Breaking News

Uncategorized

45 ದಿನಗಳಲ್ಲಿ ನಾವಿಕರ ಕುಟುಂಬ ಗಳಿಸಿದ್ದು ಬರೋಬ್ಬರಿ 30 ಕೋಟಿ ರೂ.

ಪ್ರಯಾಗ್​ರಾಜ್, ಮಾರ್ಚ್​ 05: ಮಹಾಕುಂಭ ಮೇಳವು ನಿಜವಾಗಿಯೂ ಕೋಟ್ಯಂತರ ಜನರ ಮನಸ್ಸಿನಲ್ಲಿ ಅಳಿಸಲಾಗದ ನೆನಪಾಗಿ ಉಳಿದಿದೆ. ಈ ಮಹಾ ಕುಂಭದಲ್ಲಿ ಒಂದೆಡೆ ಧರ್ಮ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಚರ್ಚೆ ನಡೆಯಿತು. ಮತ್ತೊಂದೆಡೆ, ಮಹಾ ಕುಂಭವು ಜನರಿಗೆ ಆದಾಯದ ಮೂಲವೂ ಆಗಿತ್ತು. ನಾವಿಕ ಕುಟುಂಬವೊಂದು 45 ದಿನಗಳಲ್ಲಿ ಬರೋಬ್ಬರಿ 30 ಕೋಟಿ ರೂ.ಗಳನ್ನು ಗಳಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಈ ಕುರಿತು ಮಾತನಾಡಿದ್ದಾರೆ. ನಾವಿಕ ಕುಟುಂಬವು ಪ್ರಯಾಗ್‌ರಾಜ್‌ನ ನೈನಿಯ ಅರೈಲ್‌ನವರು. ಈ …

Read More »

ಸರಕಾರಿ ನೌಕರರ ಸಂಘದ ಮೂಡಲಗಿ ಘಟಕದ ದಿನಾದರ್ಶಿಕೆಯನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸರಕಾರಿ ನೌಕರರ ಸಂಘದ ಮೂಡಲಗಿ ಘಟಕದ ದಿನಾದರ್ಶಿಕೆಯನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ – ಸರ್ಕಾರಿ ನೌಕರರು ತಮ್ಮ ಇಲಾಖೆಯ ಕರ್ತವ್ಯದ ಜೊತೆಗೆ ನೌಕರರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಇತ್ತೀಚೆಗೆ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಸರಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದಿಂದ ಹೊರತಂದ ಪ್ರಸ್ತುತ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮೊದಲು ನಿಮ್ಮ …

Read More »

ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದ ಮಹಿಳೆ ಹೊಟ್ಟೆಯಲ್ಲಿತ್ತು 5 ಕೆ.ಜಿ ಗೆಡ್ಡೆ

ದೊಡ್ಡಬಳ್ಳಾಪುರ: ಹೊಟ್ಟೆನೋವು ಎಂದು 45 ವರ್ಷದ ಮಹಿಳೆಯೊಬ್ಬರು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ತಪಾಸಣೆ ನಡೆಸಿದ ವೈದ್ಯರು ಆಕೆಯ ಉದರದಲ್ಲಿದ್ದ 5 ಕೆ.ಜಿ ಗೆಡ್ಡೆಯನ್ನು ಹೊರತೆಗೆದಿದ್ದಾರೆ. ದೊಡ್ಡಬಳ್ಳಾಪುರ ನಗರದ 45 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದರು. ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಆಕೆ, ವೈದ್ಯರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಡಾ.ಅರ್ಚನಾ ಅವರು ಪರೀಕ್ಷೆ ನಡೆಸಿದ್ದು, ಸ್ಕ್ಯಾನಿಂಗ್​ನಲ್ಲಿ ಹೊಟ್ಟೆಯಲ್ಲಿ 5 ಕೆ.ಜಿ ಗಾತ್ರದ ಗೆಡ್ಡೆ ಇರುವುದು …

Read More »

ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಕಲ್ಪಿಸುವ ಹೊಸ ಕಲಿಕಾ ಯೋಜನೆಗೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹಾಗೂ ಚಟುವಟಿಕೆಯ ಮೂಲಕ ಕಲಿಕೆಗೆ ಅನುವು ಮಾಡಿಕೊಡುವ ಯೋಜನೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ಜವಾಹರ್‌ಲಾಲ್‌ ನೆಹರು …

Read More »

ಬದ್ಧತೆ ಹಾಗೂ ಶಿಸ್ತಿನಿಂದ ಕಲಿತರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಮಕ್ಕಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

ಬೆಂಗಳೂರು : “ಜೀವನದಲ್ಲಿ ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾರಂತೆ ಸಾಧನೆ ಮಾಡಬಹುದು. ಗುರಿ ಮುಟ್ಟುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು.ಆರ್. ರಾವ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಅವರು ಶುಕ್ರವಾರ ಮಾತನಾಡಿದರು. “ಇಲ್ಲಿ ನೀವೆಲ್ಲರೂ ಅನೇಕ ವಿಜ್ಞಾನಿಗಳನ್ನು ನೋಡಿದ್ದೀರಿ. …

Read More »

ಬಜೆಟ್ ಅಧಿವೇಶನ ಪ್ರಾರಂಭ 6 ಬೇಡಿಕೆಗಳನ್ನಿಟ್ಟ ಸ್ವಾಮೀಜಿಗಳ ನಿಯೋಗ

ಬೆಂಗಳೂರು, ಫೆಬ್ರವರಿ 25: ಸಿಎಂ ಸಿದ್ದರಾಮಯ್ಯ ಈ ಬಾರಿ 16ನೇ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಶುರುವಾಗಿದೆ. ಸತತ 2-3 ವಾರಗಳಿಂದ‌ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳಲ್ಲಿ ವ್ಯಸ್ತರಾಗಿದ್ದಾರೆ. ವಿವಿಧ ಇಲಾಖೆಗಳ ಸಚಿವರು, ಅಧಿಕಾರಗಳ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ. ವಿವಿಧ ಸಂಘ ಸಂಸ್ಥೆಗಳು, ವಿವಿಧ ಸಮುದಾಯಗಳ ಮಠಾಧೀಶರ ಜೊತೆಗೂ ಸೋಮವಾರ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ‌. ಸಚಿವರಾದ ಎಂಬಿ ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ಸೇರಿದಂತೆ …

Read More »

ಗೃಹಜ್ಯೋತಿ ದುಡ್ಡು ಸರ್ಕಾರ ಕೊಡದಿದ್ರೆ ಜನರಿಂದಲೇ ವಸೂಲಿ?

ಬೆಂಗಳೂರು, ಫೆಬ್ರವರಿ 24: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ ಶೀಘ್ರದಲ್ಲಿಯೇ ಎಸ್ಕಾಂಗಳು ಅಂತ್ಯ ಹಾಡಲಿವೆಯೇ? ಇಂತಹದೊಂದು ಅನುಮಾನಕ್ಕೆ ಕೆಲವು ವರದಿಗಳು ಕಾರಣವಾಗಿದ್ದು, ಇದರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಚಿತವಾಗಿ ಪಾವತಿ ಮಾಡಬೇಕು. ಇಲ್ಲವಾದರೆ, ಆ ದುಡ್ಡನ್ನು ಜನರಿಂದಲೇ ವಸೂಲಿ ಮಾಡಲು ಅವಕಾಶ ಒದಗಿಸಬೇಕು ಎಂದು ಮನವಿ ಮಾಡಿ …

Read More »

ಆಸೀಫ ಸೇಠ್ ಫೌಂಡೇಶನ್ ದಿಂದ ಉಚಿತ ವೈದ್ಯಕೀಯ ಶಿಬಿರ

ಶಾಸಕ ಆಸೀಫ್ ಸೇಟ್ ಫೌಂಡೇಶನ್ ವತಿಯಿಂದ ಬೆಳಗಾವಿಯ ಅಶೋಕ್ ನಗರ ಸೇರಿದಂತೆ ಒಟ್ಟು ಐದು ಬಡಾವಣೆಗಳಲ್ಲಿಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿತ್ತು ಅಶೋಕನಗರದ ಉರ್ದು ಶಾಲೆ ಸೇರಿದಂತೆ ಒಟ್ಟು ಐದು ಬಡಾವಣೆಗಳಲ್ಲಿ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ ತಜ್ಞ ವೈದ್ಯರು ರೋಗಿಗಳನ್ನು ತಪಾಸನೆ ಮಾಡಿ ಚಿಕಿತ್ಸೆಯ ಸಲಹೆ ಸೂಚನೆಗಳನ್ನು ನೀಡಿದರು ಶಿಬಿರದಲ್ಲಿ ಔಷಧಗಳನ್ನೂ ಸಹ ಉಚಿತವಾಗಿ ನೀಡಲಾಯಿತು ಈ ಸಂದರ್ಭದಲ್ಲಿ ಶಿಬಿರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಶಾಸಕ ಆಸಿಫ್ ಸೇಠ ಅವರ ಪುತ್ರ ಅಮಾನ್ …

Read More »

ರನ್ನ ವೈಭವಕ್ಕೆ ಕ್ಷಣಗಣನೆ… ಇಂದು ಸಂಜೆ ಮೆರವಣಿಗೆಗೆ ಚಾಲನೆ

ಇಂದಿನಿಂದ ಮೂರು ದಿನಗಳ ಕಾಲ ಬಾಗಲಕೋಟೆ ಜಿಲ್ಲೆ ಮುಧೋಳದ ರನ್ನ ಬೆಳಗಲಿಯಲ್ಲಿ ರನ್ನ ವೈಭವ ಕಾರ್ಯಕ್ರಮ ನಡೆಯಲಿದ್ದು, ಅದ್ಧೂರಿ ಚಾಲನೆಗೆ ಕ್ಷಣಗಣನೆ ಆರಂಭಗೊಂಡಿದೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ರನ್ನ ವೈಭವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆಗಳನ್ನು ಭರದಿಂದ ಮಾಡಿಕೊಳ್ಳಲಾಗುತ್ತಿದೆ. ರನ್ನ ಬೆಳಗಲಿಯಲ್ಲಿ ರನ್ನ ವೈಭವ ಮೆರವಣಿಗೆಗೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ, ಸಚಿವ ತಿಮ್ಮಾಪೂರ ಅವರಿಗೆ ಸಚಿವ ಎಚ್ ಕೆ ಪಾಟೀಲ್, ಜಿಲ್ಲೆಯ ಶಾಸಕರು ಸಂಸದರ ಉಪಸ್ಥಿತಿಯಲ್ಲಿ ಚಾಲನೆ …

Read More »

ಸರ್ವೇ ಕೆಲಸಕ್ಕೆ ತಂತ್ರಜ್ಞಾನ ಉಪಯೋಗಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ : ಕೃಷ್ಣ ಬೈರೇಗೌಡ

ಬೆಂಗಳೂರು : ಆಧುನಿಕ ಕಂಪ್ಯೂಟರ್ ಜಗತ್ತಿನಲ್ಲೂ ಸಹ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ. ಸರ್ವೇ ಆಯುಕ್ತರ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ 465 ಜನ ಭೂ ಮಾಪಕರಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ನೀಡಿ ಮಾತನಾಡಿದರು. “ಸರ್ವೇ ಕೆಲಸವನ್ನು ಹಿಂದಿನಿಂದಲೂ ಚೈನ್ ಹಿಡಿದೇ ಭೂಮಿಯನ್ನು ಅಳೆಯುವ ಸಂಪ್ರದಾಯ …

Read More »