Breaking News

Uncategorized

ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕವಾಗಿ ವಾಗ್ದಾಳಿ ನಡೆಸಿದ ಸಿ.ಟಿ.ರವಿ

ಬೆಂಗಳೂರು: ಸಿ.ಟಿ.ರವಿ ಲೂಟಿ ರವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡುವ ಬರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.   ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಕರೆಯುತ್ತಾರೆ. ಹಾಗಂತ ನಾನು ಹೇಳುತ್ತಿಲ್ಲ. ಜನ ಹೇಳುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಇವರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? …

Read More »

ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ 17ಸೇತುವೆಗಳು ಮುಳುಗಡೆ 35 ಅಧಿಕ ಮನೆ ಕುಸಿತ

ಬೆಳಗಾವಿ: ಕಳೆದ ಮೂರು ದಿನಗಳಿಂದ ಗಡಿ ಜಿಲ್ಲೆ ಬೆಳಗಾವಿ ಸೇರಿ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರ ಮಳೆಗೆ‌ ಕುಂದಾನಗರಿ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿದ್ದು, 17ಸೇತುವೆಗಳು ಮುಳುಗಡೆಯಾಗಿದ್ದಲ್ಲದೇ 36 ಮನೆಗಳ ನೆಲಸಮವಾಗಿವೆ. ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ ಶನಿವಾರ ಸಂಜೆಯಿಂದಲೇ ಸುರಿಯುತ್ತಿರುವ ಮಳೆಗೆ ಘಟಪ್ರಭಾ, ಮಲಪ್ರಭಾ ಹಾಗೂ ಹಿರಣ್ಯಕೇಶಿ ನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ. ಘಟಪ್ರಬಾ ನದಿಯಲ್ಲಿ ಭಾನುವಾರ ಸಂಜೆಯ ವೇಳೆಗೆ …

Read More »

ಕೆರೆ ಬಳಿ ರೀಲ್ಸ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ!

ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಳ್ಳುವ ಸಲುವಾಗಿ ರೀಲ್ಸ್​ ಮಾಡುವ ಒಂದೇ ಕಾರಣಕ್ಕೆ ಏನೇನೋ ಸಾಹಸಕ್ಕೆ ಮುಂದಾಗಿ ಅನಾಹುತ ಮಾಡಿಕೊಂಡ ಪ್ರಕರಣಗಳು ಬೇಕಾದಷ್ಟು ಇವೆ. ಇನ್ನು ಕೆಲವರು ಹಾಗೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದೂ ಇದೆ. ಅಂಥದ್ದೇ ಒಂದು ಪ್ರಕರಣವಿದು. ಇಲ್ಲೊಬ್ಬಳು ಯುವತಿ ರೀಲ್ಸ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡು ಪ್ರಾಣ ಕಳೆದುಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ಈ ಅವಘಡ ನಡೆದಿದೆ. ಅಮೃತ (22) ಸಾವಿಗೀಡಾದ ಯುವತಿ. ಈಕೆ ಮೂಲತಃ …

Read More »

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?*

ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …

Read More »

ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ 

  ಕೊಟಬಾಗಿ:ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ದಾಸರಟ್ಟಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಪ್ರತಿಭೆ ಯನ್ನು ಗುರುತಿಸಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕ ಪ್ರದೀಪ ರಜಪೂತ ರವರಿಗೆ ಶಾಲೆಯ ಎಸ್ ಡಿ ಎಮ್ ಸಿ ಸಿಬ್ಬಂದಿ ವರ್ಗದವರು,ಶಿಕ್ಷಕ ಬಳಗ, ಹಾಗೂ ಊರಿನ ಗ್ರಾಮಸ್ಥರು ಸತ್ಕಾರ ಸಮಾರಂಭ ಕಾರ್ಯಕ್ರಮ ಶಾಲೆಯಲ್ಲಿ ಆಯೋಜಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ …

Read More »

ಬಿಜೆಪಿ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತಕ್ಕೀಡಾಗಿ ಸಾವು..

ತುಮಕೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಕಾಂಗ್ರೆಸ್​ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಅನಾಥ ಶವವಾಗಿ ಪತ್ತೆಯಾಗಿದ್ದರು. ಇದೀಗ ಬಿಜೆಪಿಯ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಪ್ರಕರಣ ನಡೆದಿದೆ.   ತುಮಕೂರು ಜಿಲ್ಲೆ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ (70) ಸಾವಿಗೀಡಾದವರು. ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ‌ ಇಂದು ನಡೆದ ಬಿಜೆಪಿ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದು, ಅಲ್ಲಿ ಹೃದಯಾಘಾತಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡಿದ್ದಾರೆ.

Read More »

ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.

ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.   ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …

Read More »

ಸಿಎಂ ಬೊಮ್ಮಾಯಿಗೆ ಹೈಕಮಾಂಡ್​​ ಖಡಕ್​ ಸೂಚನೆ

ಬೆಂಗಳೂರು: ಮಳೆ ಅನಾಹುತಕ್ಕೆ ಸಾರ್ವಜನಿಕರ ಆಕ್ರೋಶ ಮತ್ತು ಮತ್ತೊಂದೆಡೆ ಸರ್ಕಾರಕ್ಕೆ ಮೋಹನ್ ದಾಸ್ ಪತ್ರ ಬರೆದ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ಖಡಕ್​ ಸೂಚನೆ ನೀಡಿದೆ. ಸಿಲಿಕಾನ್​ ಸಿಟಿಯಲ್ಲಿ ಮಳೆ ಅನಾಹುತ ಸರಿಪಡಿಸಲು ವಿಶೇಷ ಗಮನ ಹರಿಸಿ, ಬೆಂಗಳೂರು ಮಳೆ ಸಮಸ್ಯೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗ್ರೀನ್ ಸಿಟಿಯ ಬಗ್ಗೆ ಎಲ್ಲಾ ಕಡೆ ಮಾತುಗಳು ಕೇಳಿ ಬರುತ್ತಿವೆ. ಸರ್ಕಾರ ಹಾಗೂ ಪಕ್ಷದ ಮೇಲೆ ಇದು ದೊಡ್ಡ ಪರಿಣಾಮ ಬೀರಲಿದೆ. …

Read More »

ಬಿಪಿಎಲ್‌ ಪಡಿತರ ಪಡೆಯಲು ಇನ್ನು ಡಬಲ್‌ ಒಟಿಪಿ ಬೇಕು..

ಬೆಂಗಳೂರು: ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದ್ಯಮ ಕಾರ್ಡ್‌ದಾರರು ಪ್ರತಿ ತಿಂಗಳು ಪಡಿತರ ಪಡೆಯುವ ಸಂದರ್ಭ ಒಮ್ಮೆ ಬೆರಳಚ್ಚು ನೀಡಿ ಒಟಿಪಿ ಕೊಡುತ್ತಿದ್ದರು. ಆದರೆ, ಇನ್ನು ಮುಂದೆ ಸೆಪ್ಟೆಂಬರ್‌ ತಿಂಗಳಿಂದ ಎರೆಡೆರೆಡು ಬಾರಿ ಬೆರಳಚ್ಚು ನೀಡಿ, ಎರಡು ಒಟಿಪಿ ನೀಡಬೇಕು. ಸೆ. ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಶುರುವಾಗಲಿದೆ. ಎಲ್ಲರೂ ಎರೆಡೆರಡು ಬಾರಿ ಬೆರಳಚ್ಚು ಒಟಿಪಿ ನೀಡಬೇಕಾಗಿದೆ. ಹಾಗಾಗಿ ಇದರಿಂದ …

Read More »

ಭಾರತ ಒಗ್ಗೂಡಿಸಿ ಯಾತ್ರೆಗೆ 5ಸಾವಿರ ಜನ: ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ: ದೇಶದಲ್ಲಿ ಜಾತಿ, ಧರ್ಮಗಳ ವಿಷಬೀಜವನ್ನು ಕಿತ್ತೊಗೆದು ಸಮನ್ವಯತೆ ಹುಟ್ಟುಹಾಕುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ‘ಭಾರತ ಒಗ್ಗೂಡಿಸಿ’ ಪಾದಯಾತ್ರೆ ಹಮ್ಮಿಕೊಂಡಿದ್ದು ಎಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.   ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ದೇಶದಲ್ಲಿ ಇದು ಆರಂಭವಾಗಿದೆ. ನಮ್ಮದು ಶಾಂತಿಪ್ರಿಯ ದೇಶ. ಇಲ್ಲಿ ವಿವಿಧ ಭಾಷೆಗಳು, ಜನಾಂಗಗಳು, ಧರ್ಮಗಳ ಜನರಿದ್ದರೂ ನಾವು ಒಂದೇ ಎಂದು ಸಾರುವ ದೇಶವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಜಾತಿ, ಧರ್ಮಗಳ ಸಂಘರ್ಷ, …

Read More »