*ವಡೇರಹಟ್ಟಿ (ಮೂಡಲಗಿ)-* ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಅರಭಾವಿ ಬಿಜೆಪಿ ಮಂಡಲದಿಂದ ವಿಜಯ ಸಂಕಲ್ಪ ಅಭಿಯಾನದ ನಿಮಿತ್ಯ ಹಮ್ಮಿಕೊಂಡಿದ್ದ ಮತಗಟ್ಟೆ ಶಕ್ತಿಕೇಂದ್ರ, ಪೇಜ್ …
Read More »ಬೆಳಗಾವಿಯ ನಾಗರಾಜು ‘ಸುತ್ತೂರು ಕೇಸರಿ’, ಮಂಜು ‘ಸುತ್ತೂರು ಕುಮಾರ’
ನಂಜನಗೂಡು (ಮೈಸೂರು ಜಿಲ್ಲೆ): ಎರಡು ವರ್ಷಗಳ ನಂತರ ರಂಗೇರಿದ್ದ ಸುತ್ತೂರು ಕುಸ್ತಿ ಅಖಾಡದಲ್ಲಿ ಕುಸ್ತಿಪ್ರಿಯರ ಶಿಳ್ಳೆ- ಚಪ್ಪಾಳೆಗಳ ನಡುವೆ ಬೆಳಗಾವಿಯ ನಾಗರಾಜು ಹಾಗೂ ಶ್ರೀರಂಗಪಟ್ಟಣದ ಮಂಜು ಕ್ರಮವಾಗಿ ‘ಸುತ್ತೂರು ಕೇಸರಿ’ ಹಾಗೂ ‘ಸುತ್ತೂರು ಕುಮಾರ’ ಪ್ರಶಸ್ತಿ ಗೆದ್ದರು. ಸುತ್ತೂರು ಉಚಿತ ಶಾಲೆಯ ಮೈದಾನದ ಅಖಾಡದಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಪ್ರಯುಕ್ತ ಭಾನುವಾರ ನಡೆದ 41ನೇ ರಾಷ್ಟಮಟ್ಟದ ಸುತ್ತೂರು ಕುಸ್ತಿ ಸ್ಪರ್ಧೆಯ ಹಣಾಹಣಿಯಲ್ಲಿ ಬೆಳಗಾವಿ ನಾಗರಾಜು ಹರಿಯಾಣದ ಪೈಲ್ವಾನ್ ಬಂಟಿ …
Read More »ಗಣರಾಜ್ಯೋತ್ಸವ ಪೆರೇಡ್ನಲ್ಲಿ ನೌಕಾಪಡೆಯ ತುಕಡಿಗೆ ಮಂಗಳೂರಿನ ದಿಶಾ ಕ್ಯಾಪ್ಟನ್
ಮಂಗಳೂರು: ಇಲ್ಲಿನ ತಿಲಕನಗರದ ದಿಶಾ ಅಮೃತ್ ಅವರು, ಇದೇ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ. ನೌಕಾಪಡೆಯ 144 ಸೈನಿಕರನ್ನು ಒಳಗೊಂಡ ತುಕಡಿ ಹಾಗೂ ಸ್ತಬ್ಧಚಿತ್ರವು ಈ ಕವಾಯತಿನಲ್ಲಿ ‘ನಾರಿಶಕ್ತಿ’ಯನ್ನು ಪ್ರದರ್ಶಿಸಲಿದೆ. ಅಂಡಮಾನ್ ನಿಕೋಬಾರ್ನಲ್ಲಿ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಗಳು ಗಣರಾಜ್ಯೋತ್ಸವ ಪರೇಡ್ನಲ್ಲಿ ತುಕಡಿಯ ನಾಯಕಿಯಾಗಿ ಹೆಜ್ಜೆಹಾಕುವುದನ್ನು ಕಣ್ತುಂಬಿಕೊಳ್ಳಲು ಆಕೆಯ ತಂದೆತಾಯಿ ಅಮೃತ್ ಕುಮಾರ್- ಲೀಲಾ ದಂಪತಿ ನವದೆಹಲಿಗೆ ತೆರಳಿದ್ದಾರೆ. ಮಗಳ ಸಾಧನೆ …
Read More »ಬೆಳಗಾವಿ: ಗಂಡು ಮಕ್ಕಳಿಗೆ ಸಂಸ್ಕಾರ ಕಲಿಸಿ: ಹೈಕೋರ್ಟ್ ಸಿಜೆ ಪ್ರಸನ್ನ ವರಾಳೆ
ಬೆಳಗಾವಿ: ‘ಬೇಟಿ ಪಡಾವೋ, ಬೇಟಿ ಬಚಾವೋ’ ಎಂದು ಕೇಂದ್ರ ಸರ್ಕಾರ ಆಂದೋಲನ ಆರಂಭಿಸಿದೆ. ಆದರೆ, ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ನಮ್ಮ ಮನೆಯ ಗಂಡು ಮಕ್ಕಳಿಗೆ ಸಂಸ್ಕಾರ ಕಲಿಸಬೇಕಿದೆ’ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಳೆ ಅವರು ಪ್ರತಿಪಾದಿಸಿದರು. ಇಲ್ಲಿನ ನ್ಯಾಯಾಲಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹೆಚ್ಚುವರಿ ನ್ಯಾಯಾಲಯ ಕಟ್ಟಡದ (ನೆಲಮಹಡಿ) ಉದ್ಘಾಟನೆ, ವಕೀಲರ ಭವನದ ಎರಡನೇ ಮಹಡಿ ನಿರ್ಮಾಣ, ಖಾನಾಪುರ ನ್ಯಾಯಾಧೀಶರ ವಸತಿಗೃಹಗಳ …
Read More »ಅಂಬೇಡ್ಕರ್ ಅಭಿವೃದ್ಧಿ ನಿಗಮದ ಎಂ.ಡಿ ಅಮಾನತು
ಬೆಂಗಳೂರು: ಭ್ರಷ್ಟಾಚಾರ, ಗಂಭೀರ ಸ್ವರೂಪದ ದುರ್ನಡತೆ ಮತ್ತು ಕರ್ತವ್ಯಲೋಪ ಆರೋಪದಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಕೆಎಎಸ್ (ಆಯ್ಕೆ ಶ್ರೇಣಿ) ಅಧಿಕಾರಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್ ಕುಮಾರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಮಾನತುಗೊಳಿಸಿದೆ. ‘ ಬಳಿಕ ಅರ್ಜಿಯನ್ನೇ ಸಲ್ಲಿಸದ 92 ಫಲಾನುಪೇಕ್ಷಿಗಳಿಗೆ ಸೌಲಭ್ಯ ನೀಡಿರುವುದು, 2019-20ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಐರಾವತ ಮತ್ತು ಸಮೃದ್ಧಿ ಯೋಜನೆ ಅನುಷ್ಠಾನ …
Read More »ಚುನಾವಣೆ ನೀತಿ ಸಂಹಿತೆಗೂ ಮೊದಲೇ ವರದಿ; ನೌಕರರ ಸಂಘ ಕೋರಿಕೆ
ಬೆಂಗಳೂರು: ವಿಧಾನಸಭಾ ಚುನಾವಣೆಯ ನೀತಿಸಂಹಿತೆ ಜಾರಿಗೊಳ್ಳುವ ಮೊದಲು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ 7ನೇ ವೇತನ ಆಯೋಗಕ್ಕೆ ಮನವಿ ಸಲ್ಲಿಸಿದೆ. ನೌಕರರ ವೇತನ ಹಾಗೂ ಭತ್ಯೆಗಳ ಹೆಚ್ಚಳಕ್ಕೆ ಹಿಂದಿನ ವೇತನ ಆಯೋಗಗಳು ಎರಡು ಹಂತಗಳಲ್ಲಿ ವರದಿ ನೀಡಿವೆ. ಅದರಂತೆ 7ನೇ ವೇತನ ಆಯೋಗವೂ ಫೆಬ್ರುವರಿ ಅಂತ್ಯದ ಒಳಗೆ ವೇತನ ನಿಗದಿ ಸೌಲಭ್ಯದ (ಫಿಟ್ಮೆಂಟ್) ಪ್ರಥಮ ಹಂತದ ವರದಿ ಸಲ್ಲಿಸಬೇಕು. ರಾಜ್ಯ ಸರ್ಕಾರಿ ನೌಕರರು ಹಾಲಿ ಪಡೆಯುತ್ತಿರುವ …
Read More »ಡಂಭಾಚಾರದ ವಿರುದ್ಧ ಧ್ವನಿ ಎತ್ತಿದ ಚೌಡಯ್ಯ
ಬೆಳಗಾವಿ: ಅಂಬಿಗರ ಚೌಡಯ್ಯನವರಿಗೆ ಇನ್ನೊಂದು ಹೆಸರು ನಿಜಶರಣರು. ಆಗಿನ ಕಾಲದಲ್ಲಿ ಯಾವುದೇ ವಿಷಯಕ್ಕೆ ರಾಜಿಯಾಗದೇ ಸತ್ಯ ಮತ್ತು ನಿಷ್ಠುರತನದಿಂದ ತಮ್ಮ ವಿಚಾರಗಳನ್ನು ಸಮಾಜಕ್ಕೆ ತಿಳಿಸಿದವರು. ಸಮಾನತೆ ಪ್ರತಿಪಾದಿಸುವ ಮೂಲಕ ಎಲ್ಲರ ಗಮಸೆಳೆದರು ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನರ ಪಾಲಿಕೆ ವತಿಯಿಂದ ಶನಿವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ …
Read More »ವಿಧಾನಸಭೆ ಚುನಾವಣೆ | ಪ್ರತಿ ಜಿಲ್ಲೆಗೂ ಪ್ರತ್ಯೇಕ ಪ್ರಣಾಳಿಕೆ ಬೊಮ್ಮಾಯಿ
ಬೆಂಗಳೂರು: ಪ್ರತಿ ಜಿಲ್ಲೆಗಳಿಂದಲೂ ಮಾಹಿತಿ ತರಿಸಿಕೊಂಡು ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ‘ಪ್ರಣಾಳಿಕೆ ಸಿದ್ಧಪಡಿಸುವುದು, ಬಜೆಟ್ ಅಧಿವೇಶನ, ಪಕ್ಷದ ಸಂಘಟನೆ, ಜನ ಸಂಕಲ್ಪ ಯಾತ್ರೆಯ ಮುಂದುವರಿಕೆ, ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಲಾಗಿದೆ. ಶನಿವಾರದಿಂದ (ಜ.21) ಪ್ರಾರಂಭವಾಗುವ ಬೂತ್ಮಟ್ಟದ ವಿಜಯಸಂಕಲ್ಪ ಯಾತ್ರೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ …
Read More »ದೇವೇಗೌಡರ ಧೂಳಿಗೂ ಸಮಾನವಲ್ಲ ನಳಿನ್ ಕುಮಾರ್ ಕಟೀಲ್:H.D.K.
ವಿಜಯಪುರ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ”ದೇವೇಗೌಡರ ಧೂಳಿಗೂ ಸಮಾನವಲ್ಲದ ನೀವು ಮಾತನಾಡಬೇಕಿದ್ದರೆ ಎಚ್ಚರಿಕೆ ಇರಲಿ” ಎಂದು ಕಿಡಿ ಕಾರಿದ್ದಾರೆ. ದೇವೇಗೌಡರ ಕುಟುಂಬ ಅಧಿಕಾರಕ್ಕಾಗಿ ಚಪ್ಪಲಿಯಲ್ಲಿ ಹೊಡೆದಾಡುತ್ತಿದೆ ಎಂದು ಹೇಳಿಕೆ ನೀಡಿದ್ದ ನಳಿನ್ ಕುಮಾರ್ ವಿರುದ್ಧ ವಿಜಯಪುರ ನಗರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ವಾಗ್ದಾಳಿ ನಡೆಸಿ, ದೇವೇಗೌಡರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಲು ನಿಮಗೆ ಯೋಗ್ಯತೆ ಇಲ್ಲ ಎಂದು ಹರಿಹಾಯ್ದರು. ದೇವೇಗೌಡರ …
Read More »ಶ್ರೀರಾಮ ಸೇನೆ ಮುಖಂಡನ ಮೇಲೆ ಗುಂಡು: ತನಿಖೆ ಸಿಐಡಿಗೆ ಒಪ್ಪಿಸಿ ಎಂದ ಮುತಾಲಿಕ
ಬೆಳಗಾವಿ: ‘ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಮುರಿಯಬೇಕು ಎಂಬ ಉದ್ದೇಶದಿಂದಲೇ ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತಕರ ಮೇಲೆ ಗುಂಡಿನ ದಾಳಿ ನಡೆದಿದೆ. ಈ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಅಥವಾ ಸಿಐಡಿಗೆ ಒಪ್ಪಿಸಬೇಕು’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ಆಗ್ರಹಿಸಿದರು. ‘ಈ ಗುಂಡಿನ ದಾಳಿ ವೈಯಕ್ತಿಕ ದ್ವೇಷದಿಂದ ನಡೆದಿದೆ ಎಂದು ಹೇಳುವ ಮೂಲಕ ಪೊಲೀಸರು ದಾರಿ ತಪ್ಪಿಸುತ್ತಿದ್ದಾರೆ. ಇದರಲ್ಲಿ ರಾಜಕೀಯ ಷಡ್ಯಂತ್ರ …
Read More »
Laxmi News 24×7