ಬೆಳಗಾವಿ: ‘ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದವನ್ನು ಮಾತುಕತೆಯ ಮೂಲಕ ಸರ್ವಸಮ್ಮತದಿಂದ ಬಗೆಹರಿಸಿಕೊಳ್ಳುವುದು ನಮ್ಮ ನಿಲುವು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿದ್ದಾರೆ. ಮುಂಬೈನಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಗಡಿ ಸಮಸ್ಯೆ ಕುರಿತ ನಮ್ಮ ದಾವೆ ಸುಪ್ರೀಂಕೋರ್ಟಿನಲ್ಲಿದೆ. ಕಾನೂನು ವ್ಯಾಪ್ತಿಯ ಚರ್ಚೆ ಅಲ್ಲಿ ನಡೆಯಲಿ. ಕೇಂದ್ರ ಸರ್ಕಾರ ಹಾಗೂ ಎರಡೂ ರಾಜ್ಯಗಳ ನಡುವೆ ಮಾತುಕತೆ ಮೂಲಕ ಈ ವಿವಾದ ಬಗೆಹರಿಸಿಕೊಳ್ಳುವುದು ಸೂಕ್ತ ಎಂಬುದು ನಮಗೆ ಅನ್ನಿಸುತ್ತಿದೆ’ ಎಂದರು. …
Read More »ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ
ಅಥಣಿ: ಮನಷ್ಯ ಮನಸ್ಸು ಮಾಡಿದರೇ ಯಾವುದೂ ಅಸಾಧ್ಯವಲ್ಲ. ಕಳೇದ ಮೂರು ದಿನಗಳಿಂದ ಸತ್ತಿ ಗ್ರಾಮದಲ್ಲಿ ಪ್ರತಿ ದಿನ ಬೆಳೆಗ್ಗೆ ‘ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ’ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಗ್ರಾಮದ ನೂರಾರು ಯುವಕರು ಸ್ವಯಂ ಪ್ರೇರಿತರಾಗಿ ದುಶ್ಚಟಗಳನ್ನು ಜೋಳಿಗೆಯಲ್ಲಿ ಹಾಕಿದ್ದಾರೆ. ಇದವೇ ಗ್ರಾಮದ ನಿಜವಾದ ಪರಿವರ್ತನೆ ಎಂದು ಗುಣದಾಳ ಕಲ್ಯಾಣ ಮಠದ ವಿವೇಕಾನಂದ ದೇವರು ಹೇಳಿದರು. ಸಮೀಪದ ಸತ್ತಿ ಗ್ರಾಮದಲ್ಲಿ ಬಾಳಕೃಷ್ಣ ಮಹಾರಾಜರ 25ನೇ ವರ್ಷದ ಪುಣ್ಯಾರಾಧನೆಯ ಅಂಗವಾಗಿ ಮಂಗಳವಾರ …
Read More »ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ: ಮುಖ್ಯಮಂತ್ರಿ
ಬೆಂಗಳೂರು: ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯ ಅಭಿವೃದ್ಧಿ ಕುರಿತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಅಲ್ಲಿನ ವಾಣಿಜ್ಯೋದ್ಯಮಿಗಳ ನಿಯೋಗದೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಯವರು, ರಾಜ್ಯದ ಆರ್ಥಿಕ ಬೆಳವಣಿಗೆ ಹಾಗೂ ಕೈಗಾರಿಕಾ ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಮಹತ್ವದ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಉದ್ಯಮ ಸ್ಥಾಪನೆಯಿಂದ ಕೈಗಾರಿಕಾ ಅಭಿವೃದ್ಧಿ ಇನ್ನಷ್ಟು ವೇಗವಾಗಿ ಆಗಲಿದೆ …
Read More »ಸಾಲಬಾಧೆ ತಾಳಲಾರದೆ ಯುವಕನ ಆತ್ಮಹತ್ಯೆ
ಸಾಲಬಾಧೆ ತಾಳಲಾರದೆ ಯುವಕನೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ತಾಲೂಕಿನ ಬಸರೀಕಟ್ಟಿ ಗ್ರಾಮದಲ್ಲಿ ನಡೆದಿದೆ 32 ವರ್ಷದ ಲಕ್ಷ್ಮಣ ದಿಲೀಪ ನಾಗರೋಳಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ದುರ್ದೈವಿ ಯುವಕ. ಮಂಗಳವಾರ ಬೆಳಿಗ್ಗೆ ಮನೆಯಿಂದ ಹೋದವನು ವಾಪಸ್ ಮನೆಗೆ ಬಂದಿರಲಿಲ್ಲ. ಇದರಿಂದ ತೀವ್ರ ಆತಂಕಿತರಾಗಿದ್ದ ಆತನ ಪತ್ನಿ ಮತ್ತು ತಾಯಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸಿದ್ದರು. ಆದರೆ ಗುರುವಾರ ಅವರ ಜಮೀನಿನ ಬಾವಿಯಲ್ಲಿ ಈತನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಮಾರಿಹಾಳ …
Read More »ಚುನಾವಣೆಗೆ 5 ತಿಂಗಳು ಬಾಕಿ ಇರುವಾಗಲೇ ಫಿಲ್ಡಿಗಿಳಿದ ರಮೇಶ ಜಾರಕಿಹೊಳಿ
ಚುನಾವಣೆಗೆ 5 ತಿಂಗಳು ಬಾಕಿ ಇರುವಾಗಲೇ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲಿಯೂ ಇಷ್ಟು ದಿನ ಸೈಲೆಂಟ್ ಆಗಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಈಗ ಫಿಲ್ಡಿಗಿಳಿದಿದ್ದು. ಗ್ರಾಮೀಣ ಕ್ಷೇತ್ರದಲ್ಲಿ ನಾಗೇಶ ಮನ್ನೋಳ್ಕರ್ ಪರ ಭರ್ಜರಿ ಬ್ಯಾಟಿಂಗ್ ಬೀಸಿದ್ದಾರೆ. ಹೌದು ಬೆಳಗಾವಿ ಗ್ರಾಮೀಣ ಕ್ಷೇತ್ರ ಹೇಳಿಕೇಳಿ ರಮೇಶ ಜಾರಕಿಹೊಳಿ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರ. ಹೇಗಾದ್ರೂ ಮಾಡಿ ಮುಂದಿನ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‍ನ್ನು ಸೋಲಿಸಲೇಬೇಕು ಎಂದು ರಮೇಶ ಪಣ …
Read More »ಅನಾರೋಗ್ಯ.ಬಹುಭಾಷಾ ನಟ ಕಮಲಹಾಸನ್ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲು
ಚೆನ್ನೈ: ಬಹುಭಾಷಾ ನಟ, ಉಳಗನಾಯಕನ್ ಕಮಲ್ ಹಾಸನ್ ಅನಾರೋಗ್ಯದಿಂದಾಗಿ ಬುಧವಾರ (ನವೆಂಬರ್ 23) ಶ್ರೀರಾಮಚಂದ್ರ ಮೆಡಿಕಲ್ ಸೆಂಟರ್(ಎಸ್ ಆರ್ ಎಂಸಿ)ಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ. ಜ್ವರದಿಂದ ಬಳಲುತ್ತಿರುವ ಕಮಲ್ ಹಾಸನ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಟ ಕಮಲ್ ಹಾಸನ್ ಅವರು ಇಂದು (ನ.24) ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು …
Read More »ಇಡಿಯೊಂದಿಗೆ ಮಾಹಿತಿ ಹಂಚಿಕೊಳ್ಳಿ : 15ಕ್ಕೂ ಹೆಚ್ಚು ಇಲಾಖೆಗಳಿಗೆ ಕೇಂದ್ರ
ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ(ಪಿಎಂಎಲ್‌ಎ) ಅಡಿ ಬರುವ ಅಪರಾಧಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ದೊಂದಿಗೆ ಹಂಚಿಕೊಳ್ಳುವಂತೆ ಮಿಲಿಟರಿ ಇಂಟೆಲಿಜೆನ್ಸ್ ಸೇರಿದಂತೆ 15ಕ್ಕೂ ಹೆಚ್ಚು ಇಲಾಖೆಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಹಣಕಾಸು ಸಚಿವಾಲಯದ ಅಧಿಸೂಚನೆಯ ಪ್ರಕಾರ, ರಾಷ್ಟ್ರೀಯ ತನಿಖಾ ಸಂಸ್ಥೆ, ಗಂಭೀರ ವಂಚನೆ ತನಿಖಾ ಕಚೇರಿ, ರಾಜ್ಯ ಪೊಲೀಸ್ ಇಲಾಖೆಗಳು, ವಿದೇಶಾಂಗ ಸಚಿವಾಲಯ, ಭಾರತೀಯ ಸ್ಪರ್ಧಾತ್ಮಕ ಆಯೋಗ, ವಿಶೇಷ ತನಿಖಾ ತಂಡ, ರಾಷ್ಟ್ರೀಯ ಗುಪ್ತಚರ ಗ್ರಿಡ್, …
Read More »ಹುಬ್ಬಳ್ಳಿ: ಎಲ್ಲರ ಗಮನ ಸೆಳೆಯುತ್ತಿರುವ ಆನೆ ಆಕೃತಿಯ ಈ ಮರ, ಈಗ ಸೆಲ್ಫಿ ಕೇಂದ್ರ!
ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಹುಬ್ಬಳ್ಳಿ: ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಆ ಮರ ಆನೆಯ ಆಕೃತಿಯಲ್ಲಿದ್ದು ಸೆಲ್ಫಿ ಪ್ರಿಯರಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅತ್ಯುತ್ತಮ ತಾಣವಾಗಿ ಮಾರ್ಪಾಡಾಗಿದೆ. ಆನೆಯ ಸೊಂಡಿಲ ಮಾದರಿಯಲ್ಲಿ ಈ ಮರ ಬೆಳೆದಿದ್ದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವವರ ಜೊತೆಗೆ ಈ ಮರಕ್ಕೆ ಪೂಜೆ ಸಲ್ಲಿಸುವ ಭಕ್ತಾದಿಗಳ …
Read More »ನಾನು ಆರಾಮಾಗಿದ್ದೀನಿ, ಶೂಟಿಂಗ್ ಮುಂದುವರೆಸಿದ್ದೀವಿ; ವಿಡಿಯೋ ಮೂಲಕ ಉಪೇಂದ್ರ ಪ್ರತಿಕ್ರಿಯೆ
ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. ಚಿತ್ರೀಕರಣ ಸೆಟ್ ನಿಂದನೇ ಪ್ರತಿಕ್ರಿಯೆ ನೀಡಿರುವ ಉಪೇಂದ್ರ, ‘ನಾನು …
Read More »ಪ್ರಕರಣದಿಂದ ಕೈಬಿಡಲು ಲಂಚ ವಿಜಯಪುರ ಠಾಣೆ ಕಾನ್‌ಸ್ಟೆಬಲ್ ಸೆರೆ
ವಿಜಯಪುರ (ಬೆಂ.ಗ್ರಾಮಾಂತರ): ವ್ಯಕ್ತಿಯೊಬ್ಬರ ಹೆಸರನ್ನು ಅಪರಾಧ ಪ್ರಕರಣದಿಂದ ಕೈಬಿಡಲು ₹ 30 ಸಾವಿರ ಲಂಚ ಪಡೆದ ಆರೋಪದ ಮೇಲೆ ಪಟ್ಟಣದ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಚಂದ್ರಶೇಖರ್ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಚಿಕ್ಕತತ್ತಮಂಗಲ ಗ್ರಾಮದ ಮಂಜುನಾಥ್ ಎಂಬುವರಿಂದ ಲಂಚ ಪಡೆಯುತ್ತಿದ್ದ ವೇಳೆ ಕಾನ್‌ಸ್ಪೆಬಲ್ ಚಂದ್ರಶೇಖರ್ ಅವರನ್ನು ಲೋಕಾಯುಕ್ತ ಪೊಲೀಸರು ಹಣದ ಸಮೇತ ವಶಕ್ಕೆ ಪಡೆದರು. ಮಂಡಿಬೆಲೆ ಗ್ರಾ.ಪಂ. ವ್ಯಾಪ್ತಿಯ ಚಿಕ್ಕತತ್ತಮಂಗಲದ ಮಂಜುನಾಥ್ ಮತ್ತು ಅವರ ಸಹೋದರಿ ನಡುವೆ ಹಣಕಾಸಿನ …
Read More »