂದಿಗೆ ಅರಿವಳಿಕೆ ತಜ್ಞರಾದ ಡಾ.ಅರ್ಚನಾ ಮತ್ತು ಡಾ.ರೂಪಾ ಹುಲಕುಂದೆ ಅವರು ನಾಣ್ಯ ಹೊರ ತೆಗೆದಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗುಸುಗೂರು ತಾಲ್ಲೂಕಿನ ದ್ಯಾಮಪ್ಪ ಹರಿಜನ ಎಂಬ 58 ವರ್ಷ ವಯಸ್ಸಿನವರು …
Read More »ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಸಂಜೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಚರ್ಚೆ ನಡೆಸಲು ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಸಂಜೆ 7 ಗಂಟೆಗೆ ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಗಡಿ, ನದಿ ರಕ್ಷಣಾ ಆಯೋಒಗದ ಅಧ್ಯಕ್ಷ ನ್ಯಾ. ಶಿವರಾಜ ಪಾಟೀಲ್, ಎ.ಜಿ ಪ್ರಭುಲಿಂಗ ನಾವದಗಿ, ಸುಪ್ರೀಂಕೋರ್ಟ್ ನ ಕೆಲ ವಕೀಲರ ಜೊತೆಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸುಪ್ರೀಂಕೋರ್ಟ್ …
Read More »ಕಾಂಗ್ರೆಸ್ `SC-ST’ ಐಕ್ಯತಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್
ಬೆಂಗಳೂರು : ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಇದೀಗ ಎಸ್ ಸಿ ಎಸ್ ಟಿ ಐಕ್ಯತಾ ಸಮಾವೇಶಕ್ಕೆ ದಿನಾಂಕ ನಿಗದಿ ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತಗಳನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಬೃಹತ್ ಸಮಾವೇಶ ಆಯೋಜಿಸಬೇಕು ಎಂಬ ಪ್ರಸ್ತಾವವನ್ನು ಶಾಸಕ ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರ ಮುಂದಿಟ್ಟಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಆರ್. ಧ್ರುವ …
Read More »ರೈತರ ಪ್ರೋತ್ಸಾಹಧನ 10 ರೂ. ಗೆ ಏರಿಸಲು ಮನವಿ: ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ಇತ್ತೀಚೆಗೆ ಸುರಿದ ಭಾರೀ ಮಳೆ ಹಿನ್ನೆಲೆಯಲ್ಲಿ ರೈತರು ಅಪಾರ ನಷ್ಟ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆ ಹಿನ್ನೆಲೆಯಲ್ಲಿ ಮುಂಬರುವ ಬಜೆಟ್‌ನಲ್ಲಿ ಈಗ ಸರಕಾರ ರೈತರಿಗೆ ನೀಡುವ ಪ್ರೋತ್ಸಾಹ ಮೊತ್ತವನ್ನು 5ರಿಂದ 10 ರೂ.ಗೆ ಏರಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ ಶನಿವಾರ ಹೆಬ್ಬಾಳದ ಜಿಕೆವಿಕೆ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಅವರು …
Read More »ಕರ್ನಾಟಕ ಸೇರುವೆವು.; ಗಡಿನಾಡ ಕನ್ನಡಿಗರ ಒಕ್ಕೊರಲ ಧ್ವನಿ
ವಿಜಯಪುರ: ಒಂದು ವಾರದೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ನಮ್ಮ ಮಾತೃ ಭೂಮಿ ಕರ್ನಾಟಕಕ್ಕೆ ಸೇರಲು ಅನುಮತಿ ನೀಡಿ ಎಂದು ಮರಾಠಿ ನೆಲದಲ್ಲಿರುವ ಗಡಿನಾಡ ಕನ್ನಡಿಗರು ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜತ್ ತಾಲೂಕಿನ ಉಮದಿ ಪಟ್ಟಣದ ಮಲಕಾರ ಸಿದ್ಧ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಸಭೆ ಸೇರಿದ್ದ ಗಡಿನಾಡ ಕನ್ನಡಿಗರು, ಮಹಾರಾಷ್ಟ್ರ ಸರಕಾರಕ್ಕೆ ಒಂದು ವಾರದ ಗಡುವು ನೀಡಿದ್ದಾರೆ. ‘ನೀರು ಕೊಡಿ, ಇಲ್ಲವೇ ನಮ್ಮನ್ನು ಕರ್ನಾಟಕ ಸೇರಲು ಬಿಡಿ’ ಎಂದು …
Read More »ಅಧಿವೇಶನ ಸಂದರ್ಭ ಚೆನ್ನಮ್ಮ, ರಾಯಣ್ಣ ಪ್ರತಿಮೆಗೆ ಅಡಿಗಲ್ಲು: ಸಿಎಂ
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಎರಡೂ ಪ್ರತಿಮೆ ಸ್ಥಾಪನೆಗೆ ಆದೇಶ ಹೊರಡಿಸಲಾಗಿದೆ ಎಂದರು. ಗಡಿಯಲ್ಲಿ ಉದ್ವಿಗ್ನ ವಾತಾವರಣ ಸಂಬಂಧ ಮಹಾರಾಷ್ಟ್ರದ ಗೃಹ ಇಲಾಖೆ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಲು ಸೂಚಿಸಿದೆ. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಎರಡೂ ರಾಜ್ಯಗಳ …
Read More »ಬೈಕಿಗೆ ಟ್ಯಾಂಕರ್ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ
ಚಿತ್ರದುರ್ಗ: ಬೈಕಿಗೆ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೈನಡು ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಕೈನಡು ಗ್ರಾಮದ ಉಜ್ಜೀರಪ್ಪ (38), ರವಿಕುಮಾರ್ (29), ಗಿರೀಶ್ (23) ಮೃತಪಟಟ್ವರು. ನಿನ್ನೆ ತಡರಾತ್ರಿ ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಮೂಡಲಗಿ: ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ
ಮೂಡಲಗಿ: ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು, ವಿದ್ಯಾರ್ಜನೆಯ ಕಡೆ ಗಮನ ಹರಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಧೀಶ ಜೋತಿ ಪಾಟೀಲ ಹೇಳಿದರು. ಶನಿವಾರಂದು ಪಟ್ಟಣದ ಶ್ರೀನಿವಾಸ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ ಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. …
Read More »ಬಾವನಸೌಂದತ್ತಿ-ಅಂಕಲಿಯ ಮಧ್ಯೆ ಹದಗೆಟ್ಟ ರಸ್ತೆ,
ರಾಯಬಾಗದಿಂದ ಚಿಕ್ಕೋಡಿ ತಾಲೂಕಿಗೆ ಸಂಪರ್ಕಿಸುವ ಅಂಕಲಿ -ಬಾವನಸವದತ್ತಿ ರಸ್ತೆಯ ಮಧ್ಯ ಭಾಗದಲ್ಲಿರುವ ಸೇತುವೆ ಮೇಲೆ ಡಾಂಬರ್ ಸಂಪೂರ್ಣ ಕಿತ್ತು ಹೋಗಿದೆ. ಅನೇಕ ಗುಂಡಿಗಳು ನಿರ್ಮಾಣವಾಗಿವೆ. ಇವು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಗುಂಡಿಗಳು ತಪ್ಪಿಸಲು ಹೋಗಿ ಅನೇಕ ಅಪಘಾತ ಸಂಭವಿಸುತ್ತಿವೆ. ಚಿಕ್ಕೋಡಿ,ರಾಯಬಾಗ ತಾಲೂಕಿಗೆ ಜೋಡಿಸುವ ಈ ರಸ್ತೆಯಾಗಿದ್ದು, ಬಾವನ ಸೌಂದತ್ತಿ, ಜಲಾಲಪುರ ದಿಗ್ಗೆವಾಡಿ, ಶಿವಶಕ್ತಿ ಸಕ್ಕರೆ ಕಾರ್ಖಾನೆ, ರಾಯಬಾಗ ಪಟ್ಟಣ, ಹಾಗೂ ಪ್ರಸಿದ್ದ ಶ್ರೀ ಮಾಯಕ್ಕ ಚಿಂಚಲಿಗೆ ಹೋಗುವ ಮುಖ್ಯ ರಸ್ತೆಯಾಗಿದೆ.ಚಿಕ್ಕೋಡಿ …
Read More »ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ಸಿಡಿದೆದ್ದ ಕರವೇ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‍ಲ್ಲಿ ಅಂತಿಮ ವಿಚಾರಣೆ ನಡೆಯುತ್ತಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮೆರೆಯುತ್ತಿರುವ ಅಲ್ಲಿನ ಸರ್ಕಾರ ಮತ್ತು ಮರಾಠಿ ಪುಂಡರ ವಿರುದ್ಧ ಕನ್ನಡಿಗರ ಕೆರಳಿ ಕೆಂಡವಾಗಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಮಹಾಂತೇಶ ನಗರ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಮಹಾಪುಂಡರ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಮಹಾರಾಷ್ಟ್ರ …
Read More »