Breaking News

Uncategorized

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ*

        *ಗೋಕಾಕ* : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, …

Read More »

ಹತ್ತು ವರ್ಷ ಪೂರೈಸಿದ ಆಧಾರ್‌ ನವೀಕರಣಕ್ಕೆ ಸೂಚನೆ

ಹೊಸದಿಲ್ಲಿ: ನೀವು ಆಧಾರ್‌ ಕಾರ್ಡ್‌ ಅನ್ನು ಪಡೆದು ಹತ್ತು ವರ್ಷಗಳಾಗಿದೆಯೇ? ಹಾಗಿದ್ದರೆ ಅದರಲ್ಲಿನ ಮಾಹಿತಿಯನ್ನು ಅಪ್‌ಡೇಟ್‌ ಮಾಡಬೇಕು. ಈ ಬಗ್ಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಬುಧವಾರ ಮನವಿ ಮಾಡಿದೆ. ಅದಕ್ಕೆ ಪೂರಕವಾದ ದಾಖಲೆಗಳನ್ನು ನೀಡಬೇಕು ಎಂದು ಸೂಚಿಸಿದೆ, ಆನ್‌ಲೈನ್‌ ಮೂಲಕ ಅಥವಾ ಆಧಾರ್‌ ಕೇಂದ್ರಗಳಲ್ಲಿ ಮಾಹಿತಿಯನ್ನು ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಆಧಾರ್‌ ಕೇಂದ್ರಕ್ಕೆ ತೆರಳಿ ಮಾಹಿತಿ ಅಪ್‌ಡೇಟ್‌ ಮಾಡುವುದಿದ್ದರೆ ಸರಕಾರ ನಿಗದಿಪಡಿಸಿದ ಶುಲ್ಕ ಪಾವತಿ ಮಾಡಬೇಕಾಗುತ್ತದೆ. “ಕಳೆದ …

Read More »

ಡಿನೋಟಿಫಿಕೇಶನ್ ಅಕ್ರಮ ಆರೋಪ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು : ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.   ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಡಿ ನೋಟಿಫಿಕೇಶನ್ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ …

Read More »

ನಾನು ‘ಕಾಂಗ್ರೆಸ್’ ನಿಂದ ಟಿಕೆಟ್ ಕೇಳುತ್ತೀನಿ ಎಂದ ಕನ್ನಡದ ‘ಖ್ಯಾತ ನಟಿ’.?

ಚಿತ್ರದುರ್ಗ : ನಾನೂ ಈ ಬಾರಿ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಟಿಕೆಟ್ ಕೇಳುತ್ತೇನೆ ಎಂದು ಕನ್ನಡದ ಖ್ಯಾತ ನಟಿ ಭಾವನಾ ( Bhavana ) ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ( Bharath Jodo yathra) ಮಾತನಾಡಿದ್ದ ನಟಿ ಭಾವನಾ ಜನರ ಸೇವೆ ಮಾಡಲು ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ.   ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ಲುತ್ತೀನಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ …

Read More »

ಈದ್ ಮಿಲಾದ್ ಸಂಭ್ರಮಾಚರಣೆಯಲ್ಲಿ ಲಾಂಗ್ ಹಿಡಿದು ಕುಣಿದ ಯುವಕರು ಅರೆಸ್ಟ್

ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಪರಸ್ಪರ ಹೊಟೆದಾಡಿಕೊಂಡಿದ್ದರು. ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿತ್ತು. ಬೆಳಗಾವಿ: ರಾಮದುರ್ಗದಲ್ಲಿ ಈದ್ ಮಿಲಾದ್ ಹಬ್ಬದಂದು ಹಿಂದೂ ಯುವಕರ ಮೇಲೆ ಹಲ್ಲೆಗೈದಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ‌ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು …

Read More »

ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು

ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು ಎನ್ನುವುದಕ್ಕೆ ನಿದರ್ಶನವಾಗಿ ಚಿಕ್ಕೋಡಿಯಲ್ಲೊಂದು ಘಟನೆ ನಡೆದಿದೆ. ಆತ್ಮೀಯ ಸ್ನೇಹಿತರ ನಡುವೆ ಹೆಂಡತಿ ವಿಚಾರ ಬಂದು ಅದು ಕೊಲೆಯಲ್ಲಿ ಅಂತ್ಯಗೊಂಡಿದೆ. ಆಗಿದ್ದೇನೆಂದರೆ, ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಹೆಂಡ ಕುಡಿಸಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯ ಸುನೀಲ್ ಸಾಳುಂಕೆ(೩೪) ಕೊಲೆಯಾದವನು. ಮಹಾಂತೇಶ ಮತ್ತು ರಾಜು ಎಂಬವರನ್ನು ಈ ಕೊಲೆಗೆ ಸಂಬಂಧಿಸಿ ಬಂಧಿಸಲಾಗಿದೆ. ಅಕ್ಟೋಬರ್‌ ೭ರಂದು ಈ ಕೊಲೆ …

Read More »

ತಾಯಿ ಮತ್ತು ಮೂರು ಮಕ್ಕಳು ಸಾವು

ಬೆಳಗಾವಿ ಮೂಲದ ಮೂರು ಹೆಣ್ಣು ಮಕ್ಕಳು ಹಾಗೂ ತಾಯಿಯ ಶವ ಮಹಾರಾಷ್ಟ್ರದ ಜತ್ತ ತಾಲೂಕಿನ ಬಿಳ್ಳೂರು ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.   ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ನಿವಾಸಿ ಆಗಿರುವ ಸುನಿತಾ ತುಕಾರಾಮ್ ಮಾಳಿ ಮತ್ತು ಪುತ್ರಿಯರಾದ ಅಮೃತಾ, ಅಂಕಿತಾ ಹಾಗೂ ಐಶ್ವರ್ಯಾ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದೆ. ಕಳೆದ ಭಾನುವಾರ ಮುಂಜಾನೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಮತ್ತು ಮೂವರು ಪುಟ್ಟ ಹೆಣ್ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. …

Read More »

ಭ್ರಷ್ಟರನ್ನು ರಸ್ತೆಗೆ ತರುತ್ತೇವೆಂದು ಮೋದಿ ಹೇಳಿದ್ದರು.:ಭಾರತ್ ಜೋಡೋ ಯಾತ್ರೆ ಟೀಕಿಸಿದ ಯತ್ನಾಳ್

ವಿಜಯಪುರ: ದೇಶದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಕುರಿತು ಲೇವಡಿ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರಧಾನಿ ಮೋದಿ ಅವರು ಹೇಳಿದಂತೆ ಸೋನಿಯಾ, ರಾಹುಲ್ ಕಾಂಗ್ರೆಸ್ ಮುಖಂಡರನ್ನು ಬೀದಿಗೆ ತಂದಿದ್ದಾರೆ ಎಂದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಬಿಜೆಪಿಯ ಮೇಲೆ ಯಾವ ಪರಿಣಾಮ ಸಹ ಬೀರುವುದಿಲ್ಲ. ಇದರಿಂದ ಇನ್ನೂ ಒಳ್ಳೆಯದ್ದೇ ಆಗಿದೆ. ಅವರ ಬಣ್ಣ ಬಯಲು‌ ಮಾಡಿದೆ …

Read More »

ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥ

ಬೆಳಗಾವಿ ತಾಲೂಕಿನ ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನಿಗೆ ಡಿವೈನ್ ಹೆಲ್ಪಿಂಗ್ ಹ್ಯಾಂಡ್ಸ್ ಗ್ರೂಪ್‌ನ ಗಜಾನನ ಗವಾನೆ ಮಾನಸಿಕ ಅಸ್ವಸ್ಥನನ್ನು ಉಪಚರಿಸಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಹೌದು ಇಂದು ಶನಿವಾರ ಬೆಳಗಾವಿ ತಾಲೂಕಿನ ಕಾಕತಿಯ ಲಕ್ಷ್ಮೀನಗರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಬೆತ್ತಲೆಯಾಗಿ ಓಡಾಡುವ ಮೂಲಕ ಅವಾಂತರ ಎಸಗಿದ್ದಾನೆ. ಈ ವೇಳೆ ಡಿವೈನ್ ಹೆಲ್ಪಿಂಗ್ ಹ್ಯಾಂಡ್ಸ್ ಗ್ರೂಪ್ ನ ಗಜಾನನ ಗವಾನೆ ಅವರಿಗೆ ಆ ಭಾಗದ ಮಹಿಳೆಯರು ಹಾಗೂ …

Read More »

SC&ST ಮೀಸಲಾತಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆ ಗೃಹ ಕಚೇರಿ ಕೃμÁ್ಣದಲ್ಲಿ ನಡೆಯಿತ್ತಿದೆ.  ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ, ಜೆ.ಸಿ.ಮಾಧುಸ್ವಾಮಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಎಸ್.ಆಂಗಾರ, ಆನಂದಸಿಂಗ್, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ಅಜಯ್ …

Read More »