ಮಾಧ್ಯಮಗಳ ಊಹಾಪೋಹದಿಂದ ಸರ್ಕಾರಕ್ಕೆ ಡಿಸ್ಟರ್ಬ್ ಎಂದ ಎಐಸಿಸಿ ಅಧ್ಯಕ್ಷರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ರಾಜ್ಯ ಕಾಂಗ್ರೆಸ್ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಧ್ಯಕ್ಷ ಸ್ಥಾನದಲ್ಲಿ ಕೂರಲು ಕಾಂಗ್ರೆಸ್ನಲ್ಲೇ ಸದ್ದಿಲ್ಲದೆ ಪೈಪೋಟಿ ಶುರುವಾಗಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೀಡಿದ್ದಾರೆ. ಅಲ್ಲದೇ ಮಾಧ್ಯಮಗಳ ಊಹಾಪೋಹಗಳಿಂದ ಸರ್ಕಾರಕ್ಕೆ ಡಿಸ್ಟರ್ಬ್ ಆಗುತ್ತಿದೆ ಎಂದಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಒಡಿಶಾದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಿ …
Read More »ಧಾರವಾಡದ ಹಿರಿಯ ಪತ್ರಿಕಾ ಫೋಟೋಗ್ರಾಫರ್ ಆರ್ ಕೆ ( ರಾಮಚಂದ್ರ ಕುಲಕರ್ಣಿ) ಇನ್ನಿಲ್ಲ
ಧಾರವಾಡ: ಆರ್ ಕೆ ಖ್ಯಾತಿಯ ಹಿರಿಯ ಪತ್ರಿಕಾ ಪೋಟೋಗ್ರಾಫರಾಗಿ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ರಾಮಚಂದ್ರ ಕುಲಕರ್ಣಿ ಇಂದು ಬೆಳಗಿನ ಜಾವ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಇಂದು 12 ಗಂಟೆಗೆ ಯಾಲಕ್ಕಿಶೆಟ್ಟರ್ ಕಾಲನಿಂಯಿಂದ ಅಂತಿಮ ಯಾತ್ರೆ ನಡೆಯಲಿದೆ. ಆರೋಗ್ಯ ಸಮಸ್ಯೆಯಿಂದ ಇತ್ತೀಚೆಗೆ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬೆಳಗಿನ ಜಾವ ನಿಧನರಾಗಿದ್ದಾರೆ. ಅಪಾರ ಸ್ನೇಹ ಬಳಗವನ್ನು ಹೊಂದಿದ್ದ ರಾಮಚಂದ್ರ ಕುಲಕರ್ಣಿ ಅವರ ನಿಧನ ಎಲ್ಲರಿಗೂ ನೋವುಂಟು …
Read More »ಖಾನಾಪೂರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ.
ಖಾನಾಪೂರ: ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಮೀನಾಕ್ಷಿ ಪ್ರಕಾಶ್ ಬೈಲೂರಕರ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಸಹಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಸತ್ಕರಿಸಿ ಆರ್ಶಿವಾದ ಪಡೆದುಕೊಂಡು ಅಭಿವೃದ್ಧಿಗೆ ಸಹಕರಿಸಲು ಕೋರಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರಕಾಶ್ ಬೈಲೂರಕರ, ಅಪ್ಪಯ್ಯ ಕೊಡೋಳ್ಳಿ,ಮಜಹರ್ ಖಾನಾಪೂರಿ, ರಫೀಕ್ ವಾರಿಮನಿ ಸೇರಿದಂತೆ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.
Read More »ತಾಳಿಕೋಟಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
ತಾಳಿಕೋಟಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಜಮಾದಾರ್ ಜುಬೇದಾ ಹುಸೇನ ಬಾಷಾ ಅಧ್ಯಕ್ಷರಾಗಿ ಹಾಗೂ ಕಾಂಗ್ರೆಸ್ ನಲ್ಲೇ ಗುರ್ತಿಸಿಕೊಂಡಿದ್ದ, ಪುರಸಭೆ ಸದಸ್ಯೆ ಕುಂಬಾರ್ ಭಾಗವ್ವ ಅವಮಣ್ಣ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದ್ದಾರೆ. ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣೆ ಆಯೋಗ ಫೆಬ್ರವರಿ 10 ರಂದು ದಿನಾಂಕ ನಿಗದಿ ಪಡಿಸಿತು. ಸರ್ಕಾರ …
Read More »ಕರ್ನಾಟಕದಲ್ಲಿ ಕೂಡ ಕುಂಭಮೇಳ ಆರಂಭ
ಮೈಸೂರು, ಫೆಬ್ರವರಿ 09: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ 144 ವರ್ಷಗಳ ಬಳಿಕ ಪವಿತ್ರ ಕುಂಭಮೇಳ (Kumbh Mela) ನಡೆಯುತ್ತಿದೆ. ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಇದೀಗ ಇತ್ತ ಕರ್ನಾಟಕದಲ್ಲಿ ಕೂಡ ಕುಂಭಮೇಳ ಆರಂಭವಾಗುತ್ತಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಅಂದರೆ ಫೆ. 10 ರಿಂದ 3 ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಮೂರು ವರ್ಷಕ್ಕೊಮ್ಮೆ ಜಿಲ್ಲೆಯ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಡಾ ಹೆಚ್. ಸಿ ಮಹದೇವಪ್ಪ ಕುಂಭಮೇಳಕ್ಕೆ …
Read More »ಶಿಕ್ಚಣ, ಸಂಶೋಧನೆಗೆ ಒತ್ತು ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ
ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, …
Read More »ಗಡಿಭಾಗದಲ್ಲಿ ಕನ್ನಡ ಕೇಲಸ ಮಾಡುವವರಿಗೆ ಗೌರವಿಸಿ:ಚಂದ್ರಶೇಖರ ಶ್ರೀಗಳು
ಹುಕ್ಕೇರಿ : ಗಡಿಭಾಗದಲ್ಲಿ ಕನ್ನಡ ಕೇಲಸ ಮಾಡುವವರಿಗೆ ಗೌರವಿಸಿ – ಭಾವಿ ಸಮ್ಮೆಳನಾದ್ಯಕ್ಷ ಚಂದ್ರಶೇಖರ ಶ್ರೀಗಳು ಗಡಿಭಾಗದಲ್ಲಿ ಕನ್ನಡ ಕೇಲಸವಾಗಬೇಕು ಮತ್ತು ಗಡಿಭಾಗದಲ್ಲಿ ಕನ್ನಡ ಉಳಿಸಿದವರಿಗೆ ಗೌರವ ಲಭಿಸಬೇಕು ಎಂದು ಭಾವಿ ಹುಕ್ಕೇರಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಅದ್ಯಕ್ಷರಾದ ಚಂದ್ರಶೇಖರ ಮಹಾಸ್ವಾಮಿಗಳು ಅಭಿಪ್ರಾಯ ಪಟ್ಟರು. ಹುಕ್ಕೇರಿ ತಾಲೂಕಿನ ಯಮಕನಮರ್ಡಿ ನಗರದಲ್ಲಿ ಫೆಬ್ರುವರಿ 23 ರಂದು ಜರಗಲಿರುವ ಹುಕ್ಕೇರಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ 12 ನೇ ಸಮ್ಮೇಳನದ …
Read More »ಮಾನವಿಯಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ರಾಯಚೂರು: 7 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿಯಲ್ಲಿ ಬುಧವಾರ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ. ಮಾನವಿಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆೆ. ಆರೋಪಿ ಶಿವನಗೌಡ ಮತ್ತು ಖಾಸಗಿ ಶಾಲೆಯ ಆಡಳಿತ ಮಂಡಳಿಯವರನ್ನು ಬಂಧಿಸಲಾಗಿದೆ. ಆರೋಪಿ ಉದ್ದೇಶಪೂರ್ವಕವಾಗಿ ಕೃತ್ಯವೆಸಗಿದ್ದಾನೆ. ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು …
Read More »ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟು ದೇಶಕ್ಕೆ ಉತ್ತಮ ಪ್ರಜೆಯಾಗಿ ರೂಪಿಸಬೇಕಾದವರೇ ಪುಟ್ಟ ಬಾಲಕಿ ಎಂದೂ ನೋಡದೆ ಅತ್ಯಾಚಾರವೆಸಗಿದ್ದಾರೆ. ಹೆಣ್ಣುಮಕ್ಕಳನ್ನು ಗೌರವಿಸಬೇಕು, ಅವರನ್ನು ರಕ್ಷಿಸಬೇಕೆನ್ನುವ ಪಾಠವನ್ನು ಗಂಡು ಮಕ್ಕಳಿಗೆ ಚಿಕ್ಕಂದಿನಿಂದಲೇ ತಿಳಿಸಿಕೊಡಬೇಕಿದ್ದ ಶಿಕ್ಷಕರು ಇಂತಹ …
Read More »ಮೊಬೈಲ್ ತಂದಿಟ್ಟ ಅವಾಂತರ: ಓರ್ವ ಸಾವು 6 ಮಂದಿಗೆ ಶಿಕ್ಷೆ
ಹಾಸನ: ಎರಡು ವರ್ಷಗಳ ಹಿಂದೆ ಗಂಗಾಧರ ಎಂಬ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದ ಸಂಬಂಧ 6 ಮಂದಿಗೆ ನ್ಯಾಯಾಧೀಶರು ತಲಾ 6 ವರ್ಷಗಳ ಕಾಲ ಶಿಕ್ಷೆ ವಿಧಿಸುವ ಮೂಲಕ ವಿಶೇಷ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗ್ರಾಮದ ಗಂಗಾಧರ್ (42) ಕೊಲೆಯಾದ ವ್ಯಕ್ತಿ. ಚನ್ನರಾಯಪಟ್ಟಣ ತಾಲೂಕು ಜನಿವಾರ ಗ್ರಾಮದ ಭರತ್ (34), ಅಭಿಷೇಕ್ ಅಲಿಯಾಸ್ ಕಬಾಬ್ ಅಭಿ (29), ಚಿರಂಜೀವಿ (27), ಅಭಿ ಅಲಿಯಾಸ್ ರೆಬಲ್ ಅಭಿ …
Read More »
Laxmi News 24×7