Breaking News

Uncategorized

ಮಹಾರಾಷ್ಟ್ರಕ್ಕೆ ಸೇರಿದ ಒಂದಿಂಚೂ ಜಾಗ ಕರ್ನಾಟಕ ಸೇರಲು ಬಿಡಲ್ಲ: ಸಿಎಂ ಶಿಂಧೆ

ಮುಂಬೈ: ಬೆಳಗಾವಿ ಗಡಿ ಕುರಿತಂತೆ ಮಹಾರಾಷ್ಟ್ರ, ಕರ್ನಾಟಕ ನಡುವೆ ಜಟಾಪಟಿ ನಡೆದಿರುವ ನಡುವೆಯೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಮಹಾರಾಷ್ಟ್ರಕ್ಕೆ ಸೇರಿರುವ ಪ್ರದೇಶದ ಒಂದಿಂಚು ಭೂಮಿಯನ್ನು ನೆರೆರಾಜ್ಯಕ್ಕೆ ಹೋಗಲು ಬಿಡುವುದಿಲ್ಲ ಎಂದು ಹೇಳುವ ಮೂಲಕ ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಉಲ್ಬಣಗೊಳ್ಳುವಂತಾಗಿದೆ.     ಸುದ್ದಿಗಾರರೊಂದಿಗೆ ಮಾತನಾಡಿದ ಶಿಂಧೆ, ನಾವು ಗಡಿಭಾಗದ ಮರಾಠಿ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ. ಆ ನಿಟ್ಟಿನಲ್ಲಿ ಮಹಾರಾಷ್ಟ್ರದ …

Read More »

ರಾಜ್ಯದ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ: ಸಿಎಂ ಬೊಮ್ಮಾಯಿ

ಬೆಂಗಳೂರು: ನಮ್ಮ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ,ನ್ಯಾಯ ನಮ್ಮ ಕಡೆಯಿದೆ. ಎರಡೂ ರಾಜ್ಯಗಳ ಮಧ್ಯೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆಗ್ರಹಿಸಿದರು.   ಅಂತರವನ್ನು ಕಡಿಮೆ ಮಾಡಲು ಮಹಾರಾಷ್ಟ್ರ ಕ್ರಮ ವಹಿಸಬೇಕು ಭಾರತ ರಾಜ್ಯಗಳ ಒಕ್ಕೂಟ. ಪ್ರತಿ ರಾಜ್ಯಕ್ಕೂ ತನ್ನದೇ ಆದ ಹಕ್ಕುಗಳಿವೆ. ರಾಜ್ಯಗಳನ್ನು ರಾಜ್ಯ ಮರುವಿಂಗಡನಾ …

Read More »

ಕೊಪ್ಪಳ: ಲಿಂಗತ್ವ ಅಲ್ಪಸಂಖ್ಯಾತರಿಗೆ ನರೇಗಾ ಜಾಬ್ ಕಾರ್ಡ್ ವಿತರಿಸಿದ ಇಒ

ಕೊಪ್ಪಳ: ಬಿಜಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಬೋದೂರು ತಾಂಡಾದಲ್ಲಿರುವ ಐವರು ಲಿಂಗತ್ವ ಅಲ್ಪಸಂಖ್ಯಾತರ ಮನೆಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ಪ ಸುಬೇದಾರ್ ಗುರುವಾರ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಪಾಲ್ಗೊಂಡು ವೇತನ ಪಡೆಯುವ ಮೂಲಕ ಸಮಾಜದಲ್ಲಿ ಗೌರವಯುತ ಜೀವನ ನಡೆಸಲು ಅನುವು ಮಾಡಿಕೊಡುವ ನರೇಗಾ ಯೋಜನೆಯ ವಿಶೇಷ ವರ್ಗದ ಜಾಬ್ ಕಾರ್ಡ್ ಗಳನ್ನು ಹಸ್ತಾಂತರಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಿಂಗತ್ವ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ …

Read More »

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನದಲ್ಲಿ ಮಾರ್ಪಾಡು

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿದ್ದ ಕನಕದಾಸ, ಸರ್ವಜ್ಞ, ಶಿಶುನಾಳ ಷರೀಫ ಮುಂತಾದ ಮಹನೀಯರ ಭಾವಚಿತ್ರಗಳನ್ನು ಕೈಬಿಟ್ಟು, ಕೆಲ ಮಾರ್ಪಾಡುಗಳೊಂದಿಗೆ ಪರಿಷ್ಕೃತ ಲಾಂಛನವನ್ನು ಕಸಾಪ ಅಧ್ಯಕ್ಷ ಮಹೇಶ ಜೋಶಿ ಬುಧವಾರ ಬಿಡುಗಡೆ ಮಾಡಿದರು.   ಮಾಧ್ಯಮಗೋಷ್ಠಿಯಲ್ಲಿ ಮಾತ ನಾಡಿದ ಮಹೇಶ ಜೋಶಿ, ಅ.29ರಂದು ಹಾವೇರಿಯಲ್ಲಿ ಲಾಂಛನ ಬಿಡುಗಡೆ ಮಾಡಿದ ಬಳಿಕ, ಸಂತ-ಕವಿ-ಸ್ವಾತಂತ್ರ್ಯ ಹೋರಾಟಗಾರರ ಮತ್ತಷ್ಟು ಭಾವಚಿತ್ರ ಗಳನ್ನು ಸೇರ್ಪಡೆ ಮಾಡುವಂತೆ ಬೇಡಿಕೆಗಳು ಬಂದಿದ್ದವು. ಎಲ್ಲರನ್ನೂ ಲಾಂಛನದಲ್ಲಿ ಸೇರಿಸಲು …

Read More »

ಮೀಸಲಾತಿಗೆ ಪ್ರಬಲರ ಹಟ: ಒಕ್ಕಲಿಗರು , ಪಂಚಮಸಾಲಿ ಸಮುದಾಯದವರ ಹೋರಾಟ

  ಬೆಂಗಳೂರು: ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ 4ರಿಂದ ಶೇ 12ಕ್ಕೆ ಹೆಚ್ಚಿಸಲು ಆಗ್ರಹಿಸಿ ದೊಡ್ಡ ಮಟ್ಟದ ಹೋರಾಟಕ್ಕೆ ಒಕ್ಕಲಿಗರ ಸಂಘ ಮತ್ತು ಮೀಸಲಾತಿ ಹೋರಾಟ ಸಮಿತಿ ಸಜ್ಜಾಗಿದೆ. ಸಮುದಾಯದ ಸ್ವಾಮೀಜಿಗಳು, ರಾಜಕಾರಣಿಗಳು ಮತ್ತು ಮುಖಂಡರು ಸೇರಿ ಪ್ರಮುಖರ ಸಭೆ ನ.27ರಂದು ನಡೆಯಲಿದ್ದು, ಹೋರಾಟ ರೂಪುರೇಷೆ ಸಿದ್ಧವಾಗಲಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ, ‘ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಭೆಯಲ್ಲಿ …

Read More »

ಮಹಾರಾಷ್ಟ್ರ ಗಡಿ ವಿವಾದ: ಕರ್ನಾಟಕ ಬಸ್‌ಗಳಿಗೆ ಕಪ್ಪು ಬಣ್ಣ ಬಳಿದ ಪ್ರತಿಭಟನಾಕಾರರು

ಮುಂಬೈ: ರಾಜಕೀಯ ನಾಯಕರು ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಗಡಿ ವಿವಾದದ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಖಂಡಿಸಿ ಮರಾಠ ಮಹಾಸಂಘ ಪ್ರತಿಭಟನೆ ನಡೆಸಿದೆ. ಜತೆಗೆ ಈ ಸಂಘಟನೆ ಕಾರ್ಯಕರ್ತರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳಿಗೆ ಕಪ್ಪುಬಣ್ಣ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುಣೆ ಜಿಲ್ಲೆಯ ದೌಂಡ್‌ನ ಬಸ್‌ ನಿಲ್ದಾಣದಲ್ಲಿ ನಿಪ್ಪಾಣಿ-ಔರಂಗಾಬಾದ್‌ ಬಸ್‌ ಮೇಲೆ ಕೇಸರಿ …

Read More »

ಮಾಜಿ ಶಾಸಕ ಶ್ರೀಶೈಲ ಬಿದರೂರು ನಿಧನ

ಬೆಂಗಳೂರು: ನಗರದ ವರ್ತೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲ ಬಿದರೂರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಟಿಕೆಟ್‌ ಕೋರಿ ಅರ್ಜಿ ಸಲ್ಲಿಸಿದ್ದ ಶ್ರೀಶೈಲ ಅವರೂ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಆರಂಭದಲ್ಲೇ ವಾಂತಿ ಮಾಡಿಕೊಂಡ ಅವರು ಕುಸಿದುಬಿದ್ದರು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಬಿಜೆಪಿಯಿಂದ ರೋಣ ಮತ್ತು ಗದಗ ಕ್ಷೇತ್ರಗಳಿಂದ ತಲಾ …

Read More »

ಸಿಎಂ ಬೊಮ್ಮಾಯಿಗೆ ಮಹಾರಾಷ್ಟ್ರದ ಜತ್ತ ಕನ್ನಡಿಗನ ಅಭಿನಂದನೆ

ಮಹಾರಾಷ್ಟ್ರದ ಜತ್ತ ತಾಲೂಕಿನ ಹಳ್ಳಿಗಳು ಕರ್ನಾಟಕಕ್ಕೆ ಸೇರಲು ಠರಾವು ಮಾಡಿದ್ದ ಬಗ್ಗೆ ಸಿಎಂ ಬೊಮ್ಮಾಯಿ ನೀಡಿದ್ದ ಹೇಳಿಕೆಗೆ ಜತ್ತ ತಾಲ್ಲೂಕಿನ ಕನ್ನಡಿಗ ಮಹದೇವ ಅಂಕಲಗಿ ಅಭಿನಂದನೆ ಸಲ್ಲಿಸಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಹೌದು ವಿಡಿಯೋದಲ್ಲಿ ಮಾತನಾಡಿರುವ ಮಹದೇವ ಅಂಕಲಗಿ ಸಿಎಂ ಬೊಮ್ಮಾಯಿ ಅವರಿಗೆ ಜತ್ತ ತಾಲ್ಲೂಕಿನ 44 ಹಳ್ಳಿಗಳ ಪರ ಮಾತನಾಡಿದ್ದಕ್ಕೆ ಅಭಿನಂದನೆ ವ್ಯಕ್ತಪಡಿಸುತ್ತೇನೆ. ಜತ್ತ ತಾಲ್ಲೂಕು ಯಾವಾಗಲೂ ಬರಗಾಲದಲ್ಲಿಯೇ ಇದೇ. ಮಹಾರಾಷ್ಟ್ರ ಸರ್ಕಾರ ನಮ್ಮನ್ನ ನಿರ್ಲಕ್ಷ್ಯ ಮಾಡುತ್ತಲೇ …

Read More »

ಭಾಗ್ಯನಗರ ಯುವಕನ ಹಲ್ಲೆ ನಗರ ಪೊಲೀಸ್ ಆಯುಕ್ತರಿಗೆ ಮನವಿ

ಬೆಳಗಾವಿಯ ಭಾಗ್ಯನಗರದಲ್ಲಿ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ನಾಲ್ಕು ಜನರ ಗುಂಪು ಹಲ್ಲೆ ಮಾಡಿದ ಘಟನೆ ಖಂಡಿಸಿ ಹಲ್ಲೆ ಮಾಡಿದ ನಾಲ್ವರೂ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸಂಬಂಧಿಕರು ಮತ್ತು ಇಲ್ಲಿನ ನಿವಾಸಿಗಳು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಹೌದು ಮಂಗಳವಾರ ರಾತ್ರಿ ಭಾಗ್ಯನಗರದ ಮೊದಲನೇ ಕ್ರಾಸ್‍ನಲ್ಲಿ ಮನೆಯಿಂದ ಕಸ ಚೆಲ್ಲಲು ಹೊರಗಡೆ ಬಂದಿದ್ದ ಇಲ್ಲಿನ ನಿವಾಸಿ ಅಶೀಶ್ ಶೇಣವಿ ಕೈ ಆಯತಪ್ಪಿ ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಕೈಗೆ ತಾಗಿದೆ. …

Read More »

ಕುರಿಗಾಯಿಗೆ ಬೈಕ್ ಡಿಕ್ಕಿ, ಕುರಿಗಾಯಿ ಸ್ಥಳದಲ್ಲಿ ಸಾವು

ಕುರಿಗಾಯಿಗೆ ಬೈಕ್ ಡಿಕ್ಕಿಯಾಗಿ ಕುರಿಗಾಯಿ ಸ್ಥಳದಲ್ಲಿ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಹತ್ತಿರದಲ್ಲಿ ನಡೆದಿದೆ. ಮೃತನನ್ನು ಚಿಕ್ಕೋಡಿ ಮೂಲದ ನಿಂಗಪ್ಪ ಹಾಲಪ್ಪ ಕದ್ದಿ ಗುರುತಿಸಲಾಗಿದೆ. ಬೈಕ್ ಸವಾರ ಕವಡಿಮಟ್ಟಿ ಗ್ರಾಮದ ಹಣಮಂತ ನಿಂಗಪ್ಪ ಮಾದರಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Read More »