ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕ, ಸ್ವಾಗತಗಾರರು ಹಾಗೂ ದಲಾಯತ್ ಹುದ್ದೆಗಳಿಗೆ ಡಿ.5ರಿಂದ 7ರವರೆಗೆ ಪರೀಕ್ಷೆಗಳು ನಡೆಯಲಿವೆ. ಡಿ.5ರಂದು ಮಧ್ಯಾಹ್ನ 3.30ರಿಂದ 4.30ರವರೆಗೆ ದಲಾಯತ್ ಹುದ್ದೆಗೆ, 50 ಅಂಕಗಳ ಬಹು ಆಯ್ಕೆ ಮಾದರಿಯ ಪರೀಕ್ಷೆ ನಡೆಯಲಿದೆ. ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ (100 ಅಂಕಗಳು) 6ರಂದು ಮಧ್ಯಾಹ್ನ 3ರಿಂದ 5ರವರೆಗೆ, ಕಿರಿಯ ಸಹಾಯಕ ಹಾಗೂ ಸ್ವಾಗತಗಾರರ ಹುದ್ದೆಗಳಿಗೆ (100 ಅಂಕಗಳು) 7ರಂದು ಮಧ್ಯಾಹ್ನ 3ರಿಂದ 5ರವರೆಗೆ …
Read More »ಸಂಸ್ಕೃತಿ ಇಲಾಖೆ ನಡೆಗೆ ಆಕ್ಷೇಪ: ಧನಸಹಾಯಕ್ಕೆ ಕಾರ್ಯಕ್ರಮದ ನಿರ್ಬಂಧ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ಧನಸಹಾಯವನ್ನೇ ನೆಚ್ಚಿಕೊಂಡಿದ್ದ ನಾಡಿನ ಸಾಂಸ್ಕೃತಿಕ ಸಂಘ-ಸಂಸ್ಥೆಗಳಿಗೆ ಈ ಬಾರಿ ಕನಿಷ್ಠ ಆರ್ಥಿಕ ನೆರವು ಸಹ ಕೈ ತಪ್ಪುವ ಆತಂಕ ಎದುರಾಗಿದೆ. ಡಿಸೆಂಬರ್ ಅಂತ್ಯದೊಳಗೆ ಕನಿಷ್ಠ 3 ಕಾರ್ಯಕ್ರಮಗಳನ್ನು ನಡೆಸಿ, ದಾಖಲೆ ಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಸಲ್ಲಿಸಬೇಕೆಂಬ ಇಲಾಖೆಯ ಸೂಚನೆಗೆ ಆಕ್ಷೇಪ ವ್ಯಕ್ತವಾಗಿದೆ. ಧನಸಹಾಯಕ್ಕೆ ಸಂಬಂಧಿಸಿ ಪಾರದರ್ಶಕತೆಯ ಹೆಸರಿನಲ್ಲಿ ಇಲಾಖೆ ಹೊರಡಿಸಿದ್ದ ಮಾರ್ಗಸೂಚಿ ಸಂಘ-ಸಂಸ್ಥೆಗಳಿಗೆ ತಲೆನೋವಾಗಿದೆ. ಪ್ರತಿ ವರ್ಷ ಧನಸಹಾಯದ ಪಟ್ಟಿ ಬಿಡುಗಡೆಯಾದ …
Read More »180 ಲಕ್ಷ ಟನ್ ಹಳೆ ಕಸ ಕರಗಿಸಲು ₹989 ಕೋಟಿ!
ಕರ್ನಾಟಕದ ಮಹಾನಗರ ಪಾಲಿಕೆ ವ್ಯಾಪ್ತಿಗಳ ಭೂಭರ್ತಿ ಘಟಕಗಳಲ್ಲಿ ವರ್ಷಗಳಿಂದ ಕೊಳೆಯುತ್ತಿರುವ 180 ಲಕ್ಷ ಟನ್ ಹಳೆಯ ಕಸವನ್ನು ಕರಗಿಸಲು ₹989 ಕೋಟಿ ಬೇಕಿದೆ. ಪರಿಸರಕ್ಕೆ ಹಾನಿ ಉಂಟು ಮಾಡುವ ಘನ ಹಾಗೂ ದ್ರವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣಕ್ಕೆ ಕರ್ನಾಟಕ ಸರ್ಕಾರಕ್ಕೆ ₹2,900 ಕೋಟಿ ದಂಡ ವಿಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪ್ರಧಾನ ಪೀಠವು ಅಕ್ಟೋಬರ್ 14ರಂದು ಆದೇಶಿಸಿತ್ತು. ಅದರ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಸರ್ಕಾರವು, ₹2,046 ಕೋಟಿ ಮೊತ್ತದ …
Read More »ಸೆಲ್ಫಿ ತೆಗೆದುಕೊಳ್ಳುವಾಗ ನೀರಿಗೆ ಬಿದ್ದು ನಾಲ್ವರು ವಿದ್ಯಾರ್ಥಿನಿಯರ ಸಾವು
ಬೆಳಗಾವಿ: ತಾಲ್ಲೂಕಿನ ಗಡಿಗೆ ಹೊಂದಿಕೊಂಡ, ಮಹಾರಾಷ್ಟ್ರದ ಕಿತವಾಡ ಫಾಲ್ಸ್‌ನಲ್ಲಿ ಶನಿವಾರ ಸೆಲ್ಫಿ ತೆಗೆದುಕೊಳ್ಳಲು ಹೋದ ನಾಲ್ವರು ಕಾಲೇಜು ವಿದ್ಯಾರ್ಥಿನಿಯರು ಆಯತಪ್ಪಿ ನೀರಿಗೆ ಬಿದ್ದು ಅಸುನೀಗಿದ್ದಾರೆ. ಬೆಳಗಾವಿಯ ಉಜ್ವಲ ನಗರ ಆಸೀಯಾ ಮುಜಾವರ್ (17), ಅನಗೋಳದ ಕುದ್‌ಶೀಯಾ ಹಾಸನ್ ಪಟೇಲ್ (20), ಝಟ್‌ಪಟ್ ಕಾಲೊನಿಯ ರುಕ್ಕಶಾರ್ ಭಿಸ್ತಿ (20) ಹಾಗೂ ತಸ್ಮಿಯಾ (20) ಮೃತಪಟ್ಟವರು. ಇವರೆಲ್ಲರೂ ಬೆಳಗಾವಿಯ ಕಾಮತ ಗಲ್ಲಿಯ ಮದರಸಾದಲ್ಲಿ ಇದ್ದುಕೊಂಡು ಓದುತ್ತಿದ್ದರು. ಇದೇ ಮದರಸಾದ 40 ಯುವತಿಯರು ಬೆಳಗಾವಿಯಿಂದ …
Read More »ಬೆಳಗಾವಿಯಲ್ಲಿಯೂ ಅತ್ಯಂತ ಸಂಭ್ರಮದಿಂದ ಅಂಬೇಡ್ಕರ್ ದಿನಾಚರಣೆ ಆಚರಿಸಲಾಯಿತು
1949 ನವೆಂಬರ್ 26 ನಮ್ಮ ದೇಶದ ಸಂವಿಧಾನ ಅಂಗೀಕಾರವಾದ ದಿನ. ಹೀಗಾಗಿ ಇಂದು ದೇಶಾಧ್ಯಂತ ಸಂವಿಧಾನ ದಿನ ಆಚರಿಸಲಾಯ್ತು. ಅದೇ ರೀತಿ ಬೆಳಗಾವಿಯಲ್ಲಿಯೂ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶನಿವಾರ ಬೆಳಗಾವಿಯ ಅಂಬೇಡ್ಕರ್ ಉದ್ಯಾನದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಸಂವಿಧಾನ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಂವಿಧಾನಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು. ಬಳಿಕ ಸಂವಿಧಾನ ಪೀಠಿಕೆಯನ್ನು ಓದಲಾಯಿತು. ನಂತರ ಮಾತನಾಡಿದ ಭಾರತೀಯ …
Read More »ಇಬ್ಬರು ಆರೋಪಿಗಳಿಗೆ ಹೆಡೆಮುರಿ ಕಟ್ಟಿದ ಗೋಕಾಕ್ ಪೊಲೀಸರು..!
ಗೋಕಾಕ್ ತಾಲೂಕಿನ ಘಟಪ್ರಭಾದ ಯುವಕನ ಕೊಲೆ ಕೇಸ್‍ಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ನವೆಂಬರ್ 13ರಂದು ರಾತ್ರಿ ಗೋಕಾಕ್ ನಗರದ ಶಿಂಗಳಾಪುರ ಸೇತುವೆಯಲ್ಲಿ ಘಟಪ್ರಭಾದ ಯುವಕ ಸೋಮಲಿಂಗ ಸುರೇಶ ಕಂಬಾರ ಎಂಬ 20 ವರ್ಷದ ಯುವಕನ ಶವ ಪತ್ತೆಯಾಗಿತ್ತು. ಕೈಕಾಲು ಕಟ್ಟಿ ಹಾಕಲಾಗಿತ್ತು. ಆತನ ದೇಹವನ್ನು ಹಳೆಯ ಲೈಟ್ ಕಂಬಕ್ಕೆ ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಈ ಸಂಬಂಧ ನ.9ರಂದು ಕೊಲೆಯಾದ ಯುವಕನ ತಾಯಿ …
Read More »ಕರ್ನಾಟಕ ಬಸ್ ಗೆ ಕಲ್ಲು ತೂರಿ ಮರಾಠಿ ಪುಂಡರ ಪುಂಡಾಟಿಕೆ
ಮತ್ತೆ ಮಹಾರಾಷ್ಟ್ರದಲ್ಲಿ ಮರಾಠಿ ಪುಂಡರು ಪುಂಡಾಟಿಕೆ ಮೆರೆದಿದ್ದು ಕರ್ನಾಟಕ ಬಸ್ ಗೆ ಕಲ್ಲು ತೂರಿ ಕನ್ನಡಿಗರನ್ನು ಕೆಣಕುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಮಿರಜ್ ಕಾಗವಾಡ ಮಧ್ಯೆ ಕರ್ನಾಟಕ ಬಸ್ ಗೆ ಮಹಾರಾಷ್ಟ್ರ ಪುಂಡರು ಕಲ್ಲು ತೂರಿದ್ದಾರೆ. ಪುಣೆಯಿಂದ ಅಥಣಿಗೆ ಬರುತ್ತಿದ್ದ ಕರ್ನಾಟಕ ಬಸ್ ಇದಾಗಿದ್ದು, ನಿನ್ನೆ ರಾತ್ರಿ 10.30ಕ್ಕೆ ಚಲಿಸುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಬಸ್ ಮುಂದಿನ ಗಾಜು ಜಖಂಗೊಂಡಿದೆ. ಬೆಳಗಾವಿ ಜಿಲ್ಲೆಯ ಅಥಣಿ ಡಿಪೋಗೆ ಸೇರಿದ …
Read More »ಕಾಲು ಕೆರೆದು ಜಗಳಕ್ಕೆ ನಿಂತಿರುವ ಮರಾಠಿ ಪುಂಡರ ವಿರುದ್ಧ ಸಿಡಿದೆದ್ದ ಕನ್ನಡಿಗರು
ಕಾಲು ಕೆರೆದು ಜಗಳಕ್ಕೆ ನಿಂತಿರುವ ಮರಾಠಿ ಪುಂಡರ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‍ಗೆ ಮಸಿ ಬಳಿದ ಹಾಗೂ ಕಲ್ಲು ತೂರಾಟ ಪ್ರಕರಣ ಖಂಡಿಸಿ ಬೆಳಗಾವಿಯಲ್ಲಿ ಕರವೇ ಶಿವರಾಮೇಗೌಡ ಬಣದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕರವೇ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ನಗರದ ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಪ್ರತಿಕೃತಿ ಮೆರವಣಿಗೆ ಮಾಡಿ, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕನ್ನಡ ಹೋರಾಟಗಾರರು ತಮ್ಮ …
Read More »ಸಿದ್ದು- ಡಿಕೆ ಮುಗಿಯದ ವೈಮನಸ್ಸು; ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಿದ್ದು ಬಣಕ್ಕೆ ಕಾಡುತ್ತಿದೆ ಅಭದ್ರತೆ
ಬೆಂಗಳೂರು: ಟಿಕೆಟ್ ಹಂಚಿಕೆ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಧ್ಯೆ ಭಿನ್ನಮತ ತಾರಕಕ್ಕೆ ಏರಿದ್ದು, ನಿನ್ನೆ ಆಯೋಜಿಸಿದ್ದ ಸಭೆಗೆ ಸಿದ್ದರಾಮಯ್ಯ ಗೈರಾಗಿರುವುದು ಹೈಕಮಾಂಡ್ ಅಸಮಾಧಾನಕ್ಕೆ ಕಾರಣವಾಗಿದೆ. ಅರ್ಜಿ ಸಲ್ಲಿಸಿದ್ದ ಟಿಕೆಟ್ ಅಕಾಂಕ್ಷಿಗಳು ಹಾಗೂ ಬೂತ್ ಕಮಿಟಿ ಅಧ್ಯಕ್ಷರ ವರದಿ ಬಗ್ಗೆ ವಿಶ್ಲೇಷಣೆ ನಡೆಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತೃತ್ವದಲ್ಲಿ ಶುಕ್ರವಾರ ಸಭೆ ಆಯೋಜಿಸಲಾಗಿತ್ತು. ಆದರೆ ಈ ಸಭೆಗೆ ಸಿದ್ದರಾಮಯ್ಯ …
Read More »ಗಡಿಜಿಲ್ಲೆ ಕಲಬುರಗಿಯಲ್ಲಿ ಮಹಾರಾಷ್ಟ್ರ ಬಸ್‌ಗಳಿಗೆ ಮಸಿ ಬಳಿದು ಪ್ರತಿಭಟನೆ
(ಕಲಬುರಗಿ ಜಿಲ್ಲೆ): ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದಿರುವುದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ತಾಲ್ಲೂಕಿನ ಬಳೂರ್ಗಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಹಾರಾಷ್ಟ್ರದ ಅಕ್ಕಲಕೋಟದಿಂದ ಅಫಜಲಪುರಕ್ಕೆ ಬರುತ್ತಿದ್ದ ಬಸ್ ತಡೆದು ಬಸ್‌ಗೆ ಮಸಿ ಬಳಿದು ಪ್ರತಿಭಟನೆ ನಡೆಸಿದರು. ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಜಮಾದಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು, ‘ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಹಿಡಿ …
Read More »