Breaking News

Uncategorized

ಕರ್ನಾಟಕ ಸೇರುವೆವು.; ಗಡಿನಾಡ ಕನ್ನಡಿಗರ ಒಕ್ಕೊರಲ ಧ್ವನಿ

ವಿಜಯಪುರ: ಒಂದು ವಾರದೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ನಮ್ಮ ಮಾತೃ ಭೂಮಿ ಕರ್ನಾಟಕಕ್ಕೆ ಸೇರಲು ಅನುಮತಿ ನೀಡಿ ಎಂದು ಮರಾಠಿ ನೆಲದಲ್ಲಿರುವ ಗಡಿನಾಡ ಕನ್ನಡಿಗರು ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.   ಜತ್‌ ತಾಲೂಕಿನ ಉಮದಿ ಪಟ್ಟಣದ ಮಲಕಾರ ಸಿದ್ಧ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಸಭೆ ಸೇರಿದ್ದ ಗಡಿನಾಡ ಕನ್ನಡಿಗರು, ಮಹಾರಾಷ್ಟ್ರ ಸರಕಾರಕ್ಕೆ ಒಂದು ವಾರದ ಗಡುವು ನೀಡಿದ್ದಾರೆ. ‘ನೀರು ಕೊಡಿ, ಇಲ್ಲವೇ ನಮ್ಮನ್ನು ಕರ್ನಾಟಕ ಸೇರಲು ಬಿಡಿ’ ಎಂದು …

Read More »

ಅಧಿವೇಶನ ಸಂದರ್ಭ ಚೆನ್ನಮ್ಮ, ರಾಯಣ್ಣ ಪ್ರತಿಮೆಗೆ ಅಡಿಗಲ್ಲು: ಸಿಎಂ

ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಎರಡೂ ಪ್ರತಿಮೆ ಸ್ಥಾಪನೆಗೆ ಆದೇಶ ಹೊರಡಿಸಲಾಗಿದೆ ಎಂದರು.   ಗಡಿಯಲ್ಲಿ ಉದ್ವಿಗ್ನ ವಾತಾವರಣ ಸಂಬಂಧ ಮಹಾರಾಷ್ಟ್ರದ ಗೃಹ ಇಲಾಖೆ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಲು ಸೂಚಿಸಿದೆ. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಎರಡೂ ರಾಜ್ಯಗಳ …

Read More »

ಬೈಕಿಗೆ ಟ್ಯಾಂಕರ್ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಬೈಕಿಗೆ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೈನಡು ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಕೈನಡು ಗ್ರಾಮದ ಉಜ್ಜೀರಪ್ಪ (38), ರವಿಕುಮಾರ್ (29), ಗಿರೀಶ್ (23) ಮೃತಪಟಟ್ವರು.   ನಿನ್ನೆ ತಡರಾತ್ರಿ ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮೂಡಲಗಿ: ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ

ಮೂಡಲಗಿ: ವಿದ್ಯಾರ್ಥಿಗಳು ಮೊಬೈಲ್‌ ಬಳಕೆಯಿಂದ ದೂರವಿದ್ದು, ವಿದ್ಯಾರ್ಜನೆಯ ಕಡೆ ಗಮನ ಹರಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಧೀಶ ಜೋತಿ ಪಾಟೀಲ ಹೇಳಿದರು. ಶನಿವಾರಂದು ಪಟ್ಟಣದ ಶ್ರೀನಿವಾಸ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ ಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. …

Read More »

ಬಾವನಸೌಂದತ್ತಿ-ಅಂಕಲಿಯ ಮಧ್ಯೆ ಹದಗೆಟ್ಟ ರಸ್ತೆ,

ರಾಯಬಾಗದಿಂದ ಚಿಕ್ಕೋಡಿ ತಾಲೂಕಿಗೆ ಸಂಪರ್ಕಿಸುವ ಅಂಕಲಿ -ಬಾವನಸವದತ್ತಿ ರಸ್ತೆಯ ಮಧ್ಯ ಭಾಗದಲ್ಲಿರುವ ಸೇತುವೆ ಮೇಲೆ ಡಾಂಬರ್ ಸಂಪೂರ್ಣ ಕಿತ್ತು ಹೋಗಿದೆ. ಅನೇಕ ಗುಂಡಿಗಳು ನಿರ್ಮಾಣವಾಗಿವೆ. ಇವು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಗುಂಡಿಗಳು ತಪ್ಪಿಸಲು ಹೋಗಿ ಅನೇಕ ಅಪಘಾತ ಸಂಭವಿಸುತ್ತಿವೆ. ಚಿಕ್ಕೋಡಿ,ರಾಯಬಾಗ ತಾಲೂಕಿಗೆ ಜೋಡಿಸುವ ಈ ರಸ್ತೆಯಾಗಿದ್ದು, ಬಾವನ ಸೌಂದತ್ತಿ, ಜಲಾಲಪುರ ದಿಗ್ಗೆವಾಡಿ, ಶಿವಶಕ್ತಿ ಸಕ್ಕರೆ ಕಾರ್ಖಾನೆ, ರಾಯಬಾಗ ಪಟ್ಟಣ, ಹಾಗೂ ಪ್ರಸಿದ್ದ ಶ್ರೀ ಮಾಯಕ್ಕ ಚಿಂಚಲಿಗೆ ಹೋಗುವ ಮುಖ್ಯ ರಸ್ತೆಯಾಗಿದೆ.ಚಿಕ್ಕೋಡಿ …

Read More »

ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ಸಿಡಿದೆದ್ದ ಕರವೇ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‍ಲ್ಲಿ ಅಂತಿಮ ವಿಚಾರಣೆ ನಡೆಯುತ್ತಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮೆರೆಯುತ್ತಿರುವ ಅಲ್ಲಿನ ಸರ್ಕಾರ ಮತ್ತು ಮರಾಠಿ ಪುಂಡರ ವಿರುದ್ಧ ಕನ್ನಡಿಗರ ಕೆರಳಿ ಕೆಂಡವಾಗಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಮಹಾಂತೇಶ ನಗರ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಮಹಾಪುಂಡರ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಮಹಾರಾಷ್ಟ್ರ …

Read More »

ವಿಧಾನಸಭೆಯ ಹುದ್ದೆಗಳ ಭರ್ತಿಗೆ ಡಿ.5ರಿಂದ ಪರೀಕ್ಷೆ

ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕ, ಸ್ವಾಗತಗಾರರು ಹಾಗೂ ದಲಾಯತ್ ಹುದ್ದೆಗಳಿಗೆ ಡಿ.5ರಿಂದ 7ರವರೆಗೆ ಪರೀಕ್ಷೆಗಳು ನಡೆಯಲಿವೆ. ಡಿ.5ರಂದು ಮಧ್ಯಾಹ್ನ 3.30ರಿಂದ 4.30ರವರೆಗೆ ದಲಾಯತ್ ಹುದ್ದೆಗೆ, 50 ಅಂಕಗಳ ಬಹು ಆಯ್ಕೆ ಮಾದರಿಯ ಪರೀಕ್ಷೆ ನಡೆಯಲಿದೆ.   ಕಂಪ್ಯೂಟರ್‌ ಆಪರೇಟರ್ ಹುದ್ದೆಗಳಿಗೆ (100 ಅಂಕಗಳು) 6ರಂದು ಮಧ್ಯಾಹ್ನ 3ರಿಂದ 5ರವರೆಗೆ, ಕಿರಿಯ ಸಹಾಯಕ ಹಾಗೂ ಸ್ವಾಗತಗಾರರ ಹುದ್ದೆಗಳಿಗೆ (100 ಅಂಕಗಳು) 7ರಂದು ಮಧ್ಯಾಹ್ನ 3ರಿಂದ 5ರವರೆಗೆ …

Read More »

ಸಂಸ್ಕೃತಿ ಇಲಾಖೆ ನಡೆಗೆ ಆಕ್ಷೇಪ: ಧನಸಹಾಯಕ್ಕೆ ಕಾರ್ಯಕ್ರಮದ ನಿರ್ಬಂಧ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ಧನಸಹಾಯವನ್ನೇ ನೆಚ್ಚಿಕೊಂಡಿದ್ದ ನಾಡಿನ ಸಾಂಸ್ಕೃತಿಕ ಸಂಘ-ಸಂಸ್ಥೆಗಳಿಗೆ ಈ ಬಾರಿ ಕನಿಷ್ಠ ಆರ್ಥಿಕ ನೆರವು ಸಹ ಕೈ ತಪ್ಪುವ ಆತಂಕ ಎದುರಾಗಿದೆ. ಡಿಸೆಂಬರ್ ಅಂತ್ಯದೊಳಗೆ ಕನಿಷ್ಠ 3 ಕಾರ್ಯಕ್ರಮಗಳನ್ನು ನಡೆಸಿ, ದಾಖಲೆ ಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಸಲ್ಲಿಸಬೇಕೆಂಬ ಇಲಾಖೆಯ ಸೂಚನೆಗೆ ಆಕ್ಷೇಪ ವ್ಯಕ್ತವಾಗಿದೆ.   ಧನಸಹಾಯಕ್ಕೆ ಸಂಬಂಧಿಸಿ ಪಾರದರ್ಶಕತೆಯ ಹೆಸರಿನಲ್ಲಿ ಇಲಾಖೆ ಹೊರಡಿಸಿದ್ದ ಮಾರ್ಗಸೂಚಿ ಸಂಘ-ಸಂಸ್ಥೆಗಳಿಗೆ ತಲೆನೋವಾಗಿದೆ. ಪ್ರತಿ ವರ್ಷ ಧನಸಹಾಯದ ಪಟ್ಟಿ ಬಿಡುಗಡೆಯಾದ …

Read More »

180 ಲಕ್ಷ ಟನ್ ಹಳೆ ಕಸ ಕರಗಿಸಲು ₹989 ಕೋಟಿ!

 ಕರ್ನಾಟಕದ  ಮಹಾನಗರ ಪಾಲಿಕೆ ವ್ಯಾಪ್ತಿಗಳ ಭೂಭರ್ತಿ ಘಟಕಗಳಲ್ಲಿ ವರ್ಷಗಳಿಂದ ಕೊಳೆಯುತ್ತಿರುವ 180 ಲಕ್ಷ ಟನ್ ಹಳೆಯ ಕಸವನ್ನು ಕರಗಿಸಲು ₹989 ಕೋಟಿ ಬೇಕಿದೆ. ಪರಿಸರಕ್ಕೆ ಹಾನಿ ಉಂಟು ಮಾಡುವ ಘನ ಹಾಗೂ ದ್ರವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣಕ್ಕೆ ಕರ್ನಾಟಕ ಸರ್ಕಾರಕ್ಕೆ ₹2,900 ಕೋಟಿ ದಂಡ ವಿಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪ್ರಧಾನ ಪೀಠವು ಅಕ್ಟೋಬರ್ 14ರಂದು ಆದೇಶಿಸಿತ್ತು. ಅದರ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಸರ್ಕಾರವು, ₹2,046 ಕೋಟಿ ಮೊತ್ತದ …

Read More »

ಸೆಲ್ಫಿ ತೆಗೆದುಕೊಳ್ಳುವಾಗ ನೀರಿಗೆ ಬಿದ್ದು ನಾಲ್ವರು ವಿದ್ಯಾರ್ಥಿನಿಯರ ಸಾವು

ಬೆಳಗಾವಿ: ತಾಲ್ಲೂಕಿನ ಗಡಿಗೆ ಹೊಂದಿಕೊಂಡ, ಮಹಾರಾಷ್ಟ್ರದ ಕಿತವಾಡ ಫಾಲ್ಸ್‌ನಲ್ಲಿ ಶನಿವಾರ ಸೆಲ್ಫಿ ತೆಗೆದುಕೊಳ್ಳಲು ಹೋದ ನಾಲ್ವರು ಕಾಲೇಜು ವಿದ್ಯಾರ್ಥಿನಿಯರು ಆಯತಪ್ಪಿ ನೀರಿಗೆ ಬಿದ್ದು ಅಸುನೀಗಿದ್ದಾರೆ. ಬೆಳಗಾವಿಯ ಉಜ್ವಲ ನಗರ ಆಸೀಯಾ ಮುಜಾವರ್ (17), ಅನಗೋಳದ ಕುದ್‌ಶೀಯಾ ಹಾಸನ್ ಪಟೇಲ್ (20), ಝಟ್‌ಪಟ್ ಕಾಲೊನಿಯ ರುಕ್ಕಶಾರ್ ಭಿಸ್ತಿ (20) ಹಾಗೂ ತಸ್ಮಿಯಾ (20) ಮೃತಪಟ್ಟವರು.   ಇವರೆಲ್ಲರೂ ಬೆಳಗಾವಿಯ ಕಾಮತ ಗಲ್ಲಿಯ ಮದರಸಾದಲ್ಲಿ ಇದ್ದುಕೊಂಡು ಓದುತ್ತಿದ್ದರು. ಇದೇ ಮದರಸಾದ 40 ಯುವತಿಯರು ಬೆಳಗಾವಿಯಿಂದ …

Read More »