ಮಂಡ್ಯ: ನಾಡಿನ ಹೆಸರಾಂತ ವೀರಗಾಸೆ ಕಲಾವಿದರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ವೀರಗಾಸೆ ಕಲಾರತ್ನ ಮಹದೇವಪ್ಪನವರ ನಿಧನ ಜಾನಪದ ಲೋಕಕ್ಕೆ ತುಂಬಲಾರದ ನಷ್ಟ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಹಿರಿಯ ಜಾನಪದ ಕಲಾವಿದ ಮಹದೇವಪ್ಪನವರು ಇಂದು ಬೆಳಗ್ಗೆ ದೈವಾಧೀನರಾದ ಸುದ್ದಿ ತಿಳಿದು ತೀವ್ರ ಆಘಾತ ಹಾಗೂ ದುಃಖವಾಗಿದೆ. ಅರ್ಧಶತಮಾನಕ್ಕೂ ಹೆಚ್ಚು ಕಾಲ …
Read More »ಮಾವನ ಜೊತೆ ಜೇನು ಮುರಿಯಲು ಹೋಗಿದ್ದ ಬಾಲಕ ಶವವಾಗಿ ಪತ್ತೆ – ಕೊಲೆ ಶಂಕೆ
ದಾವಣಗೆರೆ: ಮಾವನ ಜೊತೆ ಜೇನು ಮುರಿಯಲು ಹೋಗಿದ್ದ 7 ವರ್ಷದ ಬಾಲಕ ಶವವಾಗಿ ಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಶಿನಾಯ್ಕ್ ಎಂಬವರ ಪುತ್ರ ಆದಿತ್ಯ (7) ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಬುಧವಾರ ಬೆಳಗ್ಗೆ ಮಾವ ತಾವರೆನಾಯ್ಕ್ ಜೊತೆ ಬಾಲಕ ಜೇನು ಮುರಿದುಕೊಂಡು ಬರಲು ಹೋಗಿದ್ದ. ಸಂಜೆಯಾದರೂ ಇಬ್ಬರು ಮನೆಗೆ ಬಾರದ ಹಿನ್ನೆಲೆ ಜಗಳೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ …
Read More »ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣ – ಹತ್ತು ಮಂದಿ ಅರೆಸ್ಟ್
ಹಾಸನ: ನಟೋರಿಯಸ್ ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೋಹನ್, ಶಶಿ, ಸಾಯಿನಾಥ್, ಭರತ್, ಲಿಂಗರಾಜ್, ರಾಕೇಶ್, ಆದಿತ್ಯ, ಆಕಾಶ್, ದಿಲೀಪ್ ಬಂಧಿತ ಆರೋಪಿಗಳಾಗಿದ್ದು, ಪ್ರಮುಖ ಆರೋಪಿಗಳ ಬಂಧನಕ್ಕೆ ಪೊಲೀಸರು ತಲಾಶ್ ನಡೆಸಿದ್ದಾರೆ. ಕೊಲೆ ಪ್ರಕರಣದಲ್ಲಿ ನಾವು ಆರೋಪಿಗಳಲ್ಲ ಎಂದು ಬೆಂಗಳೂರು ಮೂಲದ ನಾಲ್ವರು ಹಾಗೂ ತುಮಕೂರು ಮೂಲದ ಓರ್ವ ಯುವಕ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಕೊಲೆ ಪ್ರಕರಣದಲ್ಲಿ ನಮ್ಮನ್ನ ಹುಡುಕುತ್ತಿದ್ದಾರಂತೆ, …
Read More »ತಮಿಳುನಾಡಿಗೆ ಜೂನ್‌ನಲ್ಲಿ 9.19 ಟಿಎಂಸಿ ನೀರು – 81 ಅಡಿಗೆ ಕುಸಿದ KRS ನೀರಿನ ಮಟ್ಟ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಇಷ್ಟೊತ್ತಿಗಾಗಲೇ ಚುರುಕುಗೊಳ್ಳದ ಹಿನ್ನೆಲೆ, ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ 108 ಅಡಿ. ಆದರೆ ಈ ಬಾರಿ ಮಳೆಯ ಅಭಾವದಿಂದಾಗಿ ಡ್ಯಾಂ ಸಂಪೂರ್ಣ …
Read More »ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ
ದೇವನಹಳ್ಳಿ ತಾಲ್ಲೂಕಿನ ಸಬ್ ರಿಜಿಸ್ಟ್ರಾರ್ ಆದ ಶ್ರೀ ಪ್ರಸಾದ್ ಕುಮಾರ್ ರವರ ಅಣ್ಣ ಶಾಮಣ್ಣನವರ ಪುತ್ರ, ನಮ್ಮ ಐಬಸಾಪುರ ಗ್ರಾಮದ ನಿವಾಸಿ ಚಿ. ದೀಪಕ್ ಕುಮಾರ್ ಅವರು ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಸುದ್ದಿ ತಿಳಿದು ತೀವ್ರ ಆಘಾತ ಮತ್ತು ಬೇಸರವಾಗಿದೆ. ಇನ್ನೂ ಕೆಲವೇ ದಿನಗಳಲ್ಲಿ ವಿವಾಹ ನಿಶ್ಚಯವಾಗಿ, ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಬೇಕಾಗಿದ್ದ ಯುವಕನೊಬ್ಬ ಹೀಗೆ ವಿಧಿವಶನಾಗಿರುವುದು ಅತ್ಯಂತ ದುಃಖದ ಸಂಗತಿ. ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿರುವ …
Read More »ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ ಜಾರಕಿಹೊಳಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು
ಸಮಾಜಸೇವೆ, ಜನಪರ ಕಾಳಜಿ ಹಾಗೂ ಯುವಕರಿಗೆ ಪ್ರೇರಣೆಯಾಗಿರುವ ಲಖನ ಜಾರಕಿಹೊಳಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ-ಸಮೃದ್ಧಿ ಹಾಗೂ ಇನ್ನಷ್ಟು ಜನಸೇವೆಯನ್ನು ಮಾಡುವ ಶಕ್ತಿ ನೀಡಲಿ ಎಂದು ಹಾರೈಸುತ್ತೇವೆ. “ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ನಿಮ್ಮ ಎಲ್ಲಾ ಕನಸುಗಳು ನನಸಾಗಲಿ, ಜನಸೇವೆಯ ಪಥದಲ್ಲಿ ಇನ್ನಷ್ಟು ಯಶಸ್ಸುಗಳು ದೊರಕಲಿ.”
Read More »ಮದುವೆಯಾಗಿ ತಿಂಗಳಷ್ಟೇ ಕಳೆದಿತ್ತು: ಬೆಳಗಾವಿಯಲ್ಲಿ ನವವಿವಾಹಿತೆ ಆತ್ಮಹತ್ಯೆ
ಬೆಳಗಾವಿ:ಮದುವೆಯಾಗಿ ಕೇವಲ ಒಂದು ತಿಂಗಳಾಗಿದ್ದ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದ ಮಹಾದ್ವಾರ ರಸ್ತೆಯ ಅಷ್ಟೇಕರ ಗಲ್ಲಿಯಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯ ಉದ್ಯೋಗಿ ರಕ್ಷಿತಾ ಪೂಜಾರಿ (29) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಒಂದು ತಿಂಗಳ ಹಿಂದಷ್ಟೇ ಈಕೆಗೆ ಮಂಜುನಾಥ ಕೃಷ್ಣಾ ಪೂಜಾರಿ ಎಂಬುವರೊಂದಿಗೆ ವಿವಾಹವಾಗಿತ್ತು. ಮೃತ ರಕ್ಷಿತಾ ಮನೆಯಿಂದಲೇ ಖಾಸಗಿ ಕಂಪನಿಯ ಕೆಲಸವನ್ನು (ವರ್ಕ್ ಫ್ರಮ್ ಹೋಮ್) ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಜೂನ್ 9ರಂದು …
Read More »12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ
ಹನ್ನೆರಡು ವರ್ಷಗಳ ದಾಖಲೆಯ ಆಡಳಿತ ಪೂರೈಸಿ ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದರು. ನವದೆಹಲಿಯಲ್ಲಿ ಬುಧವಾರ ನಡೆದ ಎನ್.ಡಿ.ಎ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಕೇಂದ್ರ ಸಚಿವರು ಪ್ರಧಾನಿಗಳನ್ನು ಗೌರವಿಸಿದರು. ಬಳಿಕ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಚಿವರು; ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ಮೂಲಸೌಕರ್ಯ, ಉತ್ಪಾದನೆ, ಡಿಜಿಟಲ್ ಸಬಲೀಕರಣ, …
Read More »ಮಾರಿಕಾಂಬಾ ಕ್ರೀಡಾಂಗಣದ ಬಳಿ ಗಾಂಜಾ ಮಾರುತ್ತಿದ್ದ ಖದೀಮ ಪೊಲೀಸ್ ಬಲೆಗೆ
ಶಿರಸಿ: ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮನೊಬ್ಬನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರಾಜೀವ ನಗರದ ನಿವಾಸಿ, ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಆನಂದ ಬೋವಿವಡ್ಡರ ಅಲಿಯಾಸ್ ತುರಿಮಣಿ (23) ಬಂಧಿತ ಆರೋಪಿಯಾಗಿದ್ದಾನೆ. ಮಂಗಳವಾರ ರಾತ್ರಿ 9:15ರ ಸುಮಾರಿಗೆ ಶಿರಸಿಯ ಕಾಲೇಜು ರಸ್ತೆಯ ಮಾರಿಕಾಂಬಾ ಕ್ರೀಡಾಂಗಣದ ಹತ್ತಿರ ವ್ಯಕ್ತಿಯೊಬ್ಬ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ …
Read More »ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಲು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಸಿಎಂ ಡಿಕೆಶಿ ಕರೆ
ನವದೆಹಲಿ: ನಿಮ್ಮ ಶಕ್ತಿ ಅದಮ್ಯ. ನೀವು ಮನಸ್ಸು ಮಾಡಿದರೆ ಅಭಿವೃದ್ಧಿ ರಥ ಮುನ್ನುಗ್ಗುತ್ತದೆ. ಹೀಗಾಗಿ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಿ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಕರೆ ನೀಡಿದರು. ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಜತೆ ಬುಧವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟ ಸಂವಾದದಲ್ಲಿ ಅವರು ಈ ಮನವಿ ಮಾಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿದ್ದ ಅವರು ಇಷ್ಟು …
Read More »
Laxmi News 24×7