Breaking News

Uncategorized

ಬಿಡದಿ ಟೌನ್ ಶಿಪ್ ಪ್ರಾಜೆಕ್ಟ್ ಕೈಬಿಡಬೇಕು: ಕುಮಾರಸ್ವಾಮಿ ಬಳಿಕ ಹೆಚ್‌ಡಿಡಿ ಒತ್ತಾಯ

ಬೆಂಗಳೂರು: ಬಿಡದಿ ಟೌನ್ ಶಿಪ್ ಪ್ರಾಜೆಕ್ಟ್ ಕೈಬಿಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಬಳಿಕ ಮಾಜಿ ಪ್ರಧಾನಿ ದೇವೇಗೌಡ ಸಿಎಂ ಸಿದ್ದರಾಮಯ್ಯರನ್ನ ಒತ್ತಾಯ ಮಾಡಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಹೆಸರು ಹೇಳದೇ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ವಾಗ್ದಾಳಿ ನಡೆಸಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿ ಪ್ರಾಜೆಕ್ಟ್ ನಿಲ್ಲಿಸಬೇಕು ಎಂದು ಒತ್ತಾಯ ಮಾಡಿದ್ದರು. ಇದಕ್ಕೆ ಕೌಂಟರ್ ಕೊಟ್ಟಿದ್ದ ಡಿಸಿಎಂ ಡಿಕೆ ಶಿವಕುಮಾರ್ ಕುಮಾರಸ್ವಾಮಿಯೇ ಘೋಷಣೆ …

Read More »

ಸಹಾಯಧನ, ಪಿಂಚಣಿ ಸ್ಥಗಿತಗೊಳಿಸಿ ಕಾಂಗ್ರೆಸ್‌ಗೆ ಸಾಧನಾ ಸಮಾವೇಶ ಮಾಡುವ ಯೋಗ್ಯತೆ ಇದ್ಯಾ? – ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್  ಪ್ರಶ್ನಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ತಾನು ಮಾಡಿದ ಪಾಪಗಳಿಗಾಗಿ ಸಮಾವೇಶ ನಡೆಸಿ, ಸಂಭ್ರಮಾಚರಣೆ ಮಾಡುತ್ತಿದೆ. ಭಿಕ್ಷುಕರಿಗೆ, …

Read More »

ಕೇಂದ್ರದ ʻಒಂದು ರಾಷ್ಟ್ರ ಒಂದು ಚುನಾವಣೆʼ ಪ್ರಸ್ತಾವನೆಗೆ ಡಿಸಿಎಂ ಡಿಕೆಶಿ ಪ್ರಬಲ ವಿರೋಧ

ಬೆಂಗಳೂರು: ಕೇಂದ್ರ ಸರ್ಕಾರದ ಉದ್ದೇಶಿತ ‘ಒಂದು ರಾಷ್ಟ್ರ ಒಂದು ಚುನಾವಣೆ’  ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ ಶಿವಕುಮಾರ್  ಅವರು ಪ್ರಬಲವಾಗಿ ವಿರೋಧಿಸಿದ್ದಾರೆ. ಇದೊಂದು ಅಧಿಕಾರ ಕೇಂದ್ರೀತ, ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ರಾಜ್ಯಗಳನ್ನ ದುರ್ಬಳಗೊಳಿಸುವುದರ ಮೂಲಕ ಒಕ್ಕೂಟ ವ್ಯವಸ್ಥೆಗೆ ತೀವ್ರ ಧಕ್ಕೆ ತರಲಿದೆ. ಇದೊಂದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಅಪಾಯವಿದೆ. ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವವರ ಅನುಕೂಲಕ್ಕೆ ತಕ್ಕಂತೆ ಹೆಣೆಯಲಾಗುತ್ತಿರುವ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ …

Read More »

ಕೌಜಲಗಿ ಆಸ್ಪತ್ರೆಯಲ್ಲಿ ಸಿಬ್ಬಂದಿ ನೇಮಿಸಲು ಕ್ರಮ

ಮೂಡಲಗಿ: ಕೌಜಲಗಿಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಿದ್ದರೂ, ಸಿಬ್ಬಂದಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ಕೌಜಲಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಬಿಎಲ್‌ಜೆ ಟ್ರಸ್ಟ್ ಮೂಲಕ ನಿರ್ವಹಿಸಲು ಚಿಂತನೆ ನಡೆದಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಮಲದಿನ್ನಿ ಗ್ರಾಮದ ಮಹಾತ್ಮಾ ಗಾಂಧಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಸದುದ್ದೇಶದಿಂದ ಈ ನಿರ್ಧಾರ …

Read More »

ಬೈಲಹೊಂಗಲದಲ್ಲಿ ಬಸವ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ

ಬೈಲಹೊಂಗಲ: ಬಸವ ತತ್ತ್ವದಡಿ ನಡೆಯುವ ಮೂಲಕ ಸದಸ್ಯರ ಅಭಿವೃದ್ಧಿ ಜತೆಗೆ ಅಲ್ಪಾವಧಿಯಲ್ಲೇ ಹೆಮ್ಮರವಾಗಿ ಬೆಳೆದಿರುವ ನಗರದ ಬಸವ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘ ಮಾದರಿಯಾಗಿದೆ ಎಂದು ಮುರಗೋಡ ಮಹಾಂತ ದುರದುಂಡೀಶ್ವರ ಮಠದ ನೀಲಕಂಠ ಸ್ವಾಮೀಜಿ ಹೇಳಿದರು. ನಗರದಲ್ಲಿ ಬುಧವಾರ ಬಸವ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘದ ಸ್ಥಳಾಂತರಿಸಿದ ನೂತನ ಕಚೇರಿ ಉದ್ಘಾಟನೆ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮಾಜಿ ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ಸಂಘದ ಸಂಸ್ಥಾಪಕ ವಿಜಯ ಮೆಟಗುಡ್ಡ …

Read More »

ಐಪಿಎಲ್‌ ವೀಕ್ಷಕರ ಸಂಖ್ಯೆ ಭಾರೀ ಹೆಚ್ಚಳ – ದಾಖಲೆ ಬರೆದ ಜಿಯೋಸ್ಟಾರ್

ಮುಂಬೈ: 2026ರ ಐಪಿಎಲ್ ಟೂರ್ನಿ ಪ್ಲೇ ಆಫ್ ಹಂತ ತಲುಪುತ್ತಿದ್ದು, ತಂಡಗಳ ನಡುವಿನ ಹಣಾಹಣಿ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಅಧಿಕೃತ ಪ್ರಸಾರ ಸಂಸ್ಥೆಗಳಾದ ಜಿಯೋಸ್ಟಾರ್, ಟಿವಿ ಮತ್ತು ಡಿಜಿಟಲ್ ಪ್ಲಾಟ್ ಫಾರ್ಮ್‌ಗಳಾದ್ಯಂತ ವೀಕ್ಷಕರ ಸಂಖ್ಯೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಟೂರ್ನಿಯ ಒಟ್ಟಾರೆ ವೀಕ್ಷಕರ ಸಂಖ್ಯೆ ಬರೋಬ್ಬರಿ 110 ಕೋಟಿ ದಾಟಿದೆ. ಟಿವಿ ವೀಕ್ಷಣೆಯಲ್ಲಿ ಉತ್ತಮ ದಾಖಲೆ ಬರೆದಿದ್ದು, 50 ಕೋಟಿ ವೀಕ್ಷಕರ ಗಡಿಯತ್ತ ಮುನ್ನಡೆಯುತ್ತಿದೆ. ಇದೇ ವೇಳೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ …

Read More »

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ: ಸಿಜೆಐ

ನವದೆಹಲಿ: ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಅವರಲ್ಲಿ ಸೋಷಿಯಲ್‌ ಮೀಡಿಯಾ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ. ಈ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಾರೆ ಎಂದು ಸುಪ್ರೀಂ ಕೋರ್ಟ್‌ನ ಸಿಜೆಐ ಸೂರ್ಯ ಕಾಂತ್‌  ಅವರು ಕಿಡಿಕಾರಿದ್ದಾರೆ. ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠದ ಮುಂದೆ ವಕೀಲರೊಬ್ಬರನ್ನು ಹಿರಿಯ ವಕೀಲರನ್ನಾಗಿ ನೇಮಿಸುವ ಬಗ್ಗೆ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ. ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ …

Read More »

ಇಡೀ ಕುಟುಂಬಕ್ಕೆ ವಾರಕ್ಕೆ 500 ರೂ. ಸಂಬಳ, ಶೆಡ್‌ನಲ್ಲಿ ಕೂಡಿ ಹಾಕಿ ಕೆಲಸ – 37 ಮಂದಿ ಜೀತದಿಂದ ಮುಕ್ತಿ

ಬಳ್ಳಾರಿ: ಹೊಸಪೇಟೆ  ತಾಲೂಕಿನ ನಂದಿಬಂಡಿಯಲ್ಲಿ ಜೀತಕ್ಕೆ ನೇಮಿಸಿಕೊಂಡಿದ್ದ ಒಡಿಶಾದ 37 ಮಂದಿಯನ್ನು ಅಧಿಕಾರಿಗಳು ಜೀತದಿಂದ ಮುಕ್ತಿ ನೀಡಿದ್ದಾರೆ.ಶ್ರೀನಿವಾಸ್, ಮಹಾದೇವ ರಾವ್ ಮತ್ತು ವೆಂಕಟ ಪ್ರಸಾದ್ ಎಂಬವರು ಕಾರ್ಮಿಕರನ್ನು ಶೆಡ್‌ನಲ್ಲಿ ಕೂಡಿ ಹಾಕಿ ಬಲವಂತವಾಗಿ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಬೆಳಗಾವಿಯ ಸ್ಪಂದನ ಸಂಸ್ಥೆ ವಿಜಯನಗರ  ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿತ್ತು. ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿ, ಕಾರ್ಮಿಕರನ್ನು ಜೀತದಿಂದ ಮುಕ್ತಿಗೊಳಿಸಿದ್ದಾರೆ. ಪ್ರತಿ ಕುಟುಂಬಕ್ಕೆ 40,000 ರೂ. ಹಣ …

Read More »

ಕೇಸರಿ ಶಾಲು ಹಾಕೊಂಡು ಶಾಲಾ-ಕಾಲೇಜಿಗೆ ಬನ್ನಿ – ಬಿಜೆಪಿಗರಿಗೆ ಮಂಥರ್ ಗೌಡ ಸವಾಲ್‌

ಮಡಿಕೇರಿ: ಕೇಸರಿ ಶಾಲು ಹಾಕಿಕೊಂಡೆ ಶಾಲಾ-ಕಾಲೇಜಿಗೆ ಬನ್ನಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ  ಅಚ್ಚರಿಯ ಹೇಳಿಯನ್ನು ನೀಡಿದ್ದಾರೆ. ಮೂರು ದಿನಗಳ ಹಿಂದಷ್ಟೇ ಹಿಜಬ್‌ಗೆ ಅವಕಾಶ ನೀಡಿ, ಕೇಸರಿ ಶಾಲು ಧರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದ್ದು, ಈ ಸಂಬಂಧ ರಾಜ್ಯಾದ್ಯಂತ ಪರ ವಿರೋಧಗಳು ಚರ್ಚೆ ನಡೆಯುತ್ತಿದೆ. ಇದರ ನಡುವೆ ಶಾಸಕ ಮಂಥರ್ ಗೌಡ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿ, ದಯವಿಟ್ಟು ಮಕ್ಕಳು ಶಾಲಾ-ಕಾಲೇಜುಗಳಿಗೆ ಕೇಸರಿ ಶಾಲು ಹಾಕಿಕೊಂಡೆ ಬನ್ನಿ …

Read More »

ಧಾರಾಕಾರ ಮಳೆಗೆ ನಾಲ್ವರು ದುರ್ಮರಣ – ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಎಂ.ಬಿ ಪಾಟೀಲ್

ವಿಜಯಪುರ: ಜಿಲ್ಲೆಯ ಹಲವೆಡೆ ಗುರುವಾರ (ಮೇ 14) ತಡರಾತ್ರಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಸಿಂದಗಿ (Sindagi) ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸಚಿವ ಎಂ.ಬಿ ಪಾಟೀಲ್‌ ಲಕ್ಷ ಪರಿಹಾರ ಘೋಷಿಸಿದ್ದಾರೆ. ಸಿಂದಗಿ  ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಗುರುತಿಸಲಾಗಿದೆ. …

Read More »