Breaking News

Uncategorized

ಎಲ್ಲ ರಂಗಗಳಲ್ಲಿ ಕನ್ನಡ ಕಡ್ಡಾಯ: C.M.ಬೊಮ್ಮಾಯಿ

ಬೆಂಗಳೂರು: ‘ರಾಜ್ಯದ ಎಲ್ಲ ರಂಗಗಳಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯಗೊಳಿಸಲು ಕಾನೂನು ರಚನೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ 67ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ಡಿಸೆಂಬರ್‌ನಲ್ಲಿ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸಲು ಕಾನೂನು ರಚನೆ ಮಾಡುವ ಮಸೂದೆ ಮಂಡಿಸಿ, ಅನುಮೋದನೆ ಪಡೆದುಕೊಳ್ಳಲಾಗುವುದು’ ಎಂದರು. ‘ಕನ್ನಡ ಭಾಷೆಗೆ ಕಾನೂನಿನ ಕವಚ ನೀಡುತ್ತಿರುವ ಮೊದಲ ಸರ್ಕಾರ ನಮ್ಮದು. …

Read More »

ಕಾನೂನು ನಿಯಮದಂತೆ ಟೋಲ್‌ ತೆರವು: ನಳಿನ್‌ ಕುಮಾರ್‌ ಕಟೀಲು

ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಎಲ್ಲರಿಗೂ ಅವಕಾಶವಿದ್ದು, ನಮ್ಮದೇನು ಅಭ್ಯಂತರವಿಲ್ಲ. ಕಾನೂನು ನಿಯಮದಡಿ ನಾವು ಟೋಲ್‌ ತೆರವು ಮಾಡುತ್ತೇವೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಸರಕಾರ ಆಡಳಿತದಲ್ಲಿದ್ದಾಗ ಟೋಲ್‌ಗೇಟ್‌ ತೆರವು ಮಾಡದವರು ಈಗ ಹೋರಾಟ ಮಾಡುತ್ತಿರುವುದು ರಾಜಕೀಯ ನಾಟಕ. ಆಸ್ಕರ್‌ ಫೆರ್ನಾಂಡಿಸ್‌ ಕೇಂದ್ರ ಸಚಿವರಾಗಿದ್ದ ವೇಳೆ ಅವರು ಏಕೆ ಮನವಿ ನೀಡಲಿಲ್ಲ ಎಂದು ಪ್ರಶ್ನಿಸಿದರು.   ತೂಗು ಸೇತುವೆಗಳ ಪರಿಶೀಲನೆ …

Read More »

ನನ್ನನ್ನು ಮುಗಿಸಲು ಮುಧೋಳ-ಬೆಂಗಳೂರಿಂದ ಗ್ಯಾಂಗ್​ ಬಂದಿತ್ತು: ಹೊಸ ಬಾಂಬ್​ ಸಿಡಿಸಿದ ಯತ್ನಾಳ್​

ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ರಾಜ್ಯ ರಾಜಕಾರಣಕ್ಕೆ ಸಂದೇಶ ರವಾನಿಸಿದೆ. ಆದರೆ, ಈ ಚುನಾವಣೆಯಲ್ಲಿ ನನ್ನನ್ನು ಹಣಿಯಲು ಕಳ್ಳರ ಗ್ಯಾಂಗ್ ಮನೆಯಲ್ಲಿಯೇ ಕುಳಿತು ತಂತ್ರ ಮಾಡಿದೆ. ಮಾತ್ರವಲ್ಲ, ಮುಧೋಳ ಮತ್ತು ಬೆಂಗಳೂರಿನಿಂದಲೂ ಬಂದಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಬಾಂಬ್ ಸಿಡಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಯತ್ನಾಳ್​, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಈ ಹಿಂದೆ …

Read More »

ಟಿಕೆಟ್ ತಪಾಸಣಾ ಅಧಿಕಾರಿ ಬಂದ ಕೆಲವೇ ಕ್ಷಣಗಳಲ್ಲಿ ಕಂಡಕ್ಟರ್​ ಹೃದಯಾಘಾತದಿಂದ ಸಾವು

ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಹೊರಟಿದ್ದ ಬಸ್​ನಲ್ಲಿ ಹೃದಯಾಘಾತದಿಂದ ಕಂಡಕ್ಟರ್​ ಸಾವಿಗೀಡಾಗಿರುವ ಘಟನೆ ನಡೆದಿದೆ. ಮಹೇಶ್​ ಹೂಗಾರ ಎಂಬ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾದವರು. ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಬಸ್ ಹೊರಟಿತ್ತು.‌ ತಪಾಸಣಾ ಅಧಿಕಾರಿ ವಿದ್ಯಾನಗರದ ಬಳಿ ಬಸ್ ನಿಲ್ಲಿಸಿ ಟಿಕೆಟ್ ಬುಕ್ ಪಡೆಯುತ್ತಿದ್ದ ಹಾಗೆ ಕಂಡಕ್ಟರ್ ಮಹೇಶ್​ ಹೂಗಾರ ಎದೆ ನೋವಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತಪಾಸಣಾ ಅಧಿಕಾರಿ ಅಲ್ಲಿಂದ ಪರಾರಿಯಾಗಿದ್ದಾರೆ. ಆದರೆ, ಚಾಲಕ ಹರಸಾಹಸ ಮಾಡಿ ಕಿಮ್ಸ್​ಗೆ …

Read More »

ವೇದಾವತಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗಿದ ಸಚಿವ ಶ್ರೀರಾಮುಲು

ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕಾರ್ಯ ತ್ವರಿತವಾಗಿ ನಡೆಯಬೇಕೆಂದು ನಿನ್ನೆ ರಾತ್ರಿ ಸಚಿವ ಶ್ರೀರಾಮುಲು ನದಿ ಪಕ್ಕದಲ್ಲೇ ವಾಸ್ತವ್ಯ ಹೂಡಿದರು. ಬಳ್ಳಾರಿ: ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲು ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು ಮಂಗಳವಾರ ರಾತ್ರಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗುವ ಮೂಲಕ ಸಚಿವ ಶ್ರೀರಾಮುಲು ಗಮನ …

Read More »

ಬೆಳಗಾವಿ: ಮುಮ್ಮಡಿಗೊಂಡ ಕನ್ನಡಿಗರ ಸಂಭ್ರಮ

ಬೆಳಗಾವಿ : ಒಂದೆಡೆ ಸ್ತಬ್ಧಚಿತ್ರಗಳ ಮೆರವಣಿಗೆ, ಮತ್ತೊಂದೆಡೆ ಯುವಜನರ ಹಾಡು- ಕುಣಿತ. ನಗರದಲ್ಲಿ ಮಂಗಳವಾರ ಕಂಡುಬಂದ 67ನೇ ಕರ್ನಾಟಕ ರಾಜ್ಯೋತ್ಸವದ ನೋಟವಿದು. ಮೂರು ವರ್ಷಗಳಿಂದ ಅದುಮಿಟ್ಟಿಗೊಂಡಿದ್ದ ನಾಡಭಕ್ತಿ ಏಕಾಏಕಿ ಅನಾವರಣಗೊಂಡಿತು. ಒತ್ತಕ್ಕಿ ಇಟ್ಟ ಸ್ಪ್ರಿಂಗು ನೆಗೆಯುವಂತೆ ಕನ್ನಡ ಹೃದಯಗಳು ಛಂಗನೆ ನೆಗೆದುಬಂದವು.   ಎರಡು ವರ್ಷಗಳಿಂದ ಕೊರೊನಾ ಕಾಟಕ್ಕೆ ಮೆರವಣಿಗೆ ಕೈಬಿಡಲಾಗಿತ್ತು. ಕಳೆದ ವರ್ಷ ನಟ ಪುನೀತ್‌ ರಾಜ್‌ಕುಮಾರ್‌ ಅಗಲಿಕೆಯ ನೋವಲ್ಲಿ ಸಾಂಕೇತಿಕವಾಗಿ ಆಚರಿಸಲಾಗಿತ್ತು. ಈ ಬಾರಿ ಎಲ್ಲ ಅಡ್ಡಿಗಳೂ …

Read More »

ಬೆಳಗಾವಿ: ಗಡಿಯಲ್ಲಿ ಭೋರ್ಗರೆದ ಕನ್ನಡ ಪ್ರೇಮ

ಬೆಳಗಾವಿ: ಉದ್ದಾನುದ್ದದ ಕನ್ನಡ ಬಾವುಟ. ಕನ್ನಡದ ಹಿರಿಮೆಯನ್ನು ಎತ್ತಿಹಿಡಿದ ಯುವಜನರ ಕೈಗಳು, ಕನ್ನಡಕ್ಕಾಗಿ ಕೈ ಎತ್ತಿ ಕಲ್ಪವೃಕ್ಷವಾದಂತೆ ಭಾಸವಾಗುತ್ತಿತ್ತು. ಜಾನಪದ ಕಲಾವಿದರ ಹೆಜ್ಜೆಗಳೂ ಕನ್ನಡದ ಹಿರಿಮೆಯನ್ನೇ ಮಾತನಾಡುತ್ತಿದ್ದವು. ಎತ್ತ ನೋಡಿದರತ್ತ, ಬೆಳಗಾವಿಯ ನಗರದಲ್ಲಿ ಕನ್ನಡದ ಡಿಂಡಿಮ ಮೊಳಗಿತು. ಮೂರು ವರ್ಷಗಳ ನಂತರ ಮಂಗಳವಾರ ಜರುಗಿದ ಕರ್ನಾಟಕ ರಾಜ್ಯೋತ್ಸವದಲ್ಲಿ ಹರ್ಷೋದ್ಗಾರಗಳು ಮುಗಿಲು ಮುಟ್ಟಿದ್ದರೆ, ಹೆಜ್ಜೆಗಳು ಭುವಿಯನ್ನು ನಡುಗಿಸುತ್ತಿದ್ದವು. ಅನ್ಯ ಭಾಷಿಗರು ಸೊಲ್ಲೆತ್ತದಂತೆ ಕನ್ನಡದ ಧ್ವನಿ ನೆಲ-ಬಾನು ಒಂದು ಮಾಡಿದವು. ನಾಡು, ನುಡಿಯ …

Read More »

ರಾಜ್ಯೋತ್ಸವದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

    ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ಕುಂದಾ ನಗರಿ ಬೆಳಗಾವಿ ಅಕ್ಷರಶಃ ಮದುವಣಗಿತ್ತಿಯಂತೆ ಕಂಗೊಳ್ಳಿಸುತ್ತಿದ್ದು, ಕನ್ನಡ ರಾಜ್ಯೋತ್ಸವದ ಮೆರವಣೆಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಅಪಾರ ಅಭಿಮಾನಿಗಳ ಜತೆ ಹೆಜ್ಜೆ ಹಾಕಿ ರಾಜೋತ್ಸವಕ್ಕೆ ಇನ್ನಷ್ಟು ಮೆರಗು ತಂದರು.   ನಂತರ ಚೆನ್ನಮ್ಮ ವೃತ್ತದಲ್ಲಿ ಹಾಕಲಾದ ಟೆಂಟ್‌ನಲ್ಲಿ ಕುಳಿತು ರಾಜ್ಯೋತ್ಸವದ ಅದ್ಧೂರಿ ಮೆರವಣಿಗೆಯನ್ನು ವಿಕ್ಷೀಸಿದರು. ಅಪಾರ ಸಂಖ್ಯೆಯ ಯುವಕರು, ಯುವತಿಯರು, ಕನ್ನಡಪರ ಹೋರಾಟಗಾರರು ಶಾಸಕ ಸತೀಶ್‌ …

Read More »

ಗೋಕಾಕ: ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವದು.

ಗೋಕಾಕ: ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಅಖಂಡ ಕರ್ನಾಟಕ ರಚನೆಯಾಗಬೇಕು ಎಂಬ ಕನಸು ನನಸಾಗಿ ಇಂದಿಗೆ 66 ವರ್ಷಗಳು ಪೂರ್ಣಗೊಂಡಿದ್ದು, ನಾವೆಲ್ಲರೂ 67ನೇ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿರುವದು ಕರ್ನಾಟಕದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು.   ಮಂಗಳವಾರದಂದು ತಾಲೂಕಾ ಆಡಳಿತ ವತಿಯಿಂದ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಖಂಡ ಕರ್ನಾಟಕ …

Read More »

ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ

  ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿ ಅನುಷ್ಠಾನದಿಂದ ದಂಡಿನಮಾರ್ಗ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು …

Read More »