ಗೋಕಾಕ: ನಗರದ ಕೆಎಲ್‍ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್‍ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಕೆಎಲ್‍ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಕೆಎಲ್‍ಇ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಮ್ ಡಿ ಚುನಮರಿ, ಆಡಳಿತಾಧಿಕಾರಿ ಜಿ ಎಮ್ ಅಂದಾನಿ, ಪ್ರಚಾರ್ಯ ಕೆ ಬಿ ಮೇಯುಂಡಿಮಠ ಇದ್ದರು.
Read More »ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು. ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, …
Read More »ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಾ ಸಿದ್ದ: ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, ಮಂದಿರ, ಚರ್ಚ್ ಸೇರಿದಂತೆ ವಿವಿಧ ಸಮುದಾಯದ ಸಮುದಾಯ ಭವನಗಳಿಗೆ ಕುರ್ಚಿ, ಸೌಂಡ್ ಸಿಸ್ಟಮ್ ಗಳ ವಿತರಣೆ ಬೆಳಗಾವಿ: ಎಲ್ಲಾ ಸಮಾಜದ ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ನಗರದ ಜಾಧವ ನಗರ ಕಚೇರಿಯಲ್ಲಿ ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, …
Read More »ಮೆಥೋಡಿಸ್ಟ್ ಸಂಸ್ಥೆಗೆ ಅಕ್ರಮ ಎಸಗಿರುವವರ ವಿರುದ್ದ ಕ್ರಮಕ್ಕೆ ಆಗ್ರಹ
ಬೆಳಗಾವಿ: ಮೆಥೋಡಿಸ್ಟ್ ಚರ್ಚಗೆ ಸಂಬಂಧಿಸಿದ ಸಿಪಿಏಡ್ ಮೈದಾನ ಆಸ್ತಿಯನ್ನು ಗುತ್ತಿಗೆ ಆಧಾರದ ಮೇಲೆ ಮಾರಾಟ ಮಾಡಿ, ಸಂಸ್ಥೆಗೆ ಒಳಪಟ್ಟ 14 ಶಾಲೆ ಹಾಗೂ ಸಂಸ್ಥೆಯಲ್ಲಿನ ಹಣವನ್ನು ದುರುಪಯೋಗ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕ್ರೈಸ್ತ ಬಾಂಧವರ ವತಿಯಿಂದ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇಲ್ಲಿನ ಮೆಥೋಡಿಸ್ಟ್ ಚರ್ಚ್ ನಿಂದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನೆ ನಡೆಸಿ, ಮೆಥೋಡಿಸ್ಟ್ ಸಂಸ್ಥೆಯಲ್ಲಿ …
Read More »ಕೆಲಸ ಮಾಡದವರಿಗೆ ಯಾಕ್ರೀ ಟಿಕೆಟ್ ಕೊಡಬೇಕು, ನನಗೆ ನಂಬರ್ ಬೇಕು, ನಮ್ಮ ಸರ್ಕಾರ ಬರಬೇಕು: ಡಿಕೆಶಿ
ಬೆಂಗಳೂರು: ಸುಮ್ಮನೆ ಶಾಸಕರು ಕ್ಷೇತ್ರದಲ್ಲಿ ಮದುವೆಗೆ ಭಾಗಿಯಾಗುವುದು, ಟೇಪ್ ಕಟ್ ಮಾಡ್ಕೊಂಡು ಇದ್ರೆ ಆಗಲ್ಲ. ಬೂತ್ ಮಟ್ಟಕ್ಕೆ ಹೋಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ಶಾಸಕರು ಏನೇನು ಮಾಡಬೇಕು ಅಂತ ಸುರ್ಜೆವಾಲಾ ಟಾರ್ಗೆಟ್ ಕೊಟ್ಟಿದ್ದಾರೆ. ಕೆಲಸ ಮಾಡದವರಿಗೆ ಯಾಕ್ರೀ ಟಿಕೆಟ್ ಕೊಡಕ್ಕಾಗತ್ತದೆ?.. ನನಗೆ ನಂಬರ್ ಬೇಕು, ನಮ್ಮ ಸರ್ಕಾರ ರಚನೆಯಾಗಬೇಕು. ಬೂತ್ ಮಟ್ಟಕ್ಕೆ ಹೋಗಿ ಕೆಲಸ ಮಾಡಬೇಕು ಅನ್ನೋದು ನನ್ನ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ*
ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ ಜೀ ಅವರನ್ನು ನೆನೆಯೋಣ, ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ …
Read More »ವಾಹನ ಸವಾರರೇ ಎಚ್ಚರ : ಇನ್ಮುಂದೆ ವಾಹನಗಳಲ್ಲಿ `LED’ ದೀಪ ಬಳಸಿದರೆ 500 ರೂ. ದಂಡ!
ಬೆಂಗಳೂರು : ಎಲ್ ಇಡಿ (LED) ಬಳಸುವ ವಾಹನ ಸವಾರರಿಗೆ ಸಾರಿಗೆ ಸಚಿವ ಶ್ರೀರಾಮುಲು ಬಿಗ್ ಶಾಕ್ ನೀಡಿದ್ದು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177ರಡಿ ಪ್ರಕರಣ ದಾಖಲಿಸಿ 500 …
Read More »ಕಲ್ಯಾಣ ಕರ್ನಾಟಕ’ ವಿಮೋಚನೆಗಿಂದು 75 ವರ್ಷ : ಅಮೃತಮಹೋತ್ಸವ ಕಾರ್ಯಕ್ರಮಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ಕಲಬುರಗಿ : ನಿಜಾಮರ ಆಡಳಿತದಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ವಿಮೋಚನೆ ಆಗಿ ಇಂದಿಗೆ 74 ವರ್ಷಗಳು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಒಂದು ವರ್ಷ ನಡೆಯಲಿರುವ ಅಮೃತಮಹೋತ್ಸವದ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ …
Read More »ಸರ್ಕಾರಿ ಬಸ್ ನಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ 30 ಲಕ್ಷ ರೂ. ಕಾಳಧನ ವಶ: ಓರ್ವನ ಬಂಧನ
ಕಾಸರಗೋಡು:ಸರಕಾರಿ ಬಸ್ ನಲ್ಲಿ ಮಂಗಳೂರು ಭಾಗದಿಂದ ಕೇರಳಕ್ಕೆ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 30 ಲಕ್ಷ ರೂ. ಗಳನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ನಿವಾಸಿ ಯಶಾದೀಪ್ ಶಾರಾದ್ ಡಬೋಟೆ (21) ಎಂಬಾತನನ್ನು ಬಂಧಿಸಲಾಗಿದೆ. ಚಿನ್ನ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಂಜೇರಿಗೆ ಕೊಂಡೊಯ್ಯುವ ಹಣ ಇದೆಂದು ಆರೋಪಿಯು ತಪ್ಪೊಪ್ಪಿಕೊಂಡಿದ್ದಾನೆ. ಶುಕ್ರವಾರ ಬೆಳಗ್ಗೆ ಮಂಜೇಶ್ವರ ಅಬಕಾರಿ ಚೆಕ್ ಪೋಸ್ಟ್ ನಲ್ಲಿ ಈ ಕಾರ್ಯಾಚರಣೆ ನಡೆದಿದೆ. ಅಬಕಾರಿ ಅಧಿಕಾರಿ ಸಜಿತ್ ಕೆ.ಎಸ್., ಪ್ರಿವೆಂಟಿವ್ ಆಫೀಸರ್ …
Read More »ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬರೀ ಆಶ್ವಾಸನೆ ಕೊಟ್ಟುಕೊಂಡು ಹೋಗುತ್ತಿದ್ದಾರೆ., ಯಾವುದೇ ರೀತಿ ಕೆಲಸ ಆಗಿಲ್ಲ.: ಧನಂಜಯ್ ಜಾಧವ
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬರೀ ಆಶ್ವಾಸನೆ ಕೊಟ್ಟುಕೊಂಡು ಹೋಗುತ್ತಿದ್ದಾರೆ. ಎಲ್ಲಿ ಅನುದಾನ ಹಾಕುತ್ತೇನೆ ಎಂದು ಹೇಳಿದ್ದಾರೆ ಅಲ್ಲಿ ಯಾವುದೇ ರೀತಿ ಕೆಲಸ ಆಗಿಲ್ಲ. ಹೀಗಾಗಿ ಇದರಿಂದ ಜನರಿಗೆ ಬೇಜಾರಾಗಿದೆ. ಆದ್ದರಿಂದ ನೂರಕ್ಕೆ ನೂರರಷ್ಟು ಶಾಸಕರು ಬದಲಾವಣೆ ಆಗುವುದು ನಿಶ್ಚಿತ ಎಂದು ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ್ ಜಾಧವ ವಿಶ್ವಾಸ ವ್ಯಕ್ತಪಡಿಸಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ್ ಜಾಧವ1200 ಕೋಟಿ …
Read More »